ನವದೆಹಲಿ, ಏ.23 www.bengaluruwire.com : ಕಾಶ್ಮೀರದ ಪಹಲ್ಗಾಮ್ ನಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ವೈಮಾನಿಕ ಕಂಪನಿಗಳು ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.
ಭಯೋತ್ಪಾದನಾ ಕೃತ್ಯ ನಡೆದ ಸ್ಥಳದಿಂದ ಹಾಗೂ ಕಾಶ್ಮೀರದ ಇತರೆ ಪ್ರವಾಸಿ ತಾಣಗಳಿಂದ ಪ್ರವಾಸಿಗರ ರಕ್ಷಣಾ ಕಾರ್ಯ ನಡೆದಿದೆ. ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಹೆಚ್ಚಿನ ಟಿಕೆಟ್ ದರ ವಿಧಿಸದಿರುವಂತೆ ವೈಮಾನಿಕ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ವಿಮಾನಯಾನ ಸಚಿವರೊಂದಿಗೆ ಚರ್ಚೆ:
ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ನಾಗರೀಕ ವಿಮಾನಯಾನ ಸಚಿವರೊಂದಿಗೂ ಮಾತನಾಡಿದ್ದೇನೆ. ಏರ್ ಲೈನ್ ಟಿಕೆಟ್ ದರದ ಕುರಿತು ಗಮನಹರಿಸಲು ಡಿಜಿಸಿಎಗೂ ಸೂಚನೆ ನೀಡಿದ್ದೇನೆ ಎಂದು ಸಚಿವ ಜೋಶಿ ತಿಳಿಸಿದರು.

ಕನ್ನಡಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ:
ಕಾಶ್ಮೀರದ ಪ್ರವಾಸಿ ತಾಣಗಳಿಂದ ಕನ್ನಡಿಗರು ಸೇರಿದಂತೆ ಪ್ರವಾಸಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.
ಶಾಂತಿ ನೆಲೆಸಲು ಕಟ್ಟು ನಿಟ್ಟಿನ ಕ್ರಮ:

ಜಮ್ಮು-ಕಾಶ್ಮೀರದಲ್ಲಿ 2019ರಿಂದ ಇತ್ತೀಚಿನ ವರ್ಷಗಳಲ್ಲಿ ಶಾಂತಿ ನೆಲೆಸಿದ್ದನ್ನು ಸಹಿಸದೆ ಹೇಡಿಗಳು ಇಂಥ ಹೇಯ ಕೃತ್ಯವೆಸಗಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಉತ್ತರ ಕೊಡಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುತ್ತಿದ್ದ ನಿರ್ಣಯ, ಕಾರ್ಯಗಳು ಯಶಸ್ವಿಗೊಳ್ಳುತ್ತಿರುವುದನ್ನು ಸಹಿಸಲಾಗದೆ ಭಯೋತ್ಪಾದಕರು ಹೀಗೆ ಪ್ರವಾಸಿಗರ ಮೇಲೆ ಹೇಡಿತನದ ಕೃತ್ಯ ಎಸಗಿದ್ದಾರೆ ಎಂದು ತೀವ್ರವಾಗಿ ಖಂಡಿಸಿದ ಸಚಿವ ಜೋಶಿ, ಈ ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆ ಹತ್ತಿಕ್ಕಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಜರುಗಿಸಿ ಶಾಂತಿ ಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇನ್ನೊಂದೆಡೆ ಮೃತರ ಶವಗಳನ್ನು ಶ್ರೀನಗರಕ್ಕೆ ತರಲಾಗಿದೆ.ಸಚಿವ ಸಂತೋಷ್ ಲಾಡ್ ಪ್ರಸಕ್ತ ಶ್ರೀನಗರದ ಮುಸ್ಕಾನ್ ಹೋಟೆಲ್ಗೆ ಭೇಟಿ ನೀಡಿದ್ದಾರೆ ಇಲ್ಲಿ ಹೆಚ್ಚು ಕನ್ನಡಿಗ ಪ್ರವಾಸಿಗಳ ಉಳಿದಿದ್ದಾರೆ. ಶವ ಗುರುತು ಪತ್ತೆ ಕಾರ್ಯ ಸಂಬಂಧಿಗಳಿಂದ ಆರಂಭವಾಗಿದೆ ಎಂದು ಅಲ್ಲಿನ ಸ್ಥಳೀಯ ನಿವಾಸಿ ತಿಳಿಸಿದರು.
ಕನ್ನಡ ಪ್ರವಾಸಿಗರಿಗಾಗಿ ಸಹಾಯವಾಣಿ :
ಕಾಶ್ಮೀರದ ಪಹಲ್ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ಕಾರ್ಯ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರ (Tour Operators & Travel Agents) ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಮುಂದಿನ ಸಹಾಯವಾಣಿ ಸಂಖ್ಯೆ : 080-43344334, 080-43344335, 080-43344336, 080-43344342 ಗೆ ಕರೆ ಮಾಡಿ ನೀಡಬೇಕೆಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಕೋರಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿಗೆ ನೀಡಿದಲ್ಲಿ ಅವರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಅನುಕೂಲವಾಗಲಿದೆ ಎಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮೃತರ ಪಟ್ಟಿ ಇಲ್ಲಿದೆ :
























