ಬೆಂಗಳೂರು, ಏ.30 www.bengaluruwire.com : ನಗರಾಭಿವೃದ್ಧಿ ಇಲಾಖೆಯು ಆಸ್ತಿ ತೆರಿಗೆ ಪಾವತಿಸುವ ಮಾಲೀಕರಿಗೆ ಶೇ.5ರಷ್ಟು ರಿಯಾಯಿತಿಯನ್ನು ಮೇ ಅಂತ್ಯದವರೆಗೆ ವಿಸ್ತರಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏಪ್ರಿಲ್ 30ರೊಳಗೆ ಪಾವತಿಸುವವರಿಗೆ ಶೇ.5 ರಿಯಾಯಿತಿ ನೀಡಲಾಗಿತ್ತು. ಈ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್ 144 (8)ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದು. ಇದರಂತೆ ನಗರಾಭಿವೃದ್ಧಿ ಇಲಾಖೆ ರಿಯಾಯಿತಿ ಅವಧಿ ವಿಸ್ತರಿಸಲು ಅನುಮತಿ ನೀಡಿದೆ. ಅದರ ಆಧಾರದಲ್ಲಿ ಸುತ್ತೋಲೆ ಹೊರಡಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.