ಬೆಂಗಳೂರು, ಏ.30 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಿರ್ಗಮಿತ ಆಡಳಿತಗಾರರಾದ ಉಮಾಶಂಕರ್ ನೂತನ ಆಡಳಿತಗಾರರಿಗೆ ತುಷಾರ್ ಗಿರಿನಾಥ್ ಅವರಿಗೆ ಬೆಳ್ಳಿಯ ನಾಡಪ್ರಭು ಕೆಂಪೇಗೌಡ ಪ್ರತಿಮೆ ಹಾಗೂ ಕೀಲಿ ಕೈಯನ್ನು ಸಾಂಕೇತಿಕವಾಗಿ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಇನ್ನು ಪ್ರಸ್ತುತ ಮುಖ್ಯ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಇದಕ್ಕೂ ಮೊದಲು, ತಮ್ಮ ಹುದ್ದೆಯಿಂದ ಆಡಳಿತಗಾರರಾಗಿ ನೇಮಕವಾದ ಹಿನ್ನಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ಅವರಿಗೆ ಬೆಳ್ಳಿಯ ಅಧಿಕಾರ ದಂಡವನ್ನು ಹಸ್ತಾಂತರಿಸಿ ಸಾಂಕೇತಿಕವಾಗಿ ಅಧಿಕಾರ ಹಸ್ತಾಂತರಿಸಿದರು.

ಅಕ್ಷಯ ತೃತೀಯ ಹಾಗೂ ಬಸವ ಜಯಂತಿಯ ಈ ವಿಶೇಷ ದಿನದಂದೇ ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಈ ಇಬ್ಬರು ಅಧಿಕಾರಗಳು ನೂತನ ಹುದ್ದೆಯನ್ನು ವಹಿಸಿಕೊಂಡರು.
ಈ ವೇಳೆ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಕರೀಗೌಡ, ಮುಖ್ಯ ಪ್ರಧಾನ ಇಂಜಿನಿಯರ್ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
