ಬೆಂಗಳೂರು, ಮೇ.06 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಮಂಗಳವಾರ ನಡೆದ ಕಾರ್ಯಾಚರಣೆಯಲ್ಲಿ ರಾಜೀವ್ ಗಾಂಧಿ ನಗರ, ನಂದಿನಿ ಬಡಾವಣೆಯಲ್ಲಿ ₹3.5 ಕೋಟಿ ಮೌಲ್ಯದ ಪ್ರಾಧಿಕಾರದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಜಾರಕಬಂಡೆ ಕಾವಲ್ ಗ್ರಾಮದ ಸರ್ವೆ ನಂ. 01 ರಲ್ಲಿನ ಸುಮಾರು 2.5 ಗುಂಟೆ ಮೂಲೆ ನಿವೇಶನದಲ್ಲಿ ಅನಧಿಕೃತವಾಗಿ ನಿರ್ಮಾಣವಾಗುತ್ತಿದ್ದ ಕಟ್ಟಡದ ಭಾಗವನ್ನು ತೆರವುಗೊಳಿಸಿ, ಸುಮಾರು 3.5 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.