ಬೆಂಗಳೂರು, ಮೇ.11 www.bengaluruwire.com : ಪ್ರಸ್ತುತ ದೇಶದಲ್ಲಿನ ಪರಿಸ್ಥಿತಿ ಮತ್ತು ನಾಗರಿಕರ ಸುರಕ್ಷತೆಗಾಗಿ ರಾಷ್ಟ್ರೀಯ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಲಾಗಿದೆ.
ರಾಷ್ಟ್ರ ರಕ್ಷಣೆ, ಹಿತದೃಷ್ಟಿಯಿಂದ ಸರ್ಕಾರದ ಮತ್ತು ನಮ್ಮ ಸಶಸ್ತ್ರ ಪಡೆಗಳ ಪ್ರಯತ್ನಗಳಿಗೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳುವ ಸಲುವಾಗಿ, ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ನೇಪಾಳ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ, ಮಧ್ಯಪ್ರದೇಶ, ನವದೆಹಲಿ, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳ ವಿಜಯ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಶ್ರೀ ಶೃಂಗೇರಿ ಶಾರದಾ ಪೀಠದ ಆಡಳಿತ ಮಂಡಳಿ ತಿಳಿಸಿದೆ.
ದೇಶದ ಹಿತ ಮತ್ತು ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದ್ದು, ಪರಿಸ್ಥಿತಿ ತಿಳಿಯಾದ ನಂತರ ಯಾತ್ರೆಯ ಮುಂದಿನ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪೀಠದ ಪ್ರಕಟಣೆ ತಿಳಿಸಿದೆ. ಭಕ್ತಾದಿಗಳು ಈ ನಿರ್ಧಾರವನ್ನು ಅರ್ಥಮಾಡಿಕೊಂಡು ಸಹಕರಿಸಬೇಕೆಂದು ಕೋರಲಾಗಿದೆ.