Wednesday, May 21, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

    ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

    ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

    Video News | ಭಾರ್ಗವಾಸ್ತ್ರ: ಡ್ರೋನ್ ದಾಳಿಗಳನ್ನು ಸಮರ್ಥವಾಗಿ ಎದುರಿಸಿ ಧ್ವಂಸ ಮಾಡುವ ಪ್ರಯೋಗ ಯಶಸ್ವಿ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

    Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

  • Bengaluru Focus

    ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

    ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

    CREATOR: gd-jpeg v1.0 (using IJG JPEG v80), default quality?

    ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

    ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

    Attention!! | ಕರ್ನಾಟಕದಲ್ಲಿ ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; 30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ಖರೀದಿ- ಮಾರಾಟಕ್ಕೆ ಈ ಎಲ್ಲಾ ಮಾಹಿತಿ ನೀಡಿಕೆ ಖಡ್ಡಾಯ!!

    BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

    ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

    ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

    ವಿಕಾಸಸೌಧದಲ್ಲಿ ಗುರುವಾರ ಸಂಜೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

    Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result

Home News Wire

ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಉಳಿದವುಗಳನ್ನು ಮುಂದಿನ ಮೂರು ವರ್ಷದಲ್ಲಿ ಈಡೇರಿಸುವ ಭರವಸೆ ನೀಡಿದ ಸರ್ಕಾರ | 1,11,111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ | ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಡಿಸಿಎಂ

by Bengaluru Wire Desk
May 20, 2025
in News Wire, Public interest
Reading Time: 1 min read
0

ಹೊಸಪೇಟೆ, ಮೇ.20 www.bengaluruwire.com : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು  ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. 

ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಮಂಗಳವಾರ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಕಿಕ್ಕಿರಿದು ತುಂಬಿದ್ದ ಸಮಾವೇಶದಲ್ಲಿ 1,11,111 ಮಂದಿಗೆ ಸಾಂಕೇತಿಕವಾಗಿ ಎಐಸಿಸಿ ಅಧ್ಯಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರರು ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಯಿತು.

ಇದೇ ವೇಳೆ ಮಾತನಾಡಿದ ಸಿಎಂ, ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ಸರ್ವ ಜನಾಂಗದ ಶಾಂತಿಯ ತೋಟ :

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು. 

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದಿರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ  ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. 

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು. 

ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ :

ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು. 

ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಭೀತಾಗಿದೆ : ಸಿಎಂ

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು. ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದು ಹೇಳಿದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಚಿನ್ನದ ಬೆಲೆ ಈಗ ಎಷ್ಟಿದೆ? :

2014 ರಲ್ಲಿ 10,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು. 

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ಅವರು ಭರವಸೆ ನೀಡಿದರು.

“ಗ್ರಾಮೀಣ ಪ್ರದೇಶದ ಬಡ ಜನರು, ಕಳೆದ ಐವತ್ತು ವರ್ಷಗಳಿಂದ ಪಟ್ಟಾ ಖಾತೆ ಇಲ್ಲದವರಿಗೆ ಇಂದು ಈ ಯೋಜನೆ ಮೂಲಕ ದಾಖಲಾತಿ ನೀಡುತ್ತಿದ್ದೇವೆ. ಇಂತಹ ಐತಿಹಾಸಿಕ ಯೋಜನೆ ನೀಡಿರುವ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಹಾಗೂ ಅವರ ಅಧಿಕಾರಿಗಳ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ” ಎಂದ ಡಿಸಿಎಂ, ಸರ್ಕಾರದ ಎರಡು ವರ್ಷದ ಸಾಧನೆ, ಜನಬೆಂಬಲ, ಸರ್ಕಾರದ ಕಾರ್ಯವೈಖರಿಗಳ ಬಗ್ಗೆ ಸುಧೀರ್ಘವಾಗಿ ಮಾತನಾಡಿದರು.

ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರು, ಕಾಂಗ್ರೆಸ್ ಸಂಸದರು, ಶಾಸಕರು ಮತ್ತಿತರರು ಉಪಸ್ಥಿತರಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

Please login to join discussion

Like Us on Facebook

Follow Us on Twitter

Recent News

ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

May 20, 2025

ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

May 20, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

May 20, 2025

ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

May 20, 2025

ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

May 20, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d