Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

ಕಣ್ಣಿಗೆ ಕಾಣುವ ಉಲ್ಲಂಘನೆಗಳಿಗೆ ಮಾತ್ರ ಕ್ರಮ | ಹೆದ್ದಾರಿಗಳಲ್ಲಿ ಬ್ಯಾರಿಕೇಡ್ ನಿಷಿದ್ಧ | ರಸ್ತೆಯಲ್ಲಿ ಹಠಾತ್ ತಡೆಯುವಿಕೆ ನಿಷಿದ್ಧ | ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಂದ ಕಟ್ಟುನಿಟ್ಟಿನ ಆದೇಶ

by Bengaluru Wire Desk
June 2, 2025
in Bengaluru Focus, News Wire, Public interest
Reading Time: 2 mins read
0
Police Checking

ಸಂಚಾರಿ ಪೊಲೀಸರು ರಸ್ತೆಯಲ್ಲಿ ತಪಾಸಣೆ ನಡೆಸುತ್ತಿರುವ ಸಾಂದರ್ಭಿಕ ಚಿತ್ರ.

ಬೆಂಗಳೂರು: ಜೂ.2 www.bengaluruwire.com : ಇತ್ತೀಚೆಗೆ ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯ ನಂತರ ಸಾರ್ವಜನಿಕರ ಜೀವ ಸುರಕ್ಷತೆ ಹಾಗೂ ಪೊಲೀಸ್ ಸಿಬ್ಬಂದಿಯ ಕ್ಷೇಮದೃಷ್ಟಿಯಿಂದ ಪೊಲೀಸ್ ಇಲಾಖೆಯು ವಾಹನ ತಪಾಸಣೆಯ ಕುರಿತು ಮಹತ್ವದ ಸೂಚನೆಗಳನ್ನು ನೀಡಿದೆ.

ಅದರಲ್ಲೂ ಕಾರಣವಿಲ್ಲದೇ ಸಾರ್ವಜನಿಕರ ವಾಹನಗಳನ್ನು ತಡೆದು ತಪಾಸಣೆ ನಡೆಸುವುದನ್ನು ನಿಷೇಧಿಸಿ, ಸಂಚಾರ ನಿಯಮಗಳ ಸ್ಪಷ್ಟ ಉಲ್ಲಂಘನೆ ಕಂಡುಬಂದಲ್ಲಿ ಮಾತ್ರ ಕ್ರಮ ಕೈಗೊಳ್ಳಲು ಸೂಚಿಸಿದೆ. ಈ ಕುರಿತು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕ ಡಾ. ಎಂ.ಎ. ಸಲೀಂ ಅವರು ಮೇ 31 ರಂದು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ.

ಮಂಡ್ಯ, ದಾವಣಗೆರೆ ದುರಂತಗಳ ಹಿನ್ನೆಲೆ:

ಇತ್ತೀಚೆಗೆ ನಡೆದ ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಯ ದುರಂತ ಘಟನೆಗಳು ಈ ಹೊಸ ಆದೇಶಕ್ಕೆ ಪ್ರಮುಖ ಕಾರಣವಾಗಿವೆ. ಮೇ 26 ರಂದು ಮಂಡ್ಯದಲ್ಲಿ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುವಾಗ ಉಂಟಾದ ಅಪಘಾತದಲ್ಲಿ ಮಗುವೊಂದು ಮೃತಪಟ್ಟಿತ್ತು. ಅಲ್ಲದೆ, ಮೇ 13 ರಂದು ದಾವಣಗೆರೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರನ್ನು ಹಿಡಿಯುವ ಯತ್ನದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಕ್ಯಾಂಟರ್ ಅಪಘಾತದಿಂದಾಗಿ ಮೃತಪಟ್ಟಿದ್ದರು. 

ಈ ಘಟನೆಗಳು ಪೊಲೀಸರು ತಪಾಸಣೆ ನಡೆಸುವಾಗ ಸುರಕ್ಷತಾ ಕ್ರಮಗಳನ್ನು ಕಡೆಗಣಿಸುತ್ತಿರುವುದು ಕಂಡುಬಂದಿದೆ. ಇದರಿಂದ ಸಾರ್ವಜನಿಕರು ಹಾಗೂ ಪೊಲೀಸರ ಜೀವಕ್ಕೂ ಅಪಾಯ ಎದುರಾಗುತ್ತಿರುವುದು ಗಂಭೀರ ವಿಷಯವೆಂದು ಪರಿಗಣಿಸಿ, ಈ ಸುತ್ತೋಲೆಯನ್ನು ಹೊರಡಿಸಲಾಗಿದೆ.

ಪ್ರಮುಖ ನಿರ್ದೇಶನಗಳು:

 * ಅಕಾರಣ ತಪಾಸಣೆಗೆ ನಿಷೇಧ: ಪೊಲೀಸರು ಸಕಾರಣವಿಲ್ಲದೇ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲೆಗಳನ್ನು ಪರಿಶೀಲಿಸುವುದು ಅಥವಾ ತಪಾಸಣೆ ನಡೆಸುವುದು ಸಂಪೂರ್ಣವಾಗಿ ನಿಷಿದ್ಧ.

 * ಕಣ್ಣಿಗೆ ಕಾಣುವ ಉಲ್ಲಂಘನೆಗಳಿಗೆ ಮಾತ್ರ ಕ್ರಮ: ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆಗಳು (Visible violations) ಕಂಡುಬಂದಲ್ಲಿ ಮಾತ್ರ ಅಂತಹ ವಾಹನಗಳನ್ನು ನಿಲ್ಲಿಸಿ ಪ್ರಕರಣ ದಾಖಲಿಸಬಹುದು.

 * ಹೆದ್ದಾರಿಗಳಲ್ಲಿ ಬ್ಯಾರಿಕೇಡ್ ನಿಷಿದ್ಧ: 

ಹೆದ್ದಾರಿಗಳಲ್ಲಿ “Zig Zag” ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಡೆಯುವುದನ್ನು ನಿಷೇಧಿಸಲಾಗಿದೆ.

 * ಹಠಾತ್ ತಡೆಯುವಿಕೆ ನಿಷಿದ್ಧ: 

ರಸ್ತೆಯಲ್ಲಿ ದಿಢೀರನೆ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳುವುದನ್ನು ನಿಲ್ಲಿಸಬೇಕು.

 * ದೈಹಿಕವಾಗಿ ಎಳೆಯುವಿಕೆ ನಿಷಿದ್ಧ: 

ಬೈಕ್‌ನ ಹಿಂಬದಿ ಸವಾರನನ್ನು ಹಿಡಿದು ಎಳೆಯುವುದು ಹಾಗೂ ವಾಹನಗಳ ಕೀಲಿಕೈ (Key) ಅನ್ನು ತೆಗೆದುಕೊಳ್ಳುವುದನ್ನು ಮಾಡಬಾರದು.

 * ಬೆನ್ನಟ್ಟುವುದನ್ನು ನಿಷೇಧಿಸಿ: ವೇಗವಾಗಿ ಚಲಿಸುವ ವಾಹನಗಳನ್ನು ಬೆನ್ನಟ್ಟುವುದನ್ನು ನಿಷೇಧಿಸಲಾಗಿದೆ. ಬದಲಾಗಿ, ವಾಹನದ ನೋಂದಣಿ ಸಂಖ್ಯೆಯನ್ನು ಗುರುತಿಸಿಕೊಂಡು, ಜಿಲ್ಲಾ ಪೊಲೀಸ್ ಠಾಣೆಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ, ನಂತರ ಪತ್ತೆಹಚ್ಚಿ ಪ್ರಕರಣ ದಾಖಲಿಸಬಹುದು.

ಪೊಲೀಸರ ಸುರಕ್ಷತೆಗೆ ಆದ್ಯತೆ:

ಪ್ರತಿಫಲಿತ ಜಾಕೆಟ್ ಹಾಗೂ ಎಲ್‌ಇಡಿ ಬ್ಯಾಟನ್: ಸಂಚಾರ ನಿಯಮ ಉಲ್ಲಂಘನೆದಾರರ ವಿರುದ್ಧ ಕ್ರಮ ಕೈಗೊಳ್ಳುವಾಗ ಅಥವಾ ವಾಹನಗಳನ್ನು ತಪಾಸಣೆ ಮಾಡುವಾಗ ಪೊಲೀಸರು ತಮ್ಮ ಸುರಕ್ಷತೆಗಾಗಿ ಕಡ್ಡಾಯವಾಗಿ ‘Reflective Jacket’ ಗಳನ್ನು ಧರಿಸಬೇಕು. ಸಂಜೆ ವೇಳೆಯಲ್ಲಿ ‘LED Baton’ ಗಳನ್ನು ಉಪಯೋಗಿಸಬೇಕು.

ಬಾಡಿ ವಾರ್ನ್ ಕ್ಯಾಮರಾ ಕಡ್ಡಾಯ: 

ವಾಹನ ತಪಾಸಣೆ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ‘Body worn camera’ ಗಳನ್ನು ಧರಿಸಬೇಕು.

ತಂತ್ರಜ್ಞಾನ ಆಧಾರಿತ ನಿಯಮ ಪಾಲನೆ:

ಸಂಪರ್ಕರಹಿತ ಪ್ರವರ್ತನೆ (Contactless enforcement): ‘Traffic Management Centre (TMC)’ / ‘Intelligent Traffic Management System (ITMS)’ ಅಳವಡಿಸಿರುವ ಘಟಕಗಳಲ್ಲಿ ಆದಷ್ಟು ಸಂಪರ್ಕರಹಿತ ಪ್ರವರ್ತನಾ ಮುಖಾಂತರ ಪ್ರಕರಣಗಳನ್ನು ದಾಖಲಿಸುವುದು.

ಎಫ್.ಟಿ.ವಿ.ಆರ್. (FTVR) ದಾಖಲಿಸುವುದು: ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು. ಬದಲಾಗಿ, ತಂತ್ರಜ್ಞಾನ ಆಧಾರಿತ ನಿಯಮಗಳ ಜಾರಿಯನ್ನು ಅನುಸರಿಸಿ ಎಫ್.ಟಿ.ವಿ.ಆರ್. ದಾಖಲಿಸಬೇಕು.

ಇತರೆ ಪ್ರಮುಖ ಸೂಚನೆಗಳು:

ಜಾಗೃತಿ ಕಾರ್ಯಕ್ರಮಗಳು: 

ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲಕಾಲಕ್ಕೆ ಸರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

ಸುರಕ್ಷತಾ ಸಲಕರಣೆಗಳ ಅಳವಡಿಕೆ: 

ವಾಹನಗಳ ವೇಗವನ್ನು ಇಳಿಸುವ ಸಲುವಾಗಿ, ತಪಾಸಣೆಯ ಸ್ಥಳದ ಸುಮಾರು 100-150 ಮೀಟರ್ ಮೊದಲೇ ‘ರಿಫ್ಲೆಕ್ಟಿವ್ ರಬ್ಬರ್ ಕೋನ್‌ಗಳನ್ನು’ ಹಾಗೂ ಇತರೆ ಸುರಕ್ಷತಾ ಸಲಕರಣೆಗಳನ್ನು ಅಳವಡಿಸಬೇಕು.

ರಾತ್ರಿ ವೇಳೆ ಸಿಗ್ನಲ್ ದೀಪಗಳ ಬಳಿ ತಪಾಸಣೆ: 

ರಾತ್ರಿ ಮತ್ತು ತಡರಾತ್ರಿಯ ಸಂದರ್ಭದಲ್ಲಿ ಸಂಚಾರ ಸಿಗ್ನಲ್ ದೀಪಗಳಿರುವ / ಜಂಕ್ಷನ್ ಗಳ ಬದಿಯಲ್ಲೇ ವಾಹನಗಳನ್ನು ತಪಾಸಣೆ ಮಾಡುವುದು ಸೂಕ್ತ.

ಹೆದ್ದಾರಿಗಳಲ್ಲಿ ನಾಕಾಬಂಧಿ ನಿಷಿದ್ಧ: 

ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಡೆಸುವ ನಾಕಾಬಂಧಿ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಹೆದ್ದಾರಿಗಳಲ್ಲಿ ನಡೆಸಬಾರದು. ಅಗತ್ಯವಿದ್ದರೆ ಸಂಚಾರ ಪೊಲೀಸರ ಬೆಂಬಲ ಮತ್ತು ಸಹಕಾರವನ್ನು ಪಡೆದುಕೊಳ್ಳಬೇಕು.

ಕಟ್ಟುನಿಟ್ಟಿನ ಪಾಲನೆಗೆ ಸೂಚನೆ:

ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರುಗಳು ಹಾಗೂ ಪೊಲೀಸ್ ಅಧೀಕ್ಷಕರುಗಳು ಈ ವಿಷಯದ ಕುರಿತು ವೈಯಕ್ತಿಕ ಗಮನಹರಿಸಿ, ತಮ್ಮ ಅಧೀನಕ್ಕೊಳಪಡುವ ಅಧಿಕಾರಿ / ಸಿಬ್ಬಂದಿಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಕಟ್ಟುನಿಟ್ಟಾಗಿ ನಿರ್ದೇಶನಗಳನ್ನು ನೀಡುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಈ ಹೊಸ ನಿಯಮಗಳು ಸಾರ್ವಜನಿಕರ ಮತ್ತು ಪೊಲೀಸರ ಸುರಕ್ಷತೆಗೆ ಮಹತ್ವದ ಹೆಜ್ಜೆಯಾಗಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
Previous Post

ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

Next Post

ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

Next Post

ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d