Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳಿಂದ ದಿನಾಂಕ ಘೋಷಣೆ

by Bengaluru Wire Desk
June 10, 2025
in News Wire
Reading Time: 1 min read
0
CM DK Shivakumar

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಂದರ್ಭಿಕ ಚಿತ್ರ.

ನವದೆಹಲಿ, ಜೂ.10 www.bengaluruwire.com : “ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನವದೆಹಲಿಯಲ್ಲಿ ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಂಗಳವಾರ ಮಾತನಾಡಿದರು.

“ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆಸಿ ಪಕ್ಷ ಸಂಘಟನೆ ವಿಚಾರವಾಗಿ, ರಾಜ್ಯ ರಾಜಕಾರಣ ಹಾಗೂ ಇತ್ತೀಚಿನ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ಮಾಡಲಾಯಿತು” ಎಂದು ಹೇಳಿದರು.

“ಜಾತಿ ಗಣತಿ ವಿಚಾರವಾಗಿ ಇದೇ ತಿಂಗಳ 12ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಿದ್ದೆವು. ಈ ವಿಚಾರವಾಗಿ ಸಂಸದರು, ಶಾಸಕರು, ಸಂಘ ಸಂಸ್ಥೆಗಳು ನಮ್ಮ ವರಿಷ್ಠರ ಜತೆ ಚರ್ಚೆ ಮಾಡಿದ್ದಾರೆ. ಕೆಲವು ಸಂಘಟನೆ ಹಾಗೂ ಸಮಾಜಗಳಿಂದ ಈ ಜಾತಿ ಗಣತಿಗೆ ಅಪಸ್ವರ ಬಂದಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ನ್ಯಾಯಬದ್ಧವಾಗಿ ಅವಕಾಶ ಕಲ್ಪಿಸಿಕೊಡಬೇಕು ಎಂದು ವರಿಷ್ಠರು ನಮಗೆ ಮಾರ್ಗದರ್ಶನ ನೀಡಿದ್ದಾರೆ. ಈ ಜಾತಿ ಗಣತಿಯಲ್ಲಿ ಯಾರನ್ನೂ ಬಿಡಬಾರದು, ಎಲ್ಲರನ್ನು ಒಳಗೊಳ್ಳಬೇಕು ಎಂದು ತೀರ್ಮಾನಿಸಲಾಗಿದೆ. ಯಾರ ಅಪಸ್ವರವೂ ಇಲ್ಲದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಾಮಾಜಿಕ ನ್ಯಾಯದ ಬಗ್ಗೆ ಸರ್ಕಾರದ ಬದ್ಧತೆ ಇದೆ. ಜಾತಿ ಗಣತಿಯಲ್ಲಿ ಅಂಕಿ ಅಂಶಗಳ ಬಗ್ಗೆ ಅನೇಕ ಸಮಾಜಗಳು ಅಪಸ್ವರ ಎತ್ತಿದ್ದು, ಈ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ತೀರ್ಮಾನಿಸಲಾಗಿದೆ. ಸಾರ್ವಜನಿಕರು ನ್ಯಾಯಬದ್ಧವಾಗಿ ಯಾವ ಸಮಾಜಕ್ಕೆ ಸೇರಿದ್ದೀರಿ ಎಂಬುದನ್ನು ವ್ಯಕ್ತಪಡಿಸಿಕೊಳ್ಳಬೇಕು. ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕು. ಸಮಾಜದ ಮುಖಂಡರು ಹಾಗೂ ಮಠಾಧೀಶರು ಇದಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

“ಕಳೆದ ಎರಡು ತಿಂಗಳಿನಿಂದ ಒಳಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಅವರ ಜನಗಣತಿ ಮಾಡುತ್ತಿದ್ದೇವೆ. ಹೀಗಾಗಿ ಈ ಪ್ರಕ್ರಿಯೆ ಸುದೀರ್ಘವಾಗಿ ನಡೆಯುವುದರಿಂದ ಇದನ್ನು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನಾವು ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು. ಇದರಲ್ಲಿ ಯಾವುದೇ ಆತಂಕ ಬೇಡ. ನಮ್ಮ ಈ ಪ್ರಯತ್ನದ ಮೂಲಕ ಜಾತಿಗಣತಿ ವಿಚಾರವಾಗಿ ಇರುವ ಅಪಸ್ವರವನ್ನು ಸರಿಪಡಿಸಲಾಗುವುದು. ನಮ್ಮ ರಾಜ್ಯದವರು ಎಲ್ಲೇ ಇದ್ದರೂ ಈ ಬಗ್ಗೆ ಆನ್ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗುವುದು” ಎಂದು ತಿಳಿಸಿದರು.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆಯಾಯಿತೇ ಎಂದು ಕೇಳಿದಾಗ, “ಈ ವಿಚಾರವಾಗಿ ಚರ್ಚೆ ಮಾಡಲಾಯಿತು. ಈ ದುರ್ಘಟನೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಬಗ್ಗೆ ವರಿಷ್ಠರಿಗೆ ಸಂಪೂರ್ಣ ಮಾಹಿತಿ ನೀಡಿ ಸತ್ಯಾಸತ್ಯತೆಯನ್ನು ವಿವರಿಸಿದ್ದೇವೆ” ಎಂದು ತಿಳಿಸಿದರು.

ಸಚಿವ ಸಂಪುಟ ಮರುವಿಂಗಡಣೆ ಬಗ್ಗೆ ಚರ್ಚೆಯ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ” ಎಂದು ಅವರು, ವಿಧಾನ ಪರಿಷತ್ ಸ್ಥಾನಕ್ಕೆ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಹೈಕಮಾಂಡ್ ಪರಿಶೀಲಿಸಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದೆ” ಎಂದು ತಿಳಿಸಿದರು.

WhatsApp Join our WhatsApp Channel
Previous Post

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ₹150 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಯತ್ನ: ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆ, ತನಿಖೆಗೆ ಆಗ್ರಹ

Next Post

ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

Next Post

ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ 'ಕಾವ್ಯ' ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group