Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಲೋಕಾಯುಕ್ತದ ಹೆಸರಿನಲ್ಲಿ ಹಣ ಸುಲಿಗೆಗೆ ಕಿಡಿ: ಸರ್ಕಾರಿ ಸಿಬ್ಬಂದಿ ನಿರ್ಭೀತಿಯಿಂದ ದೂರು ನೀಡಲು ಸಲಹೆ

ಲೋಕಾಯುಕ್ತ ಸಂಸ್ಥೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಪತ್ರ ಬರೆದರೂ, ಸರ್ಕಾರದ ನಿರ್ಲಕ್ಷ್ಯದ ಕುರಿತು ಪರೋಕ್ಷವಾಗಿ ಅಸಮಾಧಾನ

by Bengaluru Wire Desk
July 3, 2025
in News Wire, Public interest
Reading Time: 1 min read
0
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.03 www.bengaluruwire.com : ಲೋಕಾಯುಕ್ತ ಸಂಸ್ಥೆಯ ಹೆಸರು ಹೇಳಿಕೊಂಡು ಸುಲಿಗೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಈ ಬಗ್ಗೆ ಸರ್ಕಾರಿ ನೌಕರರು, ಅಧಿಕಾರಿಗಳು ಎಚ್ಚರವಹಿಸಬೇಕು. ಲೋಕಾಯುಕ್ತ ಸಂಸ್ಥೆಗೆ ನೇರವಾಗಿ ನಿರ್ಭೀತಿಯಿಂದ ವಿಷಯ ತಿಳಿಸಿದಲ್ಲಿ, ಲೋಕಾಯುಕ್ತ ಸಂಸ್ಥೆ ಆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಭರವಸೆ ನೀಡಿದ್ದಾರೆ.

ಇತ್ತೀಚೆಗೆ, ನಿಂಗಪ್ಪ.ಜಿ ಅಲಿಯಾಸ್ ನಿಂಗಪ್ಪ ಸಾವಂತ ಎಂಬ ವ್ಯಕ್ತಿ ಅಬಕಾರಿ ಇಲಾಖೆ ಮತ್ತು ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಅಧಿಕಾರಿಗಳಿಗೆ ವಾಟ್ಸಾಪ್ ಮೂಲಕ ಕರೆ ಮಾಡಿ, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿಕೊಂಡು ಹಣ ಸುಲಿಗೆ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಈತ ಹಿಂದಿನ ಬೆಂಗಳೂರು ನಗರ-1 ವಿಭಾಗದ ಪೊಲೀಸ್ ಅಧೀಕ್ಷಕ  ಶ್ರೀನಾಥ ಜೋಷಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಸರ್ಕಾರಿ ಅಧಿಕಾರಿಗಳಿಗೆ ಅಕ್ರಮ ಆಸ್ತಿ ಬಗ್ಗೆ ಬೆದರಿಸಿ ಲಂಚ ವಸೂಲಿ ಮಾಡುತ್ತಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ. 

ಶ್ರೀನಾಥ ಜೋಷಿ ವಿರುದ್ಧವೂ ತನಿಖೆ ನಡೆಯುತ್ತಿದ್ದು, ಅವರ ಮನೆಯನ್ನು ಶೋಧಿಸಲಾಗಿದೆ. ಈ ಇಬ್ಬರೂ ಕರ್ನಾಟಕ ಹೈಕೋರ್ಟ್ ನಿಂದ ತನಿಖೆಗೆ ತಾತ್ಕಾಲಿಕ ತಡೆಯಾಜ್ಞೆ ಪಡೆದಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಅಧಿಕಾರಿ/ಸಿಬ್ಬಂದಿ ಹೆಸರನ್ನು ಹೇಳಿಕೊಂಡು ಹಣ ವಸೂಲಿ ಮಾಡುತ್ತಿರುವ ಸಂಬಂಧ ಈಗಾಗಲೇ 41 ಎಫ್‌ಐಆರ್‌ಗಳು ದಾಖಲಾಗಿವೆ. ಆನಂದ ಕುಮಾರ್ ಎಂಬ ವ್ಯಕ್ತಿ ಲೋಕಾಯುಕ್ತ ಮತ್ತು ಉಪಲೋಕಾಯುಕ್ತ-2 ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆಯೂ ದೂರು ದಾಖಲಾಗಿದೆ ಎಂದು ಲೋಕಾಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಲೋಕಾಯುಕ್ತದಲ್ಲಿನ ಕಾರ್ಯಭಾರ ಹೆಚ್ಚಳಕ್ಕೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಹೊಸ ಹುದ್ದೆಗಳನ್ನು ಸೃಜಿಸಲು ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದಿದ್ದರೂ, ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಮೂರ್ತಿ ಪಾಟೀಲ್ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಪ್ರಸ್ತುತ, ಗ್ರೂಪ್-ಸಿ ವೃಂದದ 66 ಸಿಬ್ಬಂದಿ ಹುದ್ದೆಗಳು ಮತ್ತು 8 ಪೊಲೀಸ್ ಅಧೀಕ್ಷಕರ ಹುದ್ದೆಗಳು ಖಾಲಿ ಇವೆ. ಹೊಸದಾಗಿ 339 ಅಧಿಕಾರಿ/ಸಿಬ್ಬಂದಿ ಹುದ್ದೆಗಳು ಮತ್ತು ಕಾನೂನು ಕೋಶಕ್ಕೆ 12 ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆಗಳು ಸರ್ಕಾರದ ಹಂತದಲ್ಲಿ ಬಾಕಿ ಇವೆ. ಆಂತರಿಕ ನಿಗಾ ಘಟಕ ಸ್ಥಾಪನೆ ಪ್ರಸ್ತಾವನೆಯನ್ನು ಸರ್ಕಾರ ತಿರಸ್ಕರಿಸಿದೆ ಎಂದು ತಿಳಿಸಿದೆ.

ಲೋಕಾಯುಕ್ತ ನ್ಯಾಯಮೂರ್ತಿಯವರು 2022ರ ಜೂನ್ 15ರಿಂದ ಅಧಿಕಾರ ವಹಿಸಿಕೊಂಡ ನಂತರ 230ಕ್ಕೂ ಹೆಚ್ಚು ಸ್ವಯಂಪ್ರೇರಿತ ದೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಜಲಮೂಲಗಳ ರಕ್ಷಣೆ, ಪರಿಸರ ಸಂರಕ್ಷಣೆ, ಕಸ ವಿಲೇವಾರಿ ಮತ್ತು ಆಸ್ಪತ್ರೆಗಳಲ್ಲಿನ ಲೋಪದೋಷಗಳ ಕುರಿತು ಲೆಕ್ಕವಿಲ್ಲದಷ್ಟು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. 

ಸುಮಾರು 500ಕ್ಕೂ ಅಧಿಕ ಶೋಧನಾ ವಾರಂಟ್‌ಗಳನ್ನು ನೀಡಿದ್ದು, ಅನೇಕ ಕಚೇರಿಗಳಿಂದ ದಾಖಲೆಗಳನ್ನು ವಶಪಡಿಸಿಕೊಂಡು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಲೋಕಾಯುಕ್ತ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಕರಣಗಳ ಅಂಕಿ-ಅಂಶಗಳು (ಏಪ್ರಿಲ್ 1, 2023 ರಿಂದ ಜೂನ್ 30, 2025ರವರೆಗೆ):

 * ಲೋಕಾಯುಕ್ತರ ವ್ಯಾಪ್ತಿ: 4048 ಹಳೆಯ ಪ್ರಕರಣಗಳು, 6491 ಹೊಸ ಪ್ರಕರಣಗಳು, 3429 ವಿಲೇವಾರಿ, 7110 ಬಾಕಿ.

 * ಉಪಲೋಕಾಯುಕ್ತ-1ರ ವ್ಯಾಪ್ತಿ: 4711 ಹಳೆಯ ಪ್ರಕರಣಗಳು, 7322 ಹೊಸ ಪ್ರಕರಣಗಳು, 5106 ವಿಲೇವಾರಿ, 6927 ಬಾಕಿ.

 * ಉಪಲೋಕಾಯುಕ್ತ-2ರ ಪ್ರಭಾರ (ಏಪ್ರಿಲ್ 1, 2023 ರಿಂದ ಜುಲೈ 5, 2024): 4530 ಹಳೆಯ ಪ್ರಕರಣಗಳು, 3801 ಹೊಸ ಪ್ರಕರಣಗಳು, 1806 ವಿಲೇವಾರಿ, 6525 ಬಾಕಿ.

 * ಉಪಲೋಕಾಯುಕ್ತ-2ರ ವ್ಯಾಪ್ತಿ (ಜುಲೈ 6, 2024 ರಿಂದ ಜೂನ್ 30, 2025): 5162 ಹಳೆಯ ಪ್ರಕರಣಗಳು, 3080 ಹೊಸ ಪ್ರಕರಣಗಳು, 131 ವಿಲೇವಾರಿ, 8647 ಬಾಕಿ.

ಲೋಕಾಯುಕ್ತ, ಉಪಲೋಕಾಯುಕ್ತ-1 ಮತ್ತು ಉಪಲೋಕಾಯುಕ್ತ-2ರ ನ್ಯಾಯಮೂರ್ತಿಗಳು ಸಹ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಪ್ರವಾಸ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ದೂರು ಪ್ರಕರಣಗಳ ವಿಲೇವಾರಿ ಮಾಡುತ್ತಾ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಕೋವಿಡ್-19 ಲಸಿಕೆ ಮತ್ತು ಆಕಸ್ಮಿಕ ಸಾವುಗಳ ನಡುವೆ ಯಾವುದೇ ಸಂಬಂಧವಿಲ್ಲ: ಐಸಿಎಂಆರ್, ಏಮ್ಸ್ ಅಧ್ಯಯನದಿಂದ ದೃಢ

Next Post

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025 : ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ  ಬಿಬಿಎಂಪಿ 3 ನೌಕರರು ಅಮಾನತು

Next Post
GBA Head Office Image

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025 : ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ  ಬಿಬಿಎಂಪಿ 3 ನೌಕರರು ಅಮಾನತು

ಬಿಬಿಎಂಪಿ ಇ-ಖಾತಾ ವಿತರಣೆಯಲ್ಲಿ ಅವ್ಯವಸ್ಥೆ: ಸಾರ್ವಜನಿಕರ ಪರದಾಟ – ಮಾಜಿ ನಾಯಕ ಪದ್ಮನಾಭ ರೆಡ್ಡಿ ಆಕ್ರೋಶ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d