Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಡಿಎ ಸಿಎ ನಿವೇಶನ ಗುತ್ತಿಗೆ ನವೀಕರಣದ ಸಂಪೂರ್ಣ ಗುತ್ತಿಗೆ ಮೌಲ್ಯ ಕಟ್ಟಿದಲ್ಲಿ ಬಡ್ಡಿ ಮನ್ನಾ : ಎನ್.ಎ.ಹ್ಯಾರೀಸ್

ಒಂದು ಬಾರಿಯ ಕ್ರಮವಾಗಿ ಸಂಪೂರ್ಣ ಬಡ್ಡಿ ಮನ್ನಾ | ಕುಂಟುತ್ತಾ ಸಾಗಿದೆ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆ | ಸಾರ್ವಜನಿಕ ಕುಂದು ಕೊರತೆ ನಿವಾರಣೆಗೆ ಕಾಲ್ ಸೆಂಟರ್

by Bengaluru Wire Desk
July 4, 2025
in Bengaluru Focus
Reading Time: 1 min read
0

ಬೆಂಗಳೂರು, ಜು.04 www.bengaluruwire.com : ಬಿಡಿಎ ನಿಂದ 1600 ಶಾಲೆ, ದೇವಸ್ಥಾನ, ಚರ್ಚ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಗೆ ಸಿಎ ನಿವೇಶನವನ್ನು ಹಂಚಿಕೆ ಮಾಡಲಾಗಿದೆ. ಆ ಪೈಕಿ 250ಕ್ಕೂ ಹೆಚ್ಚು ಸಿಎ ನಿವೇಶನಗಳ ಗುತ್ತಿಗೆ ಅವಧಿ ಮುಗಿದಿದ್ದು, ನವೀಕರಣಕ್ಕೆ ಬಂದಿದೆ. ಅದನ್ನು ಗುತ್ತಿಗೆ ಪಡೆದವರು 120 ದಿನಗಳ ಒಳಗಾಗಿ ಸಂಪೂರ್ಣ ಗುತ್ತಿಗೆ ಮೌಲ್ಯವನ್ನು ಕಟ್ಟಿದರೆ ಶೇ.18ರಷ್ಟು ಸಂಪೂರ್ಣ ಬಡ್ಡಿಯನ್ನು ಒಂದು ಬಾರಿಯ ಕ್ರಮವಾಗಿ ಮನ್ನಾ ಮಾಡಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರೀಸ್ ಹೇಳಿದರು.

ಬಿಡಿಎ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಾ, ನಾಗರೀಕ ಸೌಲಭ್ಯ ನಿವೇಶನ ಹಂಚಿಕೆ ಪಡೆದಿರುವ ವಿವಿಧ ಸಂಘ ಸಂಸ್ಥೆಗಳು ಬಾಕಿ ಉಳಿಸಿಕೊಂಡಿರುವ ಸಂಪೂರ್ಣ ಗುತ್ತಿಗೆ ಮೌಲ್ಯವನ್ನು ಬಿಡಿಎ ಪ್ರಕಟಣೆ ನೀಡಿದ 120 ದಿನಗಳ ಒಳಗಾಗಿ ಪಾವತಿಸಿದಲ್ಲಿ ನಿಯಮಾನುಸಾರ ವಿಧಿಸಲಾಗುವ ಬಡ್ಡಿಯ ಮೊತ್ತವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಪ್ರಸ್ತುತ 250ಕ್ಕೂ ಸಿಎ ನಿವೇಶನಗಳ ಗುತ್ತಿಗೆ ಅವಧಿ ವಿವಿಧ ಅವಧಿಗಳಲ್ಲಿ ಮುಗಿದಿದ್ದು, ಹಲವು ವರ್ಷಗಳಿಂದ ಗುತ್ತಿಗೆ ನವೀಕರಣ ಬಾಕಿ ಶುಲ್ಕವನ್ನು ನೀಡದ ಕಾರಣ ಅಸಲು, ಬಡ್ಡಿ ಸಾಕಷ್ಟು ಬೆಳೆದಿದೆ. ಅದರ ಜೊತೆಗೆ ಶೇ.18 ಜಿಎಸ್ ಟಿ ಕೂಡ ಬಿಡಿಎ ಹಾಕಲಿದೆ. ಅದೂ ಅಲ್ಲದೇ ಈ ಸಿಎ ನಿವೇಶನಗಳ ಮಾರ್ಗಸೂಚಿ ದರವೂ ಕಾಲಾನಂತರದಲ್ಲಿ ಸಾಕಷ್ಟು ಹೆಚ್ಚಾಗಿರುವ ಕಾರಣ ಗೈಡೆನ್ಸ್ ವ್ಯಾಲ್ಯೂ ಆಧಾರಿತವಾದ ಗುತ್ತಿಗೆ ಮೌಲ್ಯವೂ ಕೂಡ ಹೆಚ್ಚಾಗಿದೆ. ಮೂಲಗಳ ಮಾಹಿತಿ ಪ್ರಕಾರ ಬಾಕಿ ನವೀಕರಣ ಗುತ್ತಿಗೆ ಮೌಲ್ಯದ ಅಸಲೇ 150 ಕೋಟಿ ರೂ.‌ ದಾಟುತ್ತಿದ್ದು, ಬಡ್ಡಿಯ ಮೊತ್ತ ದ್ವಿಗುಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಡಿಎಗೆ ಆಸ್ತಿ ತೆರಿಗೆ ಸಂಪನ್ಮೂಲದ ಪೈಕಿ ಸಿಎ ನಿವೇಶನ ಗುತ್ತಿಗೆ ನವೀಕರಣ ಶುಲ್ಕವೂ ಪ್ರಮುಖ ಆದಾಯ ಮೂಲವಾಗಿದೆ.

ಹೆಬ್ಬಾಳ ಮೇಲ್ಸೇತುವೆ ಹೆಚ್ಚುವರಿ ಲೂಪ್ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, ಆಗಸ್ಟ್ 15 ರ ಸುಮಾರಿಗೆ ಸಾರ್ವಜನಿಕರಿಗೆ ಮುಕ್ತವಾಗಲಿದೆ. ಈ ಕಾಮಗಾರಿಯ ಅಂದಾಜು ವೆಚ್ಚ ವಿಳಂಬಗತಿಯಿಂದ ಏರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಬಿಡಿಎ ಅಧ್ಯಕ್ಷ ಹ್ಯಾರೀಸ್, 73 ಕಿ.ಮೀ ಉದ್ದದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ಭೂಸ್ವಾಧೀನಕ್ಕಾಗಿ ರೈತರಿಗೆ ಪ್ರತಿ ಎಕರೆಗೆ ಭೂಪರಿಹಾರ ನೀಡುವ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ, ಭೂ ಪರಿಹಾರ ನಿಗದಿಪಡಿಸುವ ಸಂಬಂಧ ವಿಶೇಷ ಉದ್ದೇಶ ಘಟಕ (SPV) ಸಮಿತಿ ರಚನೆಯಾಗಿದೆ ಎಂದಷ್ಟೇ ಹೇಳಿದರು. 

ಈಗಾಗಲೇ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬೆಂಗಳೂರಿನ ಪ್ರಮುಖ ರಸ್ತೆ ಯೋಜನೆಯು ಸರ್ಕಾರ ಹಾಗೂ ಬಿಡಿಎ ಹಂತದಲ್ಲಿ ಇನ್ನೂ ರೈತರಿಗೆ ಭೂ ಪರಿಹಾರ ನಿಗದಿಪಡಿಸದೆ, ಭೂಸ್ವಾಧೀನ ಪ್ರಕ್ರಿಯೆ ಸೇರಿದಂತೆ ಮೊದಲಾದ ಹಂತಗಳನ್ನು ದಾಟಲು ಅಗತ್ಯವಾಗಿದೆ.

ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ ಸಾರ್ವಜನಿಕರಿಗೆ ನಿವೇಶನ ಹಂಚಿಕೆಗಾಗಿ ಯಾವಾಗ ಅರ್ಜಿ ಆಹ್ವಾನಿಸಲಾಗುತ್ತದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಬಡಾವಣೆ ನಿರ್ಮಾಣ, ಕಾಮಗಾರಿ, ಭೂಸ್ವಾಧೀನ ವಿಚಾರಗಳಿಗೆ ಸಂಬಂಧಿಸಿದ ವಿಷಯ ಕೋರ್ಟ್ ನಲ್ಲಿದ್ದು, ನ್ಯಾಯಾಲಯದ ಸೂಚನೆ ಅನ್ವಯ ಕ್ರಮವಹಿಸುತ್ತೇವೆ ಎಂದು ಹ್ಯಾರೀಸ್ ಮತ್ತು ಬಿಡಿಎ ಆಯುಕ್ತ ಮಣಿವಣ್ಣನ್ ತಿಳಿಸಿದರು.

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿ ಹಲವು ವರ್ಷಗಳಾದರೂ, ನಿವೇಶನ ಹಂಚಿಕೆ ಮಾಡಿದವರು ಲೇಔಟ್ ಅಭಿವೃದ್ಧಿಪಡಿಸಿದರೂ ಇನ್ನೂ ಮನೆ ಕಟ್ಟಿಕೊಂಡಿಲ್ಲ ಎಂದು ಬಿಡಿಎ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ಆಗ ಈ ಬಡಾವಣೆಗಳಲ್ಲಿ ಸಾಕಷ್ಟು ಮೂಲಭೂತ ಸೌಲಭ್ಯದ ಕೊರತೆಯಿದೆ ಎಂದು ಮಾಧ್ಯಮದವರು ಗಮನ ಸೆಳೆದಾಗ, ಕೆಂಪೇಗೌಡ ಲೇಔಟ್ ನಲ್ಲಿ ಇರುವ 9 ಬ್ಲಾಕ್ ಗಳ ಪೈಕಿ 5 ಬ್ಲಾಕ್ ಗಳಲ್ಲಿ ಸಂಪೂರ್ಣ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ. ಕೇವಲ 4 ಬ್ಲಾಕ್ ಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕಾನೂನಾತ್ಮಕ ತೊಂದರೆ ಹಾಗೂ ಮತ್ತಿತರ ಕಾರಣಕ್ಕೆ ಸಂಪೂರ್ಣ ಅಭಿವೃದ್ಧಿ ಸಾಧ್ಯವಾಗಿಲ್ಲ ಎಂದು ಆಯುಕ್ತರು ಮಾಹಿತಿ ನೀಡಿದರು.

ಸಾರ್ವಜನಿಕರ ಕುಂದು ಕೊರತೆಯನ್ನು ಈಡೇರಿಸಲು 9483166622 ವಾಟ್ಸಪ್ ನಂಬರ್ ಸಂಪರ್ಕಿಸಬಹುದಾಗಿದೆ. ಕೇಂದ್ರ ಕಚೇರಿಯಲ್ಲಿ ಕುಂದು ಕೊರತೆ ನಿವಾರಣೆಗಾಗಿ ಶೀಘ್ರದಲ್ಲಿಯೇ ಇದಕ್ಕಾಗಿ ಕಾಲ್ ಸೆಂಟರ್ ಆರಂಭಿಸಲಾಗುವುದು. ಈ ಕೇಂದ್ರವು ಬೆಳಗ್ಗೆ 10ರಿಂದ ಸಂಜೆ 6ರ ತನಕ ಕಾರ್ಯನಿರ್ವಹಿಸಲಿದೆ ಎಂದರು.

30 ದಿನಗಳ ಒಳಗಾಗಿ ಪ್ರತಿ ಕುಂದು ಕೊರತೆಗಳು ನಿವಾರಣೆಯಾಗಲಿದೆ. ಒಂದೊಮ್ಮರ ಬಿಡಿಎ ನಿಯಮಾನುಸಾರ ಕ್ರಮವಹಿಸಲು ಸಾಧ್ಯವಾಗದಿದ್ದಲ್ಲಿ ಸೂಕ್ತ ಹಿಂಬರಹ ನೀಡಿ ಪ್ರಕರಣ ಮುಕ್ತಾಯ ಮಾಡಲಾಗುತ್ತದೆ. ಪ್ರಾಧಿಕಾರ 30 ದಿನಗಳಲ್ಲಿ ಕೈಗೊಂಡಿರುವ ಪರಿಹಾರ ಕ್ರಮವು ಸಾರ್ವಜನಿಕರಿಗೆ ತೃಪ್ತಿಕರವಾಗದೇ ಇದ್ದಲ್ಲಿಆ ಅಹವಾಲನ್ನು ಬಿಡಿಎ ನಿಯಮಗಳಲ್ಲಿ ಪರಿಹರಿಸಲು ಅವಕಾಶವಿಲ್ಲದಿದ್ದಲ್ಲಿ ಅವುಗಳನ್ನು ಪ್ರತಿ ಗುರುವಾರ ಮಧ್ಯಾಹ್ನ ವಲಯವಾರು ಸಾರ್ವಜನಿಕರ ಸಮಕ್ಷಮ ಅವರ ಕೋರಿಕೆ ಅಥವಾ ಮನವಿಗಳನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕಾನೂನು ರೀತ್ಯ ಪರಿಹರಿಸುವ ಬಗ್ಗೆ ಸಭೆ ನಡೆಸಲಾಗುತ್ತದೆ ಎಂದು ಬಿಡಿಎ ಆಯುಕ್ತ ಮಣಿವಣ್ಣನ್ ಹೇಳಿದರು.

ಪ್ರಾಯೋಗಿಕವಾಗಿ ಬಿಡಿಎ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ಜು.03ರಂದು ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು. ಅಲ್ಲಿ ಸಭೆಗೆ ಹಾಜರಾಗಿದ್ದ 20 ಅರ್ಜಿದಾರರ ಪೈಕಿ 6 ಮನವಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು ಎಂದು ಅವರು ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW SPECIAL | ಬೆಂಗಳೂರಿನಲ್ಲಿ ‘ನಂಬಿಕೆ ನಕ್ಷೆ’ ಯೋಜನೆಗೆ ವೇಗ : ಒಂದೇ ದಿನದಲ್ಲಿ ಡ್ರಾಫ್ಟ್ ಕಟ್ಟಡ ನಕ್ಷೆ ಲಭ್ಯ!!

Next Post

5 ಹುಲಿಗಳ ಸಾವು ಪ್ರಕರಣ: ಮೂವರು ಅಧಿಕಾರಿಗಳ ಅಮಾನತಿಗೆ ಶಿಫಾರಸು, ಡಿಸಿಎಫ್ ಚಕ್ರಪಾಣಿ ಕರ್ತವ್ಯಲೋಪ

Next Post

5 ಹುಲಿಗಳ ಸಾವು ಪ್ರಕರಣ: ಮೂವರು ಅಧಿಕಾರಿಗಳ ಅಮಾನತಿಗೆ ಶಿಫಾರಸು, ಡಿಸಿಎಫ್ ಚಕ್ರಪಾಣಿ ಕರ್ತವ್ಯಲೋಪ

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆ ಕಡಿತ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d