Thursday, May 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕರ್ನಾಟಕದಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಹೊಸ ನಿಯಮಗಳು

ಹೊಸ ಕರಡು ನಿಯಮಗಳಿಂದ ಅಪಾರ್ಟ್ ಮೆಂಟ್, ವಿಲ್ಲಾ, ವಾಣಿಜ್ಯ ಸಂಕೀರ್ಣಗಳ ಮೇಲೆ ಪರಿಣಾಮ

by Bengaluru Wire Desk
July 6, 2025
in News Wire, Public interest
Reading Time: 2 mins read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.06 www.bengaluruwire.com : ರಾಜ್ಯ ಸರ್ಕಾರದ ಗ್ಯಾರಂಟಿ ಭಾಗ್ಯಗಳ ಪರಿಣಾಮ ಅಬಕಾರಿ ವಿವಿಧ ರೀತಿಯ ಶುಲ್ಕಗಳು, ಮೆಟ್ರೋ, ಬಸ್ ಪ್ರಯಾಣ ದರ ಏರಿಕೆ ಹೀಗೆ ಬೆಲೆ ಏರಿಕೆಯ ಸರದಿಗೆ ಗ್ರಾಮ ಪಂಚಾಯಿತಿಯೂ ಈಗ ಸೇರ್ಪಡೆಯಾಗುತ್ತಿದೆ. ರಾಜ್ಯದಲ್ಲಿ ಗ್ತಾಮ ಪಂಚಾಯಿತಿಗಳ ವ್ಯಾಪ್ತಿಯ ಅಪಾರ್ಟ್ ಮೆಂಟ್, ವಿಲ್ಲಾ, ವಾಣಿಜ್ಯ ಸಂಕೀರ್ಣ, ಮಾಲ್, ವಸತಿಯೇತರ ಕಟ್ಟಡ ಹಾಗೂ ಬಹುಮಾಲೀಕತ್ವದ ಕಟ್ಟಡಗಳ ಆಸ್ತಿ ತೆರಿಗೆ ಶೀಘ್ರದಲ್ಲೇ ಹೆಚ್ಚಳವಾಗಲಿದೆ. 

ಈ ಕುರಿತಂತೆ ರಾಜ್ಯ ಸರ್ಕಾರ, ‘ಕರ್ನಾಟಕ ರಾಜ್ಯ ಸ್ವರಾಜ್ ಹಾಗೂ ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ, ಫೀಜುಗಳ) ನಿಯಮಗಳು-2025’ ಕರಡು ಅಧಿಸೂಚನೆ ಹೊರಡಿಸಿದೆ. ಇಕ್ಕೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿದೆ.

ಕರಡು ನಿಯಮಗಳ ಪ್ರಮುಖಾಂಶಗಳು ಮತ್ತು ಬದಲಾವಣೆಗಳು:

ಹೊಸ ನಿಯಮಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ನಿರ್ಧರಣೆ ಮತ್ತು ಸಂಗ್ರಹಣೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿವೆ. ಪ್ರಸ್ತುತ ದರಗಳು ಮತ್ತು ಪರಿಷ್ಕರಿಸಿದ ದರಗಳನ್ನು ನೇರವಾಗಿ ಈ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸದಿದ್ದರೂ, ತೆರಿಗೆಯನ್ನು “ಸ್ವತ್ತಿನ ಬಂಡವಾಳ ಮೌಲ್ಯದ ಆಧಾರದಲ್ಲಿ ಕೋಷ್ಟ್ರಗಳಲ್ಲಿ ತೋರಿಸಿರುವ ದರದಂತೆ” ವಿಧಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ. ಈ ಮೂಲಕ, ಆಸ್ತಿಗಳ ಮೂಲ ಮೌಲ್ಯವನ್ನು ಆಧರಿಸಿ ತೆರಿಗೆ ವಿಧಿಸಲಾಗುವುದು.

ತೆರಿಗೆ ವಿಧಿಸುವ ಪ್ರಕ್ರಿಯೆ ಮತ್ತು ಹೊಸ ವ್ಯಾಪ್ತಿ:

ಪ್ರತಿಯೊಂದು ಗ್ರಾಮ ಪಂಚಾಯಿತಿಯು ಪ್ರತಿ ವರ್ಷ ಮಾರ್ಚ್ ತಿಂಗಳಲ್ಲಿ ತನ್ನ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲಾ ಆಸ್ತಿಗಳ ಸಮೀಕ್ಷೆ ನಡೆಸಿ, ಏಪ್ರಿಲ್ 1ರಿಂದ ಅವುಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು. ಕಟ್ಟಡಗಳಿಗೆ ಬಳಕೆಯೋಗ್ಯ ಪ್ರಮಾಣಪತ್ರ (Occupancy Certificate) ನೀಡಿದ ದಿನಾಂಕದಿಂದಲೇ ಕಟ್ಟಡವನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ. 

ಹೊಸದಾಗಿ ತೆರಿಗೆ ವ್ಯಾಪ್ತಿಗೆ ಬರುವ ಆಸ್ತಿಗಳ ವಿವರಗಳನ್ನು ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಚೇರಿ ಹಾಗೂ ಗ್ರಾಮದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸಿ, ಏಳು ದಿನಗಳ ಕಾಲ ಆಕ್ಷೇಪಣೆ ಆಹ್ವಾನಿಸಲಾಗುವುದು.

ಇ-ಆಸ್ತಿ ಮತ್ತು ಆನ್‌ಲೈನ್ ಪಾವತಿ:

ಆಸ್ತಿ ಮಾಲೀಕರು ತೆರಿಗೆ, ದರ ಮತ್ತು ಫೀಜುಗಳನ್ನು ಪಾರದರ್ಶಕವಾಗಿ ಆನ್‌ಲೈನ್ ಮೂಲಕ ಪಾವತಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲು ಇಲಾಖೆಯ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಗ್ರಾಮ ಪಂಚಾಯಿತಿಗಳು ತೆರಿಗೆ, ದರ ಮತ್ತು ಫೀಜುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು. 

ತೆರಿಗೆ ವಿವರಗಳ ಬದಲಾವಣೆಗಳನ್ನು ಒಳಗೊಂಡ ಶಾಶ್ವತ ಸೂಚನಾ ಫಲಕಗಳನ್ನು ಅಳವಡಿಸಬೇಕು. ಕಟ್ಟಡಗಳು ಮತ್ತು ನಿವೇಶನಗಳ ಮೇಲಿನ ತೆರಿಗೆಗಳನ್ನು ಪೂರ್ಣವಾಗಿ ಅಥವಾ ಗರಿಷ್ಠ ಎರಡು ಕಂತುಗಳಲ್ಲಿ ಪಾವತಿಸಲು ಅವಕಾಶವಿದೆ.

ನಿಯಮ ಉಲ್ಲಂಘನೆಗೆ ದಂಡ:

ಗ್ರಾಮ ಪಂಚಾಯಿತಿಗಳ ಮಾದರಿ ಕಟ್ಟಡ ಉಪವಿಧಿಗಳನ್ನು ಉಲ್ಲಂಘಿಸಿ ನಿರ್ಮಿಸಲಾದ ಕಟ್ಟಡಗಳಿಗೆ ಅಥವಾ ಪರಿವರ್ತನೆಯಾಗದ ಭೂಮಿ ಅಥವಾ ಅನುಮೋದಿತವಲ್ಲದ ಲೇಔಟ್‌ಗಳಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ, ಅಥವಾ ಅಧಿಭೋಗ/ಪೂರ್ಣಗೊಳಿಸಿದ ಪ್ರಮಾಣಪತ್ರವಿಲ್ಲದೆ ಸ್ವಾಧೀನಪಡಿಸಿಕೊಂಡ ಕಟ್ಟಡಗಳಿಗೆ ಮೊದಲ ವರ್ಷದಲ್ಲಿ ವಿಧಿಸುವ ತೆರಿಗೆಯು ದುಪ್ಪಟ್ಟಾಗಿರುತ್ತದೆ. 

ಈ ಆಸ್ತಿಗಳ ವಿವರಗಳನ್ನು ನಮೂನೆ-11ಬಿ ರಿಜಿಸ್ಟರ್‌ನಲ್ಲಿ ನಿರ್ವಹಿಸಲಾಗುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025ರ ಅಧಿಸೂಚನೆಯ ನಂತರ ಯಾವುದೇ ಹೊಸ ಸ್ವತ್ತುಗಳನ್ನು ಈ ರಿಜಿಸ್ಟರ್‌ಗೆ ಸೇರಿಸಲಾಗುವುದಿಲ್ಲ ಎಂದು ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಕ್ಷೇಪಣೆಗಳ ಸಲ್ಲಿಸಲು ಹೀಗೆ ಮಾಡಿ :

ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂ.ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 3ನೇ ಮಹಡಿ, 3ನೇ ಹಂತ, ಬಹುಮಹಡಿಗಳ ಕಟ್ಟಡ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-01 ಇಲ್ಲಿಗೆ ಕಳುಹಿಸಲು ಕೋರಲಾಗಿದೆ. ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟವಾದ ದಿನಾಂಕದಿಂದ ಹದಿನೈದು ದಿನಗಳ ಒಳಗಾಗಿ ಸ್ವೀಕರಿಸುವ ಯಾವುದೇ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

WhatsApp Join our WhatsApp Channel
Previous Post

ದಲಿತ ಕುಟುಂಬದ ಮೇಲೆ ಹಲ್ಲೆ: ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪ ಆರೋಪ

Next Post

ಬೆಂಗಳೂರಿನಲ್ಲಿ ₹50 ಕೋಟಿ ಮೌಲ್ಯದ ಸರ್ಕಾರಿ ಭೂಮಿ ತೆರವು: ಜಿಲ್ಲಾಧಿಕಾರಿ ಜಿ.ಜಗದೀಶ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ

Next Post

ಬೆಂಗಳೂರಿನಲ್ಲಿ ₹50 ಕೋಟಿ ಮೌಲ್ಯದ ಸರ್ಕಾರಿ ಭೂಮಿ ತೆರವು: ಜಿಲ್ಲಾಧಿಕಾರಿ ಜಿ.ಜಗದೀಶ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ

ಗ್ಯಾರಂಟಿ ಜೊತೆ ಅಭಿವೃದ್ಧಿಯನ್ನೂ ಮಾಡಿ: ಸರ್ಕಾರಕ್ಕೆ ರಂಭಾಪುರಿ ಶ್ರೀಗಳ ಆಗ್ರಹ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group