Thursday, May 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW SPECIAL | ಅಭಿಮಾನ್ ಸ್ಟುಡಿಯೋ ವಿರುದ್ಧ ಕ್ರಮಕ್ಕೆ ಆಗ್ರಹ: ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್‌ನಿಂದ ಸಿಎಂಗೆ ದೂರು

ಸ್ಟುಡಿಯೋ ಅಭಿವೃದ್ಧಿಪಡಿಸದೆ ಸರ್ಕಾರದ ಆದೇಶ ಉಲ್ಲಂಘನೆ, ಅಕ್ರಮ ಚಟುವಟಿಕೆಗಳು ಹಾಗೂ ಪುಣ್ಯಭೂಮಿ ವಿಚಾರದಲ್ಲಿ ತೊಂದರೆ ಆರೋಪ

by Bengaluru Wire Desk
July 8, 2025
in Bengaluru Focus, BW Special
Reading Time: 1 min read
0

ಬೆಂಗಳೂರು, ಜು.08 www.bengaluruwire.com : ನಗರದ ಪ್ರತಿಷ್ಠಿತ ಅಭಿಮಾನ್ ಸ್ಟುಡಿಯೋ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿ.ಎಸ್.ಎಸ್. ಅಭಿಮಾನ್ ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದೆ. 

ಸ್ಟುಡಿಯೋದ 10 ಎಕರೆ ಜಾಗವನ್ನು ಮಾರಾಟ ಮಾಡಿ, ಅದನ್ನು ಅಭಿವೃದ್ಧಿಪಡಿಸದೆ ಬೆಂಗಳೂರು ನಗರದ ವಿಶೇಷ ಜಿಲ್ಲಾಧಿಕಾರಿಗಳು 2003ರ ಜುಲೈ 16ರಂದು ಹೊರಡಿಸಿದ್ದ ಷರತ್ತುಬದ್ಧ ಆದೇಶವನ್ನು ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.

ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಟಿ.ರಾಜುಗೌಡ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಪತ್ರದಲ್ಲಿ, “ಅಭಿಮಾನ್ ಸ್ಟುಡಿಯೋವನ್ನು ಟಿ.ಎನ್. ಬಾಲಕೃಷ್ಣ ಅವರಿಗೆ 1970ರ ಮಾರ್ಚ್ 27ರಂದು ಷರತ್ತುಗಳೊಂದಿಗೆ ಮಂಜೂರು ಮಾಡಲಾಗಿತ್ತು. ಸ್ಟುಡಿಯೋಕ್ಕಾಗಿ ಮಂಜೂರಾಗಿದ್ದ 20 ಎಕರೆ ಜಮೀನಿನಲ್ಲಿ, 10 ಎಕರೆ ಜಮೀನನ್ನು ಮಾರಾಟ ಮಾಡಿ ಬಂದ ಹಣವನ್ನು ಸ್ಟುಡಿಯೋ ಅಭಿವೃದ್ಧಿಗೆ ಬಳಸಲು ಬಾಲಕೃಷ್ಣ ಅವರ ಮಕ್ಕಳಿಗೆ 2003ರಲ್ಲಿ ಅನುಮತಿ ನೀಡಲಾಗಿತ್ತು. ಆದರೆ, ಸ್ಟುಡಿಯೋ ಮಾಲೀಕರು ಇಲ್ಲಿಯವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ಸುಮಾರು 55 ವರ್ಷಗಳ ಹಿಂದೆ ಹಾಕಿದ ಶೀಟ್‌ಗಳು ಹಾಗೆಯೇ ಇದ್ದು, ಮಳೆ ಬಂದರೆ ಸೋರುತ್ತಿದೆ. ಮೇಲ್ಛಾವಣಿ ಶಿಥಿಲಾವಸ್ಥೆಯಲ್ಲಿದ್ದು, ಚಿತ್ರೀಕರಣಕ್ಕೆ ಸರಿಯಾದ ವ್ಯವಸ್ಥೆ ಇಲ್ಲ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಸಿಎಂ ಕಚೇರಿಯಿಂದ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ನೀಡಿದ ಟಿಪ್ಪಣಿ ದಾಖಲೆ.

ಅಲ್ಲದೆ, ಸ್ಟುಡಿಯೋ ಆವರಣದ ಸುತ್ತಮುತ್ತ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಟ್ರಸ್ಟ್ ಗಂಭೀರ ಆರೋಪ ಮಾಡಿದೆ. ಡಾ. ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ನಡೆದ 10 ಗುಂಟೆ ಪುಣ್ಯಭೂಮಿ ಜಾಗವನ್ನು ಪೂಜಾ ಕಾರ್ಯಕ್ರಮಗಳಿಗೆ ಬಳಸಲು ಅಭಿಮಾನ್ ಸ್ಟುಡಿಯೋ ಮಾಲೀಕರು 2017ರ ಡಿಸೆಂಬರ್ 19ರಂದು ಸರ್ಕಾರಕ್ಕೆ ಒಪ್ಪಿಗೆ ಪತ್ರ ನೀಡಿದ್ದರೂ, ಈಗ ಆ ಜಾಗದಲ್ಲಿ ಡಾ.ವಿಷ್ಣುವರ್ಧನ್ ಕಾರ್ಯಕ್ರಮ ನಡೆಸಲು ತೊಂದರೆ ನೀಡುತ್ತಿದ್ದಾರೆ ಎಂದು ಟ್ರಸ್ಟ್ ಹೇಳಿದೆ. 

2024ರ ಜನವರಿ 6ರಿಂದ ಡಾ. ವಿಷ್ಣುವರ್ಧನ್ ಮಂದಿರದಲ್ಲಿದ್ದ ಎರಡು ದೊಡ್ಡ ಗಂಟೆಗಳು ಹಾಗೂ 12×12 ಅಡಿ ಗಾತ್ರದ ಎರಡು ಬ್ಯಾನರ್ ಬೋರ್ಡ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಟ್ರಸ್ಟ್ ದೂರಿದೆ.

2024ರ ಸೆಪ್ಟೆಂಬರ್ 18ರಂದು ನಡೆದ ಜನ್ಮದಿನೋತ್ಸವ ಮತ್ತು ಡಿಸೆಂಬರ್ 30ರಂದು ನಡೆದ ಪುಣ್ಯಸ್ಮರಣೆ ಪೂಜಾ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿ, ಹಲ್ಲೆ ಹಾಗೂ ನಿಂದನೆ ಮಾಡಿರುವ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 2025ರ ಜನವರಿ 29ರಂದು ಎಫ್‌ಐಆರ್ ದಾಖಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತಂತೆ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಡಾ. ವೆಂಕಟೇಶಯ್ಯ ಅವರು ಈ ಮನವಿಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ರವಾನಿಸಿದ್ದು, ಮನವಿಯನ್ನು ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಡಾ. ವಿಷ್ಣುವರ್ಧನ್ ಅವರ 75ನೇ ವರ್ಷದ ಜನ್ಮದಿನೋತ್ಸವ ಮತ್ತು ಅಮೃತ ಮಹೋತ್ಸವ ಕಾರ್ಯಕ್ರಮವನ್ನು 2025ರ ಸೆಪ್ಟೆಂಬರ್ 18ರಂದು ಅಭಿಮಾನ್ ಸ್ಟುಡಿಯೋ ಆವರಣದಲ್ಲಿರುವ ಪುಣ್ಯಭೂಮಿ ಜಾಗದಲ್ಲಿ ನಡೆಸಲು ಟ್ರಸ್ಟ್ ಜಿಲ್ಲಾಧಿಕಾರಿಗಳ ಅನುಮತಿ ಕೋರಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಪುಣ್ಯಸ್ಮರಣೆ ಹಾಗೂ ಜನ್ಮದಿನೋತ್ಸವ ಕಾರ್ಯಕ್ರಮಗಳಿಗೆ ಅನುಮತಿ ನೀಡಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ. 

ಈ ಬಾರಿ ಸಹ ಕಾರ್ಯಕ್ರಮಕ್ಕೆ ಅನುಮತಿ ಹಾಗೂ ಸುಗಮವಾಗಿ ನಡೆಸಲು ಆದೇಶ ನೀಡುವಂತೆ ಟ್ರಸ್ಟ್ ಮನವಿ ಮಾಡಿದೆ. ಅಲ್ಲದೆ, ಡಾ.ವಿಷ್ಣುವರ್ಧನ್ ಅವರ ಮಂಟಪದ ಒಂದು ಆಧಾರಸ್ತಂಭ ಶಿಥಿಲಾವಸ್ಥೆಯಲ್ಲಿದ್ದು, ಅದರ ದುರಸ್ತಿಗೂ ಅನುಮತಿ ನೀಡಬೇಕೆಂದು ವಿ.ಎಸ್.ಎಸ್.ಅಭಿಮಾನ್ ಡಾ.ವಿಷ್ಣುವರ್ಧನ್ ಪುಷ್ಯಭೂಮಿ ಟ್ರಸ್ಟ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿಯವರನ್ನು ಕೋರಿದೆ. ಒಟ್ಟಿನಲ್ಲಿ ಸೆಪ್ಟೆಂಬರ್ ನಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಜನ್ಮದಿನೋತ್ಸವ ಕಾರ್ಯಕ್ರಮ ಅಭಿಮಾನ್ ಸ್ಟುಡಿಯೋ ಜಾಗದಲ್ಲಿ ವಿಜೃಂಭಣೆಯಿಂದ ನಡೆಯುತ್ತಾ? ಅಥವಾ ಇಲ್ಲವಾ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.

WhatsApp Join our WhatsApp Channel
Previous Post

ಹುಡುಗಿ ವಿಚಾರಕ್ಕೆ ಯುವಕನ ಮೇಲೆ ಭೀಕರ ಹಲ್ಲೆ : ‘ರೇಣುಕಾಸ್ವಾಮಿ ಪ್ರಕರಣ’ ಉಲ್ಲೇಖಿಸಿ ಥಳಿತ

Next Post

Bescom News | ವಿದ್ಯುತ್ ಮೀಟರ್ ಮಾಲೀಕತ್ವ ವರ್ಗಾವಣೆ ಈಗ ಸುಲಭ: ಆಸ್ತಿ ಗುರುತಿನ ಚೀಟಿ ಆಧಾರಿತ ಆನ್‌ಲೈನ್ ವ್ಯವಸ್ಥೆ ಜಾರಿ

Next Post
ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

Bescom News | ವಿದ್ಯುತ್ ಮೀಟರ್ ಮಾಲೀಕತ್ವ ವರ್ಗಾವಣೆ ಈಗ ಸುಲಭ: ಆಸ್ತಿ ಗುರುತಿನ ಚೀಟಿ ಆಧಾರಿತ ಆನ್‌ಲೈನ್ ವ್ಯವಸ್ಥೆ ಜಾರಿ

ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

ಅನ್ನಭಾಗ್ಯ ಅನುದಾನ ಬಿಡುಗಡೆ: ಲಾರಿ ಮಾಲೀಕರ ಮುಷ್ಕರ ವಾಪಸ್

Please login to join discussion

Like Us on Facebook

Follow Us on Twitter

Recent News

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group