Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW EXCLUSIVE | ಬಿಡಿಎ ಮಾಸ್ಟರ್‌ಪ್ಲಾನ್: PRR-2 ಭೂಸ್ವಾಧೀನಕ್ಕೆ 40: 60 ಸೂತ್ರ, ರೈತರಿಗೆ ಬಂಪರ್ ಆಫರ್?

ಮೇಜರ್ ಆರ್ಟಿಯಲ್ ರಸ್ತೆ ಮಾದರಿಯಲ್ಲಿ 800 ಎಕರೆ ಭೂಸ್ವಾಧೀನಕ್ಕೆ ನಿರ್ಧಾರ; PRR-1 ವ್ಯಾಪ್ತಿಯ 60 ಗ್ರಾಮಗಳಲ್ಲಿ NOC, ಸ್ಥಗಿತ: ಸಾರ್ವಜನಿಕರ ಆಕ್ರೋಶ

by Bengaluru Wire Desk
July 25, 2025
in Bengaluru Focus, BW Special, Public interest
Reading Time: 2 mins read
0

ಬೆಂಗಳೂರು, ಜು.25 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಮಹತ್ವಾಕಾಂಕ್ಷೆಯ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (PRR) ಯೋಜನೆಯ ಎರಡನೇ ಹಂತದ (PRR-2) ಭೂಸ್ವಾಧೀನಕ್ಕೆ ಹೊಸ, ವಿನೂತನ ಮಾದರಿಯನ್ನು ಅನುಸರಿಸಲು ನಿರ್ಧರಿಸಿದೆ. 

ಬಿಡಿಎಗೆ ಆರ್ಥಿಕ ಹೊರೆಯಾಗದಂತೆ, ಮಾಗಡಿ- ಮೈಸೂರು ರಸ್ತೆ ಮಧ್ಯದಲ್ಲಿ 10.35 ಕಿ.ಮೀ ಉದ್ದದ ಮೇಜರ್ ಆರ್ಟಿಯಲ್ ರಸ್ತೆ (MAR) ನಿರ್ಮಿಸಲು ಭೂಸ್ವಾಧೀನ ಮಾಡಿಕೊಂಡ ಮಾದರಿಯಲ್ಲಿ 40 :60 ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ನೀಡುವ ಮೂಲಕ 800 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಿಡಿಎ ಸಜ್ಜಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೆಲವೇ ದಿನಗಳಲ್ಲಿ ಅನುಮೋದನೆ ದೊರೆಯುವ ಸಾಧ್ಯತೆಯಿದೆ.

PRR-2: 800 ಎಕರೆಗೆ 40 : 60 ಸೂತ್ರ :

ಹೊಸೂರು ರಸ್ತೆಯಿಂದ ನೆಲಮಂಗಲ ರಸ್ತೆವರೆಗೆ 35 ಕಿ.ಮೀ. ಉದ್ದವಿರುವ PRR-2 ಹಂತಕ್ಕೆ ಒಟ್ಟು 800 ಎಕರೆ ಜಮೀನಿನ ಅವಶ್ಯಕತೆಯಿದೆ. ಪ್ರಸ್ತುತ ಈ ಭಾಗದಲ್ಲಿ ನೈಸ್ ರಸ್ತೆ ಪರ್ಯಾಯವಾಗಿ ಲಭ್ಯವಿರುವುದರಿಂದ, PRR-1ಕ್ಕೆ ಹೋಲಿಸಿದರೆ ಇಲ್ಲಿ ರಸ್ತೆ ಅಭಿವೃದ್ಧಿಯ ಒತ್ತಡ ತುಸು ಕಡಿಮೆಯಿದೆ. ಅಲ್ಲದೆ, ರೈತರಿಗೆ ಮಾರ್ಗಸೂಚಿ ದರದ ಅನ್ವಯ ಭೂ ಪರಿಹಾರ ನೀಡಿದರೆ ಬಿಡಿಎಗೆ ಆರ್ಥಿಕ ಹೊರೆಯನ್ನು ಹೊರಲು ಸಾಧ್ಯವಿಲ್ಲ.

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಕ್ಷೆ (Bangalore business Corridor Map).

ಈ ಹಿನ್ನೆಲೆಯಲ್ಲಿ, ಮಾಗಡಿ-ಮೈಸೂರು ರಸ್ತೆ ಮಧ್ಯೆ 10.35 ಕಿ.ಮೀ. ಉದ್ದದ ಮೇಜರ್ ಆರ್ಟಿರಿಯಲ್ ರೋಡ್ (MAR) ನಿರ್ಮಾಣಕ್ಕೆ 330 ಎಕರೆ ಭೂಸ್ವಾಧೀನಪಡಿಸಿಕೊಳ್ಳಲು ಅನುಸರಿಸಿದ ಯಶಸ್ವಿ ಮಾದರಿಯನ್ನೇ PRR-2 ಗೂ ಅಳವಡಿಸಲು ನಿರ್ಧರಿಸಲಾಗಿದೆ. ಆ ಸಂದರ್ಭದಲ್ಲಿ, ರೈತರಿಗೆ 40 : 60 ಅನುಪಾತದಲ್ಲಿ (ರೈತರಿಗೆ ಅಭಿವೃದ್ಧಿಪಡಿಸಿದ ಭೂಮಿ : ಬಿಡಿಎ ) ಕೆಂಪೇಗೌಡ ಲೇಔಟ್‌ನಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ನೀಡಲಾಗಿತ್ತು. 

ಇದರಿಂದ ಯಾವುದೇ ಭೂ ವಿವಾದವಿಲ್ಲದೆ, ಬಿಡಿಎ ಯಶಸ್ವಿಯಾಗಿ ಭೂಸ್ವಾಧೀನ ಪೂರ್ಣಗೊಳಿಸಿತ್ತು. ಇದೇ ಮಾದರಿಯಲ್ಲಿ, PRR-2 ರಸ್ತೆಗೆ ಹೊಂದಿಕೊಂಡಂತೆ ಆರು ಹೊಸ ಬಡಾವಣೆಗಳನ್ನು ನಿರ್ಮಿಸಿ, ಭೂಮಿ ನೀಡಿದ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ನೀಡಲು ಬಿಡಿಎ ಯೋಜನೆ ರೂಪಿಸಿದೆ. ಇದರಿಂದ ಬಿಡಿಎಗೆ ಆರ್ಥಿಕ ಹೊರೆಯೂ ಕಡಿಮೆಯಾಗಲಿದೆ.

PRR-1: 27,000 ಕೋಟಿ ಸಾಲ, ಟೋಲ್ ಮತ್ತು ಲೇಔಟ್ ಪ್ಲಾನ್ :

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್-1 (PRR-1) ಯೋಜನೆಗಾಗಿ ಬಿಡಿಎ ಹುಡ್ಕೋದಿಂದ 27,000 ಕೋಟಿ ರೂ. ಸಾಲ ಪಡೆದಿದೆ. ಇದರಲ್ಲಿ 21,000 ಕೋಟಿ ರೂ.ಗಳನ್ನು 2560 ಎಕರೆ ಭೂಸ್ವಾಧೀನಕ್ಕೆ ಬಳಸಿದರೆ, ಉಳಿದ 6000 ಕೋಟಿ ರೂ.ಗಳನ್ನು ರಸ್ತೆ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು. 73 ಕಿ.ಮೀ. ಉದ್ದದ ಈ ರಸ್ತೆಯನ್ನು 3-4 ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಬಿಡಿಎ ಹೊಂದಿದೆ. ನೆಲಮಂಗಲದಿಂದ ಹೊಸೂರು ನಡುವೆ ಹೆಸರಘಟ್ಟ, ದೊಡ್ಡಬಳ್ಳಾಪುರ, ಬಳ್ಳಾರಿ ರಸ್ತೆ, ಹೊಸಕೋಟೆ ಮತ್ತು ಸರ್ಜಾಪುರ ರಸ್ತೆಗಳನ್ನು PRR-1 ಸಂಧಿಸುತ್ತದೆ.

ಹುಡ್ಕೋದಿಂದ ಪಡೆದ 27,000 ಕೋಟಿ ರೂ. ಸಾಲಕ್ಕೆ ಮೊದಲ ಮೂರು ವರ್ಷ ಯಾವುದೇ ಬಡ್ಡಿಯನ್ನು (ಶೇ.8.35 ದರದಲ್ಲಿ) ಬಿಡಿಎ ಪಾವತಿಸುವುದಿಲ್ಲ. ಆದರೆ ನಂತರ, ವಾರ್ಷಿಕ ಸುಮಾರು 3,000 ಕೋಟಿ ರೂ.ಗಳಷ್ಟು ಅಸಲು-ಬಡ್ಡಿಯನ್ನು ಬಿಡಿಎ ಹುಡ್ಕೋಗೆ ಪಾವತಿಸಬೇಕಿದೆ. ಅಷ್ಟರೊಳಗೆ PRR-1 ರಸ್ತೆ ಅಭಿವೃದ್ಧಿಪಡಿಸಿ, ವಾರ್ಷಿಕ ತಲಾ 1,000 ಕೋಟಿ ರೂ.ಗಳನ್ನು ಟೋಲ್ ಮೂಲಕ ಸಂಗ್ರಹಿಸಿ, ಅದನ್ನು ಸಾಲ ಮರುಪಾವತಿಗೆ ಬಳಸಿಕೊಳ್ಳಲು ಬಿಡಿಎ ಯೋಜಿಸಿದೆ.

ಇದರ ಜೊತೆಗೆ, PRR-1 ರಸ್ತೆಗೆ ಹೊಂದಿಕೊಂಡಿರುವ ಗ್ರಾಮಗಳನ್ನು ಗುರುತಿಸಿ, ಒಟ್ಟು ಐದು ಹೊಸ ಲೇಔಟ್‌ಗಳನ್ನು ನಿರ್ಮಿಸಲು ಬಿಡಿಎ ನಿರ್ಧರಿಸಿದೆ. ಈ ಬಡಾವಣೆಗಳಿಗೆ PRRನಿಂದ ಸಂಪರ್ಕ ರಸ್ತೆ, ವಿದ್ಯುತ್, ನೀರು, ಒಳಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ, ಅದರಲ್ಲಿನ ನಿವೇಶನಗಳನ್ನು ಅರ್ಜಿದಾರರಿಗೆ, ಸಿಎ ನಿವೇಶನಗಳನ್ನು ಭೋಗ್ಯಕ್ಕೆ ಹಾಗೂ ಮೂಲೆ ನಿವೇಶನಗಳನ್ನು ಹರಾಜಿನ ಮೂಲಕ ಹೆಚ್ಚಿನ ದರಗಳಲ್ಲಿ ಮಾರಾಟ ಮಾಡಿ, ಅದರಿಂದ ಬಂದ ಹಣವನ್ನು ಹುಡ್ಕೋ ಸಾಲ ತೀರಿಸಲು ಬಳಸಿಕೊಳ್ಳುವ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಹೊಸ ಐದು ಲೇಔಟ್‌ಗಳ ನಿರ್ಮಾಣಕ್ಕಾಗಿ ಭೂಸ್ವಾಧೀನಕ್ಕೆ ಪ್ರಾಥಮಿಕವಾಗಿ ಗ್ರಾಮಗಳನ್ನು ಪಟ್ಟಿ ಮಾಡಲಾಗಿದೆ.

ಬಿಡಿಎ ಬಡಾವಣೆ ಅಭಿವೃದ್ಧಿಪಡಿಸುತ್ತಿರುವ ಸಾಂದರ್ಭಿಕ ಚಿತ್ರ.

NOC ಸ್ಥಗಿತ: ಸಾರ್ವಜನಿಕರ ಪರದಾಟ :

PRR-1 ಯೋಜನೆ ಹಾದುಹೋಗುವ ಸ್ಥಳದ ಸುತ್ತಮುತ್ತಲ ಗ್ರಾಮಗಳಲ್ಲಿ ಬಡಾವಣೆ ನಿರ್ಮಿಸಲು ನಿರ್ಧರಿಸಿರುವ ಬಿಡಿಎ, ಭೂಸ್ವಾಧೀನಕ್ಕೆ ನಿರ್ದಿಷ್ಟ ಸರ್ವೆ ನಂಬರ್‌ಗಳನ್ನು ಗುರುತಿಸುವ ಬದಲು ಇಡೀ ಗ್ರಾಮಗಳನ್ನೇ ಪಟ್ಟಿ ಮಾಡಿದೆ. ಹೀಗೆ ಪಟ್ಟಿ ಮಾಡಿದ ಗ್ರಾಮಗಳಲ್ಲಿನ ಯಾವುದೇ ಭೂಮಿಗೆ ಬಿಡಿಎ ಭೂ ಪರಿವರ್ತನೆಗೆ ನಿರಾಕ್ಷೇಪಣಾ ಪ್ರಮಾಣಪತ್ರ (NOC) ನೀಡುವುದನ್ನು ನಿಲ್ಲಿಸಿದೆ. ಭೂ ಬಳಕೆ ಉಪಯೋಗ ಬದಲಾವಣೆ (CLU), ಹೊಸ ಖಾಸಗಿ ಲೇಔಟ್ ನಿರ್ಮಾಣಕ್ಕೆ ಬೇಕಾದ ಅಭಿವೃದ್ಧಿ ಯೋಜನಾ ನಕ್ಷೆ, ಕಟ್ಟಡ ನಕ್ಷೆಗಳ ಮಂಜೂರಾತಿ, ಸೂಕ್ಷ್ಮ ವಲಯದಿಂದ  ತೆರವು ಮಾಡುವುದನ್ನೂ ಸ್ಥಗಿತಗೊಳಿಸಿದೆ.

ಬಿಡಿಎನ ಈ ಕ್ರಮದಿಂದಾಗಿ, PRR-1 ವ್ಯಾಪ್ತಿಯ ಬೆಂಗಳೂರು ಉತ್ತರ, ಪೂರ್ವ ಮತ್ತು ಹೊಸಕೋಟೆ ತಾಲೂಕಿನ ಸುಮಾರು 60 ಗ್ರಾಮಗಳ ನಾಗರಿಕರು ತಮ್ಮ ದೈನಂದಿನ ಕೆಲಸಗಳಿಗೆ ತೊಂದರೆ ಅನುಭವಿಸುತ್ತಿದ್ದಾರೆ. ಬಿಡಿಎ ಹಿಂದಿನ ಆಯುಕ್ತರ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಸ್ತುತ ಬಿಡಿಎ ಆಯುಕ್ತ ಮಣಿವಣ್ಣನ್ ಅವರು ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದ್ದಾರೆ.

ಬಿಡಿಎ ಆಯುಕ್ತರ ಖಡಕ್ ಸೂಚನೆ :

ಕ್ಯಾಪ್ಟನ್ ಮಣಿವಣ್ಣನ್.

ಆಯುಕ್ತ ಕ್ಯಾಪ್ಟನ್ ಮಣಿವಣ್ಣನ್ ಅವರು, PRR-1 ಅಡಿಯಲ್ಲಿ ಪಟ್ಟಿ ಮಾಡಿರುವ 60 ಗ್ರಾಮಗಳಲ್ಲಿ ಬಡಾವಣೆ ನಿರ್ಮಾಣಕ್ಕೆ ಅಗತ್ಯವಾದ ಭೂಸ್ವಾಧೀನಪಡಿಸಿಕೊಳ್ಳುವ ಸರ್ವೆ ನಂಬರ್‌ಗಳನ್ನು ಆದಷ್ಟು ಶೀಘ್ರದಲ್ಲಿ ಪಟ್ಟಿ ಮಾಡಿ, ಬಿಡಿಎ ಮಂಡಳಿ ಸಭೆಯಲ್ಲಿ ಒಪ್ಪಿಗೆ ಪಡೆಯಲು ಮೌಖಿಕ ಸೂಚನೆ ನೀಡಿದ್ದಾರೆ. 

ಅಲ್ಲದೆ, ಪಟ್ಟಿ ಮಾಡಿದ ಗ್ರಾಮದಲ್ಲಿ ಭೂಸ್ವಾಧೀನಕ್ಕಾಗಿ ಗುರುತಿಸಿರುವುದನ್ನು ಹೊರತುಪಡಿಸಿದ ಉಳಿದ ಪ್ರದೇಶಗಳಲ್ಲಿ ಭೂಪರಿವರ್ತನೆಗೆ ಬಿಡಿಎ ಎನ್‌ಒಸಿ, ನಕ್ಷೆ ಮಂಜೂರಾತಿ, ಭೂ ಉಪಯೋಗ ಬದಲಾವಣೆ ಸೇರಿದಂತೆ ಮತ್ತಿತರ ಸೇವೆಗಳನ್ನು ನೀಡುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿವೆ.

ಬಿಡಿಎನ ಈ ಬೃಹತ್ ಯೋಜನೆ ಸ್ವಾಗತಾರ್ಹವಾಗಿದ್ದರೂ, ಭೂಸ್ವಾಧೀನ ಪ್ರಕ್ರಿಯೆ ಅಂತಿಮಗೊಳ್ಳುವ ಮೊದಲೇ ಗ್ರಾಮಗಳಲ್ಲಿನ ಭೂಮಿಗಳಿಗೆ ಭೂ ಪರಿವರ್ತನೆ ಸೇರಿದಂತೆ ಇನ್ನಿತರ ಸೇವೆಗಳನ್ನು ಸ್ಥಗಿತಗೊಳಿಸಿರುವುದು ಭೂಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಡಿಎ ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ದಿನವೂ 7,000 ಹೆಜ್ಜೆ ನಡೆದರೆ, ನಿಮ್ಮ ಆರೋಗ್ಯಕ್ಕೆ ಬಂಪರ್ ಆಫರ್: ಸಾವಿನ, ಬುದ್ಧಿಮಾಂದ್ಯತೆ, ಖಿನ್ನತೆ ಅಪಾಯಕ್ಕೆ ಬ್ರೇಕ್

Next Post

Kundapra Kannada Habba | ಕುಂದಾಪ್ರ ಕನ್ನಡ ಹಬ್ಬಕ್ಕೆ ಸಿದ್ಧವಾಗಿದೆ ಬೆಂಗಳೂರು: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗಣ್ಯರಿಗೆ ಸನ್ಮಾನ

Next Post

Kundapra Kannada Habba | ಕುಂದಾಪ್ರ ಕನ್ನಡ ಹಬ್ಬಕ್ಕೆ ಸಿದ್ಧವಾಗಿದೆ ಬೆಂಗಳೂರು: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗಣ್ಯರಿಗೆ ಸನ್ಮಾನ

ಬೆಂಗಳೂರು: ಶ್ರಾವಣ ಮಾಸದ ಹೊಸ್ತಿಲಲ್ಲಿ ಕತ್ತಲಲ್ಲಿ ಮುಳುಗಿದ ಚಿಕ್ಕಪೇಟೆ : ಬಿಬಿಎಂಪಿ- ಬೆಸ್ಕಾಂ ನಿರ್ಲಕ್ಷ್ಯಕ್ಕೆ ವ್ಯಾಪಾರಿಗಳ ಹಿಡಿಶಾಪ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d