Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

“ಅಮ್ಮನ‌ ಮಡಿಲು-ಮನುಷ್ಯ ಸಂಬಂಧ ಅಳಿಯಬಾರದು” : ಕೆ.ವಿ.ಪ್ರಭಾಕರ್

ನೊಂದವರ ರಾಯಭಾರಿಗಳಾಗಿ ಸಮಾಜದ ಋಣ ತೀರಿಸೋಣ: ಪತ್ರಕರ್ತರ ಮಕ್ಕಳಿಗೆ ಕೆ.ವಿ.ಪಿ ಕರೆ

by Bengaluru Wire Desk
July 27, 2025
in News Wire
Reading Time: 1 min read
0

ಕೊಡಗು ಜು.27 www.bengaluruwire.com : ರಾಜ್ಯದ ಪತ್ರಕರ್ತರಿಗೆ ವಸತಿ ಸವಲತ್ತು ಕಲ್ಪಿಸುವ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದೆ. ಸದ್ಯದಲ್ಲೇ ಯೋಜನೆ ರೂಪಿಸುವ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಎಂದು ಭರವಸೆ ನೀಡಿದರು.

ಜಿಲ್ಲಾ ಪತ್ರಕರ್ತರ ಸಂಘ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡುತ್ತಾ, ಪತ್ರಕರ್ತರು ಇತರ ಕ್ಷೇತ್ರಗಳಂತೆ ಸುದ್ದಿ ಮನೆಯಲ್ಲಿ ಕೆಲಸದ ಅನಿಶ್ಚಿತತೆ, ಸೂಕ್ತ ರೀತಿ ಸಂಬಳವಿಲ್ಲದ ಪರಿಸ್ಥಿತಿಯಲ್ಲಿದ್ದಾರೆ. ಹಲವರಿಗೆ ಸ್ವಂತ ಸೂರಿಲ್ಲದೆ ಸುದ್ದಿಮನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರಣದಿಂದ ಪತ್ರಕರ್ತರಿಗೆ ವಸತಿ ಸವಲತ್ತು ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಅಭಿಪ್ರಾಯ ಪಟ್ಟರು. 

ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಸಮಾಜ ವಿಶೇಷ ಗೌರವ ನೀಡುತ್ತದೆ ಮತ್ತು ಸರ್ಕಾರ ವಿಶೇಷ ಸವಲತ್ತುಗಳನ್ನು ಕಲ್ಪಿಸುತ್ತದೆ.  ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಗಳಾಗಿ ಕೆಲಸ ಮಾಡುತ್ತಾರೆ ಮತ್ತು ಸಮಾಜದ ನೋವುಗಳಿಗೆ ಕನ್ನಡಿ ಹಿಡಿಯುತ್ತಾರೆ ಎನ್ನುವ ಕಾರಣದಿಂದ ಈ ವಿಶೇಷ ಗೌರವ ಮತ್ತು ಸವಲತ್ತು ಸಿಗುತ್ತಿದೆ ಎಂದು ವಿವರಿಸಿದರು. 

ಈ ಒಳ ದೃಷ್ಟಿ ಪತ್ರಕರ್ತರಿಗೆ ಇರಬೇಕು. ಈ ಸಮಾಜಮುಖಿ ದೃಷ್ಟಿಯನ್ನು ಕಳೆದುಕೊಂಡರೆ ನಾವು ಸಮಾಜದಲ್ಲಿ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುವ ಜೊತೆಗೆ ನಾವೂ ಹಾಗೇ ಬಿಡುವ ಅಪಾಯವಿದೆ ಎಂದು ಅಭಿಪ್ರಾಯಪಟ್ಟರು.

ಇಂದು ಪತ್ರಿಕಾ ವೃತ್ತಿಯ ಬಗ್ಗೆ ಎರಡು ರೀತಿಯ ಬೇಸರದ ಮಾತುಗಳನ್ನು ಸ್ನೇಹಿತರು ನನ್ನ ಜೊತೆ ಹಂಚಿಕೊಳ್ಳುತ್ತಾರೆ. ಒಂದು, ಈ ವೃತ್ತಿ ಬದುಕು ಸಾಕಾಗಿದೆ ಸರ್. ಬ್ರೇಕಿಂಗ್ ನ್ಯೂಸ್, ಬ್ರೇಕಿಂಗ್ ನ್ಯೂಸ್ ಅಂತ ನಮ್ಮ ಉಸಿರು ಕಟ್ಟುತಾ ಇದೆ ಎನ್ನುವ ಬೇಸರ ಒಂದು ಕಡೆಗಿದೆ. ಮತ್ತೊಂದು ಕಡೆ ಬ್ರೇಕಿಂಗ್ ನ್ಯೂಸ್ ನೆಪದಲ್ಲಿ ಬರುತ್ತಿರುವ ಅಸತ್ಯ ಮತ್ತು ಅರ್ಧ ಸತ್ಯದ ಸುದ್ದಿಗಳಿಂದ ಸಮಾಜದ ಉಸಿರು ಕಟ್ಟುತ್ತಿದೆ ಎನ್ನುವ ಬೇಸರವೂ ಮತ್ತೊಂದು ಕಡೆಗಿದೆ. ಈ ಎರಡೂ ಬೇಸರಕ್ಕೂ  ಬೇರೆ ಯಾರೂ ಕಾರಣರಲ್ಲ. ಪತ್ರಿಕೋದ್ಯಮದ ತೇರನ್ನು ಎಳೆಯುತ್ತಿರುವ ನಾವೇ ಕಾರಣಕರ್ತರು ಎನ್ನುವುದನ್ನು ನಾವು ಮರೆಯಬಾರದು ಎಂದರು. 

ಏಕೆಂದರೆ ಸಮಾಜದ ಕಷ್ಟಗಳಿಗೆ ಕನ್ನಡಿ ಹಿಡಿಯುತ್ತಿದ್ದ ಪತ್ರಿಕೋದ್ಯಮ,  ಈಗ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಮತ್ತು ಕಾರ್ಪೋರೇಟ್ ಉದ್ಯಮಿಗಳಿಗೆ ಪರವಾಗಿ ಕನ್ನಡಿ ಹಿಡಿಯುತ್ತಿದೆ.  ಇಂದು ವ್ಯಕ್ತಿಗತ ದ್ವೇಷ ಮತ್ತು ವೈಯುಕ್ತಿಕ ಬದುಕಿನ ಖಾಸಗಿತನವನ್ನು ಕೆದಕಿ ಕೆದಕಿ ಕಸವನ್ನೇ ಬ್ರೇಕಿಂಗ್ ಸುದ್ದಿಗಳನ್ನಾಗಿಸುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾಜಮುಖಿ ದೃಷ್ಟಿಕೋನವನ್ನು ಬೆಳೆಸಿಕೊಂಡಾಗ ನಮ್ಮ ಸಾಮಾಜಿಕ ಪ್ರಜ್ಞೆ ಬೆಳಯುತ್ತದೆ. ಈ ಪ್ರಜ್ಞೆ ಬೆಳೆದಾಗ ನೀವು ಸಮಾಜದ ಆಸ್ತಿ ಆಗುತ್ತೀರಿ. ಆಗ ಈ ಸಮಾಜದ ಋಣ ತೀರಿಸಿದಂತಾಗುತ್ತದೆ ಎಂದರು.

ಅಮ್ಮನ‌ ಮಡಿಲು-ಮನುಷ್ಯ ಸಂಬಂಧ ಅಳಿಯಬಾರದು :

ತಂತ್ರಜ್ಞಾನ ಬೆಳೆದಂತೆ, ಅವಕಾಶಗಳು ದೊರೆತಂತೆ ಮನುಷ್ಯ ಸಂಬಂಧಗಳು ದುರ್ಬಲವಾಗುತ್ತಿವೆ. ತಾಯಿಯ ಮಡಿಲು, ಅಮ್ಮನ‌ ಕೈ ತುತ್ತು, ಹಳ್ಳಿ ಮನೆ, ಹಸು-ಕುರಿ-ಕೋಳಿ ಸಾಕಾಣೆ ಎಲ್ಲವೂ ದೂರವಾಗುತ್ತಿದೆ. ಕೊನೆಗೆ ಪೋಷಕರ ಜೊತೆಯ ಒಡನಾಟವೂ ಮೊಬೈಲ್ ಗೆ ಸೀಮಿತವಾಗಿ ಮಕ್ಕಳು ವಿದೇಶಕ್ಕೆ ಹೋಗಿ ಕುಳಿತಿರುವ ಪರಿಣಾಮ ಇಲ್ಲಿ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಇವೆಲ್ಲಾ ಆರೋಗ್ಯಕರ ಸಮಾಜದ ಲಕ್ಷಣವೇ ಯೋಚಿಸಿ ಎಂದು ಕರೆ ನೀಡಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಸತಿ ಸಚಿವರ ಮಾಧ್ಯಮ ಸಂಯೋಜಕರಾದ ಲಕ್ಷ್ಮೀನಾರಾಯಣ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಸಂಘದ ರಾಜ್ಯ ಉಪಾಧ್ಯಕ್ಷರಾದ ರಮೇಶ್ ಕುಟ್ಟಪ್ಪ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬೆಂಗಳೂರು: ಶ್ರಾವಣ ಮಾಸದ ಹೊಸ್ತಿಲಲ್ಲಿ ಕತ್ತಲಲ್ಲಿ ಮುಳುಗಿದ ಚಿಕ್ಕಪೇಟೆ : ಬಿಬಿಎಂಪಿ- ಬೆಸ್ಕಾಂ ನಿರ್ಲಕ್ಷ್ಯಕ್ಕೆ ವ್ಯಾಪಾರಿಗಳ ಹಿಡಿಶಾಪ

Next Post

₹300 Crore Scam | ಗಾಜಿಯಾಬಾದ್ ನಕಲಿ ರಾಯಭಾರ ಕಚೇರಿ ಹಗರಣ: ₹300 ಕೋಟಿ ಹಗರಣದ ಕಿಂಗ್ ಪಿನ್ ಬಂಧನ

Next Post

₹300 Crore Scam | ಗಾಜಿಯಾಬಾದ್ ನಕಲಿ ರಾಯಭಾರ ಕಚೇರಿ ಹಗರಣ: ₹300 ಕೋಟಿ ಹಗರಣದ ಕಿಂಗ್ ಪಿನ್ ಬಂಧನ

ಬಿ ಖಾತಾ ಎ ಖಾತಾ ಪರಿವರ್ತನೆ: ಸರ್ಕಾರದ ನಿರ್ಧಾರದಿಂದ ಬಡ, ಮಧ್ಯಮ ವರ್ಗಕ್ಕೆ ಹೊರೆ : ಪದ್ಮನಾಭ ರೆಡ್ಡಿ ಟೀಕೆ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group