Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳ 100 ಅಡಿ ರಸ್ತೆಯ ಗುಂಡಿ ತಾತ್ಕಾಲಿಕ ದುರಸ್ತಿ; 2 ವಾರದಲ್ಲಿ ಕಣ್ಣೂರು ಡಾಂಬರು ಮಿಶ್ರಣ ಘಟಕ ಪುನರಾರಂಭ

ಗುಂಡಿಗಮನ ಆ್ಯಪ್ ದೋಷ ಸರಿಪಡಿಸಲು ಕ್ರಮ - ಬಿಬಿಎಂಪಿ ಮುಖ್ಯ ಆಯುಕ್ತ ; ಜಲಮಂಡಳಿಯಿಂದಲೂ ನೀರಿನ ಸೋರಿಕೆ ತಡೆಗೆ ಭರವಸೆ ಇದು ಬೆಂಗಳೂರು ವೈರ್ ವರದಿ ಪರಿಣಾಮ

by Bengaluru Wire Desk
July 30, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಜು.30 www.bengaluruwire.com : ಹಲವು ದಿನಗಳಿಂದ ಉಲ್ಲಾಳ ವಾರ್ಡಿನ ಉಲ್ಲಾಳ ಕೆರೆ ಮುಖ್ಯ ಪ್ರವೇಶದ್ವಾರದ ಬಳಿಯ 100 ಅಡಿ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಯನ್ನು ಬಿಡಿಎ ತಾತ್ಕಾಲಿಕವಾಗಿ ಸರಿಪಡಿಸಿದ್ದಾರೆ. ನಗರದಲ್ಲಿನ ರಸ್ತೆಗೆ ಡಾಂಬರ್ ಪೂರೈಸುವ ಕಣ್ಣೂರು ಡಾಂಬರ್ ಮಿಶ್ರಣ ಘಟಕ 2 ವಾರದಲ್ಲಿ ಪುನರಾರಂಭವಾಗಲಿದೆ. ಇದು ಬೆಂಗಳೂರು ವೈರ್ ವರದಿ ಪರಿಣಾಮ.

ಜೀವ ಬಲಿತೆಗೆದುಕೊಂಡ ರಸ್ತೆಗುಂಡಿ, ಬೆಂಗಳೂರು ವೈರ್ ವರದಿ :

ಮಾಗಡಿರಸ್ತೆಯಿಂದ ಕೆಂಗೇರಿ ಹೋಗುವ ಬಂಡೆಮಠದ ಕಡೆಗೆ ಸಾಗುವ 100 ಅಡಿ ದ್ವಿಪಥ ರಸ್ತೆಯಲ್ಲಿ ಬೆಂಗಳೂರು ಜಲಮಂಡಳಿ ಕಾವೇರಿ 5ನೇ ಹಂತದಲ್ಲಿ 6 ಅಡಿ ವ್ಯಾಸದ ಬೃಹತ್ ನೀರಿನ ಪೈಪ್ ಅಳವಡಿಸಿದೆ. ಹೀಗೆ ಅಳವಡಿಸಿದ ಜಲಮಂಡಳಿ ನೀರಿನ ಪೈಪ್ ನಿರ್ವಹಣೆಗೆಂದು ಈ ಭಾಗದಲ್ಲಿ ಬೆಂಗಳೂರು ನೀರು ಸರಬರಾಜ ಮತ್ತು ಒಳಚರಂಡಿ ಮಂಡಳಿಯು ಸಿಮೆಂಟ್ ಸ್ಲಾಬ್ ಮಧ್ಯದಲ್ಲಿ‌ ಮ್ಯಾನ್ ಹೋಲ್  ಅಳವಡಿಸಿದೆ. ಬೃಹತ್ ಪೈಪಿಗೆ ಅಳವಡಿಸಿದ ವಾಲ್ವ್ ಹಾಳಾಗಿ ಅಲ್ಲಿಂದ ನೀರು ಸೋರಿಕೆಯಾಗಿ, ಸ್ಲಾಬ್ ಎರಡೂ ಅಂಚಿನಲ್ಲಿ ದೊಡ್ಡ ಗುಂಡಿ ಸೃಷ್ಟಿಯಾಗಿತ್ತು.

ಬೆಂಗಳೂರು ವೈರ್ ವರದಿ ಪರಿಣಾಮ

ಈ ಅಪಾಯಕಾರಿ ರಸ್ತೆಗುಂಡಿಯಿಂದ ಇದೇ ಸ್ಥಳದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಯೋರ್ವಳು ಬಿದ್ದು ಆಕೆಯ ಮೇಲೆ ಬಸ್ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಈ ಕುರಿತಂತೆ ಹಾಗೂ ನಗರದಲ್ಲಿ ರಸ್ತೆಗುಂಡಿ ಮುಚ್ಚಲು ಅಗತ್ಯವಾದ ಕಣ್ಣೂರು ಡಾಂಬರು ಮಿಶ್ರಣ ಘಟಕ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಬಗ್ಗೆ ವಿಸ್ತಾರವಾಗಿ ಬೆಂಗಳೂರು ವೈರ್ ಜು.29ರಂದು ಬೆಳಗ್ಗೆ ವರದಿ ಪ್ರಕಟಿಸಿತ್ತು. ಅಲ್ಲದೆ ನಗರದಲ್ಲಿನ ರಸ್ತೆಗುಂಡಿಗಳ ಬಗ್ಗೆ ವಾಸ್ತವ ಅಂಕಿಅಂಶಗಳನ್ನು ಎತ್ತಿ ತೋರಿಸಿತ್ತು.

ಬಿಡಿಎ, ಜಲಮಂಡಳಿ ಮತ್ತು ಬಿಬಿಎಂಪಿಯ ತ್ವರಿತ ಸ್ಪಂದನೆ :

“BW SPECIAL | ಉಲ್ಲಾಳ ವಾರ್ಡಿನ 100 ಅಡಿ ರಸ್ತೆಯಲ್ಲಿದೆ ಸ್ಪಾಟ್ ಔಟ್ ಪಾಯಿಂಟ್!! : ಕಣ್ಣೂರು ಡಾಂಬರ್ ಮಿಕ್ಸ್ ಪ್ಲಾಂಟ್ ಕಣ್ಮುಚ್ಚಿ 1 ವಾರ : ಸಾವಿಗೆ ಕಾದು ಕುಳಿತಿವೆ ಸಾವಿರಾರು ರಸ್ತೆಗುಂಡಿಗಳು” ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟವಾದ ನಂತರ ಕೆಲವೇ ಗಂಟೆಗಳಲ್ಲಿ (ಜು.29) ಸ್ಥಳಕ್ಕೆ ಸಿಬ್ಬಂದಿಯೊಂದಿಗೆ ಧಾವಿಸಿದ ಬಿಡಿಎ ಎಂಜಿನಿಯರ್, ನೀರು ಸೋರಿಕೆಯಿಂದ ಹಾನಿಯಾದ ರಸ್ತೆಗುಂಡಿಯನ್ನು ತಾತ್ಕಾಲಿಕವಾಗಿ ಸರಿಪಡಿಸಿದರು.

ಬೆಂಗಳೂರು ಜಲಮಂಡಳಿಯ ಕಾವೇರಿ ಯೋಜನೆ ಎಂಜಿನಿಯರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬೃಹತ್ ನೀರಿನ ಪೈಪಿನ ವಾಲ್ವ್ ಹಾಳಾಗಿದ್ದು ಸರಿಪಡಿಸುವುದಾಗಿ ಬೆಂಗಳೂರು ವೈರ್ ಗೆ ಭರವಸೆ ನೀಡಿದರು. “ಕಾವೇರಿ 5ನೇ ಹಂತದ ನೀರಿನ ಪೈಪ್ ಅಳವಡಿಸಿರುವ ಸ್ಕೌರ್ ವಾಲ್ವ್ ಹಾಳಾಗಿದ್ದು, ಶೀಘ್ರದಲ್ಲಿಯೇ ಈ ಭಾಗದ ನೀರಿನ ಪೈಪ್ ಬಂದ್ ಮಾಡಿ ಹೊಸ ವಾಲ್ವ್ ಅಳವಡಿಸುತ್ತೇನೆ. ಆಗ ನೀರಿನ ಸೋರಿಕೆ ನಿಲ್ಲಲ್ಲಿದೆ. ಬಳಿಕ ಸಿಮೆಂಟ್ ಸ್ಲಾಬ್ ಸುತ್ತ ಸಿಮೆಂಟ್ ಕಾಂಕ್ರಿಟ್ ಹಾಕುತ್ತೇವೆ” ಎಂದು ಕಾವೇರಿ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ತಿಳಿಸಿದ್ದಾರೆ.

ಡಾಂಬರು ಘಟಕ ಪುನರಾರಂಭ, ಗುಂಡಿಗಮನ ಆ್ಯಪ್ ದೋಷ ಸರಿಪಡಿಸುವ ಭರವಸೆ :

ಇನ್ನೊಂದೆಡೆ ಪಾಲಿಕೆ ವ್ಯಾಪ್ತಿಯಲ್ಲಿ ಆರ್ಟಿಯಲ್, ಸಬ್ ಆರ್ಟಿಯಲ್ ರಸ್ತೆಗಳಲ್ಲಿ ಮಳೆ ಮತ್ತಿತರ ಕಾರಣಗಳಿಂದ ಸೃಷ್ಟಿಯಾಗಿರುವ ಗುಂಡಿಗಳನ್ನು ಬಿಬಿಎಂಪಿ ಸರಿಯಾಗಿ ಮುಚ್ಚುತ್ತಿಲ್ಲ. ವಾರ್ಡ್ ರಸ್ತೆಯಲ್ಲಿ ಸಾವಿರಾರು ಗುಂಡಿಗಳು ಸೃಷ್ಟಿಯಾಗಿದ್ದುವಾಹನ ಸವಾರರು, ಪಾದಚಾರಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬೆಂಗಳೂರು ವೈರ್ ಇದೇ ಸುದ್ದಿಯಲ್ಲಿ ವರದಿ ಮಾಡಿತ್ತು.

ನಗರದ ರಸ್ತೆಗೆ ಡಾಂಬರು ಪೂರೈಸುವ ಪಾಲಿಕೆಯು ಮಹದೇವಪುರ ವಲಯದ ಕಣ್ಣೂರಿನಲ್ಲಿ ಸ್ಥಾಪಿಸಿರುವ ಡಾಂಬರು ಮಿಶ್ರಣ ಘಟಕ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿರುವ ಬಗ್ಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳ ಗಮನ ಸೆಳೆದಿತ್ತು.

ಈ ಬಗ್ಗೆ ಬೆಂಗಳೂರು ವೈರ್ ಜೊತೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, “ಕಣ್ಣೂರು ಡಾಂಬರು ಮಿಶ್ರಣ ಘಟಕ ಕಾರಣಾಂತರಗಳಿಂದ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಟೆಂಡರ್ ಆಹ್ವಾನಿಸಿದ್ದು, ಎರಡು ವಾರದಲ್ಲಿ ಪುನಃ ಘಟಕ ಆರಂಭವಾಗಲಿದೆ. ಗುಂಡಿಗಮನ ಆಂಡ್ರಾಯ್ಡ್ ನಲ್ಲಿನ ದೋಷ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು ವೈರ್ ಸಾರ್ವಜನಿಕರ ಆಸಕ್ತಿ, ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸುವ ವರ್ಗದ ತಪ್ಪುಒಪ್ಪುಗಳನ್ನು ಯಾವುದೇ ಮುಲಾಜಿಲ್ಲದೆ ವರದಿ ಪ್ರಕಟಿಸುವ ತನ್ನ ಕಾಯಕವನ್ನು ಮುಂದುವರೆಸಲಿದೆ. ಓದುಗರ ಬೆಂಬಲ ಸದಾ ಬೆಂಬಲ, ಪ್ರೋತ್ಸಾಹ ಸದಾ ಬೆಂಗಳೂರು ವೈರ್ ಮೇಲಿದೆ ಎಂದು ಭಾವಿಸುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Lokayukta Raid | 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: 5 ಭ್ರಷ್ಟ ಅಧಿಕಾರಿಗಳಿಂದ 24.44 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

Next Post

ನಿಮ್ಮ ಹೆಸರಲ್ಲಿ ಬೇರೆಯವರು, ನಿಮಗೆ ತಿಳಿಯದಂತೆ ಮೊಬೈಲ್ ನಂಬರ್ ಬಳಸ್ತಿದ್ರೆ ಕ್ಷಣಮಾತ್ರದಲ್ಲಿ ಪತ್ತೆ ಹಚ್ಚೋದು ಹೇಗೆ?

Next Post

ನಿಮ್ಮ ಹೆಸರಲ್ಲಿ ಬೇರೆಯವರು, ನಿಮಗೆ ತಿಳಿಯದಂತೆ ಮೊಬೈಲ್ ನಂಬರ್ ಬಳಸ್ತಿದ್ರೆ ಕ್ಷಣಮಾತ್ರದಲ್ಲಿ ಪತ್ತೆ ಹಚ್ಚೋದು ಹೇಗೆ?

KMF News | ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳ ಪರಿಶೀಲನೆ ಬಳಿಕ ನಂದಿನಿ ಮಳಿಗೆ : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d