ಬೆಂಗಳೂರು, ಜು.31 www.bengaluruwire.com : ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಶ್ರೀಮತಿ ಶಾಂತಲ ಕೆ.ಟಿ (ಕೆ.ಎ.ಎಸ್) ಅಧಿಕಾರ ಸ್ವೀಕರಿಸಿದರು.
ಹಾಸನ ಜಿಲ್ಲೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಾಂತಲ ಕೆ.ಟಿಯವರನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಹಾಲಿ ಕುಲಸಚಿವ ಶೇಕ್ ಲತೀಫ್ ಕೆ.ಎ.ಎಸ್ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ.ಜಯಕರ ಎಸ್.ಎಂ ಮತ್ತು ಅಧಿಕಾರಿಗಳು,ಶಿಕ್ಷಕರು ಉಪಸ್ಥಿತರಿದ್ದರು.






















