Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Big Breaking | ಅಪ್ರಾಪ್ತ ವಿಶೇಷ ವಿಕಲಚೇತನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಶಾಲಾ ಶಿಕ್ಷಕಿ ಪೋಕ್ಸೋ ಕಾಯ್ದೆಯಡಿ ಅರೆಸ್ಟ್

ಬಾಲಕಿಯೊಬ್ಬಳ ಗುಪ್ತಾಂಗಕ್ಕೆ ಚೂಪಾದ ವಸ್ತುವನ್ನು ಬಳಸಿ ಲೈಂಗಿಕ ದೌರ್ಜನ್ಯ | ಪ್ರಕರಣ ಮುಚ್ಚಿಹಾಕಲು ಶಾಲೆ ಆಡಳಿತ ಮಂಡಳಿ ಯತ್ನ ಆರೋಪ

by Bengaluru Wire Desk
August 3, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಆ.03 www.bengaluruwire.com : ವಿಶೇಷ ವಿಕಲ ಚೇತನ ಅಪ್ರಾಪ್ತ ಬಾಲಕಿಯೊಬ್ಬಳ ಗುಪ್ತಾಂಗಕ್ಕೆ ಚೂಪಾದ ವಸ್ತುವನ್ನು ಬಳಸಿ ಲೈಂಗಿಕ ದೌರ್ಜನ್ಯ ಎಸೆಗಿದ ಶಾಲಾ ಶಿಕ್ಷಕಿಯೊಬ್ಬರ ಕೃತ್ಯವನ್ನು ಆ ಶಾಲೆಯ ಆಡಳಿತ ಮಂಡಳಿ ಪೊಲೀಸ್ ದೂರು ನೀಡಲು ಹಿಂಜರಿದು ಪ್ರಕರಣ ಮುಚ್ಚಿಹಾಕಲು ಪ್ರಯತ್ನ ಮಾಡಿದ ವಿಷಯ ಬಹಿರಂಗವಾಗಿದೆ.

ಕೃತ್ಯದ ಸಂಬಂಧ ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ  ಪೋಕ್ಸೋ ಕಾಯ್ದೆ ಹಾಗೂ ಬಿಎಎನ್ ಎಸ್ (ಭಾರತೀಯ ನ್ಯಾಯ ಸಂಹಿತೆ) ಕಾಯ್ದೆಯಡಿ ಪ್ರಕರಣ ದಾಖಲಾಗಿ ಪೊಲೀಸರು ಇಂತಹ ಮುಗ್ಧ ಹಾಗೂ ವಿಶೇಷ ವಿಕಲ ಚೇತನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಾಲಾ ಶಿಕ್ಷಕಿಯನ್ನು, ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿತ ಶಾಲಾ ಶಿಕ್ಷಕಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.

ಏನಿದು ಪ್ರಕರಣ?:

ಕೋರಮಂಗಲದ ಎಸ್ ಟಿ ಬೆಡ್ ನಲ್ಲಿರುವ ಬೆಥನಿ ವಿಶೇಷ ಶಾಲೆಯಲ್ಲಿ ಓದುತ್ತಿರುವ 10 ವರ್ಷದ ವಿಶೇಷ ವಿಕಲಚೇತನ ಬಾಲಕಿ ಜು.1 ರಂದು ಶಾಲೆ ಮುಗಿಸಿ ಮನೆಗೆ ಬಂದಿದ್ದಳು. ಮನೆಯಲ್ಲಿ ಶೌಚಕ್ಕೆಂದು ಹೋದಾಗ ಆಕೆಯ ಗುಪ್ತಾಂಗದಲ್ಲಿ ನೋವು ಕಾಣಿಸಿಕೊಂಡು, ಬಾಲಕಿ ಅಳುತ್ತಿದ್ದಾಗ ಗಮನಿಸಿದ ತಾಯಿ ಏನೆಂದು ಕೇಳಿದಾಗ, ಆ  (ದೈಹಿಕ ವಯಸ್ಸು 10 ವರ್ಷವಾದರೂ ಮಾನಸಿಕ ಬೆಳವಣಿಗೆ ನಾಲ್ಕೈದು ವರ್ಷದ ಮಗುವಿನಂತಿತ್ತು) ಬಾಲಕಿಯು ತನಗಾಗುತ್ತಿರುವ ನೋವಿನ ಬಗ್ಗೆ ಅಸ್ಪಷ್ಟವಾಗಿ ತಿಳಿಸಿದ್ದಳು. ಮರುದಿನ ಇದೇ ರೀತಿ ಪುನಃ ನೋವು ಕಾಣಿಸಿಕೊಂಡಾಗ ತಾಯಿ ಪರೀಕ್ಷಿಸಿ, ಅನುಮಾನ ಬಂದು ಮಗುವನ್ನು ಕೇಳಿದಾಗ, ಶಾಲೆಯಲ್ಲಿ‌ ನಡೆದ ಕೃತ್ಯವನ್ನು ಹೇಳಿತ್ತು. 

ಈ ಬಗ್ಗೆ ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆಯ ವೈದ್ಯರಲ್ಲಿ ಚಿಕಿತ್ಸೆಗೆಂದು ಕರೆದೊಯ್ದಾಗ ಬಾಲಕಿಯ ಮೂತ್ರವಿಸರ್ಜನಾಂಗಕ್ಕೆ ಚೂಪಾದ ವಸ್ತುವನ್ನು ಹಾಕಿ, ಗಾಯಗೊಳಿಸಿರುವುದನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ಬಾಲಕಿಯ ಮೇಲೆ ದೌರ್ಜನ್ಯ ಆಗಿರುವ ಬಗ್ಗೆ ಆಸ್ಪತ್ರೆಯ ವೈದ್ಯರು, ಈ ವಿಷಯವನ್ನು  ತಮ್ಮ ವ್ಯಾಪ್ತಿಯ ಕೋರಮಂಗಲ ಪೊಲೀಸ್ ಠಾಣೆಗೆ ಮಾಹಿತಿ ಕಳಿಸುತ್ತಾರೆ.

ಇನ್ನೊಂದೆಡೆ ಬಾಲಕಿಯ ತಾಯಿ ಶಾಲೆಯಲ್ಲಿ ಶಿಕ್ಷಕಿಯ ಈ ಕೃತ್ಯದ ಬಗ್ಗೆ ಬೆಥನಿ ವಿಶೇಷ ಶಾಲೆ ಕೇಂದ್ರ ಕಚೇರಿಗೆ ದೂರು ನೀಡಿದ್ದರು. ಶಾಲೆಯವರು, ತಮ್ಮ ಶಾಲೆಯಲ್ಲಿ ನಡೆದಿರುವ ಈ ಪ್ರಕರಣ ಹೊರಬಂದರೆ ಹೆಸರು ಹಾಳಾಗುತ್ತದೆ ಎಂಬ ಭಯದಿಂದ ಪೊಲೀಸ್ ಠಾಣೆಗೂ ದೂರು ನೀಡಿರಲಿಲ್ಲ. ಹೀಗಾಗಿ ಬಾಲಕಿಯ ತಾಯಿ ಈ ವಿಷಯವನ್ನು ಸರ್ಕಾರೇತರ ಎನ್ ಜಿಒ ಸಂಸ್ಥೆಗೂ ವಿಷಯ ತಿಳಿಸಿದ್ದರು. 

ಈ ಪ್ರಕರಣದ ಗಂಭೀರತೆ ಹೆಚ್ಚಾಗಿ, ಎನ್ ಜಿಒ ಸಿಬ್ಬಂದಿ ಜೊತೆಯಲ್ಲಿ, ಮಗುವಿನ ಬಳಿ ಕೃತ್ಯ ನಡೆದ ಬಗ್ಗೆ ಆಡಿಯೋ, ವಿಡಿಯೋ ಹೇಳಿಕೆಯನ್ನು ಪಡೆದಿದ್ದ ಆಕೆಯ ತಾಯಿ, ಬೆಥನಿ ಶಾಲಾ ಆಡಳಿತ ಮಂಡಳಿ ಗಮನಕ್ಕೆ ತಂದಾಗ, ಕೃತ್ಯ ಎಸಗಿದ ಶಿಕ್ಷಕಿಯನ್ನು ಅಮಾನತು ಮಾಡಿತೇ ವಿನಃ ಆ ಸಂದರ್ಭದಲ್ಲೂ ಇಂತಹ ಗಂಭೀರ ಪ್ರಕರಣದ ಬಗ್ಗೆ ವಿಶೇಷ ವಿಕಲ ಚೇತನ ಬಾಲಕಿಯ ತಾಯಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೇ ವಿನಃ ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ. 

ಈ ನಡುವೆ ಪ್ರಕರಣ ಬಗ್ಗೆ ಬಾಲಕಿ ತಂದೆ ಕೆಲಸದ ನಿಮಿತ್ತ ಹೊರಗೆ ಹೋಗಿದ್ದವರಿಗೂ ವಿಷಯ ತಿಳಿದು, ಪ್ರಕರಣವು ವಿವೇಕಾನಂದ ಪೊಲೀಸ್ ಠಾಣೆಗೆ ಮುಟ್ಟಿತು. ಆಗ ಅಲ್ಲಿನ ಪೊಲೀಸ್ ಅಧಿಕಾರಿಗಳು ಕೂಡಲೇ ತನಿಖೆಗೆ ಮುಂದಾದಾಗ, ಸೇಂಟ್ ಜಾನ್ ಆಸ್ಪತ್ರೆಯವರು ಹಿಂದೆ ಕೋರಮಂಗಲ ಠಾಣೆ ಪೊಲೀಸರಿಗೆ ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ನಡೆಸಿದ ಬಗ್ಗೆ ವಿಷಯ ತಿಳಿಸಿದ್ದರು. ಆದರೆ ಅದರಲ್ಲಿ ಲೈಂಗಿಕ ದೌರ್ಜನ್ಯವಾದ ಬಗ್ಗೆ ಮಾಹಿತಿ ಇರಲಿಲ್ಲ, ಬದಲಿಗೆ ದೌರ್ಜನ್ಯವಾಗಿದೆ ಎಂದು ಹೇಳಲಾಗಿತ್ತು. ಈ ಮಾಹಿತಿ ಪಡೆದುಕೊಂಡ ವಿವೇಕನಗರ ಪೊಲೀಸರು, ಸೇಂಟ್ ಜಾನ್ ಆಸ್ಪತ್ರೆಯಲ್ಲಿ ಸುಧೀರ್ಘ ವಿಚಾರಣೆ ನಡೆಸಿದಾಗ ಅಸಲಿ ವಿಷಯ ಬೆಳಕಿಗೆ ಬಂದಿತ್ತು.

ಆಗ ಸೇಂಟ್ ಜಾನ್ ಆಸ್ಪತ್ರೆಯವರೇ ಈ ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿತು. ಆಗ ಆರೋಪಿ ಶಿಕ್ಷಕಿಯನ್ನು ಬಂಧಿಸಲಾಯಿತು. ಬೆಥನಿ ಶಾಲೆಯು ಕೋರಮಂಗಲ ಆಸುಪಾಸಿನಲ್ಲಿ ಮೂರು ಶಾಖೆಯನ್ನು ಹೊಂದಿದ ಪ್ರತಿಷ್ಠಿತ ಶಾಲೆಯಾಗಿದೆ.‌ ಇಂತಹ ಪ್ರಕರಣ ಹೊರಬಂದರೆ ಶಾಲೆಯ ಹೆಸರಿಗೆ ಕಳಂಕ ಬರುತ್ತದೆಂಬ ಕಾರಣಕ್ಕೆ ಬೆಥನಿ ವಿಶೇಷ ಶಾಲೆಯಲ್ಲಿ ನಡೆದ ಕೃತ್ಯವನ್ನು ಶಾಲಾ ಆಡಳಿತ ಮಂಡಳಿಯು, ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ. ಇಂತಹ ಗಂಭೀರ ವಿಷಯದ ಬಗ್ಗೆ ದೂರು ನೀಡಲು ಹಿಂದೇಟು ಹಾಕಿದ ಶಾಲೆಯ ಆಡಳಿ ಮಂಡಳಿಯ ಬಗ್ಗೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೋಕ್ಸೋ ಪ್ರಕತಣ ಸಂಬಂಧ ವಿವೇಕ್ ನಗರ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ. 

ಪೋಕ್ಸೋ ಕಾಯ್ದೆ ಎಂದರೇನು? :

ಪೋಕ್ಸೋ ಕಾಯ್ದೆ ಅಂದರೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ, 2012. ಇದು 18 ವರ್ಷದೊಳಗಿನ ಮಕ್ಕಳನ್ನು ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯಿಂದ ರಕ್ಷಿಸುವ ಒಂದು ಕಾನೂನು. ಈ ಕಾಯ್ದೆಯು ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಅಶ್ಲೀಲತೆ, ಶೋಷಣೆ ಮತ್ತು ದುರುಪಯೋಗದಿಂದ ಮಕ್ಕಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಕೋಲಾರದಲ್ಲಿ ರವಿ ಪೂಜಾರಿ ಸಹಚರ ಕವಿರಾಜ್ ಬಂಧನ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಹೊಸ ತಿರುವು

Next Post

Indian Post | ಇತಿಹಾಸದ ಪುಟಕ್ಕೆ ನೋಂದಾಯಿತ ಅಂಚೆ ಸೇವೆ : ಸೆ.1 ರಿಂದ ‘ಸ್ಪೀಡ್ ಪೋಸ್ಟ್’ಗೆ ವಿಲೀನ

Next Post

Indian Post | ಇತಿಹಾಸದ ಪುಟಕ್ಕೆ ನೋಂದಾಯಿತ ಅಂಚೆ ಸೇವೆ : ಸೆ.1 ರಿಂದ 'ಸ್ಪೀಡ್ ಪೋಸ್ಟ್'ಗೆ ವಿಲೀನ

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆ. 10ರಂದು ಪ್ರಧಾನಿ ಮೋದಿ ಚಾಲನೆ: ಮೆಟ್ರೋ ಹಂತ-3ಕ್ಕೆ ಶಂಕುಸ್ಥಾಪನೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d