ಬೆಂಗಳೂರು, ಆ.15 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಆಡಳಿತಗಾರರಾದ ತುಷಾರ್ ಗಿರಿ ನಾಥ್ ಮತ್ತು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಗೀತೆ ಮೊಳಗುವುದರೊಂದಿಗೆ ಗೌರವ ಸೂಚಿಸಲಾಯಿತು. ಸ್ವಾತಂತ್ರ್ಯ ದಿನದ ಮಹತ್ವವನ್ನು ಸ್ಮರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಪ್ರೀತಿ ಗೆಹ್ಲೋಟ್, ತಾಂತ್ರಿಕ ನಿರ್ದೇಶಕರಾದ ಪ್ರಹ್ಲಾದ್, ಅಪರ ಆಯುಕ್ತರಾದ ಅಜಿತ್ ಹೆಗ್ಡೆ, ಮುಖ್ಯ ಲೆಕ್ಕಾಧಿಕಾರಿಯಾದ ಬೀನಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






















