Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA RMP-2041 | ಬಿಡಿಎಯಿಂದ ಪರಿಷ್ಕೃತ ಮಹಾ ಯೋಜನೆ-2041 ರಚನೆಗಾಗಿ ಜಾಗತಿಕ ಟೆಂಡರ್ ಆಹ್ವಾನ

ನಗರದ ಸಮಗ್ರ ಅಭಿವೃದ್ಧಿಗೆ ಹೊಸ ರೂಪ, ಸಿದ್ಧವಾಗಲಿದೆ ಮಹತ್ವದ ಯೋಜನೆ

by Bengaluru Wire Desk
August 25, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.25 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಗರದ ಸಮಗ್ರ ಮತ್ತು ಭವಿಷ್ಯದ ಅಭಿವೃದ್ಧಿಗಾಗಿ ಪರಿಷ್ಕೃತ ಮಹಾ ಯೋಜನೆ – 2041 (RMP-2041) ಸಿದ್ಧಪಡಿಸಲು ಜಾಗತಿಕ ಟೆಂಡರ್ ಆಹ್ವಾನಿಸಿದೆ. 

ಹಿಂದೆ ಸಿದ್ಧಪಡಿಸಿದ್ದ ಆರ್ ಎಂಪಿ-2031 ಯೋಜನೆಯು ವೈಜ್ಞಾನಿಕ ಆಧಾರಗಳ ಕೊರತೆ, ಸಮರ್ಪಕ ಪಾಲುದಾರರ ಸಹಭಾಗಿತ್ವವಿಲ್ಲದ ಮತ್ತು ಅಸ್ತವ್ಯಸ್ತ ನಗರ ಬೆಳವಣಿಗೆಯನ್ನು ನಿಯಂತ್ರಿಸಲು ವಿಫಲವಾದ ಕಾರಣ ಆ ಪರಿಷ್ಕ್ರತ ಯೋಜನೆಯನ್ನು ಸರ್ಕಾರ ಕೈಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಪರಿಷ್ಕ್ರತ ಮಹಾಯೋಜನೆಗೆ ಬಿಡಿಎ ಮುಂದಾಗಿದೆ. 

ಆಸಕ್ತ ಸಂಸ್ಥೆಗಳು ಸೆಪ್ಟೆಂಬರ್ 30ರೊಳಗೆ ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ.

ಹೊಸ ಯೋಜನೆಯು ಹಿಂದಿನ ನ್ಯೂನತೆಗಳನ್ನು ಸರಿಪಡಿಸುವುದು ಮಾತ್ರವಲ್ಲದೆ, ಬೆಂಗಳೂರಿನ ಹೆಚ್ಚುತ್ತಿರುವ ಜನಸಂಖ್ಯೆ, ವಾಹನ ದಟ್ಟಣೆ ಮತ್ತು ನಗರ ಹರಡುವಿಕೆಯನ್ನು ಸಮರ್ಪಕವಾಗಿ ನಿರ್ವಹಿಸಲು ಒಂದು ದೃಢವಾದ ಅಡಿಪಾಯ ಹಾಕಲಿದೆ ಎಂದು ಬಿಡಿಎ ಅಧಿಕಾರಿಗಳು ಹೇಳಿದ್ದಾರೆ. 

ಯೋಜನಾ ಕಾರ್ಯಗಳ ಭಾಗವಾಗಿ, ಈಗಾಗಲೇ ಹಿಂದಿನ ಟೆಂಡರ್ ಅಡಿಯಲ್ಲಿ ನಗರದ 1,240 ಚದರ ಕಿ.ಮೀ. ಪ್ರದೇಶದ ಹೈಟೆಕ್ 3D ಡ್ರೋನ್ ಸಮೀಕ್ಷೆ ಯ ಪೈಕಿ, ಈಗಾಗಲೇ ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ ಸೆಂಟರ್ (KSRSAC- ಕ್ಯಾಸ್ ರಾಕ್) ಬಿಬಿಎಂಪಿ ವ್ಯಾಪ್ತಿಯಲ್ಲಿ (800 ಚದರ ಕಿ.ಮೀ) ಈಗಾಗಲೇ 3D ಡ್ರೋನ್ ಸರ್ವೆ ಪೂರ್ಣಗೊಳಿಸಿದೆ. ಉಳಿದ ಬಿಡಿಎ ವ್ಯಾಪ್ತಿಯ (440 ಚದರ ಕಿ.ಮೀ) ಪ್ರದೇಶಗಳಲ್ಲಿ ಸಮೀಕ್ಷೆ ನಡೆಯಬೇಕಿದೆ.

ಈ ಡ್ರೋನ್ ಸಮೀಕ್ಷೆಯು ಮಹಾ ಯೋಜನೆಯನ್ನು ಸಿದ್ಧಪಡಿಸಲು ಅವಶ್ಯಕವಾಗಿರುವ ಬೇಸ್ ಮ್ಯಾಪ್, ಭೂ ಬಳಕೆ ನಕ್ಷೆ, ಆರ್ಥೋ-ರೆಕ್ಟಿಫೈಡ್ ಚಿತ್ರಗಳು ಮತ್ತು ಡಿಜಿಟಲ್ ಎಲಿವೇಶನ್ ಮಾಡೆಲ್‌ಗಳಂತಹ ಪ್ರಮುಖ ಮಾಹಿತಿಯನ್ನು ಒದಗಿಸಲಿದೆ. ಬೆಂಗಳೂರಿನ ಕೊನೆಯ ಅನುಮೋದಿತ ಮಾಸ್ಟರ್ ಪ್ಲಾನ್ ಆರ್ ಎಂಪಿ 2015, 2005ರಲ್ಲಿ ಸಿದ್ಧಪಡಿಸಲಾಗಿತ್ತು.

ಅದಕ್ಕೂ ಮಿಗಿಲಾಗಿ, ಮುಂಬರುವ ಆರ್ ಎಂಪಿ 2041 ಯೋಜನೆಯು ದತ್ತಾಂಶ ಆಧಾರಿತ, ಎಲ್ಲರನ್ನೂ ಒಳಗೊಳ್ಳುವ ಮತ್ತು ಭವಿಷ್ಯದ ಸವಾಲುಗಳಿಗೆ ಸಿದ್ಧವಿರುವ ಯೋಜನೆಯಾಗಿರುತ್ತದೆ. ಈ ಯೋಜನೆಯ ಪ್ರಮುಖ ಅಂಶಗಳಲ್ಲಿ ‘ಸಾರ್ವಜನಿಕ ಸಾರಿಗೆ ಆಧಾರಿತ ಅಭಿವೃದ್ಧಿ’ (Transit-Oriented Development – TOD) ಕೂಡ ಒಂದು. ಇದು ಸಾರ್ವಜನಿಕ ಸಾರಿಗೆಯ ಸುತ್ತಮುತ್ತ ವಾಸಯೋಗ್ಯ ಮತ್ತು ಬಹು ಉಪಯೋಗಿ ಪ್ರದೇಶಗಳನ್ನು ನಿರ್ಮಿಸುವ ಯೋಜನೆಯಾಗಿದ್ದು, ಇದರಿಂದ ವಾಹನ ದಟ್ಟಣೆಯನ್ನು ಕಡಿಮೆ ಮಾಡಿ, ಜೀವನ ಗುಣಮಟ್ಟ ಹೆಚ್ಚಿಸುವ ಗುರಿ ಹೊಂದಿದೆ.

ವಾಸ್ತವವಾಗಿ ಈ ಡ್ರೋನ್ ಸಮೀಕ್ಷೆಯನ್ನು ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ ಸೆಂಟರ್ ನಡೆಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಹೆಚ್ಚಿನ ದಕ್ಷತೆಗಾಗಿ ಈ ಯೋಜನೆಯನ್ನು ಜಾಗತಿಕ ಟೆಂಡರ್ ಮೂಲಕ ಖಾಸಗಿ ಸಂಸ್ಥೆಗಳಿಗೆ ತೆರೆಯಲು ಬಿಡಿಎ ನಿರ್ಧರಿಸಿದೆ.

ಬಿಡಿಎಯ ನಗರ ಯೋಜನೆ ಸದಸ್ಯ ಎಲ್. ಶಶಿಕುಮಾರ್ ಮಾತನಾಡಿ, “ಈ ಯೋಜನೆಯನ್ನು ಸಮಗ್ರವಾಗಿ ರೂಪಿಸಲು ಕೃಷಿ, ವಸತಿ, ವಾಣಿಜ್ಯ ಪ್ರದೇಶಗಳು ಮತ್ತು ರೆವೆನ್ಯೂ ಜಮೀನುಗಳ ಬಗ್ಗೆ ನಮಗೆ ವಿವರವಾದ ಮೌಲ್ಯಮಾಪನಗಳು ಬೇಕಾಗಿವೆ. ಆರ್ ಎಂಪಿ 2041 ಯೋಜನೆಯು ಪಾಲುದಾರರೊಂದಿಗೆ ಸಮಾಲೋಚನೆ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಮತ್ತು ಪ್ರತಿಕ್ರಿಯೆ ಆಧರಿಸಿ ಪರಿಷ್ಕರಣೆ ಸೇರಿದಂತೆ ಹಲವು ಹಂತಗಳನ್ನು ಒಳಗೊಂಡಿದೆ. ಮೂಲ ನಕ್ಷೆ ಬಹುತೇಕ ಸಿದ್ಧವಾಗಿದೆ. ಈಗ ನಾವು ವಿವರವಾದ ಭೂ ಬಳಕೆ ನಕ್ಷೆಗಳನ್ನು ಸಿದ್ಧಪಡಿಸಬೇಕು ಮತ್ತು ವಿಸ್ತರಿತ ಹಸಿರು ಪ್ರದೇಶಗಳು, ಹೊಸ ರಸ್ತೆ ಜಾಲಗಳು ಮತ್ತು ಸಾರಿಗೆ ಆಧಾರಿತ ನೀತಿಯಂತಹ ವೈಶಿಷ್ಟ್ಯಗಳನ್ನು ಸಂಯೋಜಿಸಬೇಕಾಗಿದೆ” ಎಂದರು.

ಕರಡು ಯೋಜನೆ ಸಿದ್ಧವಾದ ನಂತರ ಅದನ್ನು ಗೆಜೆಟ್‌ನಲ್ಲಿ ಪ್ರಕಟಿಸಲಾಗುವುದು. ಸಾರ್ವಜನಿಕರಿಗೆ ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಅವುಗಳನ್ನು ಅಂತಿಮ ಯೋಜನೆಯಲ್ಲಿ ಸೇರಿಸಲಾಗುತ್ತದೆ. “ನಾವು ಸಂಪೂರ್ಣ ಪ್ರಕ್ರಿಯೆಯನ್ನು 2026ರ ಮಧ್ಯಭಾಗದ ವೇಳೆಗೆ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ” ಎಂದು ಶಶಿಕುಮಾರ್ ಸ್ಪಷ್ಟಪಡಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ರಾಜ್ಯ ಸರ್ಕಾರಕ್ಕೆ ಎಎಐನಿಂದ ಶೀಘ್ರವೇ ಕಾರ್ಯಸಾಧ್ಯತಾ ವರದಿ ಸಲ್ಲಿಕೆ

Next Post

Accident CCTV Video | ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ 11 ವರ್ಷದ ಬಾಲಕ ಬಲಿ ; ಎಡಬದಿಯಿಂದ ಬೈಕ್ ಓವರ್ ಟೇಕ್, ದುರ್ಘಟನೆಗೆ ಕಾರಣ ಎಂದ ಸಾರಿಗೆ ಸಂಸ್ಥೆ

Next Post

Accident CCTV Video | ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ 11 ವರ್ಷದ ಬಾಲಕ ಬಲಿ ; ಎಡಬದಿಯಿಂದ ಬೈಕ್ ಓವರ್ ಟೇಕ್, ದುರ್ಘಟನೆಗೆ ಕಾರಣ ಎಂದ ಸಾರಿಗೆ ಸಂಸ್ಥೆ

ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

ಕೇಂದ್ರ ಸರ್ಕಾರಿ ನೌಕರರಿಗೆ ಪ್ರಮುಖ ಸುದ್ದಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗೆ ಮರಳಲು ಒಂದು ಬಾರಿ ಅವಕಾಶ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d