Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಹಿಂದುಳಿದ ವರ್ಗಗಳ ಆಯೋಗದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025’: ಜಾಗೃತಿ ಮೂಡಿಸಲು ಪದವಿ ವಿದ್ಯಾರ್ಥಿಗಳಿಗೆ ಕರೆ

ಸಮೀಕ್ಷೆಗೆ ಸಿದ್ಧತೆ: ಪದವಿ ವಿದ್ಯಾರ್ಥಿಗಳ ಮೂಲಕ ಜನರಿಗೆ ಮಾಹಿತಿ ನೀಡಲು ಇಲಾಖೆ ಸೂಚನೆ; ಆಸಕ್ತ ವಿದ್ಯಾರ್ಥಿಗಳು ವಾಟ್ಸಪ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ

by Bengaluru Wire Desk
September 9, 2025
in News Wire
Reading Time: 1 min read
0

ಬೆಂಗಳೂರು, ಸೆ.09 www.bengaluruwire.com : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಅನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯದಾದ್ಯಂತ ನಡೆಸಲು ಸಿದ್ಧತೆ ನಡೆಸಿದೆ. ಈ ಸಮೀಕ್ಷೆಯ ಪೂರ್ವಸಿದ್ಧತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪದವಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಿದೆ.

ಈ ವಿದ್ಯಾರ್ಥಿಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಪತ್ರ ಬರೆದಿದ್ದಾರೆ.

ಈ ಸಮೀಕ್ಷೆಯ ಮಹತ್ವ :

“ನಮ್ಮ ಸಮೀಕ್ಷೆ – ನಮ್ಮ ಜವಾಬ್ದಾರಿ” ಎಂಬ ಧ್ಯೇಯದೊಂದಿಗೆ ನಡೆಯಲಿರುವ ಈ ಸಮೀಕ್ಷೆಯು ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅರಿಯಲು ಸಹಾಯ ಮಾಡುತ್ತದೆ. ಈ ಮಾಹಿತಿಯು ರಾಜ್ಯದ ಭವಿಷ್ಯದ ನೀತಿಗಳನ್ನು ರೂಪಿಸಲು ಆಧಾರವಾಗಲಿದೆ.

ಪೂರ್ವಸಿದ್ಧತೆಗಾಗಿ ಸೂಚನೆಗಳು :

ಸಮೀಕ್ಷೆಯಲ್ಲಿ ಭಾಗವಹಿಸುವವರು ಕೆಲ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಅತ್ಯಗತ್ಯ. ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ, ಮತದಾರರ ಗುರುತಿನ ಚೀಟಿ, ಮತ್ತು ವಿಕಲಚೇತನರಾಗಿದ್ದರೆ ಯುಐಡಿ (UID) ಕಾರ್ಡ್ ಅಥವಾ ಪ್ರಮಾಣಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.

ಸಮೀಕ್ಷೆಯು ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆಯನ್ನು ಆಧರಿಸಿರುತ್ತದೆ ಮತ್ತು ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪ್ರಶ್ನೆಗಳು ವ್ಯಾಪಾರ, ಉದ್ಯೋಗ, ವಿದ್ಯಾರ್ಹತೆ, ಆದಾಯ, ಕೌಶಲ್ಯ ತರಬೇತಿ ಅಗತ್ಯತೆ, ಕುಟುಂಬದ ಚರ ಮತ್ತು ಸ್ಥಿರಾಸ್ತಿ ವಿವರಗಳು, ಧರ್ಮ, ಜಾತಿ, ಉಪಜಾತಿ, ಮತ್ತು ಕುಲಕಸುಬು ಮುಂತಾದ ಮಾಹಿತಿಗಳನ್ನು ಒಳಗೊಂಡಿರುತ್ತವೆ.

ಮೊಬೈಲ್ ಮತ್ತು ಆಧಾರ್ ಜೋಡಣೆ ಕಡ್ಡಾಯ :

ಸಮೀಕ್ಷೆಯಲ್ಲಿ ಇ-ಕೆವೈಸಿ (e-KYC) ಪ್ರಕ್ರಿಯೆಗಾಗಿ, ಪ್ರತಿ ಕುಟುಂಬದ ಸದಸ್ಯರ ಆಧಾರ್ ಸಂಖ್ಯೆ ಅವರ ಮೊಬೈಲ್ ಸಂಖ್ಯೆಗೆ ಜೋಡಣೆಯಾಗಿರುವುದು ಕಡ್ಡಾಯ. ಒಂದು ವೇಳೆ ಸದಸ್ಯರು ಮನೆಯಲ್ಲಿ ಇಲ್ಲದಿದ್ದರೆ, ಕುಟುಂಬದ ಪರವಾಗಿ ಉತ್ತರ ನೀಡುವ ಸದಸ್ಯರು ಫೋನ್ ಮೂಲಕ ಒಟಿಪಿ (OTP) ಪಡೆದು ಮಾಹಿತಿ ನೀಡಬಹುದು. 

6 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಆಧಾರ್ ಕಡ್ಡಾಯವಾಗಿದ್ದು, ಆಧಾರ್ ಇಲ್ಲದಿದ್ದರೆ ಹತ್ತಿರದ ನೋಂದಣಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡು, ನೋಂದಣಿ ಸಂಖ್ಯೆಯೊಂದಿಗೆ ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಮೊಬೈಲ್ ಸಂಖ್ಯೆ ಆಧಾರ್‌ಗೆ ಲಿಂಕ್ ಆಗಿಲ್ಲದಿದ್ದರೆ, ತಕ್ಷಣವೇ ಲಿಂಕ್ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ವಿದ್ಯಾರ್ಥಿಗಳಿಗೆ ನೋಂದಣಿ ಅವಕಾಶ :

ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು 63617-89579 ಈ ಸಂಖ್ಯೆಗೆ ವಾಟ್ಸಪ್ ಮೂಲಕ “Hi” ಎಂದು ಸಂದೇಶ ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಬಹುದು ಅಥವಾ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಮೀಕ್ಷೆಗೆ 1.49 ಲಕ್ಷಕ್ಕೂ ಹೆಚ್ಚು ಶಿಕ್ಷಕರ ಬಳಕೆ :

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ರಾಜ್ಯಾದ್ಯಂತ 1.49 ಲಕ್ಷಕ್ಕೂ ಹೆಚ್ಚು ಶಿಕ್ಷಕರನ್ನು ಬಳಸಿಕೊಳ್ಳಲಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯುವ ಈ ಸಮೀಕ್ಷೆಗೆ ಇತರ ಇಲಾಖೆಗಳ 75,064 ನೌಕರರನ್ನು ಸಹ ಬಳಸಲು ತೀರ್ಮಾನಿಸಲಾಗಿದೆ. ಶಿಕ್ಷಕರಿಗೆ ತರಬೇತಿ ನೀಡಲು 3030 ಮಾಸ್ಟರ್ ಟ್ರೇನರ್‌ಗಳನ್ನು ನೇಮಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Lunar Eclipse 2025 | ಬೆಂಗಳೂರಿನಲ್ಲಿ ಐಐಎ ಖಗೋಳ ವಿಜ್ಞಾನಿಗಳಿಂದ ಚಂದ್ರಗ್ರಹಣದ ವೈಜ್ಞಾನಿಕ ಚಿತ್ರಗಳ ಸೆರೆ

Next Post

Positive News | ಪ್ರೀತಿಗೆ ವಯಸ್ಸು ಅಡ್ಡಿಯಲ್ಲ : ರೈಲಲ್ಲಿ ವೃದ್ಧ ಪತಿಯು ಪತ್ನಿಯ ಕಾಲಿಗೆ ಗೆಜ್ಜೆ ತೊಡಿಸಿದ ವಿಡಿಯೋ ವೈರಲ್

Next Post

Positive News | ಪ್ರೀತಿಗೆ ವಯಸ್ಸು ಅಡ್ಡಿಯಲ್ಲ : ರೈಲಲ್ಲಿ ವೃದ್ಧ ಪತಿಯು ಪತ್ನಿಯ ಕಾಲಿಗೆ ಗೆಜ್ಜೆ ತೊಡಿಸಿದ ವಿಡಿಯೋ ವೈರಲ್

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಸೇರ್ಪಡೆ : ಸಂಚಾರ ಆವರ್ತನದಲ್ಲಿ ಹೆಚ್ಚಳ: ಸೆ.10 ರಿಂದ ಹೊಸ ವೇಳಾಪಟ್ಟಿ ಜಾರಿ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d