Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Video News | ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ಅಪಘಾತ- 9 ಬಲಿ, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ | ದುರ್ಘಟನೆಯಲ್ಲಿ 17 ಮಂದಿ ಗಂಭೀರ ಗಾಯ

by Bengaluru Wire Desk
September 13, 2025
in News Wire, Public interest
Reading Time: 1 min read
0

ಹಾಸನ, ಸೆ.13 www.bengaluruwire.com : ಗಣೇಶ ವಿಸರ್ಜನೆ ಮೆರವಣಿಗೆ ಸಾಗುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಹಾಸನ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಒಟ್ಟು 9 ಜನರು ಸಾವನ್ನಪ್ಪಿದ್ದು, 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಈ ಭೀಕರ ಘಟನೆಯು ನಿನ್ನೆ (ಸೆಪ್ಟೆಂಬರ್ 12) ರಾತ್ರಿ 8 ರಿಂದ 8:30 ರ ಸುಮಾರಿಗೆ ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಹಾಸನ ತಾಲ್ಲೂಕಿನ ಶಾಂತಿಗ್ರಾಮ ಹೋಬಳಿಯ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘X’ ಪೋಸ್ಟ್ ನಲ್ಲಿ, ಹಾಸನ ಭೀಕರ ಅಪಘಾತದ ಬಗ್ಗೆ,”ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ಅಪಘಾತವು ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ನಾನು ಭಾವಿಸುತ್ತೇನೆ. ಮೃತರ ಪ್ರತಿ ಸಂಬಂಧಿಕರಿಗೆ ಪಿಎಂಎನ್ಆರ್ ಎಫ್ ಪರಿಹಾರ ನಿಧಿಯಿಂದ ₹2 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ₹50,000″ ಎಂದು ಪ್ರತಿಕ್ರಿಯಿಸಿದ್ದಾರೆ.

ಮೈಸೂರು – ಹಾಸನ ಹೆದ್ದಾರಿಯಲ್ಲಿ ಹಾಸನ ಕಡೆಯಿಂದ ಬಂದ ಲಾರಿಯೊಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಹರಿದಿದೆ ಎಂದು ಹಾಸನ ತಾಲ್ಲೂಕಿನ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ. ಈ ಅಪಘಾತದಲ್ಲಿ ಒಂಬತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಗೂ 17 ಜನರು ಗಾಯಗೊಂಡಿದ್ದು ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಇಬ್ಬರು ಮಂಗಳ ಆಸ್ಪತ್ರೆಯಲ್ಲಿ ಹಾಗೂ ಒರ್ವ ವ್ಯಕ್ತಿ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರ್ಘಟನೆಯ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಘಟನೆಯನ್ನು ಅತ್ಯಂತ ನೋವಿನ ಘಳಿಗೆ ಎಂದು ಬಣ್ಣಿಸಿದ್ದಾರೆ. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದು, ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ರಾತ್ರಿಯೇ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಘಟನೆಯ ಬಗ್ಗೆ ಶಾಂತಿಗ್ರಾಮ ಹೋಬಳಿಯ ರಾಜಸ್ವ ನಿರೀಕ್ಷಕರು ವರದಿ ಸಲ್ಲಿಸಿದ್ದು, ಈ ಪ್ರಕರಣವನ್ನು “ವಿಶೇಷ ಪ್ರಕರಣ” ಎಂದು ಪರಿಗಣಿಸಿ ಪರಿಹಾರ ಮಂಜೂರು ಮಾಡುವಂತೆ ಹಾಸನ ತಾಲ್ಲೂಕು ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ಶಿಫಾರಸು ಮಾಡಿದ್ದಾರೆ.

ಮೃತಪಟ್ಟವರ ವಿವರಗಳು:

ಈ ಅಪಘಾತದಲ್ಲಿ ಮೃತಪಟ್ಟವರನ್ನು ಪ್ರವೀಣ್ ಕುಮಾರ್ (21), ರಾಜೇಶ್ (17), ರವಿಕುಮಾರ್ (17), ಗೋಕುಲ್ (17), ಕುಮಾರ್ (25), ಪ್ರವೀಣ್ (25), ಮಿಥುನ್ (23), ಸುರೇಶ್ (22), ಮತ್ತು ಪ್ರಭಾಕರ್ (52) ಎಂದು ಗುರುತಿಸಲಾಗಿದೆ. ಇವರು ವಿವಿಧ ಜಿಲ್ಲೆಗಳಾದ ಬಳ್ಳಾರಿ, ಹಾಸನ, ಹೊಳೆನರಸೀಪುರ, ಚಿತ್ರದುರ್ಗ, ಮತ್ತು ಚಿಕ್ಕಮಗಳೂರಿನವರಾಗಿದ್ದಾರೆ. ಈ ಅಪಘಾತದ ಸಂದರ್ಭದಲ್ಲಿ ಸ್ಥಳದಲ್ಲಿದ್ದವರು ವಿಡಿಯೋ ಮಾಡಿಕೊಂಡಿದ್ದನ್ನು ಎಕ್ಸ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ.

This year, Ganesh Chaturthi in Karnataka has been quite forgettable due to a lot of incidents.

This is Hasan incident took place today pic.twitter.com/8tqB0mnuxx

— Santoshvk18 (@269signofff) September 12, 2025
WhatsApp Join our WhatsApp Channel
Previous Post

Sharavathi Pumped Storage | ಪರಿಸರಕ್ಕೆ ಧಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಸಚಿವ ಕೆ.ಜೆ.ಜಾರ್ಜ್

Next Post

ವಿದ್ಯಾರ್ಥಿಗಳ ಆತ್ಮಹತ್ಯೆ ನಿಯಂತ್ರಣಕ್ಕೆ ರಾಷ್ಟ್ರೀಯ ಕಾರ್ಯಪಡೆ ರಚನೆ : ಸಮೀಕ್ಷೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಲು ಕರೆ

Next Post

ವಿದ್ಯಾರ್ಥಿಗಳ ಆತ್ಮಹತ್ಯೆ ನಿಯಂತ್ರಣಕ್ಕೆ ರಾಷ್ಟ್ರೀಯ ಕಾರ್ಯಪಡೆ ರಚನೆ : ಸಮೀಕ್ಷೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಲು ಕರೆ

ಬಿಸಿಸಿಐನಿಂದ ಭಾರತ-ಪಾಕ್ ಪಂದ್ಯಕ್ಕೆ ‘ಅಗೋಚರ ಬಹಿಷ್ಕಾರ’; ದುಬೈ ಕದನದಿಂದ ಹಿರಿಯ ಅಧಿಕಾರಿಗಳು ದೂರ

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group