Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ ನಾಗರಿಕ ಸೌಲಭ್ಯಗಳ ಸುಧಾರಣೆಗೆ GBAನ ಎರಡು ನಗರ ಪಾಲಿಕೆ ಆಯುಕ್ತರಿಂದ, ಹಲವು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಕೇಂದ್ರ ನಗರ ಪಾಲಿಕೆ : ಸುಂಕೆನಹಳ್ಳಿ ವಾರ್ಡ್ ಅನ್ನು ಮಾದರಿ ವಾರ್ಡ್ ಆಗಿ ಅಭಿವೃದ್ಧಿಪಡಿಸಲು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ರಾಜೇಂದ್ರ ಚೋಳನ್ | ಪಶ್ಚಿಮ ಪಾಲಿಕೆ ಆಯುಕ್ತ ಡಾ.ರಾಜೇಂದ್ರ ಕೆ.ವಿ. ಅವರಿಂದ ಜನಸೇವೆಗಳ ಸುಧಾರಣೆಗೆ ಒತ್ತು

by Bengaluru Wire Desk
September 16, 2025
in Bengaluru Focus
Reading Time: 1 min read
0
ಗಾಂಧಿಬಜಾರ್ ಗೆ ಭೇಟಿ ನೀಡಿದ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಪಾದಚಾರಿ ಮಾರ್ಗ, ಬೀದಿ ಬದಿ ವ್ಯಾಪಾರ, ಪಾಲಿಕೆಯಿಂದ ನಿರ್ಮಿಸಿರುವ ಮಲ್ಟಿಲೆವಲ್ ಕಾರ್ ಪಾರ್ಕಿಂಗ್ ಕಟ್ಟಡವನ್ನು ಪರಿಶೀಲನೆ ನಡೆಸಿದರು.

ಗಾಂಧಿಬಜಾರ್ ಗೆ ಭೇಟಿ ನೀಡಿದ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಪಾದಚಾರಿ ಮಾರ್ಗ, ಬೀದಿ ಬದಿ ವ್ಯಾಪಾರ, ಪಾಲಿಕೆಯಿಂದ ನಿರ್ಮಿಸಿರುವ ಮಲ್ಟಿಲೆವಲ್ ಕಾರ್ ಪಾರ್ಕಿಂಗ್ ಕಟ್ಟಡವನ್ನು ಪರಿಶೀಲನೆ ನಡೆಸಿದರು.

ಬೆಂಗಳೂರು, ಸೆ.16 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕ ಸೇವೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳ ಆಯುಕ್ತರು ಪ್ರತ್ಯೇಕವಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ. ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್ ಅವರು ಸುಂಕೆನಹಳ್ಳಿ ವಾರ್ಡ್ ಅನ್ನು ಮಾದರಿ ವಾರ್ಡ್ ಆಗಿ ಅಭಿವೃದ್ಧಿಪಡಿಸಲು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರೆ, ಪಶ್ಚಿಮ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಸೇವೆಗಳ ಗುಣಮಟ್ಟ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ.

ಮಾದರಿ ವಾರ್ಡ್‌ಗೆ ಕಾರ್ಯಸಾಧ್ಯತಾ ವರದಿ :

ಗಾಂಧಿ ಬಜಾರ್ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ ಕೇಂದ್ರ ಪಾಲಿಕೆ ಆಯುಕ್ತ ಶ್ರೀ ರಾಜೇಂದ್ರ ಚೋಳನ್, ಸುಂಕೆನಹಳ್ಳಿ ವಾರ್ಡ್ ಅನ್ನು ಮಾದರಿ ವಾರ್ಡ್ ಆಗಿ ಪರಿವರ್ತಿಸಲು ಕಾರ್ಯ ಯೋಜನೆ (ಆಕ್ಷನ್ ಪ್ಲಾನ್) ಸಿದ್ಧಪಡಿಸುವಂತೆ ಸೂಚಿಸಿದರು. ಪಾದಚಾರಿ ಮಾರ್ಗಗಳ ಒತ್ತುವರಿ ತೆರವು, ವೈಜ್ಞಾನಿಕ ವಿನ್ಯಾಸದಲ್ಲಿ ಪಾದಚಾರಿ ಮಾರ್ಗಗಳ ನಿರ್ಮಾಣ, ಅನಧಿಕೃತ ಕೇಬಲ್ ತೆರವು ಮತ್ತು ತ್ಯಾಜ್ಯ ನಿರ್ವಹಣೆ ಕುರಿತು ವ್ಯಾಪಾರಸ್ಥರಿಗೆ ಅರಿವು ಮೂಡಿಸುವುದು ಈ ಯೋಜನೆಯಲ್ಲಿ ಸೇರಿವೆ. ಜೊತೆಗೆ, ಪಾದಚಾರಿ ವ್ಯಾಪಾರಿಗಳಿಗೆ ನಿರ್ದಿಷ್ಟ ಸ್ಥಳಗಳನ್ನು ನಿಗದಿಪಡಿಸುವುದು ಮತ್ತು ರಸ್ತೆಗಳ ಬದಿ ಸಸಿಗಳನ್ನು ನೆಟ್ಟು ಹಸಿರೀಕರಣಗೊಳಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದರು.

ಗಾಂಧಿ ಬಜಾರ್‌ನಲ್ಲಿ ಸುಧಾರಣೆಗಳು :

ಗಾಂಧಿ ಬಜಾರ್ ರಸ್ತೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಈಗಾಗಲೇ ಸ್ಥಳ ನಿಗದಿಪಡಿಸಲಾಗಿದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವ್ಯಾಪಾರ ನಡೆಸಲು ಅವಕಾಶ ನೀಡುವಂತೆ ಸೂಚಿಸಲಾಯಿತು. ಹೆಚ್ಚುವರಿ ಒತ್ತುವರಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಆಯುಕ್ತರು, ಪಾದಚಾರಿ ಮಾರ್ಗಗಳಲ್ಲಿ ಪಾರ್ಕಿಂಗ್ ಮಾಡುವುದನ್ನು ತಡೆಯಲು ಕ್ರಮ ವಹಿಸುವಂತೆಯೂ ತಿಳಿಸಿದರು.

ವಾರಕ್ಕೊಮ್ಮೆ ವಾಕಥಾನ್ ಮತ್ತು ತಿಂಗಳಿಗೊಮ್ಮೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಗಾಂಧಿ ಬಜಾರ್ ರಸ್ತೆಯಲ್ಲಿ ಆಯೋಜಿಸುವ ಸಾಧ್ಯತೆಗಳ ಬಗ್ಗೆಯೂ ಪರಿಶೀಲಿಸುವಂತೆ ಆಯುಕ್ತರು ನಿರ್ದೇಶಿಸಿದರು. ಈ ಮೂಲಕ ರಸ್ತೆಯನ್ನು ಒಂದು ದಿನ ವಾಹನ ಸಂಚಾರ ಮುಕ್ತಗೊಳಿಸಿ, ಸಾರ್ವಜನಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುವ ಚಿಂತನೆ ನಡೆಯುತ್ತಿದೆ.

ಕಾರ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧತೆ

ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ಗಾಂಧಿ ಬಜಾರ್‌ನ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕಟ್ಟಡದಲ್ಲಿ 50 ವ್ಯಾಪಾರ ಮಳಿಗೆಗಳು ಮತ್ತು 124 ಕಾರುಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ.ರಾಜೇಂದ್ರ ಕೆ.ವಿ ಅವರು ಮಂಗಳವಾರ ವಾರ್ಡ್ ನಂ.163ರ ಇಂದಿರಾ ಕ್ಯಾಂಟಿನ್ ಗೆ ಭೇಟಿ ನೀಡಿ ಪರಿಶೀಲಿಲನೆ ನಡೆಸಿದರು.

ಪಶ್ಚಿಮ ಪಾಲಿಕೆ ಆಯುಕ್ತರಿಂದ ಜನಸೇವೆಗಳ ಸುಧಾರಣೆಗೆ ಒತ್ತು

ಪಶ್ಚಿಮ ಬೆಂಗಳೂರಿನಲ್ಲಿ ಆಯುಕ್ತ ಡಾ.ರಾಜೇಂದ್ರ ಕೆ.ವಿ. ಅವರು ಸಾರ್ವಜನಿಕ ಸೇವೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವಾರು ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವನಗುಡಿಯ ಮಸ್ಟರಿಂಗ್ ಪಾಯಿಂಟ್‌ನಲ್ಲಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ನಂತರ, ವಾರ್ಡ್ 154ರ ಪಾದಚಾರಿ ಮಾರ್ಗವನ್ನು ಪರಿಶೀಲಿಸಿದ ಆಯುಕ್ತರು, ಪಾದಚಾರಿಗಳಿಗೆ ಅಡಚಣೆಯಾಗದಂತೆ ರಸ್ತೆ ಮತ್ತು ಪಾದಚಾರಿ ಮಾರ್ಗವನ್ನು ನಿರ್ವಹಿಸುವಂತೆ ನಿರ್ದೇಶನ ನೀಡಿದರು. ಎನ್.ಆರ್. ಕಾಲೋನಿ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿದ ಅವರು, ರೋಗಿಗಳೊಂದಿಗೆ ನೇರವಾಗಿ ಮಾತನಾಡಿ ಸೇವೆಗಳ ಕುರಿತು ಮಾಹಿತಿ ಸಂಗ್ರಹಿಸಿದರು.

ಕೆಂಪಾಂಬುದಿ ಕೆರೆ ಮತ್ತು ಇಂದಿರಾ ಕ್ಯಾಂಟೀನ್ ಪರಿಶೀಲನೆ

ಪರಿಸರ ಸಂರಕ್ಷಣೆಯ ಭಾಗವಾಗಿ ಕೆಂಪಾಂಬುದಿ ಕೆರೆಗೆ ಭೇಟಿ ನೀಡಿದ ಆಯುಕ್ತರು, ಕೆರೆಯ ಸ್ವಚ್ಛತೆ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ವಾರ್ಡ್ 163ರ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ, ಅಲ್ಲಿ ಆಹಾರ ಸೇವಿಸುತ್ತಿದ್ದ ಸಾರ್ವಜನಿಕರಿಂದ ಸೇವೆಗಳ ಗುಣಮಟ್ಟದ ಕುರಿತು ಅಭಿಪ್ರಾಯಗಳನ್ನು ಸಂಗ್ರಹಿಸಿದರು ಮತ್ತು ಉತ್ತಮ ಸೇವೆ ಒದಗಿಸಲು ಆದೇಶಿಸಿದರು.

ಸಮೂಹ ಸ್ವಚ್ಛತಾ ಕಾರ್ಯಕ್ರಮ ಮತ್ತು ಪಶುಪಾಲನಾ ಇಲಾಖೆ ಚುರುಕು

ವಿಜಯನಗರ ವಾರ್ಡ್‌ನ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ರಸ್ತೆ ಬದಿಯಲ್ಲಿನ ತ್ಯಾಜ್ಯ ಮತ್ತು ಕಟ್ಟಡ ಭಗ್ನಾವಶೇಷಗಳನ್ನು ತೆರವುಗೊಳಿಸಿ ರಸ್ತೆಯನ್ನು ಸ್ವಚ್ಛಗೊಳಿಸಲಾಯಿತು. ಮತ್ತೊಂದೆಡೆ, ಮಲ್ಲೇಶ್ವರಂ ವಿಭಾಗದ ಗುಟ್ಟಹಳ್ಳಿ ವಾರ್ಡ್‌ನಲ್ಲಿ ಪಶುಪಾಲನಾ ಇಲಾಖೆಯು ಬೀದಿ ನಾಯಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮವನ್ನು ನಡೆಸಿತು.

ಈ ವೇಳೆ ಎರಡೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಸಿಂಧಿ ಶಾಲೆ: ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಲಿ – ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ

Next Post

ಬೆಂಗಳೂರು ಜಲಮಂಡಳಿಯಿಂದ ನಿಗದಿತ ಅವಧಿಗೂ ಮುನ್ನವೇ ಕಾಮಗಾರಿ ಪೂರ್ಣ : ಇಂದು ಬೆಳಗ್ಗೆಯಿಂದಲೇ ಕಾವೇರಿ ನೀರು ಸರಬರಾಜು ಆರಂಭ

Next Post
BWSSB Head Office

ಬೆಂಗಳೂರು ಜಲಮಂಡಳಿಯಿಂದ ನಿಗದಿತ ಅವಧಿಗೂ ಮುನ್ನವೇ ಕಾಮಗಾರಿ ಪೂರ್ಣ : ಇಂದು ಬೆಳಗ್ಗೆಯಿಂದಲೇ ಕಾವೇರಿ ನೀರು ಸರಬರಾಜು ಆರಂಭ

Govt. Docters Suspended | ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಲಂಚ ಪಡೆದ ಮೂವರು ವೈದ್ಯರ ಅಮಾನತು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group