Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mysore Dasara-2025 | ದಸರಾ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ 2300 ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರಿನಿಂದ ಮೈಸೂರಿಗೆ 610 ವಿಶೇಷ ಬಸ್‌ಗಳು | ಪ್ರಮುಖ ನಗರಗಳು, ಪಟ್ಟಣಗಳಿಗೆ, ಅಂತರರಾಜ್ಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಸಾರಿಗೆ

by Bengaluru Wire Desk
September 21, 2025
in News Wire
Reading Time: 1 min read
0

ಬೆಂಗಳೂರು, ಸೆ.21 www.bengaluruwire.com : ಮೈಸೂರು ದಸರಾ-2025 ಮತ್ತು ದಸರಾ ರಜೆಗಳ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC- ಕೆಎಸ್) ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 26, 27 ಮತ್ತು 30 ರಂದು ರಾಜ್ಯ ಮತ್ತು ಹೊರರಾಜ್ಯಗಳ ವಿವಿಧ ಸ್ಥಳಗಳಿಗೆ 2300 ಕ್ಕೂ ಹೆಚ್ಚು ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತಿದೆ. 

ಈ ಬಸ್ಸುಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಹೊರಡಲಿವೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಲ್ಲದೆ ರಾಜ್ಯದ ಮತ್ತು ಹೊರರಾಜ್ಯಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಅಕ್ಟೋಬರ್ 2 ಮತ್ತು 5ರಂದು ರಾಜ್ಯ ಮತ್ತು ಹೊರರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ಸುಗಳನ್ನು ಸಹ ಓಡಿಸಲಾಗುವುದು. ಪ್ರಸ್ತುತ ಕಾರ್ಯಾಚರಣೆಯಲ್ಲಿದ್ದ ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ವೀಪರ್, ಅಶ್ವಮೇಧ ಸೇವೆಗಳ ಜೊತೆಗೆ ಈ ವಿಶೇಷ ಬಸ್ಸುಗಳ ಸೇವೆಗಳನ್ನು ಒದಗಿಸಲಾಗುತ್ತಿದೆ.

ಪ್ರಮುಖ ನಗರಗಳು ಮತ್ತು ಪಟ್ಟಣಗಳಿಗೆ ಸಾರಿಗೆ:

ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು, ಮತ್ತು ನೆರೆಯ ರಾಜ್ಯಗಳಾದ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪುಣೆ, ಎರ್ನಾಕುಲಂ, ಪಾಲ್ಘಾಟ್ ಮತ್ತು ಇತರ ಸ್ಥಳಗಳಿಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ದಸರಾ ಪ್ರಯುಕ್ತ 610 ವಿಶೇಷ ಬಸ್ಸುಗಳು:

ಮೈಸೂರು ದಸರಾ-2025 ಕ್ಕಾಗಿ, 610 ವಿಶೇಷ ಬಸ್ಸುಗಳನ್ನು ಯೋಜಿಸಲಾಗಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ 260 ಹೆಚ್ಚುವರಿ ಬಸ್ಸುಗಳು ಕಾರ್ಯಾಚರಣೆ ಮಾಡಲಿವೆ. ಮೈಸೂರಿನ ಸುತ್ತಮುತ್ತಲಿನ ಪ್ರವಾಸಿ ಮತ್ತು ಧಾರ್ಮಿಕ ಸ್ಥಳಗಳಾದ ಚಾಮುಂಡಿ ಬೆಟ್ಟ, ಕೆಆರ್‌ಎಸ್ ಅಣೆಕಟ್ಟು, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಮುಂತಾದ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ಬಸ್ಸುಗಳನ್ನು ಒದಗಿಸಲಾಗಿದೆ. ಇದಲ್ಲದೆ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ‘ಫ್ಲೈ ಬಸ್’ (Fly Bus) ಮೂಲಕ ನೇರ ಸಾರಿಗೆ ಸೌಲಭ್ಯವನ್ನೂ ಕಲ್ಪಿಸಲಾಗಿದೆ.

ವಿಶೇಷ ಪ್ಯಾಕೇಜ್ ಪ್ರವಾಸಗಳು:

ಪ್ರವಾಸಿಗರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಕರ್ನಾಟಕ ಸಾರಿಗೆ ವಾಹನಗಳಿಂದ ಒಂದು ದಿನದ ವಿಶೇಷ ಪ್ಯಾಕೇಜ್ ಪ್ರವಾಸಗಳನ್ನು ಆಯೋಜಿಸಿದೆ:

 * ಗಿರಿದರ್ಶಿನಿ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ವಯಸ್ಕರಿಗೆ ರೂ. 450/-, ಮಕ್ಕಳಿಗೆ ರೂ. 300/-).

 * ಜಲದರ್ಶಿನಿ: ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆಆರ್‌ಎಸ್ (ವಯಸ್ಕರಿಗೆ ರೂ. 500/-, ಮಕ್ಕಳಿಗೆ ರೂ. 350/-).

 * ದೇವದರ್ಶಿನಿ: ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ವಯಸ್ಕರಿಗೆ ರೂ. 330/-, ಮಕ್ಕಳಿಗೆ ರೂ. 225/-).

ಈ ಪ್ಯಾಕೇಜ್ ಸೇವೆಗಳು ಸೆಪ್ಟೆಂಬರ್ 27ರಿಂದ ಅಕ್ಟೋಬರ್ 7, 2025 ರವರೆಗೆ ಲಭ್ಯವಿರುತ್ತವೆ. ಈ ಪ್ರವಾಸಗಳು ಬೆಳಿಗ್ಗೆ ಮೈಸೂರಿನಿಂದ ಪ್ರಾರಂಭವಾಗಿ ಸಂಜೆ ಮೈಸೂರಿಗೆ ಹಿಂದಿರುಗುತ್ತವೆ.

ಟಿಕೆಟ್ ಬುಕಿಂಗ್ ಮತ್ತು ರಿಯಾಯಿತಿಗಳು:

ಪ್ರಯಾಣಿಕರು www.ksrtc.karnataka.gov.in ವೆಬ್‌ಸೈಟ್ ಅಥವಾ ಮೊಬೈಲ್ ಮೂಲಕ ಇ-ಟಿಕೆಟ್ ಬುಕಿಂಗ್ ಮಾಡಬಹುದು. ಕರ್ನಾಟಕ ಹಾಗೂ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಮತ್ತು ಪುದುಚೇರಿಯಲ್ಲಿರುವ ಮುಂಗಡ ಟಿಕೆಟ್ ಕೌಂಟರ್‌ಗಳ ಮೂಲಕವೂ ಬುಕ್ ಮಾಡಬಹುದು. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಒಟ್ಟಿಗೆ ಟಿಕೆಟ್ ಕಾಯ್ದಿರಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ದೊರೆಯುತ್ತದೆ. ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣದ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.

ಪ್ರಯಾಣಿಕರ ಗಮನಕ್ಕೆ:

ಮೈಸೂರು ಗ್ರಾಮೀಣ ಮತ್ತು ನಗರ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಮಾಹಿತಿ ನೀಡಲು ‘ಮಾಹಿತಿ ಕೇಂದ್ರ’ಗಳನ್ನು ತೆರೆಯಲಾಗುವುದು. ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸುವಾಗ ಟಿಕೆಟ್‌ನಲ್ಲಿ ನಮೂದಿಸಲಾದ ಬಸ್ ನಿಲ್ದಾಣ ಅಥವಾ ಪಿಕ್‌ಅಪ್ ಪಾಯಿಂಟ್ ಅನ್ನು ಗಮನಿಸುವಂತೆ ಕೋರಲಾಗಿದೆ. ಸಂಚಾರ ಒತ್ತಡಕ್ಕನುಗುಣವಾಗಿ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದಲೂ ವಿಶೇಷ ಸಾರಿಗೆಗಳನ್ನು ಓಡಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಅಂತರರಾಷ್ಟ್ರೀಯ ಬೀಚ್ ಸ್ವಚ್ಛತಾ ದಿನ: ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Next Post

ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರ ಪರಿಷ್ಕರಣೆ: ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ : ಇಲ್ಲಿದೆ ಅವುಗಳ ಪಟ್ಟಿ

Next Post

ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರ ಪರಿಷ್ಕರಣೆ: ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ : ಇಲ್ಲಿದೆ ಅವುಗಳ ಪಟ್ಟಿ

Mysore Dasara- 2025 | ಮಾನವೀಯ ಮೌಲ್ಯಗಳ ಹೊಸ ಸಮಾಜ ಕಟ್ಟೋಣ: ಮೈಸೂರು ದಸರಾ ಉದ್ಘಾಟಿಸಿ ಬಾನು ಮುಷ್ತಾಕ್ ನಾಡಿನ ಜನತೆಗೆ ಕರೆ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d