Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mysore Dasara- 2025 | ಮಾನವೀಯ ಮೌಲ್ಯಗಳ ಹೊಸ ಸಮಾಜ ಕಟ್ಟೋಣ: ಮೈಸೂರು ದಸರಾ ಉದ್ಘಾಟಿಸಿ ಬಾನು ಮುಷ್ತಾಕ್ ನಾಡಿನ ಜನತೆಗೆ ಕರೆ

ನಮ್ಮ ಸಂಸ್ಕೃತಿ ನಮ್ಮ ಬೇರು, ಸೌಹಾರ್ಧ ನಮ್ಮ ಶಕ್ತಿ; ಸಿಎಂ ಸಿದ್ದರಾಮಯ್ಯ ಅವರಿಂದ ಅಭಿನಂದನೆ

by Bengaluru Wire Desk
September 22, 2025
in News Wire, Public interest
Reading Time: 1 min read
0

ಮೈಸೂರು, ಸೆ.22 www.bengaluruwire.com : ವಿಶ್ವವಿಖ್ಯಾತ ಮೈಸೂರು ದಸರಾ 2025ಕ್ಕೆ, ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ಚಾಲನೆ ನೀಡಿದರು. 

ಸೋಮವಾರ ಚಾಮುಂಡಿ ಬೆಟ್ಟದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, “ನಮ್ಮ ಸಂಸ್ಕೃತಿ ನಮ್ಮ ಬೇರು, ಸೌಹಾರ್ಧ ನಮ್ಮ ಶಕ್ತಿ. ನಮ್ಮ ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ” ಎಂದು ಕರೆ ನೀಡಿದರು.

ಬಾನು ಮುಷ್ತಾಕ್ ಅವರು, “ಚಾಮುಂಡೇಶ್ವರಿ ಎಂದರೆ ಹೆಣ್ಣಿನಲ್ಲಿರುವ ಅಪಾರ ಶಕ್ತಿ. ಸ್ತ್ರೀತ್ವ ಕೇವಲ ಮೃದುತ್ವವಲ್ಲ, ಅದು ಗಟ್ಟಿ ಬದುಕಿನ ಹೋರಾಟ” ಎಂದು ಹೇಳಿದರು. 

ಮೈಸೂರು ರಾಜಮನೆತನವು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಔದಾರ್ಯಕ್ಕೆ ಮಾದರಿಯಾಗಿತ್ತು. ಸಂಪತ್ತನ್ನು ಹಂಚಿಕೊಂಡಾಗ ವೃದ್ಧಿಸುತ್ತದೆ, ಶಕ್ತಿ ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬಾಳುತ್ತದೆ ಎಂಬುದನ್ನು ಅವರು ನೆನಪಿಸಿದರು. ತಮ್ಮ ಕವನದ ಮೂಲಕ ಹಿಂದೂ-ಮುಸ್ಲಿಂ ಬಾಂಧವ್ಯದ ಸೌಂದರ್ಯವನ್ನು ಅನಾವರಣಗೊಳಿಸಿದರು. “ನನ್ನ ಬದುಕು-ಬರಹ” ಪುಸ್ತಕದಲ್ಲಿ ಹಿಂದೂ ಧರ್ಮದೊಂದಿಗಿನ ತಮ್ಮ ಸಂಬಂಧದ ಬಗ್ಗೆ ಬರೆದಿರುವುದಾಗಿ ತಿಳಿಸಿದರು. 

ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಬಾನು ಮುಷ್ತಾಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಶ್ರೀ ಚಾಮುಂಡೇಶ್ವರಿ ದೇವರ ದರ್ಶನ ಮಾಡಿ ಮಂಗಳಾರತಿ ಸ್ವೀಕರಿಸಿದರು.

ತಮ್ಮ ಕವನ ‘ಬಾಗಿನ’ ವಾಚಿಸುವಾಗ, ಒಬ್ಬ ಮುಸ್ಲಿಂ ಹೆಣ್ಣುಮಗಳು ಬಾಗಿನ ಪಡೆದಾಗ ಮನಸ್ಸಿನಲ್ಲಿ ಉತ್ಪನ್ನವಾಗುವ ಭಾವನೆಗಳನ್ನು ತೆರೆದಿಟ್ಟರು. ದ್ವೇಷದ ಭಾಷೆಗಳನ್ನು ಮೀರಿ ಪ್ರೀತಿಯ ಅಲೆಗಳು ಸದಾ ಹರಿಯುತ್ತವೆ ಎಂದು ಕವನದ ಮೂಲಕ ಸಾರಿದರು.

ತಮ್ಮ ಜೀವನದ ಅತ್ಯಂತ ಗೌರವದ ಕ್ಷಣ ಇದಾಗಿದೆ ಎಂದ ಬಾನು ಮುಷ್ತಾಕ್, ಇದು ತಾಯಿ ಚಾಮುಂಡಿಯೇ ತಮ್ಮನ್ನು ಕರೆಸಿಕೊಂಡಿರುವುದಾಗಿ ಭಾವಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮನ್ನು ಆಹ್ವಾನಿಸಿ, ನೈತಿಕ ಬೆಂಬಲ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ದಸರಾ ಶಾಂತಿ ಮತ್ತು ಸರ್ವಜನಾಂಗದ ಸಾಮರಸ್ಯದ ಹಬ್ಬ. 

ಮೈಸೂರು ಅರಸರು ಮುಸ್ಲಿಮರ ಬಗ್ಗೆ ಇಟ್ಟಿದ್ದ ನಂಬಿಕೆ ಹಾಗೂ ವಿಶ್ವಾಸಕ್ಕೆ ತಮ್ಮ ಸಂಬಂಧಿಯೊಬ್ಬರು ಮೈಸೂರು ಮಹಾರಾಜರ ಅಂಗರಕ್ಷಕ ಪಡೆಯಲ್ಲಿದ್ದ ಉದಾಹರಣೆಯನ್ನು ನೀಡಿದರು. ದ್ವೇಷ ಮತ್ತು ಅಸಹಿಷ್ಣುತೆಯನ್ನು ನಾಶ ಮಾಡುವ ಶಕ್ತಿ ತಾಯಿ ಚಾಮುಂಡಿಗೆ ಇದೆ ಎಂದರು.

ದಸರಾ ಆರ್ಥಿಕ ಮತ್ತು ಶೈಕ್ಷಣಿಕತೆಯ ಹಬ್ಬವಾಗಲಿ: ಸಿಎಂ ಸಿದ್ದರಾಮಯ್ಯ

ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಬಾನು ಮುಷ್ತಾಕ್ ಅವರು ಬೂಕರ್ ಪ್ರಶಸ್ತಿಯನ್ನು ಪಡೆದ ಮೊದಲ ಕನ್ನಡ ಸಾಹಿತಿ ಎಂಬುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಅವರ ನೇತೃತ್ವದಲ್ಲಿ ದಸರಾ ಉದ್ಘಾಟಿಸಿರುವುದು ಸಮಾನತೆಯ ಸಂದೇಶ ಸಾರುತ್ತದೆ” ಎಂದು ಹೇಳಿದರು.

ದಸರಾ ಕೇವಲ ಸಾಂಸ್ಕೃತಿಕ ಹಬ್ಬವಲ್ಲ, ಅದು ಆರ್ಥಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ಹಬ್ಬವಾಗಬೇಕು. ಈ ವರ್ಷದ ದಸರಾ ಸಮೃದ್ಧಿ, ಸೌಹಾರ್ದತೆ ಮತ್ತು ಪ್ರಗತಿಯ ಸಂಕೇತವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಆಶಿಸಿದರು. ಕರ್ನಾಟಕದ ಸರ್ಕಾರವು ಸರ್ವ ಜನಾಂಗದ ಶಾಂತಿಯ ತೋಟವನ್ನು ಬಲಪಡಿಸಲು ಶ್ರಮಿಸುತ್ತದೆ. ಎಲ್ಲ ವರ್ಗದ ಜನರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಅಭಿವೃದ್ಧಿಯ ಪಥದಲ್ಲಿ ಸಾಗುವುದೇ ಸರ್ಕಾರದ ಮುಖ್ಯ ಉದ್ದೇಶ ಎಂದು ಪ್ರತಿಪಾದಿಸಿದರು.

ದಸರಾ ಹಬ್ಬದ ಮೂಲಕ ಮೈಸೂರಿನ ಸಾಂಸ್ಕೃತಿಕ ವೈಭವ ಮತ್ತು ಪ್ರವಾಸೋದ್ಯಮ ಹೆಚ್ಚಳಕ್ಕೆ ಮತ್ತಷ್ಟು ಉತ್ತೇಜನ ನೀಡಲಾಗುವುದು. ಈ ಬಾರಿಯ ದಸರಾ, ಕೋವಿಡ್ ನಂತರ ರಾಜ್ಯಕ್ಕೆ ಹೊಸ ಚೈತನ್ಯ ತುಂಬುವಂತಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸೋದ್ಯಮ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು, ರಾಜ್ಯದ ಯುವಜನರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿಕೊಳ್ಳಲು ಪ್ರೇರೇಪಿಸಬೇಕು. ಈ ವರ್ಷದ ದಸರಾ ಹಬ್ಬವು ಕರ್ನಾಟಕದ ಇತಿಹಾಸದಲ್ಲಿ ಒಂದು ಹೊಸ ಅಧ್ಯಾಯವನ್ನು ತೆರೆಯಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಇದೇ ವೇಳೆ, ದಸರಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಇತರ ಸಚಿವರುಗಳು ಭಾಗವಹಿಸಿದ್ದರು. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರ ಪರಿಷ್ಕರಣೆ: ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ : ಇಲ್ಲಿದೆ ಅವುಗಳ ಪಟ್ಟಿ

Next Post

E-Governance | ಬಿಬಿಎಂಪಿಯ ಇ-ಖಾತಾ ಯೋಜನೆಗೆ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ 2025’ ಗರಿ

Next Post

E-Governance | ಬಿಬಿಎಂಪಿಯ ಇ-ಖಾತಾ ಯೋಜನೆಗೆ 'ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ 2025' ಗರಿ

ಬೆಂಗಳೂರು ನಗರ ಜಿಲ್ಲೆಯಲ್ಲಿ 12.43 ಲಕ್ಷ ಕುಟುಂಬಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d