Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕಾಂಗ್ರೆಸ್ ಸರ್ಕಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಠಕ್ಕರ್ : “ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ, ನಮಾಜ್ ಗೆ ಅವಕಾಶ ನೀಡದಂತೆ” ಆಗ್ರಹಿಸಿ CM ಗೆ ಪತ್ರ

ಅನುಮತಿಯಿಲ್ಲದೆ ರಸ್ತೆ, ಸರ್ಕಾರಿ ಆವರಣಗಳಲ್ಲಿ ಪ್ರಾರ್ಥನೆ ತಡೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಯತ್ನಾಳ್

by Bengaluru Wire Desk
October 17, 2025
in News Wire, Public interest
Reading Time: 1 min read
0

ಬೆಂಗಳೂರು, ಅ.17 www.bengaluruwire.com : ರಾಜ್ಯ ಸರ್ಕಾರವು ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳು ಸೇರಿದಂತೆ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಗಳಿಗೆ ಸರ್ಕಾರಿ ಸ್ಥಳಗಳು, ಅನುದಾನಿತ ಶಾಲೆಗಳ ಆವರಣ ಹಾಗೂ ಸಾರ್ವಜನಿಕ ಸ್ಥಳಗಳನ್ನು ಬಳಸಲು ಕಡ್ಡಾಯ ಅನುಮತಿ ಪಡೆಯಬೇಕೆಂದು ತೀರ್ಮಾನಿಸಿತ್ತು. 

ಈ ನಿರ್ಧಾರದ ಬೆನ್ನಲ್ಲೇ, ವಿಜಯಪುರ ಶಾಸಕ ಹಾಗೂ ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸರ್ಕಾರಕ್ಕೆ ಠಕ್ಕರ್ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅ.17ರಂದು ಪತ್ರ ಬರೆದಿದ್ದಾರೆ. ಸರ್ಕಾರದ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆ ಮತ್ತು ಸರ್ಕಾರಿ ಆವರಣಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನು ಅವರು ತಮ್ಮ ಅಧಿಕೃತ ಎಕ್ಸ್ ಜಾಲತಾಣದಲ್ಲಿ ಬಹಿರಂಗವಾಗಿ ಪ್ರಕಟಿಸಿದ್ದಾರೆ.

‘ನಮಾಜ್‌ಗೆ ಯಾವುದೇ ವಿಶೇಷ ಅವಕಾಶ ಬೇಡ’ :

ಯತ್ನಾಳ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ, “ಪೂರ್ವಾನುಮತಿಯಿಲ್ಲದೆ ಸಾರ್ವಜನಿಕ ರಸ್ತೆಗಳು ಮತ್ತು ಸರ್ಕಾರಿ ಆಸ್ತಿಗಳ ಮೇಲೆ ಜನರು ನಮಾಜ್ ಸಲ್ಲಿಸುತ್ತಿರುವುದನ್ನು ನಾವು ನೋಡಿದ್ದೇವೆ. ಇಂತಹ ಚಟುವಟಿಕೆಗಳು ಸಾರ್ವಜನಿಕರಿಗೆ ತೊಂದರೆ, ಪಾದಚಾರಿ ಮತ್ತು ವಾಹನ ಸಂಚಾರಕ್ಕೆ ಅಡಚಣೆಯನ್ನುಂಟುಮಾಡುತ್ತವೆ ಮತ್ತು ನಾಗರಿಕರ ಮೂಲಭೂತ ಹಕ್ಕುಗಳಾದ ಸಂವಿಧಾನದ ಕಲಂ 19 ಮತ್ತು 21 ರ ಅಡಿಯಲ್ಲಿ ಖಾತರಿಪಡಿಸಿದ ಮುಕ್ತ ಸಂಚಾರ ಮತ್ತು ಭದ್ರತೆಗೆ ಧಕ್ಕೆ ತರುತ್ತವೆ,” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

“ಸರ್ಕಾರಿ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್ ಅಥವಾ ಯಾವುದೇ ಇತರ ಆಚರಣೆಗಳನ್ನು ನಡೆಸಲು ಯಾವುದೇ ವಿಶೇಷ ಅವಕಾಶ ಇರಬಾರದು” ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಏಕರೂಪದ ಜಾರಿ ಮತ್ತು ಕಾನೂನಿನ ಸಮಾನತೆಗೆ ಒತ್ತಾಯ :

ಖಾಸಗಿ ಆಸ್ತಿಗಳು, ಸಂಸ್ಥೆಗಳು ಮತ್ತು ಶೈಕ್ಷಣಿಕ ಸ್ಥಳಗಳನ್ನು ಬಳಸುವ ಸರ್ಕಾರಿ ನಿರ್ಧಾರವನ್ನು ಉಲ್ಲೇಖಿಸಿರುವ ಯತ್ನಾಳ್, “ಸಾರ್ವಜನಿಕ ಸ್ಥಳಗಳನ್ನು ಖಾಸಗಿ ಅಥವಾ ಸಾಂಸ್ಥಿಕ ಉದ್ದೇಶಗಳಿಗಾಗಿ ಬಳಸುವುದರಿಂದ ಖಾಸಗಿ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳನ್ನು ನಿರ್ಬಂಧಿಸುವ ಸರ್ಕಾರದ ಇತ್ತೀಚಿನ ನಿರ್ಧಾರದ ಹಿನ್ನೆಲೆಯಲ್ಲಿ, ಸಮಾಜದ ಎಲ್ಲಾ ವರ್ಗಗಳಲ್ಲಿ ತಟಸ್ಥತೆ ಮತ್ತು ನ್ಯಾಯವನ್ನು ಏಕರೂಪವಾಗಿ ಜಾರಿಗೊಳಿಸುವುದು ಅತ್ಯಗತ್ಯ,” ಎಂದು ಪ್ರತಿಪಾದಿಸಿದ್ದಾರೆ.

ಪೂರ್ವಾನುಮತಿಯಿಲ್ಲದೆ ರಸ್ತೆಗಳು, ಪಾದಚಾರಿ ಮಾರ್ಗಗಳು ಅಥವಾ ಸರ್ಕಾರಿ ಆವರಣಗಳಲ್ಲಿ ನಮಾಜ್ ನಡೆಸದಂತೆ ನೋಡಿಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡುವಂತೆ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಎಸ್‌ಒಪಿ ರಚನೆಗೆ ಆಗ್ರಹ :

ಧರ್ಮನಿರಪೇಕ್ಷತೆ, ಕಾನೂನಿನ ಸಮಾನತೆ ಮತ್ತು ಸಾರ್ವಜನಿಕ ಶಿಸ್ತಿಗೆ ಸರ್ಕಾರದ ಬದ್ಧತೆಯನ್ನು ಬಲಪಡಿಸಲು, ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳಿಗಳ ಅಡಿಯಲ್ಲಿ ಧಾರ್ಮಿಕ ಉದ್ದೇಶಗಳಿಗಾಗಿ ಸಾರ್ವಜನಿಕ ಸ್ಥಳಗಳ ಅನಧಿಕೃತ ಬಳಕೆಯನ್ನು ನಿಯಂತ್ರಿಸಲು ಸರ್ಕಾರವು ಸ್ಪಷ್ಟವಾದ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಅಥವಾ ಸುತ್ತೋಲೆಯನ್ನು ರೂಪಿಸಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.

ಯಾವುದೇ ಧಾರ್ಮಿಕ ಉದ್ದೇಶಕ್ಕಾಗಿ ಸಾರ್ವಜನಿಕ ಸ್ಥಳಗಳನ್ನು ಅನಧಿಕೃತವಾಗಿ ಬಳಸುವುದನ್ನು ನಿಷೇಧಿಸುವ ಈ ಕ್ರಮಗಳು ಕೋಮು ಸಾಮರಸ್ಯವನ್ನು ಕಾಪಾಡಲು, ಸಾರ್ವಜನಿಕ ಶಿಸ್ತನ್ನು ಉತ್ತೇಜಿಸಲು ಮತ್ತು ವಿವಾದಗಳನ್ನು ತಪ್ಪಿಸಲು ಸಹಕಾರಿಯಾಗಲಿದೆ ಎಂದು ಪತ್ರದಲ್ಲಿ ಒತ್ತಿ ಹೇಳಲಾಗಿದೆ.

ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸ 'ಸರ್ವ ಜನಾಂಗದ ಶಾಂತಿಯ ತೋಟ' ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ.

I have written a… pic.twitter.com/Jsp8DRWXIV

— Basanagouda R Patil (Yatnal) (@BasanagoudaBJP) October 17, 2025
WhatsApp Join our WhatsApp Channel
Previous Post

ದೀಪಾವಳಿ ಹಬ್ಬದ ಸಂಭ್ರಮ: 28,000 ಪೌರಕಾರ್ಮಿಕರಿಗೆ ಸಿಹಿ ವಿತರಣೆ

Next Post

Knobly Cream | ಕನ್ನಡ ಸಾಹಿತ್ಯ ಲೋಕಕ್ಕೆ ‘ಕಥಾ ಮಂಥನ’ದ ಅಡಿಗಲ್ಲು: ಡಿಜಿಟಲ್ ವೇದಿಕೆಯಲ್ಲಿ ಸಣ್ಣಕಥೆಗಳ ಹೊಸ ಯುಗಾರಂಭ

Next Post

Knobly Cream | ಕನ್ನಡ ಸಾಹಿತ್ಯ ಲೋಕಕ್ಕೆ 'ಕಥಾ ಮಂಥನ'ದ ಅಡಿಗಲ್ಲು: ಡಿಜಿಟಲ್ ವೇದಿಕೆಯಲ್ಲಿ ಸಣ್ಣಕಥೆಗಳ ಹೊಸ ಯುಗಾರಂಭ

ಬೆಂಗಳೂರಿನಲ್ಲಿ ದೀಪಾವಳಿಗೆ 'ಜಾತಿಗಣತಿ' ಕಾರ್ಯದಿಂದ ಗಣತಿದಾರರಿಗೆ ವಿನಾಯಿತಿ ಕೋರಿದ ಸರ್ಕಾರಿ ನೌಕರರ ಸಂಘ

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group