Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಸವನಗುಡಿ ಕಡಲೆಕಾಯಿ ಪರಿಷೆ ಈ ಬಾರಿ ಐದು ದಿನಗಳಿಗೆ  ವಿಸ್ತರಣೆ: ನವೆಂಬರ್‌ 17 ರಿಂದ ಪರಿಷೆ ಆರಂಭ

ಮೊದಲ ಬಾರಿಗೆ 2 ದಿನಗಳ ಪರಿಷೆ 5 ದಿನಗಳಿಗೆ ಹೆಚ್ಚಳ; ಅದ್ದೂರಿ ದೀಪಾಲಂಕಾರ, ಸುಂಕ ವಸೂಲಾತಿ ರದ್ದು ಮುಂದುವರಿಕೆ

by Bengaluru Wire Desk
October 24, 2025
in Bengaluru Focus
Reading Time: 1 min read
0
ಕಡಲೇಕಾಯಿ ಪರಿಷೆ ಸಾಂದರ್ಭಿಕ ಚಿತ್ರ (ಕೃಪೆ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ)

ಕಡಲೇಕಾಯಿ ಪರಿಷೆ ಸಾಂದರ್ಭಿಕ ಚಿತ್ರ (ಕೃಪೆ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ)

ಬೆಂಗಳೂರು, ಅ.24 www.bengaluruwire.com : ಐತಿಹಾಸಿಕ ಪ್ರಸಿದ್ಧ ಮತ್ತು ರಾಜಧಾನಿ ಬೆಂಗಳೂರಿನ ಹೆಮ್ಮೆಯ ‘ಕಡಲೆಕಾಯಿ ಪರಿಷೆ’ ಈ ವರ್ಷ ಅಭೂತಪೂರ್ವ ವಿಸ್ತರಣೆಗೆ ಸಿದ್ಧವಾಗಿದ್ದು, ಕೇವಲ ಎರಡು ದಿನಗಳ ಬದಲಾಗಿ ಬರೋಬ್ಬರಿ ಐದು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. 

ನವೆಂಬರ್‌ 17 ರಿಂದ ಆರಂಭವಾಗಲಿರುವ ಈ ಪರಿಷೆಯನ್ನು ಅದ್ದೂರಿಯಾಗಿ ನೆರವೇರಿಸಲು ಮುಜರಾಯಿ ಇಲಾಖೆ ತೀರ್ಮಾನಿಸಿದ್ದು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಬಾರಿ ಐದು ದಿನಗಳ ಉತ್ಸವ:

ಕಳೆದ ವರ್ಷ (2024) ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿ ಯಶಸ್ವಿಯಾಗಿ ನಡೆದಿದ್ದ ಕಡಲೆಕಾಯಿ ಪರಿಷೆ, ಪ್ಲಾಸ್ಟಿಕ್ ಮುಕ್ತ ಪರಿಷೆಯೆಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಪ್ರಸಕ್ತ ವರ್ಷ ಈ ಪರಿಷೆಯನ್ನು ನವೆಂಬರ್ 17, ಸೋಮವಾರದಿಂದ ಐದು ದಿನಗಳ ಕಾಲ ವಿಸ್ತರಿಸಿ, ಅತ್ಯಂತ ವಿಜೃಂಭಣೆಯಿಂದ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದಲ್ಲಿ ನವೆಂಬರ್ 17ರಂದು ಬೆಳಗ್ಗೆ 10 ಗಂಟೆಗೆ ಬಸವನಗುಡಿಯ ಶ್ರೀ ಬಸವಣ್ಣ ದೇವಾಲಯದಲ್ಲಿ ಪರಿಷೆಗೆ ವಿದ್ಯುಕ್ತ ಚಾಲನೆ ದೊರೆಯಲಿದೆ. ಈ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗುತ್ತದೆ.

21 ಬಸವಗಳ ವಿಶೇಷ ಪೂಜೆ:

ಪರಿಷೆಯು ಈ ಬಾರಿ 21 ಬಸವಗಳನ್ನು ದೇವಸ್ಥಾನಕ್ಕೆ ಕರೆತಂದು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ಪಡೆಯಲಿದ್ದು, ಇದು ಉತ್ಸವಕ್ಕೆ ಮತ್ತಷ್ಟು ಧಾರ್ಮಿಕ ಕಳೆಯನ್ನು ತಂದುಕೊಡಲಿದೆ.

ದೀಪಾಲಂಕಾರ ವಿಸ್ತರಣೆ:

ಉತ್ಸವದ ಪ್ರಮುಖ ಆಕರ್ಷಣೆಯಾದ ದೀಪಾಲಂಕಾರ ವ್ಯವಸ್ಥೆಯನ್ನು ಈ ವರ್ಷ ಮತ್ತಷ್ಟು ವಿಜೃಂಭಣೆಯಿಂದ ಮಾಡಲು ತೀರ್ಮಾನಿಸಲಾಗಿದೆ. ಬುಲ್ ಟೆಂಪಲ್ ರಸ್ತೆ, ಗಾಂಧಿ ಬಜಾರ್ ಮತ್ತು ಎನ್. ಆರ್ ರಸ್ತೆಗಳಿಗೂ ದೀಪಾಲಂಕಾರವನ್ನು ವಿಸ್ತರಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಮುಂದುವರೆದ ಪ್ಲಾಸ್ಟಿಕ್ ಮುಕ್ತ ನಿರ್ಧಾರ :

ಕಳೆದ ವರ್ಷದಂತೆ ಈ ವರ್ಷವೂ ‘ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ’ಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲಾಗಿದೆ. ಎನ್‌ಜಿಒಗಳ ಸಹಕಾರದೊಂದಿಗೆ ‘ಪರಿಷೆಗೆ ಬನ್ನಿ, ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ಅಂಗಡಿಯವರಿಗೆ ಮತ್ತು ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್‌ಗಳ ಬಳಕೆಯ ಬಗ್ಗೆ ಅರಿವು ಮೂಡಿಸಲು ಮತ್ತು ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ.

ಸುಂಕ ವಸೂಲಾತಿ ಶಾಶ್ವತ ರದ್ದು:

ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ವಸೂಲಾತಿ ಕುರಿತು ಪ್ರತಿ ವರ್ಷ ಟೆಂಡರ್ ಮಾಡಲಾಗುತ್ತಿತ್ತು. ಆದರೆ, ಕಳೆದ ವರ್ಷ ಟೆಂಡರ್‌ದಾರರು ಅಂಗಡಿಯವರಿಂದ ಬಲವಂತವಾಗಿ ಹೆಚ್ಚು ಸುಂಕ ವಸೂಲಿ ಮಾಡುತ್ತಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸುಂಕ ವಸೂಲಾತಿ ಟೆಂಡರ್ ಅನ್ನು ಈ ವರ್ಷವೂ ಸಂಪೂರ್ಣ ಕೈಬಿಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ವ್ಯಾಪಾರಸ್ಥರಿಂದ ಸುಂಕ ವಸೂಲಿ ಮಾಡದಂತೆ ಕಳೆದ ವರ್ಷದಂತೆ ಈ ವರ್ಷವೂ ಈ ಕ್ರಮ ಮುಂದುವರಿಯಲಿದೆ ಎಂದು ಸಚಿವರು ವಿವರಿಸಿದ್ದಾರೆ.

ಸಾರ್ವಜನಿಕರಿಗೆ ವಿಶೇಷ ವ್ಯವಸ್ಥೆ:

ಪರಿಷೆ ದಿನಗಳಂದು ಸಾರ್ವಜನಿಕರ ಆರೋಗ್ಯ, ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಒತ್ತು ನೀಡಲು ತೀರ್ಮಾನಿಸಲಾಗಿದ್ದು, ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಗತ್ಯ ಬಂದೋಬಸ್ತ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಅಲ್ಲದೆ, ನಿರಂತರ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯ, ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ತಿ, ಸುರಕ್ಷತೆ ದೃಷ್ಟಿಯಿಂದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಅಗ್ನಿಶಾಮಕ ವಾಹನ, ತುರ್ತು ಚಿಕಿತ್ಸೆ ವಾಹನ ಹಾಗೂ ಮಾರ್ಷಲ್‌ಗಳ ನಿಯೋಜನೆಗೆ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯಲ್ಲಿ ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರುಗಳಾದ ಕೆ.ಎಂ .ನಾಗರಾಜ್, ದ್ವಾರಕಾನಾಥ್, ಜಿಬಿಎನ ಹೆಚ್ಚುವರಿ ಆಯುಕ್ತ ದಿಗ್ವಿಜಯ ಬೋಡ್ಸೆ, ದೊಡ್ಡ ಗಣಪತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಾರ್ವತಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Kurnool bus accident | ಕರ್ನೂಲು ಬಸ್ ದುರಂತ : ಸಜೀವ ದಹನವಾಗುತ್ತಿದ್ದ ಬಸ್‌ ನಲ್ಲಿ ನಿದ್ರೆಯಲ್ಲಿದ್ದ 12 ಪ್ರಯಾಣಿಕರು ಬಲಿ

Next Post

Video News | #Hasanamba | ಹಾಸನಾಂಬ ಜಾತ್ರೆ: ₹25.59 ಕೋಟಿ ಆದಾಯ ಸಂಗ್ರಹ

Next Post

Video News | #Hasanamba | ಹಾಸನಾಂಬ ಜಾತ್ರೆ: ₹25.59 ಕೋಟಿ ಆದಾಯ ಸಂಗ್ರಹ

Video News | ಪ್ರೆಸ್ಟೀಜ್‌ ಗ್ರೂಪ್ ನಿಂದ ಬನ್ನೇರುಘಟ್ಟ ಉದ್ಯಾನವನದ 'ಸಿಂಬಾ', 'ಶೇರು' ಹುಲಿ ಮರಿಗಳ ದತ್ತು: 5 ವರ್ಷಗಳ ಪೋಷಣೆ ಹೊಣೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group