Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು: ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ, ಬಿಎಂಟಿಸಿ ಸಂಚಾರ; ನಗರದೆಲ್ಲೆಡೆ 20 ಸಾವಿರ ಪೊಲೀಸರ ಸರ್ಪಗಾವಲು

ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ರಾತ್ರಿ 10 ಕ್ಕೆ ಬಂದ್ - ಮೇಲ್ಸೇತುವೆಗಳ ಮೇಲೆ ದ್ವಿಚಕ್ರ ವಾಹನ ಸಂಚಾರ ನಿಷೇಧ - ವ್ಹೀಲಿಂಗ್, ಡ್ರಗ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

by Bengaluru Wire Desk
December 29, 2025
in Bengaluru Focus, Public interest
Reading Time: 2 mins read
0

ಬೆಂಗಳೂರು, ಡಿ.29 www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರು 2026ರ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಕಲ ರೀತಿಯಲ್ಲಿ ಸಜ್ಜಾಗಿದೆ. ಡಿ.31ರ ರಾತ್ರಿ ಸಾರ್ವಜನಿಕರ ಅನುಕೂಲಕ್ಕಾಗಿ ‘ನಮ್ಮ ಮೆಟ್ರೋ’ ಹಾಗೂ ಬಿಎಂಟಿಸಿ ಬಸ್ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ನಗರದಾದ್ಯಂತ 20 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿ ಹೈ ಅಲರ್ಟ್ ಘೋಷಿಸಲಾಗಿದೆ.

ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಸಾರಿಗೆ ನಿಗಮಗಳು ವಿಶೇಷ ವ್ಯವಸ್ಥೆ ಕಲ್ಪಿಸಿವೆ.

ಖಾಕಿ ಕಣ್ಗಾವಲು: 50 ಫ್ಲೈ ಓವರ್‌ಗಳ ಮೇಲೆ ಬೈಕ್ ಬ್ಯಾನ್:

ಮೇಲ್ಸೇತುವೆ ಸಾಂದರ್ಭಿಕ ಚಿತ್ರ.

ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಮಹಿಳಾ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. ಭದ್ರತೆಗಾಗಿ ನಗರದಲ್ಲಿ 20,000 ಸಿವಿಲ್ ಪೊಲೀಸರು, ಹೊರ ಜಿಲ್ಲೆಗಳಿಂದ 1200 ಸಿಬ್ಬಂದಿ ಹಾಗೂ ಚೆನ್ನಮ್ಮ ಪಡೆಗಳನ್ನು ನಿಯೋಜಿಸಲಾಗಿದೆ.

ನಗರದ 50 ಫ್ಲೈ ಓವರ್‌ಗಳಲ್ಲಿ ಡಿ.31ರ ರಾತ್ರಿ ದ್ವಿಚಕ್ರ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

 ಮಹಿಳೆಯರ ರಕ್ಷಣೆಗಾಗಿ 164 ಪ್ರತ್ಯೇಕ ಹೆಲ್ಪ್ ಡೆಸ್ಕ್, 4 ಕಂಟ್ರೋಲ್ ರೂಂ, 78 ಕಾವಲು ಗೋಪುರ ಹಾಗೂ 55 ಅಂಬುಲೆನ್ಸ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

 ಕಳೆದ ಮೂರು ದಿನಗಳಲ್ಲಿ ಈಗಾಗಲೇ 3,500 ಡ್ರಿಂಕ್ ಆಂಡ್ ಡ್ರೈವ್ ಪ್ರಕರಣ ದಾಖಲಾಗಿದ್ದು, ಅಂದು ರಾತ್ರಿ ತಪಾಸಣೆ ತೀವ್ರಗೊಳ್ಳಲಿದೆ. ವ್ಹೀಲಿಂಗ್ ಹಾಗೂ ಮಾದಕ ವಸ್ತು ಮಾರಾಟ/ಸೇವನೆ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಸಿದ್ದಾರೆ.

ಮೆಟ್ರೋ ಸಂಚಾರದ ಅವಧಿ ವಿಸ್ತರಣೆ: ಪ್ರಯಾಣಿಕರಿಗೆ ಪ್ರಮುಖ ಸೂಚನೆ 

ಹೊಸ ವರ್ಷದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಜನರಿಗಾಗಿ ನಮ್ಮ ಮೆಟ್ರೋ ಸೇವೆಯನ್ನು ಜನವರಿ 1, 2026ರ ನಸುಕಿನ ಜಾವದವರೆಗೂ ವಿಸ್ತರಿಸಲಾಗಿದೆ. ನೇರಳೆ ಮತ್ತು ಹಸಿರು ಮಾರ್ಗದಲ್ಲಿ ರೈಲುಗಳು ರಾತ್ರಿ 1:45 ರಿಂದ 2:00 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ.

ನಮ್ಮ ಮೆಟ್ರೊ ರೈಲು ರಾತ್ರಿ ವೇಳೆ ಸಂಚರಿಸುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)

 ಕೊನೆಯ ರೈಲು ಸಮಯ: ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ (Majestic) ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಬೆಳಗಿನ ಜಾವ 2:45ಕ್ಕೆ ಹೊರಡಲಿದೆ. ವೈಟ್‌ಫೀಲ್ಡ್‌ನಿಂದ ಚಲ್ಲಘಟ್ಟಕ್ಕೆ 1:45ಕ್ಕೆ, ಚಲ್ಲಘಟ್ಟದಿಂದ ವೈಟ್‌ಫೀಲ್ಡ್‌ಗೆ 2:00 ಗಂಟೆಗೆ ಕೊನೆಯ ರೈಲು ಲಭ್ಯವಿರುತ್ತದೆ. ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ತಲಾ ಬೆಳಗಿನ ಜಾವ 2:00 ಗಂಟೆಗೆ ಕೊನೆಯ ರೈಲುಗಳು ಹೊರಡಲಿವೆ. ಹಳದಿ ಮಾರ್ಗದಲ್ಲಿ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ 3:10 ರವರೆಗೆ ರೈಲು ಲಭ್ಯವಿರಲಿದೆ.

ಎಂ.ಜಿ ರಸ್ತೆ ನಿಲ್ದಾಣ ಬಂದ್: ಎಂ.ಜಿ.ರಸ್ತೆ ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿ ಸೇರುವ ಕಾರಣ, ಸುರಕ್ಷತಾ ದೃಷ್ಟಿಯಿಂದ ಡಿ.31ರ ರಾತ್ರಿ 10 ಗಂಟೆಗೆ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಪ್ರಯಾಣಿಕರು ಪಕ್ಕದ ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ನಿಲ್ದಾಣಗಳನ್ನು ಬಳಸಬೇಕಾಗುತ್ತದೆ.

ಟಿಕೆಟ್ ವ್ಯವಸ್ಥೆ: ರಾತ್ರಿ 11 ಗಂಟೆಯ ನಂತರ ಟಿಕೆಟ್ ಕೌಂಟರ್‌ಗಳಲ್ಲಿ ಟೋಕನ್ ವಿತರಣೆ ಇರುವುದಿಲ್ಲ. ಕ್ಯೂಆರ್ ಟಿಕೆಟ್ ಅಥವಾ ಸ್ಮಾರ್ಟ್ ಕಾರ್ಡ್ ಬಳಸಲು ಸೂಚಿಸಲಾಗಿದೆ.

ಬಿಎಂಟಿಸಿ ನೈಟ್ ಬಸ್ ಸೇವೆ: 70 ಹೆಚ್ಚುವರಿ ಬಸ್‌ಗಳ ಸಂಚಾರ :

ಹೊಸ ವರ್ಷಾಚರಣೆ ಮುಗಿಸಿ ಮನೆಗೆ ತೆರಳುವವರಿಗಾಗಿ ಬಿಎಂಟಿಸಿ ‘ಬಿಗ್ ಕನೆಕ್ಟ್’ ಯೋಜನೆಯಡಿ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಿಂದ ನಗರದ ವಿವಿಧೆಡೆಗೆ ತಡರಾತ್ರಿ 2 ಗಂಟೆಯವರೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

ಸಾಂದರ್ಭಿಕ ಚಿತ್ರ

ಬ್ರಿಗೇಡ್ ರಸ್ತೆಯಿಂದ ಎಲೆಕ್ಟ್ರಾನಿಕ್ಸ್ ಸಿಟಿ (G-3), ಜಿಗಣಿ (G-4), ಕೆಂಗೇರಿ ಹೌಸಿಂಗ್ ಬೋರ್ಡ್ (G-6), ಜನಪ್ರಿಯ ಟೌನ್‌ಶಿಪ್ (G-7), ನೆಲಮಂಗಲ (G-8), ಯಲಹಂಕ ಉಪನಗರ (G-9), ಯಲಹಂಕ (G-10) ಹಾಗೂ ಬಾಗಲೂರು (G-11) ಮಾರ್ಗಗಳಲ್ಲಿ ಬಸ್ಸುಗಳು ಸಂಚರಿಸಲಿವೆ.

ಅಲ್ಲದೆ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಿಂದ ಸರ್ಜಾಪುರಕ್ಕೆ (G-2) ಹಾಗೂ ಇತರೆಡೆಗಳಿಂದ ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿ, ಜೀವನ್ ಭೀಮಾನಗರ, ಸಿಲ್ಕ್ ಬೋರ್ಡ್ ಮತ್ತು ಕೋರಮಂಗಲ ಕಡೆಗೆ ಒಟ್ಟು 70 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಲಾಗುತ್ತದೆ. ಮೆಜೆಸ್ಟಿಕ್, ಶಾಂತಿನಗರ ಸೇರಿದಂತೆ ಪ್ರಮುಖ ನಿಲ್ದಾಣಗಳಿಂದಲೂ ಬೇಡಿಕೆಗೆ ಅನುಗುಣವಾಗಿ ಬಸ್ ವ್ಯವಸ್ಥೆ ಇರಲಿದೆ. (Main Image Courtesy : Gemini AI)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜ್ಯದಲ್ಲಿ ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಎಸಿಎಸ್ ಗೌರವ್ ಗುಪ್ತ

Next Post

ಬಾಂಗ್ಲಾದೇಶದ ‘ಉಕ್ಕಿನ ಮಹಿಳೆ’ ಖಾಲಿದಾ ಜಿಯಾ ಇನ್ನಿಲ್ಲ; 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿ

Next Post

ಬಾಂಗ್ಲಾದೇಶದ 'ಉಕ್ಕಿನ ಮಹಿಳೆ' ಖಾಲಿದಾ ಜಿಯಾ ಇನ್ನಿಲ್ಲ; 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿ

Vaikunta Ekadashi | ವೈಕುಂಠ ಏಕಾದಶಿ ವೈಭವ: ತಿರುಮಲದಲ್ಲಿ ಸ್ವರ್ಗದ ಬಾಗಿಲು ತೆರೆದ ಕ್ಷಣ; ಗೋವಿಂದ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತಸಾಗರ

Please login to join discussion

Like Us on Facebook

Follow Us on Twitter

Recent News

BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

September 11, 2026

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

September 11, 2026

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d