Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಎಸಿಎಸ್ ಗೌರವ್ ಗುಪ್ತ

ಕೆಪಿಟಿಸಿಎಲ್ ಇಂಜಿನಿಯರುಗಳ ಸಂಘದ ದಿನಚರಿ, ಕ್ಯಾಲೆಂಡರ್ ಬಿಡುಗಡೆ | ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯತ್ತ ಕರ್ನಾಟಕ ಹೆಜ್ಜೆ

by Bengaluru Wire Desk
December 29, 2025
in News Wire
Reading Time: 1 min read
0

ಬೆಂಗಳೂರು, ಡಿ.29 www.bengaluruwire.com : ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಇಂಧನ ಇಲಾಖೆ ಇಂಜಿನಿಯರುಗಳಿಗೆ ಕರೆ ನೀಡಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರುಗಳ ಸಂಘದ ವತಿಯಿಂದ ಸೋಮವಾರ ಸರ್ ಎಂ.ವಿ. ಸಭಾಂಗಣದಲ್ಲಿ ಆಯೋಜಿಸಿದ್ದ ಸಂಘದ ಸುವರ್ಣ ಮಹೋತ್ಸವ ಸಂಸ್ಮರಣಾ ಉಪನ್ಯಾಸ, 2026ರ ತಾಂತ್ರಿಕ ದಿನಚರಿ ಬಿಡುಗಡೆ ಹಾಗೂ ನಿವೃತ್ತ ಇಂಜಿನಿಯರುಗಳ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಕೋವಿಡ್ ಬಳಿಕ ವಿದ್ಯುತ್ ಬೇಡಿಕೆ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾದಾಗ ಅಗತ್ಯ ವಿದ್ಯುತ್ ಪೂರೈಸಲು ನಮ್ಮಲ್ಲಿ ಯೋಜನೆಗಳಿರಲಿಲ್ಲ. ರಾಜ್ಯ ಸರ್ಕಾರ ಹೆಚ್ಚುವರಿ ವಿದ್ಯುತ್ ಉತ್ಪಾದನೆಗೆ ತ್ವರಿತ ಕ್ರಮ ಕೈಗೊಂಡ ಪರಿಣಾಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ತ್ವರಿತಗೊಂಡು ರಾಜ್ಯವು ವಿದ್ಯುತ್ ಸ್ವಾವಲಂಬನೆಯತ್ತ ಹೆಜ್ಜೆ ಹಾಕಿದೆ.”

“ಇನ್ನು ಯಾವುದೇ ಅಡಚಣೆಯಿಲ್ಲದಂತೆ ಗ್ರಾಹಕರಿಗೆ ವಿದ್ಯುತ್‌ ಪೂರೈಸುವತ್ತ ಗಮನ ಹರಿಸಬೇಕು. ಅದಕ್ಕೆ ಬೇಕಾದ ಮೂಲ ಸೌಕರ್ಯಗಳನ್ನು ಹೆಚ್ಚಿಸಿಕೊಳ್ಳುವತ್ತ ಸರ್ಕಾರ ಹೆಜ್ಜೆ ಇಟ್ಟಿದ್ದು, ಇದಕ್ಕೆ ಇಂಜಿನಿಯರುಗಳು ಸಹಕರಿಸಬೇಕು,” ಎಂದರು.

ಇಂಧನ ಇಲಾಖೆಯ ಇಂಜಿನಿಯರುಗಳ ಹಲವು ಬೇಡಿಕೆಗಳ ಕುರಿತು ಪ್ರತಿಕ್ರಿಯಿಸಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು, “ಈ ಬಗ್ಗೆ ಮುಂದಿನ ಸಭೆಗಳಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಇಂಜಿನಿಯರುಗಳ ಬೇಡಿಕೆಗಳನ್ನು ಈಡೇರಿಸಿ ಇಲಾಖೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸರ್ಕಾರ ಬದ್ಧವಾಗಿದೆ,” ಎಂದು ಹೇಳಿದರು.

ವಿದ್ಯುತ್ ಅವಘಡಗಳನ್ನು ಶೂನ್ಯಕ್ಕೆ ಇಳಿಸಿ :

ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿದ ಸೆಸ್ಕ್ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, “ಪ್ರಸ್ತುತ ವಿದ್ಯುತ್ ಉತ್ಪಾದನೆ, ಪೂರೈಕೆಯಲ್ಲಿ ನಾವು ಯಶಸ್ಸು ಸಾಧಿಸುತ್ತಿದ್ದೇವೆ. ಇದರ ಜತೆಗೆ ವಿದ್ಯುತ್ ಸಾಗಣೆ ಮತ್ತು ಪೂರೈಕೆಯಲ್ಲಿ ಆಗುತ್ತಿರುವ ನಷ್ಟವನ್ನು ಇನ್ನಷ್ಟು ಕಡಿಮೆ ಮಾಡಬೇಕು. ಅಲ್ಲದೆ, ವಿದ್ಯುತ್ ಅವಘಡಗಳನ್ನು ಶೂನ್ಯಕ್ಕೆ ತರುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು,” ಎಂದು ಅಧಿಕಾರಿಗಳಿಗೆ ಸಲಹೆ ಮಾಡಿದರು.

ಇಸ್ರೋನ ಯು.ಆರ್. ರಾವ್ ಉಪಗ್ರಹ ಕೇಂದ್ರದ ವಿಜ್ಞಾನಿ ರಾಮನಗೌಡ ವಿ. ನಾಡಗೌಡ ಅವರು ಸಂಘದ ಸುವರ್ಣ ಮಹೋತ್ಸವ ಸಂಸ್ಮರಣಾ ಉಪನ್ಯಾಸ ನೀಡಿದರು. 

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶಂಕರ ಎನ್., ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ್ ರಾಜು, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ. ರಮೇಶ್, ಬೆಸ್ಕಾಂ ಹಣಕಾಸು ನಿರ್ದೇಶಕ ಮಹಾದೇವ, ಹೆಸ್ಕಾಂ ತಾಂತ್ರಿಕ ನಿರ್ದೇಶಕ ಎಸ್‌. ಜಗದೀಶ್, ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್, ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ.ದಿವಾಕರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಇಂಜಿನಿಯರುಗಳ ಸಂಘದ ಪದಾಧಿಕಾರಿಗಳು ಇದ್ದರು. ಕೆಪಿಟಿಸಿಎಲ್ ಇಂಜಿನಿಯರುಗಳ ಸಂಘದ ಅಧ್ಯಕ್ಷ ಬಸವಣ್ಣ ಸಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

WhatsApp Join our WhatsApp Channel
Previous Post

Defence News | ವಾಯುಪಡೆಗೆ ಐಐಟಿ ಮದ್ರಾಸ್ ತಂತ್ರಜ್ಞಾನ ಬಲ: ಸುರಕ್ಷಿತ ಡಿಜಿಟಲ್ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಒಪ್ಪಂದ

Next Post

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು: ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ, ಬಿಎಂಟಿಸಿ ಸಂಚಾರ; ನಗರದೆಲ್ಲೆಡೆ 20 ಸಾವಿರ ಪೊಲೀಸರ ಸರ್ಪಗಾವಲು

ಬಾಂಗ್ಲಾದೇಶದ 'ಉಕ್ಕಿನ ಮಹಿಳೆ' ಖಾಲಿದಾ ಜಿಯಾ ಇನ್ನಿಲ್ಲ; 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

June 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

June 11, 2026

ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

June 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group