Thursday, September 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸೂರ್ಯನಗರ 4ನೇ ಹಂತ: ‘ಸಾಂಕೇತಿಕ ಪತ್ರ’ವಿಟ್ಟುಕೊಂಡು ಸೈಟ್ ಡೀಲ್; ಸಾರ್ವಜನಿಕರಿಗೆ ಕೆಎಚ್‌ಬಿ ಖಡಕ್ ಎಚ್ಚರಿಕೆ

ನಕಲಿ ದಾಖಲೆ ಸೃಷ್ಟಿ, ಕಾನೂನು ಬಾಹಿರ ಒಪ್ಪಂದ; 50:50 ಅನುಪಾತದಡಿ ಭೂಮಿ ನೀಡಿದವರಿಂದ ವಂಚನೆ ಸಾಧ್ಯತೆ, ಮೋಸ ಹೋದರೆ ಮಂಡಳಿ ಹೊಣೆಯಲ್ಲ.

by Bengaluru Wire Desk
December 31, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಡಿ.31 www.bengaluruwire.com : ಸ್ವಂತ ಸೂರು ಅಥವಾ ನಿವೇಶನ ಹೊಂದುವ ಕನಸು ಕಾಣುತ್ತಿರುವವರೇ ಎಚ್ಚರ. 

ಕರ್ನಾಟಕ ಗೃಹ ಮಂಡಳಿ (KHB) ಅಭಿವೃದ್ಧಿಪಡಿಸುತ್ತಿರುವ ಪ್ರತಿಷ್ಠಿತ ‘ಸೂರ್ಯನಗರ 4ನೇ ಹಂತ’ದ ಯೋಜನೆಯಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿ ವಂಚಿಸುವ ಜಾಲವೊಂದು ಸಕ್ರಿಯವಾಗಿದ್ದು, ಈ ಬಗ್ಗೆ ಸ್ವತಃ ಗೃಹ ಮಂಡಳಿಯೇ ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಗೃಹ ಮಂಡಳಿಯು ಜಂಟಿ ಸಹಭಾಗಿತ್ವದಲ್ಲಿ (50:50 ಅನುಪಾತ) ಅಭಿವೃದ್ಧಿ ಪಡಿಸುತ್ತಿರುವ ಸೂರ್ಯನಗರ 4ನೇ ಹಂತದ ಯೋಜನೆಯಲ್ಲಿ, ಭೂಮಿ ನೀಡಿದ ಮಾಲೀಕರಿಗೆ ನೀಡಲಾಗಿರುವ ‘ಸಾಂಕೇತಿಕ ನಿವೇಶನ ಆಯ್ಕೆ ಪತ್ರ’ವನ್ನೇ (Symbolic Site Selection Letter) ಮುಂದಿಟ್ಟುಕೊಂಡು ಅಕ್ರಮವಾಗಿ ಸೈಟ್ ಮಾರಾಟ ಮತ್ತು ಕರಾರು ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಏನಿದು ಪ್ರಕರಣ? :

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ, ಕಾಡುಜಕ್ಕನಹಳ್ಳಿ ಹಾಗೂ ಬಗ್ಗನದೊಡ್ಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಟ್ಟು 1,498 ಎಕರೆ 39 ಗುಂಟೆ ವಿಸ್ತೀರ್ಣದಲ್ಲಿ ಸೂರ್ಯನಗರ 4ನೇ ಹಂತದ ವಸತಿ ಬಡಾವಣೆ ನಿರ್ಮಾಣವಾಗುತ್ತಿದೆ. ನಿಯಮದ ಪ್ರಕಾರ ಭೂಮಿ ನೀಡಿದ ರೈತರು/ಮಾಲೀಕರಿಗೆ ಅಭಿವೃದ್ಧಿಪಡಿಸಿದ ನಿವೇಶನಗಳಲ್ಲಿ ಪಾಲು ನೀಡಲಾಗುತ್ತದೆ. ಪ್ರಸ್ತುತ ಕಾಮಗಾರಿ ಪ್ರಗತಿಯಲ್ಲಿದ್ದು, ಭೂಮಾಲೀಕರಿಗೆ ಅವರ ಪಾಲಿನ ನಿವೇಶನಗಳನ್ನು ಆಯ್ಕೆ ಮಾಡಿಕೊಳ್ಳಲು ಕೇವಲ ‘ಸಾಂಕೇತಿಕ ಪತ್ರ’ವನ್ನು ಮಾತ್ರ ನೀಡಲಾಗಿದೆ.

ಆದರೆ, ಇದನ್ನೇ ಬಂಡವಾಳವಾಗಿಸಿಕೊಂಡಿರುವ ಕೆಲ ಭೂಮಾಲೀಕರು ಮತ್ತು ಮಧ್ಯವರ್ತಿಗಳು, ಇದೇ ಅಂತಿಮ ದಾಖಲೆ ಎಂದು ಬಿಂಬಿಸಿ ಸಾರ್ವಜನಿಕರೊಂದಿಗೆ ನಿವೇಶನ ಮಾರಾಟದ ಕರಾರು ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಆಘಾತಕಾರಿ ವಿಷಯವೆಂದರೆ, ಕೆಲವರು ಈ ‘ಸಾಂಕೇತಿಕ ಆಯ್ಕೆ ಪತ್ರ’ವನ್ನೇ ನಕಲು (Forgery) ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಅಮಾಯಕರಿಗೆ ಟೋಪಿ ಹಾಕುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿದೆ.

ಖರೀದಿದಾರರಿಗೆ ಎಚ್ಚರಿಕೆ ಏನು? :

ಈ ಬಗ್ಗೆ ಡಿಸೆಂಬರ್ 31 ರಂದು ಕಟ್ಟುನಿಟ್ಟಿನ ಪ್ರಕಟಣೆ ಹೊರಡಿಸಿರುವ ಕೆಎಚ್‌ಬಿ ಆಯುಕ್ತರು, “ಸಾಂಕೇತಿಕ ನಿವೇಶನ ಆಯ್ಕೆ ಪತ್ರವು ಕೇವಲ ನಿವೇಶನವನ್ನು ಕಾಯ್ದಿರಿಸುವ (Reserved) ದಾಖಲೆಯೇ ಹೊರತು, ಅದು ಹಕ್ಕುಪತ್ರವಲ್ಲ. ಇದನ್ನು ಇಟ್ಟುಕೊಂಡು ನಿವೇಶನವನ್ನು ಪರಭಾರೆ ಮಾಡಲು ಅಥವಾ ಮಾರಾಟ ಮಾಡಲು ಬರುವುದಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

ಯಾವಾಗ ಖರೀದಿಸಬೇಕು?:

ಭೂಮಾಲೀಕರ ಹೆಸರಿಗೆ ಅಧಿಕೃತವಾಗಿ ‘ಹಂಚಿಕೆ ಪತ್ರ’ (Allotment Letter) ನೀಡಿ, ನಂತರ ಇ-ಖಾತಾ (E-Khata) ನೋಂದಣಿಯಾದ ಬಳಿಕವಷ್ಟೇ ಆ ನಿವೇಶನಗಳನ್ನು ಖರೀದಿಸುವುದು ಸುರಕ್ಷಿತ ಮತ್ತು ಕಾನೂನುಬದ್ಧವಾಗಿರುತ್ತದೆ. ಅಲ್ಲಿಯವರೆಗೂ ಯಾವುದೇ ರೀತಿಯ ವ್ಯವಾಹಾರ ನಡೆಸಿ ಮೋಸ ಹೋದರೆ ಅದಕ್ಕೆ ಗೃಹ ಮಂಡಳಿ ಜವಾಬ್ದಾರಿಯಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ಸೂರ್ಯನಗರ 4ನೇ ಹಂತದಲ್ಲಿ ಸೈಟ್ ಖರೀದಿಸುವ ಮುನ್ನ ದಾಖಲೆಗಳ ನೈಜತೆಯನ್ನು ಪರಿಶೀಲಿಸುವುದು ಅತ್ಯಗತ್ಯ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪತ್ರಕರ್ತರ ನಿಯೋಗ

Next Post

ಕಂದಾಯ ನ್ಯಾಯಾಲಯಗಳ ಕಲಾಪ ಇನ್ಮುಂದೆ ‘ಲೈವ್’: ಅಲೆದಾಟ ತಪ್ಪಿಸಲು ಆನ್‌ಲೈನ್ ವಿಚಾರಣೆ ವ್ಯವಸ್ಥೆ ಜಾರಿ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಕಂದಾಯ ನ್ಯಾಯಾಲಯಗಳ ಕಲಾಪ ಇನ್ಮುಂದೆ 'ಲೈವ್': ಅಲೆದಾಟ ತಪ್ಪಿಸಲು ಆನ್‌ಲೈನ್ ವಿಚಾರಣೆ ವ್ಯವಸ್ಥೆ ಜಾರಿ

BIG BREAKING | ಗೋವಾ: 25 ಜನರ ಬಲಿಪಡೆದ ಅರ್ಪೋರಾ ಅಗ್ನಿ ದುರಂತ; ಪಂಚಾಯತ್ ಕಾರ್ಯದರ್ಶಿ ರಘುವೀರ್ ಬಾಗ್ಕರ್ ಸೇವೆಯಿಂದ ವಜಾ

Please login to join discussion

Like Us on Facebook

Follow Us on Twitter

Recent News

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026

Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

September 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d