Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬಳ್ಳಾರಿ ಗುಂಡಿನ ದಾಳಿ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR; ಕಾಂಗ್ರೆಸ್ ಕಾರ್ಯಕರ್ತ ಸಾವು, ಶಸ್ತ್ರಾಸ್ತ್ರ ಜಪ್ತಿ

ವಾಲ್ಮೀಕಿ ಪ್ರತಿಮೆ ಅನಾವರಣದ ಬ್ಯಾನರ್ ವಿಚಾರವಾಗಿ ಗುರುವಾರ ಸಂಜೆ ನಡೆದ ಹೈಡ್ರಾಮಾ

by Bengaluru Wire Desk
January 2, 2026
in News Wire, Public interest
Reading Time: 1 min read
0

ಬಳ್ಳಾರಿ, ಜ.02 www.bengaluruwire.com : ಗಣಿನಾಡು ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಅನಾವರಣದ ಬ್ಯಾನರ್ ವಿಚಾರವಾಗಿ ಗುರುವಾರ ಸಂಜೆ ನಡೆದ ಹೈಡ್ರಾಮಾ ಹಾಗೂ ಗುಂಡಿನ ದಾಳಿ (Bellary Firing Case) ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 

ಈ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಒಟ್ಟು 11 ಪ್ರಮುಖ ನಾಯಕರ ವಿರುದ್ಧ ದೂರು ದಾಖಲಾಗಿದೆ.

ಏನಿದು ಘಟನೆ?:

ನಗರದ ಎಸ್‌ಪಿ ವೃತ್ತದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗಿದ್ದವು. ನಗರ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy) ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಜನವರಿ 1ರಂದು ಗುರುವಾರ ಸಂಜೆ ಸಿರುಗುಪ್ಪ ರಸ್ತೆಯಲ್ಲಿರುವ ಜನಾರ್ದನ ರೆಡ್ಡಿ ನಿವಾಸದ ಬಳಿ ಅಳವಡಿಸಿದ್ದ ಬ್ಯಾನರ್‌ಗಳನ್ನು ಹರಿದು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಉಂಟಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಗುಂಡಿನ ದಾಳಿ ನಡೆದಿದೆ.

ಜನಾರ್ಧನ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವುದು (ಎಡಚಿತ್ರ). ಪೊಲೀಸರು ದೊಂಬಿ ನಿಯಂತ್ರಿಸುತ್ತಿರುವ ದೃಶ್ಯ (ಬಲ ಚಿತ್ರ).

11 ಜನರ ವಿರುದ್ಧ ಎಫ್‌ಐಆರ್ ದಾಖಲು :

ಗುಂಡಿನ ದಾಳಿಯಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಹುಸೇನ್ ನಗರದ ರಾಜಶೇಖರ್ (28) ಮೃತಪಟ್ಟಿದ್ದಾರೆ. ಈ ಸಂಬಂಧ ಮೃತ ರಾಜಶೇಖರ್ ಕಡೆಯವರಾದ ಚಾನಾಳ್ ಶೇಖರ್ ಅವರು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನನ್ವಯ ಪೊಲೀಸರು ಈ ಕೆಳಗಿನ ಪ್ರಮುಖರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ:

 * ಜಿ. ಜನಾರ್ದನ ರೆಡ್ಡಿ (ಗಂಗಾವತಿ ಶಾಸಕ)

 * ಜಿ. ಸೋಮಶೇಖರ ರೆಡ್ಡಿ (ಮಾಜಿ ಶಾಸಕ)

 * ಬಿ. ಶ್ರೀರಾಮುಲು (ಮಾಜಿ ಸಚಿವ)

 * ಮೋತ್ಕರ್ ಶ್ರೀನಿವಾಸ್ (ಪಾಲಿಕೆ ಸದಸ್ಯ)

 * ಅಲಿಖಾನ್ (ಜನಾರ್ದನ ರೆಡ್ಡಿ ಆಪ್ತ)

 * ಪ್ರಕಾಶ್ ರೆಡ್ಡಿ

 * ರಮಣ, ಪಾಲಣ್ಣ, ದಿವಾಕರ್, ಮಾರುತಿ ಪ್ರಸಾದ್ (ಬುಡಾ ಮಾಜಿ ಅಧ್ಯಕ್ಷ) ಹಾಗೂ ದಮ್ಮೂರು ಶೇಖರ್.

ಬಂದೂಕುಗಳು ಸೀಜ್: ಯಾರ ಗುಂಡು ರಾಜಶೇಖರ್ ಪ್ರಾಣ ತೆಗೆಯಿತು?:

ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಘಟನಾ ಸ್ಥಳದಲ್ಲಿ ನಡೆದ ಫೈರಿಂಗ್‌ಗೆ ಯಾರ ಬಂದೂಕು ಕಾರಣ ಎಂಬುದು ಇನ್ನೂ ನಿಗೂಢವಾಗಿದೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ ರೆಡ್ಡಿ ಹಾಗೂ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಸೇರಿದ ಲೈಸೆನ್ಸ್ಡ್ ಬಂದೂಕುಗಳನ್ನು (Guns Seized) ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಬಂದೂಕುಗಳನ್ನು ಬಳ್ಳಾರಿಯ ಡಿಎಆರ್ ಶಸ್ತ್ರಗಾರಕ್ಕೆ ರವಾನಿಸಲಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿಗಾಗಿ ಕಾಯಲಾಗುತ್ತಿದೆ.

ಹಲ್ಲೆ ಮತ್ತು ಪ್ರಕ್ಷುಬ್ಧ ವಾತಾವರಣ :

ಘಟನೆಯಲ್ಲಿ ಕೇವಲ ಗುಂಡಿನ ದಾಳಿ ಮಾತ್ರವಲ್ಲದೆ, ಮಾರಣಾಂತಿಕ ಹಲ್ಲೆ ನಡೆದಿದೆ ಎಂದೂ ಆರೋಪಿಸಲಾಗಿದೆ. ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿ ಶ್ರೀನಿವಾಸ್ ಅವರಿಗೂ ಗಾಯಗಳಾಗಿವೆ. ಮೃತ ರಾಜಶೇಖರ್ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆ ನಿರ್ದೇಶಕ ಡಾ.ಗಂಗಾಧರ್ ಗೌಡ ನೇತೃತ್ವದಲ್ಲಿ ಸಿದ್ಧತೆ ನಡೆದಿದ್ದು, ಎಫ್‌ಎಸ್‌ಎಲ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ. ನಗರದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇಂದು ಮೃತ ರಾಜಶೇಖರ ಕುಟುಂಬಕ್ಕೆ ಶಾಸಕ ಭರತರೆಡ್ಡಿ ಸ್ವಾಂತನ ಹೇಳಲಿದ್ದಾರೆ. ಘಟನೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಭರತರೆಡ್ಡಿ ಈಗಾಗಲೇ ಪ್ರಕರಣ ದಾಖಲಿಸಿದ್ದರೂ,  ಜನಾರ್ದನ ರೆಡ್ಡಿ ಯಾವುದೇ ದೂರು ನೀಡಲು ಮುಂದಾಗಿಲ್ಲ. ಪ್ರಕರಣದ ಬೆಳವಣಿಯಲ್ಲಿ ಕಾದು ನೋಡುವ ತಂತ್ರ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ: ಜನರ ಕೆಲಸ ವಿಳಂಬ ಮಾಡಬೇಡಿ, ಮಾನವೀಯತೆಯಿಂದ ಸ್ಪಂದಿಸಿ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Next Post

ಹೊಸ ವರ್ಷ-2026ರ ಮುನ್ನ 3 ದಿನದಲ್ಲಿ 746 ಕೋಟಿ ಭರ್ಜರಿ ಲಿಕ್ಕರ್ ಮಾರಾಟ : ಡಿಸೆಂಬರ್ ತಿಂಗಳಲ್ಲಿ 3,693 ಕೋಟಿ ರೂ. ಅಬಕಾರಿ ಆದಾಯ

Next Post
ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಹೊಸ ವರ್ಷ-2026ರ ಮುನ್ನ 3 ದಿನದಲ್ಲಿ 746 ಕೋಟಿ ಭರ್ಜರಿ ಲಿಕ್ಕರ್ ಮಾರಾಟ : ಡಿಸೆಂಬರ್ ತಿಂಗಳಲ್ಲಿ 3,693 ಕೋಟಿ ರೂ. ಅಬಕಾರಿ ಆದಾಯ

ಬಂಡೀಪುರ, ನಾಗರಹೊಳೆ ಸಫಾರಿ ಹಂತ ಹಂತವಾಗಿ ಪುನರಾರಂಭ; ವನ್ಯಜೀವಿ ಸಂಘರ್ಷ ಅಧ್ಯಯನಕ್ಕೆ ತಜ್ಞರ ಸಮಿತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d