Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆಂಗೇರಿಯಲ್ಲಿಂದು ವಿಶಿಷ್ಟ ‘ಇಡ್ಲಿ ಹಬ್ಬ’: ಏಕ ಬಿಲ್ವ ಬಂಡೇಮಠದಲ್ಲಿ ಬಂಡೇಶ್ವರ ಸ್ವಾಮಿ ಆರಿದ್ರೋತ್ಸವ ಸಂಭ್ರಮ

ಭಕ್ತರಿಗೆ ಬಿಸಿ ಬಿಸಿ ಇಡ್ಲಿಯೇ ಪ್ರಸಾದ; ಜಾತಿ-ಮತ ಮೀರಿ ಒಂದಾಗುವ ಸೌಹಾರ್ದತೆಯ ಸಂಗಮ

by Bengaluru Wire Desk
January 3, 2026
in Bengaluru Focus
Reading Time: 1 min read
0

ಬೆಂಗಳೂರು, ಜ.03 www.bengaluruwire.com : ನಗರದ ಕೆಂಗೇರಿ ಉಪನಗರದ ಐತಿಹಾಸಿಕ ಏಕ ಬಿಲ್ವ ಬಂಡೇಮಠದಲ್ಲಿ ಇಂದು (ಜ.03) ‘ಇಡ್ಲಿ ಹಬ್ಬ’ ಎಂದೇ ಖ್ಯಾತಿ ಪಡೆದಿರುವ ಬಂಡೇಶ್ವರ ಸ್ವಾಮಿಯ ಆರಿದ್ರೋತ್ಸವವು ಸಡಗರ ಸಂಭ್ರಮದಿಂದ ಆರಂಭವಾಗಿದೆ.

ಶತಮಾನಗಳ ಇತಿಹಾಸವಿರುವ ಈ ಜಾತ್ರಾ ಮಹೋತ್ಸವಕ್ಕೆ ಮಠವು ಸರ್ವ ಸನ್ನದ್ಧವಾಗಿದ್ದು, ಸಂಜೆ ನಡೆಯಲಿರುವ ವಿಜೃಂಭಣೆಯ ಉತ್ಸವದಲ್ಲಿ ಪಾಲ್ಗೊಳ್ಳಲು ಭಕ್ತಸಾಗರವೇ ಹರಿದು ಬರುತ್ತಿದೆ. ಬಂದ ಭಕ್ತರಿಗೆ ಇಡ್ಲಿ ಪ್ರಸಾದದ ವಿತರಣೆಯೂ ನಡೆಯುತ್ತಿದೆ.

ಪೌರಾಣಿಕ ಹಿನ್ನೆಲೆ ಏನು?:

ಋಷಿ ಮುನಿಗಳಿಗೆ ಹಾಗೂ ದೇವತೆಗಳಿಗೆ ಕಂಟಕಪ್ರಾಯನಾಗಿದ್ದ ಅಂಧಕಾಸುರನನ್ನು ಶಿವನು ಸಂಹರಿಸುತ್ತಾನೆ. ಈ ಸಂದರ್ಭದಲ್ಲಿ ಶಿವನ ಉಗ್ರ ಕೋಪವನ್ನು ತಣಿಸಲು ಆರಿದ್ರ ದರ್ಶನ ಮಾಡಿಸಲಾಗುತ್ತದೆ. ಈ ಪೌರಾಣಿಕ ಐತಿಹ್ಯದ ಸ್ಮರಣಾರ್ಥವಾಗಿ ಶತಮಾನಗಳಿಂದಲೂ ಇಲ್ಲಿ ಆರಿದ್ರೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಇಂದು ಬಹುತೇಕ ಎಲ್ಲಾ ಶಿವಾಲಯಗಳಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಬಂಡೇಮಠದ ಬಂಡೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಲಿದೆ.

ವಿಶಿಷ್ಟ ಪ್ರಸಾದ: ಇಡ್ಲಿ ಹಬ್ಬ:

ಈ ಉತ್ಸವದ ಪ್ರಮುಖ ಆಕರ್ಷಣೆಯೇ ‘ಇಡ್ಲಿ ಪ್ರಸಾದ’. ಬೆಂಗಳೂರಿನ ನಾನಾ ಮೂಲೆಗಳಿಂದ ಆಗಮಿಸುವ ಸಹಸ್ರಾರು ಭಕ್ತರಿಗೆ ಬಿಸಿ ಬಿಸಿ ಇಡ್ಲಿಯನ್ನು ಪ್ರಸಾದವಾಗಿ ವಿತರಿಸಲಾಗುತ್ತದೆ. ಈ ಕಾರಣಕ್ಕಾಗಿಯೇ ಈ ಉತ್ಸವವು ಜನಮಾನಸದಲ್ಲಿ ‘ಇಡ್ಲಿ ಹಬ್ಬ’ ಎಂದೇ ಜನಪ್ರಿಯವಾಗಿದೆ. ಉತ್ಸವದ ಪ್ರಯುಕ್ತ ದೇವಾಲಯವನ್ನು ಹೂ ಮತ್ತು ದೀಪಗಳಿಂದ ಸುಂದರವಾಗಿ ಅಲಂಕರಿಸಲಾಗಿದೆ.

ಸೌಹಾರ್ದತೆಯ ಸಂಕೇತ:

ಕೆಂಗೇರಿ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ಆರಿದ್ರೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಒಂದು ಊರ ಹಬ್ಬವಾಗಿ ಆಚರಿಸಲ್ಪಡುತ್ತದೆ. ಲಿಂಗಾಯತ ಸಮುದಾಯದೊಡಗೂಡಿ ಎಲ್ಲಾ ಧರ್ಮ ಮತ್ತು ಜಾತಿಯ ಜನರು ಒಂದಾಗಿ ಈ ಹಬ್ಬವನ್ನು ಆಚರಿಸುವುದು ಇಲ್ಲಿನ ವಿಶೇಷತೆಯಾಗಿದೆ.

ರಥೋತ್ಸವದ ಮೆರುಗು:

ಇಂದು ಸಂಜೆ ಮೂರು ಗಂಟೆಯ ನಂತರ ಮೂಲ ದೇವರು ಬಂಡೇಶ್ವರ ಸ್ವಾಮಿಗೆ ಮಹಾಪೂಜೆ ನಡೆಯಲಿದ್ದು, ತದನಂತರ ಕೆಂಗೇರಿಯವರೆಗೆ ಅದ್ಧೂರಿ ರಥೋತ್ಸವ ಸಾಗಲಿದೆ. ರಥ ಸಾಗುವ ಬೀದಿಗಳನ್ನು ಸ್ಥಳೀಯ ನಿವಾಸಿಗಳು ಸ್ವಯಂಪ್ರೇರಿತರಾಗಿ ಶುಚಿಗೊಳಿಸಿ, ರಂಗೋಲಿ ಹಾಕಿ ಸ್ವಾಗತಿಸುವುದು ಹಬ್ಬದ ಕಳೆಯನ್ನು ಹೆಚ್ಚಿಸಲಿದೆ.

“ಬಂಡೇಮಠಕ್ಕೆ ಶತಮಾನಗಳ ಇತಿಹಾಸವಿದ್ದು, ಭಕ್ತರ ಸಹಕಾರದೊಂದಿಗೆ ಆರಿದ್ರೋತ್ಸವವು ಸಾಂಗವಾಗಿ ನಡೆದುಕೊಂಡು ಬರುತ್ತಿದೆ. ವಿವಿಧ ಧರ್ಮೀಯರು ಹಾಗೂ ಜನಾಂಗದವರು ಭೇದ-ಭಾವ ಮರೆತು ಈ ಉತ್ಸವದಲ್ಲಿ ಭಾಗಿಯಾಗುವುದು ಇಲ್ಲಿನ ಸಾಮರಸ್ಯಕ್ಕೆ ಸಾಕ್ಷಿ,” ಎಂದು ಏಕ ಬಿಲ್ವ ಬಂಡೇಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಜಾತಿ, ಮತವನ್ನು ಮೀರಿದ ಧಾರ್ಮಿಕ ಆಚರಣೆಯಾಗಿ, ಮನುಷ್ಯರ ಬಾಂಧವ್ಯ ವೃದ್ಧಿಗೆ ಈ ‘ಇಡ್ಲಿ ಹಬ್ಬ’ ವೇದಿಕೆಯಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

WhatsApp Join our WhatsApp Channel
Previous Post

ಬೆಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್: 6 ವರ್ಷಗಳ ನಂತರ ಕಾಮರಾಜ್ ರಸ್ತೆ ಸಂಚಾರಕ್ಕೆ ಸಂಪೂರ್ಣ ಮುಕ್ತ

Next Post

ಹಳ್ಳಿಗಳ ಅಧಿಕಾರ ಕಸಿದ ಮೋದಿ ಸರ್ಕಾರ: ನರೇಗಾ ರದ್ದು ಮಾಡಿ ಬಡವರ ಹೊಟ್ಟೆಗೆ ಹೊಡೆದ ಕೇಂದ್ರ- ಸಿಎಂ ಸಿದ್ದರಾಮಯ್ಯ

Next Post

ಹಳ್ಳಿಗಳ ಅಧಿಕಾರ ಕಸಿದ ಮೋದಿ ಸರ್ಕಾರ: ನರೇಗಾ ರದ್ದು ಮಾಡಿ ಬಡವರ ಹೊಟ್ಟೆಗೆ ಹೊಡೆದ ಕೇಂದ್ರ- ಸಿಎಂ ಸಿದ್ದರಾಮಯ್ಯ

ಎಐ ಕಣ್ಗಾವಲಿನಲ್ಲಿ ಬೆಂಗಳೂರು ಹೊಸ ವರ್ಷಾಚರಣೆ ಯಶಸ್ವಿ: 2026ಕ್ಕೆ ಸುರಕ್ಷಿತ ಸ್ವಾಗತ : ಹೇಗಿತ್ತು ಗೊತ್ತಾ ಪೊಲೀಸ್ ಪ್ಲಾನ್?

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group