Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜಿಬಿಎ ಆವರಣದಲ್ಲಿ ಐತಿಹಾಸಿಕ ಶ್ರೀ ಆದಿಶಕ್ತಿ ದೇವಾಲಯ ಜೀರ್ಣೋದ್ಧಾರ ಸಂಭ್ರಮ: ಅಯೋಧ್ಯೆ ರಾಮನ, ಕೃಷ್ಣಶಿಲೆಯ ವಿಗ್ರಹಕ್ಕೂ ಇಲ್ಲಿ ರಚಿಸಿದ ವಿಗ್ರಹಕ್ಕೂ ಇದೆ ಶಿಲಾ ಸಂಬಂಧ!!

ಜ.21ರಿಂದ 23ರವರೆಗೆ ಅದ್ಧೂರಿ ಧಾರ್ಮಿಕ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಉದ್ಘಾಟನೆ; ನೌಕರರ ಸಂಘದ ಕೊಡುಗೆಗೆ ಶ್ಲಾಘನೆ

by Bengaluru Wire Desk
January 13, 2026
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಜ.13 www.bengaluruwire.com : ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕೇಂದ್ರ ಕಚೇರಿಯ ಆವರಣದಲ್ಲಿರುವ, ಸುಮಾರು 800 ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯವು ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡಿದ್ದು, ಲೋಕಾರ್ಪಣೆಗೆ ಸಜ್ಜಾಗಿದೆ. 

ವಿಶೇಷವೆಂದರೆ, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಅಯೋಧ್ಯೆಯ ರಾಮಲಲ್ಲಾನ ವಿಗ್ರಹ ಕೆತ್ತನೆಗೆ ಬಳಸಲಾದ ಶಿಲೆಯಿಂದಲೇ ನಿರ್ಮಿಸಲಾದ ಶಕ್ತಿ ದೇವತೆಗಳ ಮೂರ್ತಿಗಳನ್ನು ಇಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ.

ತಿಗಳರ ಪೇಟೆಯ ವಿಶ್ವವಿಖ್ಯಾತ ಕರಗದ ಶ್ರೀ ಧರ್ಮರಾಯಸ್ವಾಮಿ ಮತ್ತು ದ್ರೌಪದಮ್ಮ ದೇವಿ ದೇವಾಲಯಗಳ ಮೂಲ ನೆಲೆ ಎಂದೇ ನಂಬಲಾಗಿರುವ ಈ ಪುರಾತನ ದೇವಾಲಯವು ಕಾಲಕ್ರಮೇಣ ಶಿಥಿಲಗೊಂಡಿತ್ತು. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ದೇವಾಲಯದ ನವೀಕರಣಕ್ಕೆ ಪಣತೊಟ್ಟಿತು. ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ಅವರ ನೇತೃತ್ವದಲ್ಲಿ, ಪ್ರತಿ ನೌಕರರಿಂದ ದೇಣಿಗೆ ಸಂಗ್ರಹಿಸಿ ಮತ್ತು ಸಂಘದ ವತಿಯಿಂದ ಒಟ್ಟು 1.60 ಕೋಟಿ ರೂ. ಹಾಗೂ ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ 20 ಲಕ್ಷ ರೂ.ಗಳ ವೆಚ್ಚದಲ್ಲಿ ದೇವಾಲಯವನ್ನು ಅದ್ದೂರಿಯಾಗಿ ಜೀರ್ಣೋದ್ಧಾರ ಮಾಡಲಾಗಿದೆ.

ಅಯೋಧ್ಯೆ ಕಲ್ಲಿನ ವಿಗ್ರಹಗಳ ಆಕರ್ಷಣೆ:

ದೇವಾಲಯದ ನವೀಕರಣದ ಭಾಗವಾಗಿ, ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹಕ್ಕೆ ಬಳಸಲಾದ ವಿಶೇಷ ಕೃಷ್ಣಶಿಲೆಯಿಂದ ತಯಾರಿಸಲಾದ ಕನಕದುರ್ಗ ದೇವಿ, ಪ್ರತ್ಯಂಗಿರಾ ದೇವಿ, ಸ್ಕಂದಮಾತ ದೇವಿ, ರಾಜರಾಜೇಶ್ವರಿ ದೇವಿ, ಮಹಿಷಾಸುರ ಮರ್ದಿನಿ ಹಾಗೂ ಚಾಮುಂಡೇಶ್ವರಿ ದೇವಿಯ ಮೂರ್ತಿಗಳನ್ನು ಪ್ರತಿಷ್ಠಾಪಿಸುತ್ತಿರುವುದು ಈ ಬಾರಿಯ ವಿಶೇಷ ಆಕರ್ಷಣೆಯಾಗಿದೆ.

ಜಿಬಿಎ ಆವರಣದಲ್ಲಿದೆ ಆದಿಶಕ್ತಿ ದೇವಾಲಯ.

ಧಾರ್ಮಿಕ‌ ಕಾರ್ಯಕ್ರಮದ ವಿವರ:

ಜನವರಿ 21, 2026 ರಿಂದ ಜನವರಿ 23 ರವರೆಗೆ ಮೂರು ದಿನಗಳ ಕಾಲ ವಿಧಿಬದ್ಧವಾಗಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಜ.23 ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ದೇವಾಲಯವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸಮಾರಂಭದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಎನ್.ಎ. ಹ್ಯಾರಿಸ್, ರಿಜ್ವಾನ್ ಅರ್ಷದ್, ಜಿಬಿಎ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ದೇವಸ್ಥಾನ ಪ್ರವೇಶ ದ್ವಾರದಲ್ಲಿ ಜಿಬಿಎ ಅಧಿಕಾರಿ ಮತ್ತು ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಆಗಮ ಶಾಸ್ತ್ರಜ್ಞ ಡಾ.ಭಾನು ಪ್ರಕಾಶ್ ಶರ್ಮಾ ಇದ್ದಾರೆ.

ನಾಡಿನ ಖ್ಯಾತ ಆಗಮ ಶಾಸ್ತ್ರಜ್ಞ ಡಾ.ಭಾನು ಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಗಣಹೋಮ, ನವ ಚಂಡಿಕಾಯಾಗ, ಕುಂಭಾಭಿಷೇಕ ಸೇರಿದಂತೆ ವಿವಿಧ ಹೋಮ-ಹವನಗಳು ನೆರವೇರಲಿವೆ. ಅದ್ದೂರಿ ಮೆರವಣಿಗೆಗಾಗಿ ನೊಣವಿನಕೆರೆ ಮತ್ತು ಐರಣಿ ಮಠಗಳಿಂದ ಆನೆಗಳನ್ನು ಕರೆಸಲಾಗುತ್ತಿದ್ದು, ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘವು ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

GBA News | ಬೆಂಗಳೂರಿನಲ್ಲಿ ಪಿಜಿಗಳ ಮೇಲೆ ‘ದಕ್ಷಿಣ’ ಪ್ರಹಾರ: ಅಶುಚಿತ್ವದ 10 ಪಿಜಿಗಳಿಗೆ ಬೀಗಮುದ್ರೆ

Next Post

ಬೆಂಗಳೂರಿಗೆ ಬಂದಿಳಿದ ಜರ್ಮನಿ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ನೇತೃತ್ವದ ನಿಯೋಗ

Next Post

ಬೆಂಗಳೂರಿಗೆ ಬಂದಿಳಿದ ಜರ್ಮನಿ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ನೇತೃತ್ವದ ನಿಯೋಗ

BW ಸಂಪಾದಕೀಯ | Bengaluru Wire 5th Anniversary| ಐದು ವರ್ಷಗಳ ಸಾರ್ಥಕ ಪಯಣ; ಸುದ್ದಿಯು ಜಿದ್ದಾಜಿದ್ದಿಗಲ್ಲ, ಸತ್ಯದ ಶೋಧಕ್ಕೆ ನಮ್ಮ ಆದ್ಯತೆ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d