Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಬಲೀಕರಣ, ಅಭಿವೃದ್ಧಿಗೆ ಒತ್ತು: ಗಣರಾಜ್ಯೋತ್ಸವ ಭಾಷಣದಲ್ಲಿ ರಾಜ್ಯಪಾಲ ಗೆಹ್ಲೋಟ್ ಮೆಚ್ಚುಗೆ

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ಸರ್ಕಾರದ ಎರಡೂವರೆ ವರ್ಷಗಳ ಸಾಧನೆ ಬಿಚ್ಚಿಟ್ಟ ರಾಜ್ಯಪಾಲರು

by Bengaluru Wire Desk
January 26, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಜ.26 www.bengaluruwire.com : ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ 77ನೇ ಗಣರಾಜ್ಯೋತ್ಸವವನ್ನು ರಾಜ್ಯಾದ್ಯಂತ ಸಡಗರದಿಂದ ಆಚರಿಸಲಾಯಿತು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ ನಡೆದ ಪ್ರಧಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಬಳಿಕ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಪರವಾದ ನಿಲುವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ವಿಶೇಷವೆಂದರೆ, ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ಸಾಧನೆಗಳೇ ಮುಂಚೂಣಿಯಲ್ಲಿದ್ದು, ಕೇಂದ್ರದ ವಿರುದ್ಧದ ಟೀಕೆಗಳು ಕಂಡುಬರಲಿಲ್ಲ.

ಸಂವಿಧಾನದ ಆಶಯ ಮತ್ತು ಸಾಮಾಜಿಕ ನ್ಯಾಯ:

ಭಾರತದ ಪ್ರಜಾಪ್ರಭುತ್ವದ ಇತಿಹಾಸವನ್ನು ಸ್ಮರಿಸಿದ ರಾಜ್ಯಪಾಲರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ‘ಸಾಮಾಜಿಕ ಪ್ರಜಾಪ್ರಭುತ್ವ’ದ ಪರಿಕಲ್ಪನೆಯನ್ನು ಉಲ್ಲೇಖಿಸಿದರು. “ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಒಂದಕ್ಕೊಂದು ಬೆಸೆದುಕೊಂಡಿವೆ. ಇವುಗಳಲ್ಲಿ ಒಂದನ್ನು ಪ್ರತ್ಯೇಕಿಸಿದರೂ ಪ್ರಜಾಪ್ರಭುತ್ವ ಸೋಲುತ್ತದೆ,” ಎಂದು ಅಂಬೇಡ್ಕರ್ ಅವರ ಮಾತುಗಳನ್ನು ಪುನರುಚ್ಚರಿಸಿದರು. ಕರ್ನಾಟಕ ಸರ್ಕಾರವು ಈ ತತ್ವಗಳಡಿಯಲ್ಲಿ ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಮತ್ತು ಎಲ್ಲ ಸಮುದಾಯಗಳ ಧ್ವನಿಗೆ ಕಿವಿಯಾಗಲು ಶ್ರಮಿಸುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳ ಯಶಸ್ಸು:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ಯಾರಂಟಿ ಯೋಜನೆ’ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲರು, “ಸರ್ಕಾರವು ‘ಯೂನಿವರ್ಸಲ್‌ ಬೇಸಿಕ್‌ ಇನ್‌ಕಂ’ ತತ್ವದಡಿ ಜಾರಿಗೆ ತಂದಿರುವ ಈ ಯೋಜನೆಗಳಿಗಾಗಿ ಇದುವರೆಗೆ 1.13 ಲಕ್ಷ ಕೋಟಿ ರೂ. ವಿನಿಯೋಗಿಸಿದೆ. ಇದರಿಂದ 1.37 ಕೋಟಿ ಕುಟುಂಬಗಳು ನೇರ ಆರ್ಥಿಕ ಲಾಭ ಪಡೆದಿವೆ. ಪರಿಣಾಮವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಿದ್ದು, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ,” ಎಂದು ಅಭಿಪ್ರಾಯಪಟ್ಟರು. ಮಹಿಳೆಯರ ಸುರಕ್ಷತೆಯಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂಬ ಸಮೀಕ್ಷಾ ವರದಿಯನ್ನು ಅವರು ಹೆಮ್ಮೆಯಿಂದ ಪ್ರಸ್ತಾಪಿಸಿದರು.

ಬೆಂಗಳೂರು ಅಭಿವೃದ್ಧಿ ಮತ್ತು ಹೂಡಿಕೆ:

ಬೆಂಗಳೂರು ನಗರದ ಅಭಿವೃದ್ಧಿಗೆ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದ ಗೆಹ್ಲೋಟ್, ನಗರದಲ್ಲಿ ಸುಮಾರು 1.5 ಲಕ್ಷ ಕೋಟಿ ರೂ. ವೆಚ್ಚದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು. ಸೆಮಿ ಕಂಡಕ್ಟರ್‌, ಏರೋಸ್ಪೇಸ್‌ ಮತ್ತು ಕ್ವಾಂಟಮ್‌ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ಕರ್ನಾಟಕ ಆದ್ಯ ತಾಣವಾಗಿದ್ದು, ಜಾಗತಿಕ ಕಂಪನಿಗಳು ಇಲ್ಲಿ ಹೂಡಿಕೆ ಮಾಡುತ್ತಿವೆ ಎಂದು ತಿಳಿಸಿದರು.

ರೈತಪರ ಕಾಳಜಿ ಮತ್ತು ಕಂದಾಯ ಸುಧಾರಣೆ:

ರೈತರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಅವರು, ಮಳೆಯಿಂದ ಹಾನಿಯಾದ ಬೆಳೆಗಳಿಗೆ 2,250 ಕೋಟಿ ರೂ. ಪರಿಹಾರ ಹಾಗೂ 2,000 ಕೋಟಿ ರೂ.ಗೂ ಅಧಿಕ ವಿಮಾ ಮೊತ್ತವನ್ನು ರೈತರಿಗೆ ಒದಗಿಸಲಾಗಿದೆ ಎಂದರು. ಕಬ್ಬು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡುವ ಮೂಲಕ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಕಂದಾಯ ಇಲಾಖೆಯಲ್ಲಿನ ಡಿಜಿಟಲೀಕರಣ, ‘ಬಿ’ ಖಾತಾ ಪರಿವರ್ತನೆ ಮತ್ತು ತ್ವರಿತಗತಿಯಲ್ಲಿ ಪ್ರಕರಣಗಳ ಇತ್ಯರ್ಥದಿಂದ ಜನಸಾಮಾನ್ಯರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ:

ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ದೇಶದ ಅತಿದೊಡ್ಡ ಹಬ್ ಆಗಿ ಹೊರಹೊಮ್ಮುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಆರಂಭ, 300 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ ಮತ್ತು ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಸುಧಾರಣೆಗೆ ‘ಅಕ್ಷರ ಆವಿಷ್ಕಾರ’ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮೂಲಸೌಕರ್ಯ ಬಲಪಡಿಸಲಾಗುತ್ತಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸಲಾಗುತ್ತಿದೆ ಎಂದು ರಾಜ್ಯಪಾಲರು ವಿವರಿಸಿದರು.

ಒಟ್ಟಾರೆಯಾಗಿ, ರಾಜ್ಯವು ಕಾನೂನು ಸುವ್ಯವಸ್ಥೆ, ಐಟಿ-ಬಿಟಿ ಮತ್ತು ನವೋದ್ಯಮಗಳಲ್ಲಿ ಮುಂಚೂಣಿಯಲ್ಲಿದ್ದು, ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಕುವೆಂಪು ಅವರ ಆಶಯವನ್ನು ಸರ್ಕಾರ ಎತ್ತಿಹಿಡಿದಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ರಾಜಸ್ಥಾನದಲ್ಲಿ ಹೈ ಅಲರ್ಟ್: ಗಣರಾಜ್ಯೋತ್ಸವ ದಿನದ ಮುನ್ನಾದಿನ ತಡರಾತ್ರಿ 9,550 ಕೆ.ಜಿ ಸ್ಫೋಟಕ ಜಪ್ತಿ

Next Post

NPS Investment | ಎನ್‌ಪಿಎಸ್ ಹೂಡಿಕೆದಾರರಿಗೆ ಬಂಪರ್: ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಯಲ್ಲಿ ಎಷ್ಟು ಉಳಿತಾಯ ಸಾಧ್ಯ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

Next Post
ಎನ್ ಪಿಎಸ್ ಪಿಂಚಣಿ ಕುರಿತ ಸಾಂದರ್ಭಿಕ ಚಿತ್ರ.

NPS Investment | ಎನ್‌ಪಿಎಸ್ ಹೂಡಿಕೆದಾರರಿಗೆ ಬಂಪರ್: ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಯಲ್ಲಿ ಎಷ್ಟು ಉಳಿತಾಯ ಸಾಧ್ಯ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

ಲಖ್ಪತಿ ದೀದಿ ಯೋಜನೆ ಸಾಂದರ್ಭಿಕ ಚಿತ್ರ.

Lakhpati Didi Scheme | ಮಹಿಳೆಯರ ಸ್ವಂತ ಉದ್ಯೋಗಕ್ಕೆ ಸಿಗಲಿದೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d