Tuesday, October 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

  • Bengaluru Focus

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬಡ ದಂಪತಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಇನ್ಮುಂದೆ ಐವಿಎಫ್ (IVF) ಚಿಕಿತ್ಸೆ ಲಭ್ಯ

ಮಕ್ಕಳಾಗದ ದಂಪತಿಗಳಿಗೆ ವರದಾನ; 1.30 ಲಕ್ಷ ರೂ. ವರೆಗಿನ ವೆಚ್ಚ ಸರ್ಕಾರವೇ ಭರಿಸಲಿದೆ; ಫಲಾನುಭವಿಗಳಿಗೆ ಇರಬೇಕಾದ ಅರ್ಹತೆಗಳೇನು? ಇಲ್ಲಿದೆ ಮಾಹಿತಿ.

by Bengaluru Wire Desk
January 30, 2026
in News Wire
Reading Time: 1 min read
0

ಬೆಂಗಳೂರು, ಜ.30 www.bengaluruwire.com : ಬಡತನ ಹಾಗೂ ಆರ್ಥಿಕ ಸಂಕಷ್ಟದಿಂದಾಗಿ ದುಬಾರಿ ವೆಚ್ಚದ ಕೃತಕ ಗರ್ಭಧಾರಣೆ ಚಿಕಿತ್ಸೆ ಪಡೆಯಲಾಗದೆ ಪರದಾಡುತ್ತಿದ್ದ ರಾಜ್ಯದ ದಂಪತಿಗಳಿಗೆ ಕರ್ನಾಟಕ ಸರ್ಕಾರ ಭರವಸೆಯ ಹೊಂಗಿರಣವನ್ನು ಹರಿಸಿದೆ. 

ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ (AB-PMJAY CM’s ArK) ಯೋಜನೆಯಡಿ ಇನ್ಮುಂದೆ ಸಹಾಯಕ ಸಂತಾನೋತ್ಪತ್ತಿ ತಂತ್ರಜ್ಞಾನ (ART) ಚಿಕಿತ್ಸೆಗಳಾದ ಐವಿಎಫ್ (IVF) ಹಾಗೂ ಇತರೆ ಪ್ರಕ್ರಿಯೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ (PHH – Priority House Hold) ಕಾರ್ಡ್ ಹೊಂದಿರುವ ಅರ್ಹ ದಂಪತಿಗಳಿಗೆ ಈ ಸೌಲಭ್ಯ ದೊರೆಯಲಿದೆ. ಮಗುವನ್ನು ಪಡೆಯಲು ಬಯಸುವ ಆದರೆ ಆರ್ಥಿಕವಾಗಿ ಶಕ್ತರಲ್ಲದ ಕುಟುಂಬಗಳಿಗೆ ಈ ಯೋಜನೆಯು ಆಶಾಕಿರಣವಾಗಲಿದೆ.

ಚಿಕಿತ್ಸಾ ದರಗಳು ಮತ್ತು ಪ್ಯಾಕೇಜ್ ವಿವರ:

ಸರ್ಕಾರ ನಿಗದಿಪಡಿಸಿರುವ ದರಗಳ ಪ್ರಕಾರ, ಅರ್ಹ ಫಲಾನುಭವಿಗಳಿಗೆ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಕೆಳಗಿನ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿದೆ:

 * ಐವಿಎಫ್/ ಐಸಿಎಸ್‌ಐ (IVF/ICSI-ET) – ಭ್ರೂಣಗಳನ್ನು ಫ್ರೀಜ್ ಮಾಡದೆ: 1,20,000 ರೂ.

 * ಐವಿಎಫ್/ ಐಸಿಎಸ್‌ಐ (IVF/ICSI-ET) – ಭ್ರೂಣಗಳ ಫ್ರೀಜಿಂಗ್ ಸಹಿತ: 1,30,000 ರೂ.

 * ಫ್ರೋಜನ್ ಎಂಬ್ರಿಯೋ ಟ್ರಾನ್ಸ್‌ಫರ್ (FET): ಪ್ರತಿ ಸೈಕಲ್‌ಗೆ 35,000 ರೂ.

ಒಬ್ಬ ಫಲಾನುಭವಿಯು ತಮ್ಮ ಜೀವಿತಾವಧಿಯಲ್ಲಿ ಗರಿಷ್ಠ 3 ಸೈಕಲ್ (Cycles) ಗಳವರೆಗೆ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

ಯಾರಿಗೆ ಸಿಗಲಿದೆ ಈ ಸೌಲಭ್ಯ? (ಅರ್ಹತೆಗಳು):

ಸರ್ಕಾರದ ಆದೇಶದ ಪ್ರಕಾರ, ಫಲಾನುಭವಿಗಳು ಈ ಕೆಳಗಿನ ಮಾನದಂಡಗಳನ್ನು ಪೂರೈಸುವುದು ಕಡ್ಡಾಯವಾಗಿದೆ:

 * ದಂಪತಿಗಳು ಕರ್ನಾಟಕದ ನಿವಾಸಿಗಳಾಗಿರಬೇಕು ಮತ್ತು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು.

 * ಈಗಾಗಲೇ ಯಾವುದೇ ಜೀವಂತ ಮಗು ಇರಬಾರದು.

 * ವಯಸ್ಸಿನ ಮಿತಿ: ಮಹಿಳೆಯರು ಮತ್ತು ಪುರುಷರು 21 ವರ್ಷ ಮೇಲ್ಪಟ್ಟು ಹಾಗೂ 55 ವರ್ಷದ ಒಳಗಿರಬೇಕು.

 * ವೈದ್ಯಕೀಯವಾಗಿ ಬಂಜೆತನ ದೃಢಪಟ್ಟಿರಬೇಕು (ವೈದ್ಯಕೀಯ ದಾಖಲೆಗಳು ಅಗತ್ಯ).

 * ಇದು ಕೇವಲ ವಿವಾಹಿತ ದಂಪತಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಯಾವುದಕ್ಕೆ ಅವಕಾಶವಿಲ್ಲ?:

ಈ ಯೋಜನೆಯು ಕೇವಲ ದಂಪತಿಯ ಸ್ವಂತ ಗ್ಯಾಮೆಟ್ (ಅಂಡಾಣು ಮತ್ತು ವೀರ್ಯಾಣು) ಬಳಸಿ ಮಾಡುವ ಚಿಕಿತ್ಸೆಗೆ ಮಾತ್ರ ಸೀಮಿತವಾಗಿದೆ. ದಾನಿಗಳ ಅಂಡಾಣು/ವೀರ್ಯಾಣು (Donor gametes) ಅಥವಾ ಬಾಡಿಗೆ ತಾಯ್ತನ (Surrogacy) ಮೂಲಕ ಮಗು ಪಡೆಯಲು ಈ ಯೋಜನೆಯಡಿ ಅವಕಾಶವಿರುವುದಿಲ್ಲ.

ಪ್ರಾಯೋಗಿಕ ಜಾರಿ:

ಪ್ರಸ್ತುತ ಹೊರಡಿಸಲಾದ ಆದೇಶದನ್ವಯ, ಮೊದಲ ಹಂತದಲ್ಲಿ ಈ ಯೋಜನೆಯನ್ನು ಒಂದು ವರ್ಷದ ಅವಧಿಗೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ. ಆರಂಭದಲ್ಲಿ ಕೇವಲ 120 ಬಿಪಿಎಲ್ ಕಾರ್ಡ್‌ದಾರ ದಂಪತಿಗಳಿಗೆ ಮಾತ್ರ ಈ ಸೌಲಭ್ಯವನ್ನು ಒದಗಿಸಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆ ಲಭ್ಯವಿರುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Inspiring Stories | 20 ವರ್ಷಗಳ ಕಾನೂನು ಹೋರಾಟಕ್ಕೆ ಜಯ: ರಸ್ತೆ ಉಳಿಸಿಕೊಟ್ಟ ವಕೀಲರ ಹೆಸರನ್ನೇ ರಸ್ತೆಗೆ ಇಟ್ಟ ಕಸ್ತೂರಿ ಬಡಾವಣೆ ನಿವಾಸಿಗಳು!!

Next Post

ಮಹಾಕವಿ ಕುವೆಂಪು ರವರ ಮೈಸೂರಿನ ನಿವಾಸ ರಾಷ್ಟ್ರೀಯ ಕವಿ ಸ್ಮಾರಕವಾಗಿ ಅಭಿವೃದ್ಧಿ : ಸಚಿವ ಶಿವರಾಜ ಎಸ್.ತಂಗಡಗಿ

Next Post

ಮಹಾಕವಿ ಕುವೆಂಪು ರವರ ಮೈಸೂರಿನ ನಿವಾಸ ರಾಷ್ಟ್ರೀಯ ಕವಿ ಸ್ಮಾರಕವಾಗಿ ಅಭಿವೃದ್ಧಿ : ಸಚಿವ ಶಿವರಾಜ ಎಸ್.ತಂಗಡಗಿ

17th BIFFES | ಕಣ್ಮನ ಸೆಳೆದ 'ತೀರ್ಥರೂಪ ತಂದೆಯವರಿಗೆ', ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ

Please login to join discussion

Like Us on Facebook

Follow Us on Twitter

Recent News

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026

Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d