Wednesday, August 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೈಟೆಕ್ ವಂಚನೆ: ರೋಗಿಗಳ ಹಣ ಗುಳುಂ, ಕ್ಯೂಆರ್ ಕೋಡ್ ಬದಲಿಸಿ ₹23 ಲಕ್ಷ ದೋಚಿದ ಸಿಬ್ಬಂದಿ

ಸರ್ಕಾರಿ ಖಾತೆಗೆ ಹೋಗಬೇಕಿದ್ದ ಹಣ ಖಾಸಗಿ ಜೇಬಿಗೆ; 8 ಮಂದಿ ಹೊರಗುತ್ತಿಗೆ ನೌಕರರ ವಿರುದ್ಧ ಎಫ್‌ಐಆರ್ ದಾಖಲು; ಇನ್ಫೋಸಿಸ್ ಲ್ಯಾಬ್‌ನಲ್ಲಿ ನಡೆಯಿತು ಗೋಲ್‌ಮಾಲ್.

by Bengaluru Wire Desk
February 5, 2026
in Bengaluru Focus
Reading Time: 1 min read
0

ಬೆಂಗಳೂರು, ಫೆ.05 www.bengaluruwire.com : ಬಡ ರೋಗಿಗಳಿಗೆ ಸಂಜೀವಿನಿಯಾಗಬೇಕಿದ್ದ ವಿಕ್ಟೋರಿಯಾ ಆಸ್ಪತ್ರೆಯಲ್ಲೀಗ ವಂಚಕರ ಜಾಲವೊಂದು ಸದ್ದಿಲ್ಲದೆ ತನ್ನ ಕೈಚಳಕ ತೋರಿಸಿದೆ. 

ಆಸ್ಪತ್ರೆಯಲ್ಲಿ ರೋಗಿಗಳ ಸೇವೆಗೆಂದು ಅಳವಡಿಸಿದ್ದ ಅಧಿಕೃತ ‘ಯುಪಿಐ ಕ್ಯೂಆರ್ ಕೋಡ್’ (UPI Scanner) ಬದಲಿಸಿ, ತಮ್ಮ ವೈಯಕ್ತಿಕ ಕ್ಯೂಆರ್ ಕೋಡ್ ಅಂಟಿಸುವ ಮೂಲಕ ಬರೋಬ್ಬರಿ ₹23.78 ಲಕ್ಷ ಹಣವನ್ನು ದೋಚಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯ ಎಂಟು ಮಂದಿ ಹೊರಗುತ್ತಿಗೆ ಸಿಬ್ಬಂದಿಯ ವಿರುದ್ಧ ವಿಶ್ವೇಶ್ವರಪುರ (ವಿ.ವಿ.ಪುರಂ) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಎಸ್.ದೀಪಕ್ ಅವರು ನೀಡಿದ ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಏನಿದು ಹಗರಣ?:

ಆಸ್ಪತ್ರೆಯ ಪ್ರಮುಖ ವಿಭಾಗವಾದ ಇನ್ಫೊಸಿಸ್‌ ಲ್ಯಾಬ್‌ ಬಿಲ್ಲಿಂಗ್‌ ಕೌಂಟರ್‌ನಲ್ಲಿ ರಕ್ತ ಪರೀಕ್ಷೆ ಹಾಗೂ ಇತರೆ ಶುಲ್ಕ ಪಾವತಿಸಲು ಬರುವ ರೋಗಿಗಳ ಅನುಕೂಲಕ್ಕಾಗಿ ಆಸ್ಪತ್ರೆ ಆಡಳಿತ ಮಂಡಳಿ ಯುಪಿಐ ಸ್ಕ್ಯಾನರ್‌ಗಳನ್ನು ಅಳವಡಿಸಿತ್ತು. ಆದರೆ, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ, ಆಸ್ಪತ್ರೆಯ ಅಧಿಕೃತ ಸ್ಕ್ಯಾನರ್ ಅನ್ನು ತೆಗೆದು, ಅಲ್ಲಿ ತಮ್ಮ ಸ್ವಂತ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಕ್ಯೂಆರ್ ಕೋಡ್‌ಗಳನ್ನು ಅಂಟಿಸಿದ್ದರು. ರೋಗಿಗಳು ಸ್ಕ್ಯಾನ್ ಮಾಡಿ ಕಳುಹಿಸುತ್ತಿದ್ದ ಹಣ ನೇರವಾಗಿ ಸರ್ಕಾರದ ಖಜಾನೆ ಸೇರುವ ಬದಲು, ಈ ಸಿಬ್ಬಂದಿಯ ಜೇಬು ಸೇರುತ್ತಿತ್ತು.

ಆರೋಪಿಗಳು ಯಾರು?:

ಪ್ರಯೋಗಾಲಯ, ಹೊರ ರೋಗಿಗಳ ವಿಭಾಗ ಮತ್ತು ಎಕ್ಸ್‌ರೇ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಪ್ರೀತಿ, ಎಸ್‌.ಪುನೀತಾ, ಸಲ್ಮಾ, ಸತ್ಯಾ, ಶಶಿಕಲಾ, ಲಕ್ಷ್ಮಿಕಾಂತಮ್ಮ, ದರ್ಶನ್‌ ಹಾಗೂ ಮಹೇಂದ್ರ ಎಂಬುವವರೇ ಈ ಕೃತ್ಯ ಎಸಗಿದವರು ಎನ್ನಲಾಗಿದೆ. ಕಳೆದ ಐದಾರು ತಿಂಗಳಿನಿಂದ ಈ ದಂಧೆ ಅವ್ಯಾಹತವಾಗಿ ನಡೆದಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಒಟ್ಟಾರೆ ₹23,78,693 ಹಣ ದುರುಪಯೋಗವಾಗಿದೆ.

ಬೆಳಕಿಗೆ ಬಂದಿದ್ದು ಹೇಗೆ?:

ಯುಪಿಐ ಕಲೆಕ್ಷನ್‌ನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಅಧೀಕ್ಷಕ ಡಾ. ದೀಪಕ್ ಅವರು ಆಂತರಿಕ ತನಿಖೆಗೆ ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿ ಪರಿಶೀಲನೆ ನಡೆಸಿದಾಗ ಸಿಬ್ಬಂದಿಯ ಕಳ್ಳಾಟ ಬಯಲಾಗಿದೆ.

ಘಟನೆ ಕುರಿತು ‘ಬೆಂಗಳೂರು ವೈರ್‌’ಗೆ ಪ್ರತಿಕ್ರಿಯಿಸಿರುವ ಡಾ. ದೀಪಕ್, “ಇನ್ಫೋಸಿಸ್ ಲ್ಯಾಬ್ ಬಿಲ್ಲಿಂಗ್ ಕೌಂಟರ್‌ನ 8-9 ಕಡೆಗಳಲ್ಲಿ ರೋಗಿಗಳ ಅನುಕೂಲಕ್ಕೆ ಸ್ಕ್ಯಾನರ್ ಇಡಲಾಗಿತ್ತು. ಆರೋಪಿತ ಸಿಬ್ಬಂದಿ ಇದನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಸದ್ಯ ವಂಚನೆ ಎಸಗಿದ ಹೊರಗುತ್ತಿಗೆ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಹೆಚ್ಚಿನ ಅಕ್ರಮದ ಬಗ್ಗೆ ತಿಳಿಯಲು ಲೆಕ್ಕಪರಿಶೋಧನೆಗೆ (Audit) ಆದೇಶಿಸಲಾಗಿದೆ,” ಎಂದು ತಿಳಿಸಿದ್ದಾರೆ.

ನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡುವ, ದಿನಕ್ಕೆ 7 ರಿಂದ 8 ಸಾವಿರ ರಕ್ತ ಪರೀಕ್ಷೆಗಳು ನಡೆಯುವ ಜನನಿಬಿಡ ಪ್ರದೇಶವನ್ನೇ ಟಾರ್ಗೆಟ್ ಮಾಡಿ ಈ ವಂಚನೆ ಎಸಗಲಾಗಿದೆ. ಸದ್ಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

View this post on Instagram
WhatsApp Join our WhatsApp Channel
Previous Post

ಬಿಡಿಎಗೆ ಭರ್ಜರಿ ಲಾಭ 2,097 ಕೋಟಿಗೆ ಕೋನದಾಸಪುರ ಜಾಗ ಮಾರಾಟ ; ಇದೀಗ ಮತ್ತೆ ಬೃಹತ್ ವಾಣಿಜ್ಯ ನಿವೇಶನಗಳ ಹರಾಜಿಗೆ ಅಧಿಸೂಚನೆ ಪ್ರಕಟ

Next Post

Namma Metro Rail News | ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶಾಕ್: ಶೇ.5ರಷ್ಟು ಟಿಕೆಟ್ ದರ ಏರಿಕೆ ; ಫೆ.9 ರಿಂದಲೇ ಜಾರಿ

Next Post
Namma Metro Purple Line

Namma Metro Rail News | ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶಾಕ್: ಶೇ.5ರಷ್ಟು ಟಿಕೆಟ್ ದರ ಏರಿಕೆ ; ಫೆ.9 ರಿಂದಲೇ ಜಾರಿ

High Speed Rail | ಬೆಂಗಳೂರು-ಪುಣೆ-ಮುಂಬೈ ಹೈಸ್ಪೀಡ್ ರೈಲು: ಜೋಶಿ, ಎಚ್‌ಡಿಕೆ ನಡೆಗೆ ಎಂಬಿ ಪಾಟೀಲ್ ಮೆಚ್ಚುಗೆ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group