ಬೆಂಗಳೂರು, ಫೆ.07 www.bengaluruwire.com : ರಾಜ್ಯ ಸರ್ಕಾರ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮ ಹಾಗೂ ಮಂಡಳಿಗಳ 54 ಅಧ್ಯಕ್ಷರಿಗೆ ‘ರಾಜ್ಯ ಸಚಿವರ’ (State Minister Rank) ಸ್ಥಾನಮಾನ ನೀಡಿ ಆದೇಶಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಈ ಸೌಲಭ್ಯ ಅನ್ವಯವಾಗಲಿದೆ. ಈ ಆದೇಶದನ್ವಯ, ಪಟ್ಟಿಯಲ್ಲಿರುವ ಅಧ್ಯಕ್ಷರುಗಳಿಗೆ ರಾಜ್ಯ ಸಚಿವರಿಗೆ ಲಭ್ಯವಿರುವ ವೇತನ, ಭತ್ಯೆ ಹಾಗೂ ಇತರೆ ಸೌಲಭ್ಯಗಳು ದೊರೆಯಲಿವೆ.
ರಾಜ್ಯದ ವಿವಿಧ ಅಭಿವೃದ್ಧಿ ನಿಗಮಗಳು, ಪ್ರಾಧಿಕಾರಗಳು ಹಾಗೂ ಮಂಡಳಿಗಳಿಗೆ ನೇಮಕಗೊಂಡಿರುವ ಅಧ್ಯಕ್ಷರ ಸಂಪೂರ್ಣ ಪಟ್ಟಿ ಮತ್ತು ಅವರಿಗೆ ಹಂಚಿಕೆಯಾಗಿರುವ ನಿಗಮಗಳ ವಿವರ ಈ ಕೆಳಗಿನಂತಿದೆ:



ಈ ಆದೇಶವನ್ನು ರಾಜ್ಯಪಾಲರ ಹೆಸರಿನಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಸಹಿ ಮಾಡಿ ಹೊರಡಿಸಿದ್ದಾರೆ. ಪ್ರಸ್ತುತ ಇರುವ ವಿವಿಧ ಇಲಾಖೆಗಳ ಸಚಿವರಿಗೆ ಸಮಾನವಾದ ವೇತನ, ಭತ್ಯೆ ಹಾಗೂ ಸೌಲಭ್ಯಗಳನ್ನು ನೀಡುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಎಂದು ವಿಪಕ್ಷಗಳು ದೂರಿವೆ.
























