Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Land Conversion | ಮಾಸ್ಟರ್ ಪ್ಲಾನ್ ಪ್ರದೇಶಗಳಲ್ಲಿ ಇನ್ನು ‘ಭೂ ಪರಿವರ್ತನೆ’ ರದ್ದು: ಜಿಬಿಎ ವ್ಯಾಪ್ತಿಯ ‘ಬಿ’ ಖಾತಾ ಮಾಲೀಕರಿಗೆ ಮಹತ್ವದ ಕೊಡುಗೆ!

ಮಧ್ಯವರ್ತಿಗಳ ಕಾಟಕ್ಕೆ ಮುಕ್ತಿ: ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ಬದಲಾವಣೆ | ಎ-ಖಾತಾ ಪಡೆಯುವ ಹಾದಿ ಸುಗಮ: ಸಚಿವ ಕೃಷ್ಣ ಬೈರೇಗೌಡ ಘೋಷಣೆ

by Bengaluru Wire Desk
February 7, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಫೆ.07 www.bengaluruwire.com : ರಾಜ್ಯದ ರಿಯಲ್ ಎಸ್ಟೇಟ್ ಮತ್ತು ಕಂದಾಯ ಇಲಾಖೆಯ ಇತಿಹಾಸದಲ್ಲೇ ಪ್ರಮುಖ ಬದಲಾವಣೆಯನ್ನು ಸರ್ಕಾರ ಮಾಡಿದೆ. 

ಇನ್ನು ಮುಂದೆ ಮಾಸ್ಟರ್ ಪ್ಲಾನ್ (CDP) ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೂಮಿಯನ್ನು ಪ್ರತ್ಯೇಕವಾಗಿ ಪರಿವರ್ತನೆ (Land Conversion) ಮಾಡುವ ಅಗತ್ಯವಿರುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಭೂಮಿ ‘ಸ್ವಯಂ ಪರಿವರ್ತನೆ’ (Land Auto Conversion) ನೂತನ ತಂತ್ರಾಂಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ನಿರ್ಧಾರದಿಂದ ಬೆಂಗಳೂರಿನ ಲಕ್ಷಾಂತರ ‘ಬಿ’ ಖಾತಾ ಸೈಟ್ ಮಾಲೀಕರಿಗೆ ನೇರ ಪ್ರಯೋಜನವಾಗಲಿದ್ದು, ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿದ್ದ ದೊಡ್ಡ ಕಾನೂನು ತೊಡಕು ನಿವಾರಣೆಯಾದಂತಾಗಿದೆ.

ಏನಿದು ಹೊಸ ಬದಲಾವಣೆ?:

ಇಲ್ಲಿಯವರೆಗೂ ಮಾಸ್ಟರ್ ಪ್ಲಾನ್ ಅಥವಾ ಸಿಡಿಪಿ (CDP) ವ್ಯಾಪ್ತಿಯಲ್ಲಿರುವ ಜಮೀನಿನ ಅಭಿವೃದ್ಧಿಗೆ ಕಡ್ಡಾಯವಾಗಿ ಭೂ ಪರಿವರ್ತನೆ ಮಾಡಿಸಬೇಕಿತ್ತು. ‘ಡೀಮ್ಡ್ ಕನ್ವರ್ಷನ್’ ಇದ್ದರೂ ಸಹ, ಈ ಪ್ರಕ್ರಿಯೆಯು ಕನಿಷ್ಠ 4 ರಿಂದ 6 ತಿಂಗಳು ಸಮಯ ತೆಗೆದುಕೊಳ್ಳುತ್ತಿತ್ತು. ಈ ವಿಳಂಬ ನೀತಿಯಿಂದಾಗಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿ, ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತಿತ್ತು. ಆದರೆ, ನೂತನ ತಂತ್ರಾಂಶದ ಅಡಿಯಲ್ಲಿ, ಮಾಸ್ಟರ್ ಪ್ಲಾನ್ ಪ್ರಕಾರ ನೇರವಾಗಿ ಯೋಜನಾ ಅನುಮೋದನೆ ಪಡೆಯಬಹುದು. ಯೋಜನೆಯ ಅನುಮೋದನೆಯ ಭಾಗವಾಗಿಯೇ ಭೂ ಪರಿವರ್ತನೆಯನ್ನು ಪರಿಗಣಿಸಲಾಗುತ್ತದೆ.

‘ಬಿ’ ಖಾತಾ ಮಾಲೀಕರಿಗೆ ಸಿಹಿ ಸುದ್ದಿ:

ಬೆಂಗಳೂರಿನಲ್ಲಿ ಲಕ್ಷಾಂತರ ಜನರು ಅನಧಿಕೃತ ಲೇಔಟ್‌ಗಳಲ್ಲಿ ನಿವೇಶನ ಖರೀದಿಸಿ, ‘ಬಿ’ ಖಾತಾ ಇಟ್ಟುಕೊಂಡು ಪರದಾಡುತ್ತಿದ್ದಾರೆ. ಅಂತಹ ಮಾಲೀಕರಿಗೆ ಈ ಹೊಸ ಆದೇಶ ವರದಾನವಾಗಲಿದೆ. “ಸ್ವಯಂ ಪರಿವರ್ತನೆ ನಿಯಮ ಜಾರಿಯಾಗುವುದರಿಂದ ಬಿ-ಖಾತಾ ನಿವೇಶನಗಳನ್ನು ಎ-ಖಾತಾ (A-Khata) ಆಗಿ ಪರಿವರ್ತಿಸಲು ಜಿಬಿಎ ಕಾನೂನು ಚೌಕಟ್ಟನ್ನು ಸರಳಗೊಳಿಸಿದೆ. ಇದರಿಂದ ನಿಮ್ಮ ಆಸ್ತಿಗೆ ಸಂಪೂರ್ಣ ಕಾನೂನು ಬಲ ಸಿಗಲಿದ್ದು, ಬ್ಯಾಂಕ್ ಸಾಲ ಸೌಲಭ್ಯ ಪಡೆಯಲು ಮತ್ತು ಆಸ್ತಿ ಮಾರಾಟ ಮಾಡಲು ಇದ್ದ ಅಡೆತಡೆಗಳು ನಿವಾರಣೆಯಾಗಲಿವೆ,” ಎಂದು ಸಚಿವರು ಭರವಸೆ ನೀಡಿದರು.

ಭ್ರಷ್ಟಾಚಾರಕ್ಕೆ ಬ್ರೇಕ್, ಜನಸಾಮಾನ್ಯರಿಗೆ ನೆಮ್ಮದಿ

ಹಳೇ ಪದ್ಧತಿಯಿಂದಾಗಿ ಡೆವಲಪರ್‌ಗಳು ಮತ್ತು ಸಾಮಾನ್ಯ ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಅನಗತ್ಯ ವಿಳಂಬದಿಂದಾಗಿ ವೆಚ್ಚವೂ ಹೆಚ್ಚಾಗುತ್ತಿತ್ತು. ಅಂತಿಮವಾಗಿ ಈ ಹೊರೆ ನಿವೇಶನ ಖರೀದಿದಾರರ ತಲೆಗೆ ಬೀಳುತ್ತಿತ್ತು. ಆದರೆ, ನೂತನ ‘ಸ್ವಯಂ ಪರಿವರ್ತನೆ’ ವ್ಯವಸ್ಥೆಯು ಪಾರದರ್ಶಕವಾಗಿದ್ದು, ಆನ್‌ಲೈನ್ ಮೂಲಕ ಸಮಯಮಿತಿಯೊಳಗೆ ಕೆಲಸವಾಗಲಿದೆ. ಇದು ಆಡಳಿತದಲ್ಲಿ ಸುಧಾರಣೆ ತರುವುದಲ್ಲದೆ, ಕಂದಾಯ ಇಲಾಖೆಯ ಮೇಲಿದ್ದ ಅಪಖ್ಯಾತಿಯನ್ನು ತೊಡೆದುಹಾಕಲು ನೆರವಾಗಲಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇ-ಖಾತಾ ಜೊತೆ ಜೋಡಣೆ:

ಕೇವಲ ಪರಿವರ್ತನೆ ಸುಲಭ ಮಾಡುವುದಷ್ಟೇ ಅಲ್ಲದೆ, ಈ ಪ್ರಕ್ರಿಯೆಯನ್ನು ಇ-ಖಾತಾ (E-Khata) ಜೊತೆಗೆ ಇಂಟಿಗ್ರೇಷನ್ ಮಾಡಲಾಗಿದೆ. ಇದರಿಂದಾಗಿ ಆಸ್ತಿಯ ದಾಖಲೆಗಳು ಡಿಜಿಟಲೀಕರಣಗೊಂಡು, ಮಾಲೀಕತ್ವಕ್ಕೆ ಹೆಚ್ಚಿನ ಭದ್ರತೆ ದೊರೆಯಲಿದೆ. ಭವಿಷ್ಯದಲ್ಲಿ ಯಾವುದೇ ಕಾನೂನು ತಕರಾರುಗಳು ಉಂಟಾಗದಂತೆ ಇದು ತಡೆಯಲಿದೆ.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸರ್ಕಾರದ ಪ್ರಧಾನ ಕಾರ್ದರ್ಶಿಗಳಾದ (ವಿಪತ್ತು ನಿವರ್ಹಣೆ) ಮೌನೀಶ್ ಮುದ್ಗಿಲ್, ಕಂದಾಯ ಆಯುಕ್ತರಾದ ಮೀನಾ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಒಟ್ಟಾರೆಯಾಗಿ, ಸ್ವಂತ ಸೂರು ಹೊಂದುವ ಕನಸು ಕಾಣುತ್ತಿರುವ ಜನಸಾಮಾನ್ಯರಿಗೆ ಮತ್ತು ಕಾನೂನು ತೊಡಕಿನಲ್ಲಿ ಸಿಲುಕಿದ್ದ ನಿವೇಶನದಾರರಿಗೆ ರಾಜ್ಯ ಸರ್ಕಾರ ಈ ಮೂಲಕ ದೊಡ್ಡ ಉಡುಗೊರೆ ನೀಡಿದಂತಾಗಿದೆ.

WhatsApp Join our WhatsApp Channel
Previous Post

Boards & Corporations | ವಿವಿಧ 54 ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ – ಇಲ್ಲಿದೆ ಪಟ್ಟಿ

Next Post

Health News | ಬಲಿಷ್ಠ ರೋಗ ನಿರೋಧಕ ಶಕ್ತಿಗೆ ರಾಮಬಾಣ ‘ವಿಟಮಿನ್ ಸಿ’: ನಿಮ್ಮ ಡಯಟ್‌ನಲ್ಲಿರಲಿ ಈ 8 ನೈಸರ್ಗಿಕ ಆಹಾರಗಳು

Next Post

Health News | ಬಲಿಷ್ಠ ರೋಗ ನಿರೋಧಕ ಶಕ್ತಿಗೆ ರಾಮಬಾಣ 'ವಿಟಮಿನ್ ಸಿ': ನಿಮ್ಮ ಡಯಟ್‌ನಲ್ಲಿರಲಿ ಈ 8 ನೈಸರ್ಗಿಕ ಆಹಾರಗಳು

ಭಾರತದ ಕ್ಯಾಥೊಲಿಕ್ ಬಿಷಪ್‌ಗಳ ಮಂಡಳಿ (ಸಿಬಿಸಿಐ) ನೂತನ ಅಧ್ಯಕ್ಷರಾಗಿ ಕಾರ್ಡಿನಲ್ ಪೂಲಾ ಆಂಥೋನಿ ಆಯ್ಕೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group