Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬೀದರ್: ಪತ್ರಕರ್ತರ ಪೆನ್ನು ಸದಾ ಸತ್ಯದ ಪರವಾಗಿರಲಿ; ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನಕ್ಕೆ ಅದ್ಧೂರಿ ತೆರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ; ಸಮಾರೋಪದಲ್ಲಿ ಯು.ಟಿ. ಖಾದರ್, ಆರ್. ಅಶೋಕ ಹಾಗೂ ಈಶ್ವರ ಖಂಡ್ರೆ ಭಾಗಿ; ವಿಜಯ ಕರ್ನಾಟಕದ ನಾಲ್ವರು ಸೇರಿದಂತೆ 40 ಪತ್ರಕರ್ತರಿಗೆ ವಿವಿಧ ಪ್ರಶಸ್ತಿ ಪ್ರದಾನ.

by Bengaluru Wire Desk
April 13, 2026
in News Wire, Public interest
Reading Time: 1 min read
0

ಬೀದರ್, ಏ.13 www.bengaluruwire.com: ಗಡಿ ನಾಡು ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನವು ಭಾನುವಾರ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು. 

ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರ ಜವಾಬ್ದಾರಿ ಹಾಗೂ ಮಾಧ್ಯಮಗಳ ಪ್ರಸ್ತುತ ಸ್ಥಿತಿಗತಿಗಳ ಕುರಿತ ಗಂಭೀರ ಚರ್ಚೆಗಳಿಗೆ ಈ ಸಮ್ಮೇಳನ ಸಾಕ್ಷಿಯಾಯಿತು.

ಸಮ್ಮೇಳನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಎರಡನೇ ದಿನ ವಿವಿಧ ವಿಷಯಾಧಾರಿತ ಗೋಷ್ಠಿಗಳು ನಡೆದವು. ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, “ದೇಶ ಮತ್ತು ಸಮಾಜವನ್ನು ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ. ಲೇಖನಿ ಎಂಬುದು ಕೇವಲ ಶಬ್ದಗಳನ್ನಲ್ಲ, ಸತ್ಯವನ್ನು ಬರೆಯುವ ಶಕ್ತಿಯಾಗಬೇಕು,” ಎಂದು ಕಿವಿಮಾತು ಹೇಳಿದರು.

ಮಾಧ್ಯಮವೇ ವಿರೋಧ ಪಕ್ಷ: ಆರ್. ಅಶೋಕ:

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಪ್ರತಿಪಕ್ಷದಂತೆ ಕೆಲಸ ಮಾಡಬೇಕು. ಪತ್ರಕರ್ತರು ಭಯವಿಲ್ಲದೆ ವೃತ್ತಿ ನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮದ ಘನತೆ ಹೆಚ್ಚುತ್ತದೆ. ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದು ಎಂದರೆ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿದಂತೆ,” ಎಂದು ಅಭಿಪ್ರಾಯಪಟ್ಟರು.

ಅಭಿವೃದ್ಧಿಗೆ ಮಾಧ್ಯಮಗಳ ಸಹಕಾರ ಅಗತ್ಯ: ಈಶ್ವರ ಖಂಡ್ರೆ:

ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, “371ಜೆ ಸಾಂವಿಧಾನಿಕ ತಿದ್ದುಪಡಿಯಿಂದ ಕಲ್ಯಾಣ ಕರ್ನಾಟಕ ಭಾಗ ಇಂದು ಪ್ರಗತಿಯತ್ತ ಸಾಗುತ್ತಿದೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಮಾಧ್ಯಮಗಳು ಪೂರಕ ಸಲಹೆಗಳನ್ನು ನೀಡಬೇಕು,” ಎಂದು ಮನವಿ ಮಾಡಿದರು. ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಅವರು ಇಂದಿನ ಸವಾಲಿನ ದಿನಗಳಲ್ಲಿ ಸರ್ಕಾರ ಪತ್ರಕರ್ತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಪ್ರಶಸ್ತಿಗಳ ಸುರಿಮಳೆ:

ಹಿರಿಯ ಛಾಯಾಗ್ರಾಹಕ ಕೆ.ಎಸ್. ಗಣೇಶ್ ಅವರಿಗೆ ಸಭಾಧ್ಯಕ್ಷ ಯು.ಟಿ.ಖಾದರ್, ಸಚಿವ ಈಶ್ವರ್ ಖಂಡ್ರೆ ಹಾಗೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶಸ್ತಿ ನೀಡಿ ಗೌರವಿಸಿದ ಸಂದರ್ಭ.

ಸಮ್ಮೇಳನದ ಸಮಾರೋಪದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 40 ಪತ್ರಕರ್ತರಿಗೆ ದತ್ತಿನಿಧಿ, ವಾರ್ಷಿಕ ಹಾಗೂ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ವಿಜಯ ಕರ್ನಾಟಕ ಪತ್ರಿಕೆಯ ನಾಲ್ವರು ಪತ್ರಕರ್ತರು, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ್ ಎಸ್.ಸಂಪ ಅವರು ಪ್ರಶಸ್ತಿಗೆ ಭಾಜನರಾಗಿದ್ದು ವಿಶೇಷವಾಗಿತ್ತು. ಬೆಂಗಳೂರಿನ ಹಿರಿಯ ಛಾಯಾಗ್ರಾಹಕ ಕೆ.ಎಸ್. ಗಣೇಶ್ ಅವರಿಗೆ ‘ಉತ್ತಮ ಸುದ್ದಿ ಛಾಯಾಗ್ರಾಹಕ’ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ್ ಎಸ್.ಸಂಪ ಅವರು ಕೆಯುಡಬ್ಲ್ಯುಜೆ ಮಂಗಳ ಎಂ.ಸಿ.ವರ್ಗೀಸ್ ರಾಜ್ಯ ಪ್ರಶಸ್ತಿಯನ್ನು ಪಡೆದ ಕ್ಷಣ.

ಮಾಹಿತಿ ಹಕ್ಕು ಕಾಯಿದೆ ಕುರಿತು ಗೋಷ್ಠಿ:

“ಪತ್ರಕರ್ತರಲ್ಲಿ ಓದು ಮತ್ತು ಅಧ್ಯಯನಶೀಲತೆ ಕಡಿಮೆಯಾಗುತ್ತಿದೆ,” ಎಂದು ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಕಳವಳ ವ್ಯಕ್ತಪಡಿಸಿದರು. ಮತ್ತೊಬ್ಬ ಆಯುಕ್ತ ಬದ್ರುದ್ದೀನ್ ಮಾತನಾಡಿ, ಮಾಹಿತಿ ಹಕ್ಕು ಕಾಯಿದೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಬಿ. ವೆಂಕಟಸಿಂಗ್ ಅವರು ಪಾರದರ್ಶಕ ಆಡಳಿತಕ್ಕೆ ಆರ್‌ಟಿಐ ದಿಕ್ಸೂಚಿಯಾಗಿದೆ ಎಂದು ವಿಶ್ಲೇಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದು ಪಾಟೀಲ್, ಶರಣು ಸಲಗರ, ಎಂಎಲ್ ಮಾರುತಿರಾವ್ ಮುಳೆ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಊಹಾ ಪತ್ರಿಕೋದ್ಯಮ ಅಪಾಯಕಾರಿ: ಕ್ಷುಲ್ಲಕ ವಿಷಯ ಬಿಟ್ಟು ಸಮಾಜ ಕಟ್ಟುವ ಕೆಲಸ ಮಾಡಿ; ಪತ್ರಕರ್ತರಿಗೆ ಸಿಎಂ ಕಿವಿಮಾತು

Next Post

ಬೆಂವಿವಿಯಲ್ಲಿ ನಾಳೆ ಅಂಬೇಡ್ಕರ್ ಜಯಂತಿ ಸಂಭ್ರಮ: ವಿಚಾರ ಸಂಕಿರಣ, ರಕ್ತದಾನ ಶಿಬಿರ ಆಯೋಜನೆ

Next Post

ಬೆಂವಿವಿಯಲ್ಲಿ ನಾಳೆ ಅಂಬೇಡ್ಕರ್ ಜಯಂತಿ ಸಂಭ್ರಮ: ವಿಚಾರ ಸಂಕಿರಣ, ರಕ್ತದಾನ ಶಿಬಿರ ಆಯೋಜನೆ

ಇ-ಸ್ವತ್ತು 2.0 ತಂತ್ರಾಂಶ ಮೇಲ್ದರ್ಜೆಗೆ: ಸಾರ್ವಜನಿಕರ 1.52 ಲಕ್ಷ ಅರ್ಜಿಗಳ ಪೈಕಿ 1.33 ಲಕ್ಷ ವಿಲೇವಾರಿ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d