Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ತಮಿಳುನಾಡು ಚುನಾವಣೆ: ಡಿಎಂಕೆ-ಕಾಂಗ್ರೆಸ್ ಮೈತ್ರಿಗೆ ಮೂರನೇ ಎರಡರಷ್ಟು ಬಹುಮತ ಖಚಿತ; ಡಿಕೆ ಶಿವಕುಮಾರ್ ಭವಿಷ್ಯ

ಸಿನಿಮಾ ಡೈಲಾಗ್‌ಗಳಿಗೆ ಮರುಳಾಗಬೇಡಿ ಎಂದು ತಮಿಳು ಯುವಜನತೆಗೆ ಕರೆ ನೀಡಿದ ಡಿಸಿಎಂ; ಎಐಎಡಿಎಂಕೆ ನಾಯಕ ಪಳನಿಸ್ವಾಮಿಗೆ ಸೋಲಿನ ಭಯ ಆವರಿಸಿದೆ ಎಂದು ಲೇವಡಿ.

by Bengaluru Wire Desk
April 15, 2026
in News Wire, Public interest
Reading Time: 1 min read
0

ಕೊಯಮತ್ತೂರು/ಈರೋಡ್, ಏ.15 www.bengaluruwire.com : ತಮಿಳುನಾಡು ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ನೆರೆರಾಜ್ಯದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. 

ಬುಧವಾರ ಕೊಯಮತ್ತೂರು ಮತ್ತು ಈರೋಡ್‌ನಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಅವರು, ಡಿಎಂಕೆ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಈ ಬಾರಿ ರಾಜ್ಯದಲ್ಲಿ ಮೂರನೇ ಎರಡರಷ್ಟು (2/3) ಸ್ಥಾನಗಳನ್ನು ಗೆಲ್ಲುವ ಮೂಲಕ ಸುಲಭ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ ಸಂಬಂಧ ಇಂದು ನಿನ್ನೆಯದಲ್ಲ, ಇದಕ್ಕೆ ದಶಕಗಳ ಇತಿಹಾಸವಿದೆ. ಕಳೆದ ಐದು ವರ್ಷಗಳಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ಸರ್ಕಾರ ಪ್ರತಿಯೊಂದು ಸಮುದಾಯವನ್ನು ಸಮಾನವಾಗಿ ಕಂಡಿದೆ. ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ ಎಂದು ಸರ್ಕಾರದ ಸಾಧನೆಯನ್ನು ಕೊಂಡಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಿಳುನಾಡಿನ ಈರೋಡ್ ಪೂರ್ವ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಿನಾಥ್ ಪಳನಿಯಪ್ಪನ್ ಪರ ಬುಧವಾರ ರೋಡ್ ಶೋ ನಡೆಸಿ ಚುನಾವಣೆ ಪ್ರಚಾರ ಮಾಡಿದರು.

ಯುವಜನತೆಗೆ ಕಿವಿಮಾತು: ಸಿನಿಮಾ ಡೈಲಾಗ್ ಶಾಶ್ವತವಲ್ಲ:

ಇತ್ತೀಚಿನ ದಿನಗಳಲ್ಲಿ ತಮಿಳುನಾಡು ರಾಜಕೀಯದಲ್ಲಿ ನಟರ ಪ್ರಭಾವ ಹೆಚ್ಚುತ್ತಿರುವ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ ಡಿ.ಕೆ. ಶಿವಕುಮಾರ್, ತಮಿಳುನಾಡಿನ ಯುವಕರು ಕೇವಲ ಸಿನಿಮಾ ಡೈಲಾಗ್‌ಗಳಿಗೆ ಮರುಳಾಗಬಾರದು ಎಂದು ಮನವಿ ಮಾಡಿದರು. ಸಿನಿಮಾ ಡೈಲಾಗ್‌ಗಳ ಪ್ರಭಾವ ಕೇವಲ ಒಂದೆರಡು ದಿನ ಮಾತ್ರ ಇರುತ್ತದೆ. ಆದರೆ ನಾವು ನೀಡುವ ಅಭಿವೃದ್ಧಿ ಮತ್ತು ಅವಕಾಶಗಳು ನಿಮ್ಮ ಜೀವನಪರ್ಯಂತ ಇರಲಿವೆ. ಹೀಗಾಗಿ ಅಭಿವೃದ್ಧಿ ಪರವಾಗಿರುವ ಸ್ಟಾಲಿನ್ ಸರ್ಕಾರವನ್ನು ಮತ್ತೊಮ್ಮೆ ಬೆಂಬಲಿಸಿ ಎಂದು ಕರೆ ನೀಡಿದರು.

ಮಹಿಳಾ ಮೀಸಲಾತಿ ಬಿಲ್ ಬಗ್ಗೆ ಅಸಮಾಧಾನ:

ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮತ್ತು ಲೋಕಸಭಾ ಸ್ಥಾನಗಳ ಹೆಚ್ಚಳದ ಬಿಲ್ ತರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ರಾಜಕೀಯ ಲಾಭಕ್ಕಾಗಿ ಮಾಡುತ್ತಿರುವ ಗಿಮಿಕ್. ವಿಧಾನಸಭಾ ಚುನಾವಣೆಗಳು ಮುಗಿದ ನಂತರ ಈ ಬಗ್ಗೆ ಚರ್ಚಿಸಬಹುದಿತ್ತು. ಯುಪಿಎ ಅವಧಿಯಲ್ಲೇ ಸೋನಿಯಾ ಗಾಂಧಿ ಅವರು ಈ ಬಗ್ಗೆ ಮೊದಲ ಹೆಜ್ಜೆ ಇಟ್ಟಿದ್ದರು. ಈಗ ಪ್ರತಿಯೊಂದು ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದರು.

ಪಳನಿಸ್ವಾಮಿಗೆ ಸೋಲಿನ ಭೀತಿ:

ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಅವರ ಟೀಕೆಗಳಿಗೆ ಉತ್ತರಿಸಿದ ಶಿವಕುಮಾರ್, ಪಳನಿಸ್ವಾಮಿ ಅವರಿಗೆ ಡಿಎಂಕೆ-ಕಾಂಗ್ರೆಸ್ ಮೈತ್ರಿಯ ಅಲೆ ನೋಡಿ ಭಯ ಶುರುವಾಗಿದೆ. ನಮ್ಮ ಮೈತ್ರಿಕೂಟ ಅತ್ಯಂತ ಬಲಿಷ್ಠವಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಆಗಮನದಿಂದ ಮೈತ್ರಿಗೆ ಮತ್ತಷ್ಟು ಆನೆಬಲ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೇಕೆದಾಟು ವಿಚಾರ ಈಗ ನ್ಯಾಯಾಲಯದಲ್ಲಿದ್ದು, ಅದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂರ್ಭದಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್ ಅಳಿಯ ಶಬರೀಸನ್, ಸೆಂದಿಲ್ ಬಾಲಾಜಿ, ಕರ್ನಾಟಕ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಪತ್ ರಾಜ್ ಮತ್ತಿತರ ನಾಯಕರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಆದಿಚುಂಚನಗಿರಿಯಲ್ಲಿ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ: ಬಾಲಗಂಗಾಧರನಾಥ ಶ್ರೀಗಳ ಸಾಮಾಜಿಕ ಕಳಕಳಿ ಸ್ಮರಣೆ

Next Post

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ: ಕರ್ನಾಟಕದ ಅಭಿವೃದ್ಧಿಗೆ ₹50,000 ಕೋಟಿಗೂ ಅಧಿಕ ಅನುದಾನಕ್ಕೆ ಆಗ್ರಹ

Next Post

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ: ಕರ್ನಾಟಕದ ಅಭಿವೃದ್ಧಿಗೆ ₹50,000 ಕೋಟಿಗೂ ಅಧಿಕ ಅನುದಾನಕ್ಕೆ ಆಗ್ರಹ

ಬೆಂಗಳೂರಿಗರೇ ಗಮನಿಸಿ: ನಾಳೆಯಿಂದ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಜನಗಣತಿ ಅಧಿಕಾರಿಗಳು; ಮಾಹಿತಿ ನೀಡದಿದ್ದರೆ ಕಾನೂನು ಕ್ರಮ ಅನಿವಾರ್ಯ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d