Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಸಿಬಿಎಸ್ಇಯಿಂದ ಕಡ್ಡಾಯ ಕನ್ನಡ ಕಲಿಕೆಗೆ ಅಡ್ಡಗಾಲು: ಎನ್ಒಸಿ ನಿಯಮ ಪರಿಷ್ಕರಣೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

by Bengaluru Wire Desk
May 19, 2026
in News Wire
Reading Time: 1 min read
0
ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.19 www.bengaluruwire.com: ರಾಜ್ಯದಲ್ಲಿ 2015ರಿಂದ ಜಾರಿಯಲ್ಲಿರುವ ಕಡ್ಡಾಯ ಕನ್ನಡ ಭಾಷಾ ಕಲಿಕಾ ಕಾಯ್ದೆಗೆ ಸಿಬಿಎಸ್ಇ (CBSE) ಮಂಡಳಿ ತಣ್ಣೀರೆರಚಿದ್ದು, ಈ ಕೂಡಲೇ ಕೇಂದ್ರದ ಮೇಲೆ ಒತ್ತಡ ಹೇರಿ ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.

​ಶಿಕ್ಷಣವು ಸಂವಿಧಾನದ ಸಮವರ್ತಿ ಪಟ್ಟಿಯಲ್ಲಿದ್ದರೂ, ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸಿಬಿಎಸ್ಇ ಮಂಡಳಿಯು 2026ರ ಮೇ 15ರಂದು ತನ್ನ ಅಧೀನದ ಶಾಲಾ ಮುಖ್ಯಸ್ಥರಿಗೆ ನೀಡಿರುವ ಸೂಚನೆಯು ಆಕ್ಷೇಪಾರ್ಹವಾಗಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಪತ್ರ ಬರೆದಿರುವ ಅವರು, ನಿರಾಕ್ಷೇಪಣಾ ಪತ್ರ (ಎನ್.ಒ.ಸಿ) ನೀಡಿಕೆ ನಿಯಮಗಳನ್ನು ಸಮಗ್ರವಾಗಿ ಪರಿಷ್ಕರಿಸುವಂತೆ ಒತ್ತಾಯಿಸಿದ್ದಾರೆ.

​ಭಾಷಾ ಕಾನೂನು ದುರ್ಬಲಗೊಳಿಸುವ ಯತ್ನ:

ಕನ್ನಡ ಭಾಷಾ ಕಲಿಕಾ ಕಾಯ್ದೆಯನ್ವಯ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಆದರೆ ಸಿಬಿಎಸ್ಇ ಶಾಲೆಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಒಮ್ಮೆ ಎನ್.ಒ.ಸಿ ನೀಡಿದ ಬಳಿಕ ಶಿಕ್ಷಣ ಇಲಾಖೆಯ ನಿಯಂತ್ರಣ ಸೀಮಿತವಾಗುತ್ತಿದೆ. ಇದನ್ನು ದುರ್ಬಳಕೆ ಮಾಡಿಕೊಂಡು ರಾಜ್ಯದ ಭಾಷಾ ಕಾನೂನುಗಳನ್ನು ದುರ್ಬಲಗೊಳಿಸುವ ಮಂಡಳಿಯ ಏಕಪಕ್ಷೀಯ ನಿರ್ಣಯ ಸ್ವೀಕಾರಾರ್ಹವಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

​ಸರ್ಕಾರಕ್ಕೆ ಡಾ. ಬಿಳಿಮಲೆ ನೀಡಿದ ಪ್ರಮುಖ 5 ಸಲಹೆಗಳು:

​ಕನ್ನಡ ಕಡ್ಡಾಯಗೊಳಿಸಿ: ಸಿಬಿಎಸ್ಇ ಶಾಲೆಗಳು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಬದಿಗಿಡುವ ವ್ಯವಸ್ಥೆಗೆ ಕೂಡಲೇ ಕಡಿವಾಣ ಹಾಕಬೇಕು. ಆರ್ 1/ ಆರ್ 2 (R1/R2) ವಿಷಯ ಕಡ್ಡಾಯವಾಗಿ ಕನ್ನಡವೇ ಆಗಿರಬೇಕು.

​ಎನ್.ಒ.ಸಿ ವಾರ್ಷಿಕ ನವೀಕರಣ: ರಾಜ್ಯ ಸರ್ಕಾರವು ನೀಡುವ ಎನ್.ಒ.ಸಿ ವ್ಯವಸ್ಥೆಯನ್ನು ವಾರ್ಷಿಕ ನವೀಕರಣಕ್ಕೆ ಒಳಪಡಿಸಬೇಕು. ಕನ್ನಡ ಬೋಧನೆ, ಶಿಕ್ಷಕರ ನೇಮಕಾತಿ ಮತ್ತು ಭಾಷಾ ಅನುಷ್ಠಾನದ ವರದಿ ಆಧಾರದ ಮೇಲೆಯೇ ನವೀಕರಣ ಮಾಡಬೇಕು.

​ಎನ್.ಒ.ಸಿ ರದ್ದು ಅಧಿಕಾರ: ಕನ್ನಡ ಅನುಷ್ಠಾನದಲ್ಲಿ ಯಾವುದೇ ರೀತಿಯ ಲೋಪ ಕಂಡುಬಂದಲ್ಲಿ, ಶಾಲೆಯ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ರದ್ದುಪಡಿಸುವ ಪರಮಾಧಿಕಾರವನ್ನು ರಾಜ್ಯ ಸರ್ಕಾರ ಕಾಯ್ದಿರಿಸಿಕೊಳ್ಳಬೇಕು.

​ಅರ್ಹ ಕನ್ನಡ ಶಿಕ್ಷಕರ ನೇಮಕ: ಎಲ್ಲ ಸಿ.ಬಿ.ಎಸ್.ಇ ಶಾಲೆಗಳಲ್ಲಿ ಕೇವಲ ಪಠ್ಯಕ್ರಮದಲ್ಲಿ ಕನ್ನಡ ಸೇರಿಸುವುದಷ್ಟೇ ಅಲ್ಲ, ಅದನ್ನು ಸಮರ್ಪಕವಾಗಿ ಬೋಧಿಸಲು ಅರ್ಹ ಕನ್ನಡ ಶಿಕ್ಷಕರ ನೇಮಕಾತಿಯನ್ನು ಕಡ್ಡಾಯಗೊಳಿಸಬೇಕು.

​ಕಠಿಣ ಕಾನೂನು ಕ್ರಮ: ಭಾಷಾ ನೀತಿಯನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸದನ ಸಮಿತಿ ಅಥವಾ ತಜ್ಞರ ಸಮಿತಿಯನ್ನು ರಚಿಸಿ, ಅದರ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು.

​ಕರ್ನಾಟಕದಲ್ಲಿ ಓದುವ ಪ್ರತಿಯೊಂದು ವಿದ್ಯಾರ್ಥಿಯು ಕನ್ನಡದೊಂದಿಗೆ ಬಾಂಧವ್ಯ ಹೊಂದುವುದು ಅತ್ಯಗತ್ಯ. ಹೀಗಾಗಿ ಕನ್ನಡದ ಹಿತಾಸಕ್ತಿಗೆ ವಿರುದ್ಧವಾಗಿರುವ ಯಾವುದೇ ಕ್ರಮದ ಎದುರು ರಾಜ್ಯ ಸರ್ಕಾರವು ದೃಢ ನಿಲುವು ತಾಳಬೇಕು ಎಂದು ಡಾ. ಪುರುಷೋತ್ತಮ ಬಿಳಿಮಲೆ ಸ್ಪಷ್ಟಪಡಿಸಿದ್ದಾರೆ.

WhatsApp Join our WhatsApp Channel
Previous Post

ದೇವಸ್ಥಾನಗಳ ಚಿನ್ನದ ಮೇಲೆ ಸರ್ಕಾರದ ಕಣ್ಣು? ಸಾಮಾಜಿಕ ಜಾಲತಾಣಗಳ ಸುದ್ದಿ ಸಂಪೂರ್ಣ ಸುಳ್ಳು ಎಂದ ಪಿಐಬಿ

Next Post

ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group