Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

ದಕ್ಷಿಣ ಭಾರತದ ಪ್ರಯಾಣಿಕರಿಗೆ ಸ್ವಿಸ್ ಏರ್‌ಲೈನ್ಸ್‌ನಿಂದ ಸಿಹಿ ಸುದ್ದಿ; ವಾರದಲ್ಲಿ 5 ದಿನ ನೇರ ವಿಮಾನ ಸಂಚಾರ, ಟಿಕೆಟ್ ಬುಕ್ಕಿಂಗ್ ಆರಂಭ.

by Bengaluru Wire Desk
May 20, 2026
in News Wire
Reading Time: 1 min read
0

ಬೆಂಗಳೂರು, ಮೇ.20 www.bengaluruwire.com: ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಸಿಲಿಕಾನ್ ಸಿಟಿ ಬೆಂಗಳೂರಿಗರಿಗೆ ‘ಸ್ವಿಸ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್’ (SWISS) ಭರ್ಜರಿ ಸುದ್ದಿ ನೀಡಿದೆ. 

ಭಾರತ ಮತ್ತು ಸ್ವಿಟ್ಜರ್‌ಲ್ಯಾಂಡ್ ನಡುವಿನ ವಾಯುಯಾನ ಸಂಪರ್ಕವನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ, ಬೆಂಗಳೂರು ಮತ್ತು ಸ್ವಿಟ್ಜರ್‌ಲ್ಯಾಂಡ್‌ನ ಪ್ರಮುಖ ಆರ್ಥಿಕ ಕೇಂದ್ರ ‘ಜ್ಯೂರಿಕ್’ ನಡುವೆ ಹೊಸ ನೇರ ವಿಮಾನ ಸೇವೆಯನ್ನು ಆರಂಭಿಸುವುದಾಗಿ ಸಂಸ್ಥೆ ಅಧಿಕೃತವಾಗಿ ಘೋಷಿಸಿದೆ.

​ಬರುವ 2026ರ ಅಕ್ಟೋಬರ್‌ನಿಂದ ಈ ಹೊಸ ಮಾರ್ಗದಲ್ಲಿ ವಿಮಾನ ಹಾರಾಟ ಶುರುವಾಗಲಿದೆ. ವಾರದಲ್ಲಿ ಐದು ದಿನ ಈ ಸೇವೆ ಲಭ್ಯವಿರಲಿದ್ದು, ಮಂಗಳವಾರದಿಂದ ದಕ್ಷಿಣ ಭಾರತದ ಪ್ರಯಾಣಿಕರು ಜ್ಯೂರಿಕ್ ನಗರವನ್ನು ಸುಲಭವಾಗಿ ತಲುಪಬಹುದಾಗಿದೆ. ಅಲ್ಲದೆ, ಮಾತೃ ಸಂಸ್ಥೆ ಲುಫ್ತಾನ್ಸಾ ಸಮೂಹದ (Lufthansa Group) ಬೃಹತ್ ವಿಮಾನಜಾಲದ ಮೂಲಕ ಯುರೋಪ್ ಮತ್ತು ಉತ್ತರ ಅಮೆರಿಕಾದ ನೂರಾರು ನಗರಗಳಿಗೆ ಸುಲಭವಾಗಿ ಕನೆಕ್ಟಿಂಗ್ ಫ್ಲೈಟ್ ಪಡೆಯಲು ಇದು ನೆರವಾಗಲಿದೆ.

​ಬೆಂಗಳೂರನ್ನೇ ಆಯ್ದುಕೊಂಡಿದ್ದೇಕೆ ಸ್ವಿಸ್ ಏರ್‌ಲೈನ್ಸ್?

​ಭಾರತದಲ್ಲಿ ಸ್ವಿಸ್ ಏರ್‌ಲೈನ್ಸ್‌ನ ಕಾರ್ಯಾಚರಣೆಗೆ ಬೆಂಗಳೂರು ಈಗ ಹೊಸ ತಾಣವಾಗಿ ಸೇರ್ಪಡೆಯಾಗಿದೆ. ಕಾರ್ಪೊರೇಟ್ ವಲಯದ ಪ್ರಯಾಣಿಕರು, ಐಟಿ ತಂತ್ರಜ್ಞರು, ಪ್ರೀಮಿಯಂ ಪ್ರವಾಸಿಗರು ಮತ್ತು ಯುರೋಪ್-ಅಮೆರಿಕಾಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಂದ ವಿಮಾನಯಾನಕ್ಕೆ ದಿನೇ ದಿನೇ ಬೇಡಿಕೆ ಹೆಚ್ಚುತ್ತಿದೆ. ಈ ಬೇಡಿಕೆಯನ್ನು ಸಮರ್ಥವಾಗಿ ಪೂರೈಸಲು ಈ ಹೊಸ ಮಾರ್ಗವನ್ನು ಪರಿಚಯಿಸಲಾಗಿದೆ.

​ಹೊಸ ವಿಮಾನ ಸೇವೆಯ ಕುರಿತು ಮಾತನಾಡಿದ ಲುಫ್ತಾನ್ಸಾ ಗ್ರೂಪ್‌ನ ದಕ್ಷಿಣ ಏಷ್ಯಾ ವಿಭಾಗದ ಹಿರಿಯ ನಿರ್ದೇಶಕ ಕೆವಿನ್ ಮಾರ್ಕೆಟ್ಟೆ, “ಭಾರತವು ಲುಫ್ತಾನ್ಸಾ ಗ್ರೂಪ್‌ಗೆ ಅತ್ಯಂತ ಪ್ರಮುಖ ಮಾರುಕಟ್ಟೆಯಾಗಿದೆ. ಜಾಗತಿಕ ಟೆಕ್ ಹಬ್ ಆಗಿರುವ ಬೆಂಗಳೂರಿನಿಂದ ಸ್ವಿಸ್ ಏರ್‌ಲೈನ್ಸ್ ಸೇವೆ ಆರಂಭಿಸುತ್ತಿರುವುದು ನಮಗೆ ಅತೀವ ಸಂತಸ ತಂದಿದೆ. ಜರ್ಮನಿಯ ಫ್ರಾಂಕ್‌ಫರ್ಟ್ ಮತ್ತು ಮ್ಯೂನಿಕ್ ನಗರಗಳ ಬಳಿಕ, ಬೆಂಗಳೂರಿನಿಂದ ಲುಫ್ತಾನ್ಸಾ ಗ್ರೂಪ್‌ನ ಮೂರನೇ ಪ್ರಮುಖ ಮಾರ್ಗ ಇದಾಗಲಿದೆ. ಪ್ರಯಾಣಿಕರು ‘ಫಸ್ಟ್ ಕ್ಲಾಸ್’ ಸೇರಿದಂತೆ ಅತ್ಯುತ್ತಮ ಮಟ್ಟದ ಸ್ವಿಸ್ ಆತಿಥ್ಯದ ಅನುಭವ ಪಡೆಯಲಿದ್ದಾರೆ,” ಎಂದು ಹರ್ಷ ವ್ಯಕ್ತಪಡಿಸಿದರು.

​ದೇಶದ 78 ನಗರಗಳಿಗೆ ಕನೆಕ್ಟಿವಿಟಿ ಲಾಭ

​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BIAL) ಮುಖ್ಯ ಕಾರ್ಯಾಚರಣಾಧಿಕಾರಿ ಗಿರೀಶ್ ನಾಯರ್ ಪ್ರತಿಕ್ರಿಯಿಸಿ, “ಭಾರತದ ಸಿಲಿಕಾನ್ ಸಿಟಿಯನ್ನು ಜಾಗತಿಕ ಆರ್ಥಿಕ ಕೇಂದ್ರವಾದ ಜ್ಯೂರಿಕ್ ಜೊತೆ ಬೆಸೆಯುವ ಈ ಸೇವೆ, ನಮ್ಮ ಮಾರುಕಟ್ಟೆಯ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ದೇಶದ 78 ನಗರಗಳಿಗೆ ನೇರ ಸಂಪರ್ಕ ಇರುವುದರಿಂದ, ಟಯರ್-2 ಹಾಗೂ ಟಯರ್-3 ನಗರಗಳಿಂದ ಬರುವವರಿಗೂ ಕೇವಲ ಒಂದೇ ಟಿಕೆಟ್‌ನಲ್ಲಿ ಯುರೋಪ್‌ಗೆ ಸುಲಭ ಸಂಪರ್ಕ ಸಿಗಲಿದೆ,” ಎಂದು ವಿವರಿಸಿದರು.

​ಪ್ರಯಾಣಿಕರಿಗೆ ಏನೆಲ್ಲಾ ಸೌಲಭ್ಯಗಳಿವೆ?

​ಬೆಂಗಳೂರು-ಜ್ಯೂರಿಕ್ ನಡುವಿನ ಈ ವಿಮಾನದಲ್ಲಿ ಪ್ರಯಾಣಿಕರು ಫಸ್ಟ್ ಕ್ಲಾಸ್, ಬಿಸಿನೆಸ್ ಕ್ಲಾಸ್ ಹಾಗೂ ಎಕಾನಮಿ ಕ್ಲಾಸ್ ಸೇವೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ​ಅತ್ಯುತ್ತಮ ಊಟ, ಪ್ರೀಮಿಯಂ ಲೌಂಜ್ ಸೇರಿದಂತೆ ಜಾಗತಿಕ ಮಟ್ಟದ ಆತಿಥ್ಯವನ್ನು ಸಂಸ್ಥೆ ನೀಡಲಿದೆ.

​ಹೊಸ ಮಾರ್ಗದ ಟಿಕೆಟ್ ಬುಕ್ಕಿಂಗ್ ಇಂದಿನಿಂದಲೇ ಸ್ವಿಸ್ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಹಾಗೂ ಟ್ರಾವೆಲ್ ಏಜೆನ್ಸಿಗಳ ಮೂಲಕ ಲಭ್ಯವಿದೆ ಎಂದು ಕೆಐಎಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಸಿಬಿಎಸ್ಇಯಿಂದ ಕಡ್ಡಾಯ ಕನ್ನಡ ಕಲಿಕೆಗೆ ಅಡ್ಡಗಾಲು: ಎನ್ಒಸಿ ನಿಯಮ ಪರಿಷ್ಕರಣೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

Next Post

GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

Next Post

GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

Please login to join discussion

Like Us on Facebook

Follow Us on Twitter

Recent News

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d