Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

ಇನ್ನು ಮುಂದೆ ಗಡುವು ವಿಸ್ತರಣೆ ಇಲ್ಲ; ಜಿಬಿಎ 5 ಪಾಲಿಕೆಗಳ ಚುನಾವಣೆಗೆ ಕೊನೆಯ ಅವಕಾಶ.

by Bengaluru Wire Desk
May 20, 2026
in Bengaluru Focus, Public interest
Reading Time: 1 min read
0

ನವದೆಹಲಿ, ಮೇ.20 www.bengaluruwire.com: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಗೆ ಬರುವ ಐದು ನಗರ ಪಾಲಿಕೆಗಳ ಚುನಾವಣೆಯನ್ನು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಚುನಾವಣೆ ನಡೆಸಲು ಈ ಹಿಂದೆ ನೀಡಿದ್ದ ಜೂನ್ 30ರ ಗಡುವನ್ನು ಕೊನೆಯ ಅವಕಾಶವಾಗಿ ಆಗಸ್ಟ್ 31ರವರೆಗೆ ವಿಸ್ತರಿಸಿರುವ ನ್ಯಾಯಾಲಯ, “ಇನ್ನು ಮುಂದೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

​ನ್ಯಾಯಾಲಯದಲ್ಲಿ ನಡೆದ ವಾದ-ವಿವಾದ

​ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಗಳು ಜಂಟಿಯಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಬುಧವಾರ (ಮೇ.20) ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ನಡೆಸಿತು.

​ರಾಜ್ಯ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ರಾಜ್ಯದಲ್ಲಿ ಪ್ರಸ್ತುತ ವಿಶೇಷ ಪರಿಶೀಲನಾ ಕಾರ್ಯ (SIR exercise), ಮನೆ ಗಣತಿ ಹಾಗೂ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಇದರಿಂದ ಚುನಾವಣಾ ಪ್ರಕ್ರಿಯೆ ನಡೆಸಲು ತೀವ್ರ ಸಿಬ್ಬಂದಿ ಕೊರತೆ ಎದುರಾಗಿದೆ. ಹೀಗಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಸೆಪ್ಟೆಂಬರ್ ವರೆಗೆ ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದರು.

​ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿವಾದಿಗಳ ಪರ ಹಿರಿಯ ವಕೀಲ ಕೆ. ಪರಮೇಶ್ವರ್, “ರಾಜ್ಯ ಸರ್ಕಾರವು ಈ ಹಿಂದೆ ಜೂನ್ 30ರೊಳಗೆ ಚುನಾವಣಾ ಪ್ರಕ್ರಿಯೆ ಮುಗಿಸುವುದಾಗಿ ಲಿಖಿತ ಭರವಸೆ ನೀಡಿತ್ತು. ಇದೀಗ ಮತ್ತೆ ಗಡುವು ವಿಸ್ತರಣೆ ಕೇಳುತ್ತಿರುವುದು ಚುನಾವಣೆ ಮುಂದೂಡುವ ತಂತ್ರವಷ್ಟೇ” ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಎರಡೂ ಕಡೆಯ ವಾದ ಆಲಿಸಿದ ಸುಪ್ರೀಂ ಕೋರ್ಟ್, ಅಂತಿಮವಾಗಿ ಆಗಸ್ಟ್ 31ರವರೆಗೆ ಮಾತ್ರ ಗಡುವು ವಿಸ್ತರಿಸಿ ಆದೇಶ ಹೊರಡಿಸಿತು.

​ಪ್ರಕರಣದ ಹಿನ್ನೆಲೆ ಮತ್ತು ವಿಳಂಬದ ಹಾದಿ

​ಆಡಳಿತಾಧಿಕಾರಿಗಳ ಆಡಳಿತ: 

ಬಿಬಿಎಂಪಿ ಚುನಾವಣೆ ಹಲವು ವರ್ಷಗಳಿಂದ ವಿಳಂಬವಾಗುತ್ತಿದ್ದು, ಜನಪ್ರತಿನಿಧಿಗಳಿಲ್ಲದೆ ಕೇವಲ ಆಡಳಿತಾಧಿಕಾರಿಗಳ ಸುಪರ್ದಿಯಲ್ಲಿ ಆಡಳಿತ ನಡೆಯುತ್ತಿದೆ. ಇದು ನಾಗರಿಕರ ಸಮಸ್ಯೆಗಳ ಪರಿಹಾರಕ್ಕೆ ಅಡ್ಡಿಯಾಗಿದೆ ಎಂಬ ಆರೋಪಗಳಿವೆ.

​ಹೈಕೋರ್ಟ್ ಆದೇಶ (2020): 2020ರ ಡಿಸೆಂಬರ್ 4ರಂದು ಕರ್ನಾಟಕ ಹೈಕೋರ್ಟ್, ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಆರು ವಾರಗಳೊಳಗೆ ಬಿಬಿಎಂಪಿ ಚುನಾವಣೆ ಘೋಷಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

​ಸುಪ್ರೀಂ ಕೋರ್ಟ್ ಪ್ರವೇಶ: ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿತ್ತು. 2020ರ ಡಿಸೆಂಬರ್ 18ರಂದು ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್, ನಂತರ 2022ರಲ್ಲಿ ವಾರ್ಡ್ ಮರುವಿಂಗಡಣೆಗೆ ಸೂಚಿಸಿತ್ತು.

​ಜೂನ್ 30ರ ಗಡುವು: ಇದೇ ಜನವರಿಯಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಗಡುವು ವಿಧಿಸಿತ್ತು. ಇದೀಗ ಈ ಗಡುವನ್ನು ಆಗಸ್ಟ್ 31ಕ್ಕೆ ವಿಸ್ತರಿಸಲಾಗಿದೆ. ಅಷ್ಟರೊಳಗೆ ಜಿಬಿಎ ವ್ಯಾಪ್ತಿಯಲ್ಲಿ 369 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ ಹಲವು ವರ್ಷಗಳಿಂದ ಚಾತಕಪಕ್ಷಿಗಳಂತೆ ಕಾಯುತ್ತಿರುವ ಅಭ್ಯರ್ಥಿಗಳು ಚುನಾವಣಾ ಆಖಾಡಕ್ಕೆ ಸಿದ್ದರಾಗಲು ಕಾಲ ಕೂಡಿ ಬಂದಂತಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

Next Post

ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

Next Post

ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

Please login to join discussion

Like Us on Facebook

Follow Us on Twitter

Recent News

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d