Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಇಲಾಖೆ ದಿಟ್ಟ ಹೆಜ್ಜೆ; ಎಂಇಐ (MEI) ಸಂಸ್ಥೆಯಿಂದ ಸಿಎಸ್ಆರ್ ನಿಧಿಯಡಿ ಸುರಕ್ಷಾ ಕ್ಯಾಬಿನ್ ಹಸ್ತಾಂತರ.

by Bengaluru Wire Desk
May 22, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಮೇ.22 www.bengaluruwire.com: ರಾಜ್ಯಾದ್ಯಂತ ಬರೋಬ್ಬರಿ 50 ಸಾವಿರ ಕೋಟಿ ರೂಪಾಯಿ ಮೌಲ್ಯದ ಅರಣ್ಯ ಒತ್ತುವರಿ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

​ಬೆಂಗಳೂರಿನಲ್ಲಿ ಯಶವಂತಪುರ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ (MEI) ಸಂಸ್ಥೆಯ ಸಿಎಸ್ಆರ್ (CSR) ನಿಧಿ ಅಡಿಯಲ್ಲಿ, ಬಂಡೀಪುರ ಹಾಗೂ ಮಲೆಮಹದೇಶ್ವರ ಬೆಟ್ಟದ ದಟ್ಟ ಅರಣ್ಯ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರಣ್ಯ ಸಿಬ್ಬಂದಿಗಳಿಗೆ ಸುರಕ್ಷತೆಯ ದೃಷ್ಟಿಯಿಂದ ನಿರ್ಮಿಸಲಾದ ‘ಸುರಕ್ಷಾ ಕ್ಯಾಬಿನ್’ಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

​ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಕುಮಾರ್ ಪುಷ್ಕರ್, ಎಂ.ಇ.ಐ. ಸಂಸ್ಥೆಯ ಅಧ್ಯಕ್ಷ ಎಸ್.ಮನೋಹರ್, ವ್ಯವಸ್ಥಾಪಕ ನಿರ್ದೇಶಕಿ ಸಿ.ಅನಿತಾ ಹಾಗೂ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

​ಬೆಂಗಳೂರಿನಲ್ಲೇ 10 ಸಾವಿರ ಕೋಟಿ ರೂ. ಮೌಲ್ಯದ ಒತ್ತುವರಿ ತೆರವು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, “ರಾಜ್ಯದಲ್ಲಿ ಒತ್ತುವರಿಯಾಗಿದ್ದ ಅರಣ್ಯ ಭೂಮಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕೇವಲ ಬೆಂಗಳೂರು ನಗರ ವ್ಯಾಪ್ತಿಯಲ್ಲೇ 10 ಸಾವಿರ ಕೋಟಿ ರೂ. ಹಾಗೂ ರಾಜ್ಯಾದ್ಯಂತ ಒಟ್ಟು 50 ಸಾವಿರ ಕೋಟಿ ರೂ. ಬೆಲೆಬಾಳುವ ಒತ್ತುವರಿಯಾದ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ,” ಎಂದು ವಿವರಿಸಿದರು.

​ಮಾನವ-ವನ್ಯಜೀವಿ ಸಂಘರ್ಷ: ಸಚಿವರ ಕಳವಳ

ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದ ಸಚಿವರು, “ಹವಾಮಾನ ವೈಪರೀತ್ಯದಿಂದಾಗಿ ಮಳೆ, ಬೆಳೆ ಸರಿಯಾಗಿ ಆಗುತ್ತಿಲ್ಲ. ತಾಪಮಾನ 40ರಿಂದ 48 ಡಿಗ್ರಿವರೆಗೆ ತಲುಪುತ್ತಿರುವುದು ಆತಂಕಕಾರಿ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಿಶಿಷ್ಟ ಜೀವವೈವಿಧ್ಯತೆಯಿದೆ. ಆದರೆ ಇತ್ತೀಚೆಗೆ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗುತ್ತಿದೆ. ದುಬಾರೆ ಆನೆ ಶಿಬಿರದ ಬಳಿ ಆನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿರುವುದು ಅತ್ಯಂತ ಶೋಚನೀಯ,” ಎಂದು ವಿಷಾದ ವ್ಯಕ್ತಪಡಿಸಿದರು.

​ಬಂಡೀಪುರದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗಿದ್ದು, ದೇಶದಲ್ಲೇ ರಾಜ್ಯ 2ನೇ ಸ್ಥಾನದಲ್ಲಿದೆ. ಹಾಗೆಯೇ ಆನೆಗಳ ಸಂತತಿಯಲ್ಲಿ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಆದರೆ, ಪ್ರತಿ ವರ್ಷ ಮಾನವ-ಪ್ರಾಣಿ ಸಂಘರ್ಷದಲ್ಲಿ 30-40 ಸಾವುಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ ಎಂದರು.

​ಅರಣ್ಯ ರಕ್ಷಣೆಗೆ ಎಂಇಐ ಸಂಸ್ಥೆಯ ಸಾಥ್:

ಎಂ.ಇ.ಐ. ಸಂಸ್ಥೆಯ ಅಧ್ಯಕ್ಷ ಎಸ್.ಮನೋಹರ್ ಮಾತನಾಡಿ, “ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ನಮ್ಮ ಸಂಸ್ಥೆಯ ಸಿ.ಎಸ್.ಆರ್. ನಿಧಿಯಡಿ ಈಗಾಗಲೇ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ನೀಡಲಾಗಿದೆ. ವನ್ಯಜೀವಿಗಳ ದಾಳಿಯಿಂದ ರಕ್ಷಣೆ ಪಡೆಯಲು ಅರಣ್ಯ ಸಿಬ್ಬಂದಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸುರಕ್ಷಾ ಕ್ಯಾಬಿನ್ ನೀಡಲಾಗುತ್ತಿದೆ. 

ಅಷ್ಟೇ ಅಲ್ಲದೆ, ಆನೆ ದಾಳಿಗೆ ಒಳಗಾದ ವ್ಯಕ್ತಿಗಳಿಗೆ ನೆರವು, ಅರಣ್ಯಂಚಿನ ಶಾಲೆಗಳ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಅರಣ್ಯ ಭೂಮಿ ಉಳಿಸುವಲ್ಲಿ ಸಚಿವ ಈಶ್ವರ್ ಖಂಡ್ರೆ ಅವರ ಶ್ರಮ ಅಪಾರವಾಗಿದೆ,” ಎಂದು ಪ್ರಶಂಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

Next Post

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

Next Post

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

Health News | ಇಬೋಲಾ ಆತಂಕ: ರಾಜ್ಯದಲ್ಲಿ ಹೈಅಲರ್ಟ್; ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮ ಕೈಗೊಂಡ ಆರೋಗ್ಯ ಇಲಾಖೆ

Please login to join discussion

Like Us on Facebook

Follow Us on Twitter

Recent News

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d