Sunday, May 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

    ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕಾರ, ಆಹ್ವಾನ ನೀಡಿದ ರಾಜ್ಯಪಾಲರು

    Defence News | ಕರ್ನಾಟಕ-ಕೇರಳ ಸಬ್‌ ಏರಿಯಾ ನೂತನ ಜಿಒಸಿಯಾಗಿ ಮೇ.ಜ. ಭರತ್ ಮೆಹತಾನಿ ಅಧಿಕಾರ ಸ್ವೀಕಾರ

    ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

    ಸಾಂದರ್ಭಿಕ ಚಿತ್ರ

    ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

    ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

    2015ರ ನಂತರದ ಅರಣ್ಯ ಭೂಮಿ ಒತ್ತುವರಿ ಸಂಪೂರ್ಣ ತೆರವಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

    SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ; ಅರ್ಹತೆ, ವೇತನ, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ

    ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

  • Bengaluru Focus

    ಶಾರದಾ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರವೀಂದರ್ ಪಂಡಿತ ಅವರಿಗೆ ಮೈಸೂರಿನಲ್ಲಿ ಪ್ರತಿಷ್ಠಿತ ‘ಧರ್ಮ ಬಂಧು’ ಪ್ರಶಸ್ತಿ ಪ್ರದಾನ

    “ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

    GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

    GBA Head Office Image

    ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ – ಮುನೀಶ್ ಮೌದ್ಗಿಲ್

    ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕಾರ, ಆಹ್ವಾನ ನೀಡಿದ ರಾಜ್ಯಪಾಲರು

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾಗಿ ಹಕ್ಕು ಮಂಡಿಸಿದ ಡಿಕೆಶಿ

by Bengaluru Wire Desk
May 30, 2026
in News Wire, Public interest
Reading Time: 1 min read
0

ಬೆಂಗಳೂರು, ಮೇ.30 www.bengaluruwire.com: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ, ಅವರು ಇಂದು (ಮೇ 30) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅಧಿಕೃತವಾಗಿ ಹಕ್ಕು ಮಂಡಿಸಿದರು.

​ಡಿ.ಕೆ. ಶಿವಕುಮಾರ್ ಅವರ ಮನವಿಯನ್ನು ಪುರಸ್ಕರಿಸಿರುವ ರಾಜ್ಯಪಾಲರು, ನೂತನ ಸರ್ಕಾರ ರಚನೆಗೆ ಅವಕಾಶ ನೀಡಿದ್ದು, ಪ್ರಮಾಣ ವಚನ ಸ್ವೀಕರಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ.

​ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆಶಿ ಆಯ್ಕೆ:

ರಾಜ್ಯಪಾಲರಿಗೆ ಖುದ್ದಾಗಿ ಭೇಟಿಯಾಗಿ ಸಲ್ಲಿಸಿರುವ ಪತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ತಾವು ಆಯ್ಕೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. 135 ಕಾಂಗ್ರೆಸ್ ಶಾಸಕರು, 2 ಅಂಗಸಂಸ್ಥೆ (Associated) ಸದಸ್ಯರು ಹಾಗೂ 1 ರೈತ ಸಂಘದ ಶಾಸಕರ ಬೆಂಬಲದೊಂದಿಗೆ ಮೇ 30ರಂದು ತಮ್ಮನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

​ಜೂನ್ 3ರಂದು ಲೋಕಭವನದಲ್ಲಿ ಪ್ರಮಾಣ ವಚನ:

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, “ಬುಧವಾರ, ಜೂನ್ 3, 2026ರಂದು ಸಂಜೆ 4:05 ಗಂಟೆಗೆ ಬೆಂಗಳೂರಿನ ಲೋಕಭವನದಲ್ಲಿ ಮುಖ್ಯಮಂತ್ರಿಯಾಗಿ ತಮಗೆ ಹಾಗೂ ತಮ್ಮ ಸಚಿವ ಸಂಪುಟದ ಇತರ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲು ಸಮಯಾವಕಾಶ ಹಾಗೂ ಅನುಮತಿ ನೀಡಬೇಕು” ಎಂದು ಡಿ.ಕೆ. ಶಿವಕುಮಾರ್ ರಾಜ್ಯಪಾಲರಲ್ಲಿ ಮನವಿ ಮಾಡಿದ್ದರು.

​ಸರ್ಕಾರ ರಚನೆಗೆ ರಾಜ್ಯಪಾಲರ ಅಧಿಕೃತ ಆಹ್ವಾನ:

ಡಿ.ಕೆ. ಶಿವಕುಮಾರ್ ಅವರ ಮನವಿ ಪತ್ರವನ್ನು ಸ್ವೀಕರಿಸಿ ತಕ್ಷಣವೇ ಸ್ಪಂದಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, “ಮೇ 30ರಂದು ಸರ್ಕಾರ ರಚನೆಗೆ ಹಕ್ಕು ಮಂಡಿಸಿ ನೀವು ನೀಡಿರುವ ಪತ್ರ ತಲುಪಿದೆ. ಜೂನ್ 3, 2026ರಂದು ಸಂಜೆ 04:05ಕ್ಕೆ ಲೋಕಭವನ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಹಾಗೂ ನಿಮ್ಮ ಸಚಿವ ಸಂಪುಟದ ಸದಸ್ಯರೊಂದಿಗೆ ಪ್ರಮಾಣ ವಚನ ಸ್ವೀಕರಿಸಲು ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ” ಎಂದು ಮರು ಪತ್ರ ಬರೆದು ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಅಧಿಕೃತ ಚಾಲನೆ ದೊರೆತಿದೆ.

ಇದಕ್ಕೂ ಮುನ್ನ, “ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಿಸಿದರು.

ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಿತು. ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಕಾಂಗ್ರೆಸ್ ಶಾಸಕಾಂಗ ಸಭೆಯು ಸರ್ವಾನುಮತದಿಂದ ಒಪ್ಪಿಕೊಂಡಿತು. ಡಾ.ಜಿ. ಪರಮೇಶ್ವರ ಅವರು ಈ ಪ್ರಸ್ತಾವನೆಯನ್ನು ಅನುಮೋದಿಸಿದರು” ಎಂದು ಮಾಹಿತಿ ನೀಡಿದರು.

WhatsApp Join our WhatsApp Channel
Previous Post

Defence News | ಕರ್ನಾಟಕ-ಕೇರಳ ಸಬ್‌ ಏರಿಯಾ ನೂತನ ಜಿಒಸಿಯಾಗಿ ಮೇ.ಜ. ಭರತ್ ಮೆಹತಾನಿ ಅಧಿಕಾರ ಸ್ವೀಕಾರ

Next Post

ಬೋಟ್‌ನಲ್ಲಿ ನಿಂತು ದ್ವೀಪ ದಿಟ್ಟಿಸುತ್ತಿರುವ ದರ್ಶನ್: ಪತಿಯನ್ನು ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ

Next Post

ಬೋಟ್‌ನಲ್ಲಿ ನಿಂತು ದ್ವೀಪ ದಿಟ್ಟಿಸುತ್ತಿರುವ ದರ್ಶನ್: ಪತಿಯನ್ನು ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

Please login to join discussion

Like Us on Facebook

Follow Us on Twitter

Recent News

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

May 31, 2026

ಬೋಟ್‌ನಲ್ಲಿ ನಿಂತು ದ್ವೀಪ ದಿಟ್ಟಿಸುತ್ತಿರುವ ದರ್ಶನ್: ಪತಿಯನ್ನು ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ

May 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

May 31, 2026

ಬೋಟ್‌ನಲ್ಲಿ ನಿಂತು ದ್ವೀಪ ದಿಟ್ಟಿಸುತ್ತಿರುವ ದರ್ಶನ್: ಪತಿಯನ್ನು ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ

May 31, 2026

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕಾರ, ಆಹ್ವಾನ ನೀಡಿದ ರಾಜ್ಯಪಾಲರು

May 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group