Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕರ್ನಾಟಕದ ನೂತನ ಸಿಎಂ ಆಗಿ ಇಂದು ಸಂಜೆ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್

ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ನೂತನ ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಈಗಾಗಲೇ ರವಾನಿಸಲಾಗಿದೆ.

by Bengaluru Wire Desk
June 3, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಜೂ.03 www.bengaluruwire.com: ಕರ್ನಾಟಕ ರಾಜಕಾರಣದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. 

ಬೆಂಗಳೂರಿನ ಲೋಕ ಭವನದ ಗ್ಲಾಸ್ ಹೌಸ್‌ನಲ್ಲಿ (ಗಾಜಿನ ಮನೆ) ಇಂದು ಸಂಜೆ 4 ಗಂಟೆ 05 ನಿಮಿಷಕ್ಕೆ ಪದಗ್ರಹಣ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ.

​’ಡಿಕೆಶಿ’ ಎಂದೇ ಜನಪ್ರಿಯರಾಗಿರುವ 64 ವರ್ಷದ ಒಕ್ಕಲಿಗ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋತ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ (ಡಿಸಿಎಂ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಡಿ‌.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ತಮ್ಮ ತಾಯಿ ಗೌರಮ್ಮ ಅವರ ಆಶೀರ್ವಾದ ಪಡೆದ ಕ್ಷಣ.

​ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 12 ಶಾಸಕರು:

ಡಿ.ಕೆ.ಶಿವಕುಮಾರ್ ಹಾಗೂ ಡಾ.ಜಿ.ಪರಮೇಶ್ವರ್ ಅವರ ಜೊತೆಗೆ ಇತರ 12 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು ಈ ಪಟ್ಟಿಯನ್ನು ಈಗಾಗಲೇ ರಾಜ್ಯಪಾಲರಿಗೆ ರವಾನಿಸಿದ್ದಾರೆ.

​ರಾಜ್ಯಪಾಲರಿಗೆ ಕಳುಹಿಸಿರುವ ಪಟ್ಟಿಯ ಪ್ರಕಾರ ಸಚಿವರಾಗಲಿರುವವರ ಅಧಿಕೃತ ವಿವರ ಇಲ್ಲಿದೆ:

​ಕೆ.ಎಚ್. ಮುನಿಯಪ್ಪ, ​ಕೆ.ಜೆ. ಜಾರ್ಜ್, ​ಎಂ.ಬಿ. ಪಾಟೀಲ್, ​ರಾಮಲಿಂಗಾ ರೆಡ್ಡಿ, ​ಸತೀಶ್ ಜಾರಕಿಹೊಳಿ,​ಕೃಷ್ಣ ಬೈರೇಗೌಡ, ​ಪ್ರಿಯಾಂಕ್ ಖರ್ಗೆ, ​ಯು.ಟಿ. ಖಾದರ್,​ಈಶ್ವರ್ ಖಂಡ್ರೆ, ​ಯತೀಂದ್ರ ಸಿದ್ದರಾಮಯ್ಯ, ​ಭೈರತಿ ಸುರೇಶ್, ಡಾ.​ಶರಣ್ ಪ್ರಕಾಶ್ ಪಾಟೀಲ್.

​ಸಿದ್ದರಾಮಯ್ಯ ರಾಜೀನಾಮೆ ಮತ್ತು ಡಿಕೆಶಿ ಆಯ್ಕೆ

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ಕಳೆದ ವಾರವಷ್ಟೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತದನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವೆ ನಡೆದ ಹಲವು ಸುತ್ತಿನ ಬಿರುಸಿನ ಚರ್ಚೆ ಹಾಗೂ ಸಮಾಲೋಚನೆಗಳ ಬಳಿಕ, ಮೇ 30ರಂದು ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.

​ಡಿ.ಕೆ. ಶಿವಕುಮಾರ್‌ಗೆ ಶುಭ ಕೋರಿದ ಸೋನಿಯಾ ಗಾಂಧಿ:

ಇದೇ ವೇಳೆ, ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಬುಧವಾರ ದೂರವಾಣಿ ಕರೆ ಮಾಡಿ ವಿಶೇಷವಾಗಿ ಶುಭ ಹಾರೈಸಿದ್ದಾರೆ.

​”ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ,” ಎಂದು ಸೋನಿಯಾ ಗಾಂಧಿ ಅವರು ತಮ್ಮ ಹಾರೈಕೆಯಲ್ಲಿ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಗಿ ಬೆಳೆಗಾರರ ₹1,611 ಕೋಟಿ ಬಾಕಿ ಉಳಿಸಿಕೊಂಡ ಕಾಂಗ್ರೆಸ್‌: ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

Next Post

ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆ ಸಿದ್ದರಾಮಯ್ಯ ಆಪ್ತವಲಯಕ್ಕೆ ಕೊಕ್: 371 ಸಿಬ್ಬಂದಿ, ಅಧಿಕಾರಿಗಳಿಗೆ ಗೇಟ್ ಪಾಸ್

Next Post

ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆ ಸಿದ್ದರಾಮಯ್ಯ ಆಪ್ತವಲಯಕ್ಕೆ ಕೊಕ್: 371 ಸಿಬ್ಬಂದಿ, ಅಧಿಕಾರಿಗಳಿಗೆ ಗೇಟ್ ಪಾಸ್

​ನಮ್ಮ ಮೆಟ್ರೋ ಹಳದಿ ಮಾರ್ಗದಿಂದ ಬೆಂಗಳೂರಿಗರ ಆರೋಗ್ಯ ಮತ್ತು ಜೀವನಮಟ್ಟ ಸುಧಾರಣೆ: ಐಐಎಸ್ಸಿ (IISc) ಅಧ್ಯಯನದ ವರದಿ ಬಹಿರಂಗ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d