Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಸರ್ಕಾರಿ ನೌಕರರ ಹಾಜರಾತಿ ಖಚಿತಪಡಿಸಲು ಎಐ ಹಾಗೂ ಜಿಯೋಫೆನ್ಸಿಂಗ್ ಆಧಾರಿತ ಸ್ವದೇಶಿ ತಂತ್ರಜ್ಞಾನ 'ಕರ್ತವ್ಯ' ಜಾರಿಗೆ ತರಲಾಗಿದೆ.

by Bengaluru Wire Desk
June 16, 2026
in News Wire, Public interest
Reading Time: 1 min read
0

ಬೆಂಗಳೂರು, ಜೂ.16 www.bengaluruwire.com : ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ನೌಕರರ ಚಕ್ಕರ್‌ಗೆ ಬ್ರೇಕ್ ಬೀಳಲಿದೆ. 

ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಮಹತ್ವಾಕಾಂಕ್ಷೆಯೊಂದಿಗೆ ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ಅತ್ಯಾಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

​ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ, ಸರ್ಕಾರಿ ನೌಕರರು ಕಚೇರಿ ವೇಳೆಯಲ್ಲಿ ಶೇಕಡಾ 100ರಷ್ಟು ಹಾಜರಿರಬೇಕು ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈ ನೂತನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ, ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ಜೆಮಿನಿ ಎಐ ಆಧಾರಿತ ಸಾಂದರ್ಭಿಕ ಚಿತ್ರ.

​ಹಳೆಯ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಕೇವಲ ಡಿಜಿಟಲ್ ಸಹಿ ಮಾಡಿ ಕಚೇರಿಯಿಂದ ನಾಪತ್ತೆಯಾಗುವ (Punch and out) ದೋಷಗಳಿದ್ದವು. ಆದರೆ ಹೊಸ ಎಐ ತಂತ್ರಜ್ಞಾನವು ಉದ್ಯೋಗಿಗಳ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ಭೌಗೋಳಿಕ ಸ್ಥಳವನ್ನು (Geographical Location) ನಿಖರವಾಗಿ ಪತ್ತೆಹಚ್ಚುವ ಮೂಲಕ ಇಂತಹ ವಂಚನೆಗಳಿಗೆ ಶಾಶ್ವತವಾಗಿ ತಡೆಬಿದ್ದಿದೆ.

​ಸಂಪೂರ್ಣ “ಮೇಡ್-ಇನ್-ಕರ್ನಾಟಕ” ಆವಿಷ್ಕಾರ:

ಯಾವುದೇ ಖಾಸಗಿ ಐಟಿ ಕಂಪನಿಗಳ ಮೊರೆ ಹೋಗದೆ, ಸರ್ಕಾರದ ಪರಿಸರ ವ್ಯವಸ್ಥೆಯಲ್ಲೇ “ಕರ್ತವ್ಯ” ಸಾಫ್ಟ್‌ವೇರ್ ಅನ್ನು ಅಭಿವೃದ್ಧಿಪಡಿಸಿರುವುದು ವಿಶೇಷ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ) ಉಸ್ತುವಾರಿಯಲ್ಲಿ, ಸೆಂಟರ್ ಫಾರ್ ಇ-ಗವರ್ನೆನ್ಸ್ (CeG) ಮತ್ತು ಕರ್ನಾಟಕ ಎಐ ಸೆಲ್ (Karnataka AI Cell) ಜಂಟಿಯಾಗಿ ಈ ಆ್ಯಪ್ ಸಿದ್ಧಪಡಿಸಿವೆ. ಇದರಿಂದಾಗಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಉಳಿತಾಯವಾಗಿದ್ದು, ದತ್ತಾಂಶ ಸುರಕ್ಷತೆ ಮತ್ತು ಸ್ವಾಯತ್ತತೆ ಖಚಿತವಾಗಿದೆ.

​ತಂತ್ರಜ್ಞಾನದ ಪ್ರಮುಖ ವೈಶಿಷ್ಟ್ಯಗಳು:

ಈ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಬಳಸಲಾಗಿದೆ. ವಂಚನೆಯ ಹಾಜರಾತಿಯನ್ನು ತಡೆಯಲು ಲೈವ್‌ನೆಸ್ ಡಿಟೆಕ್ಷನ್ (Liveness Detection) ಅಳವಡಿಸಲಾಗಿದೆ. ಇದರ ಜೊತೆಗೆ ಜಿಯೋಫೆನ್ಸಿಂಗ್ (Geofencing) ಹಾಗೂ ಜಿಐಎಸ್ (GIS) ತಂತ್ರಜ್ಞಾನದ ಮೂಲಕ ಉದ್ಯೋಗಿ ತನ್ನ ಕಚೇರಿಯ ನಿಗದಿತ ಪರಿಧಿಯೊಳಗೆ ಇದ್ದಾಗ ಮಾತ್ರ ಹಾಜರಾತಿ ದಾಖಲಿಸಲು ಸಾಧ್ಯವಾಗುತ್ತದೆ. ಈ ಆ್ಯಪ್ ಅನ್ನು ಆಧಾರ್ ಇ-ಕೆವೈಸಿ ಹಾಗೂ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ಯೊಂದಿಗೆ ಸಂಯೋಜಿಸಲಾಗಿದೆ. ಆಂಡ್ರಾಯ್ಡ್ ಮತ್ತು ಐಒಎಸ್ ಮೊಬೈಲ್‌ಗಳ ಮೂಲಕವೇ ಹಾಜರಾತಿ, ರಜೆ ಮತ್ತು ಅಧಿಕೃತ ಹೊರಗಿನ ಕೆಲಸದ (OOD) ವಿವರಗಳನ್ನು ನೌಕರರು ಸುಲಭವಾಗಿ ದಾಖಲಿಸಬಹುದು.

​ನೋಂದಣಿಯಲ್ಲಿ ದಾಖಲೆಯ ಪ್ರಗತಿ:

ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಆದೇಶದ ಬಳಿಕ ಕೇವಲ ಒಂದೇ ವಾರದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಶೇಕಡಾ 25 ರಷ್ಟು ಅಭೂತಪೂರ್ವ ಪ್ರಗತಿ ಕಂಡುಬಂದಿದೆ. ಕಳೆದ ವಾರ ಅಂದಾಜು 2,46,000 ರಷ್ಟಿದ್ದ ನೋಂದಾಯಿತ ಉದ್ಯೋಗಿಗಳ ಸಂಖ್ಯೆ, ಪ್ರಸ್ತುತ 3,01,034 ಕ್ಕೆ ಏರಿಕೆಯಾಗಿದೆ. ಅಂದರೆ 55 ಸಾವಿರಕ್ಕೂ ಅಧಿಕ ಹೊಸ ಸೇರ್ಪಡೆಯಾಗಿದೆ. ಇದೇ ಅವಧಿಯಲ್ಲಿ ದೈನಂದಿನ ಹಾಜರಾತಿ ಸಂಖ್ಯೆಯು ಸಹ 1,85,308 ರಿಂದ 2,32,612 ಕ್ಕೆ ಜಿಗಿದಿದೆ. ಪ್ರಸ್ತುತ 42 ಇಲಾಖೆಗಳ 4,78,522 ನೌಕರರನ್ನು ಈ ವ್ಯವಸ್ಥೆಗೆ ಒಳಪಡಿಸಲಾಗಿದ್ದು, ಈ ಪೈಕಿ 3.01 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ.

​ಶಿಕ್ಷಣ, ಆರೋಗ್ಯ ಇಲಾಖೆ ಮುಂದು:

ಶಾಲಾ ಶಿಕ್ಷಣ ಇಲಾಖೆಯು ಒಟ್ಟು 1,76,055 ಉದ್ಯೋಗಿಗಳ ಪೈಕಿ 1,68,252 ನೌಕರರ ನೋಂದಣಿಯೊಂದಿಗೆ ಮೊದಲ ಸ್ಥಾನದಲ್ಲಿದೆ. ಇಲ್ಲಿ ಪ್ರತಿದಿನ 1,41,800ಕ್ಕೂ ಹೆಚ್ಚು ದೈನಂದಿನ ಚೆಕ್-ಇನ್‌ಗಳು ಆಗುತ್ತಿವೆ. ಅದೇ ರೀತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 66,969 ನೋಂದಣಿ ಹಾಗೂ 54,400ಕ್ಕೂ ಹೆಚ್ಚು ದೈನಂದಿನ ಹಾಜರಾತಿಯೊಂದಿಗೆ ಎರಡನೇ ಸ್ಥಾನದಲ್ಲಿದೆ. 

ಇದರ ಜೊತೆಗೆ ಪದವಿ ಪೂರ್ವ ಮಂಡಳಿ, ಆಯುಷ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮತ್ತು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಗಳು ಈಗಾಗಲೇ ಶೇಕಡಾ 90 ಕ್ಕಿಂತ ಹೆಚ್ಚು ನೋಂದಣಿ ಗುರಿಯನ್ನು ಯಶಸ್ವಿಯಾಗಿ ತಲುಪಿವೆ.

​ಉತ್ತಮ ಸಾರ್ವಜನಿಕ ಸೇವೆಗೆ ಒತ್ತು:

ಕಚೇರಿ ಅವಧಿಯಲ್ಲಿ ಅಧಿಕಾರಿಗಳ ಲಭ್ಯತೆಯ ಕುರಿತು ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದಲ್ಲಿ ಡಿಸಿ/ಸಿಇಒಗಳು ಪ್ರತಿದಿನ ಡ್ಯಾಶ್‌ಬೋರ್ಡ್ ಮೂಲಕ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಕಚೇರಿಗಳ ಮುಂಭಾಗದಲ್ಲಿ ಬಯೋಮೆಟ್ರಿಕ್‌ಗಾಗಿ ಸಾಲಿನಲ್ಲಿ ನಿಲ್ಲುವುದು ತಪ್ಪಿದೆ ಎಂದು ಸರ್ಕಾರಿ ನೌಕರರೂ ಹರ್ಷ ವ್ಯಕ್ತಪಡಿಸಿದ್ದಾರೆ.

​”ಅಂತಿಮವಾಗಿ, ಕಚೇರಿಗಳಲ್ಲಿ ಅಧಿಕಾರಿಗಳ ಭೌತಿಕ ಲಭ್ಯತೆ ಖಾತರಿಪಡಿಸುವ ಮೂಲಕ ಸಾರ್ವಜನಿಕರಿಗೆ ಸಿಗುವ ಸೇವೆಗಳು ಇನ್ನು ಮುಂದೆ ಹೆಚ್ಚು ಸುಲಭ ಹಾಗೂ ತಡೆರಹಿತವಾಗಲಿವೆ. ಈ ಮೂಲಕ ಕರ್ನಾಟಕವು ಡಿಜಿಟಲ್ ಆಡಳಿತದಲ್ಲಿ ಮುಂಚೂಣಿ ರಾಜ್ಯವಾಗಿ ಹೊರಹೊಮ್ಮಿದೆ” ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

Next Post

​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

Next Post

​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d