Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

  • Bengaluru Focus

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

ಮಾದಾಪಟ್ಟಣದ ಕಾವೇರಿ ಕ್ರಷರ್‌ನಲ್ಲಿ ಅವಘಡ; ಅಧಿಕೃತ ವರದಿಯ ಬಳಿಕ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್.

by Bengaluru Wire Desk
July 2, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.02 www.bengaluruwire.com: ಬೆಂಗಳೂರು ದಕ್ಷಿಣ ತಾಲೂಕಿನ ಮಾಗಡಿ ರಸ್ತೆ ಸಮೀಪದ ಮಾದಾಪಟ್ಟಣ ಬಳಿ ಇರುವ ‘ಕಾವೇರಿ ಕ್ರಷರ್’ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಈ ದುರಂತದಲ್ಲಿ ಐವರು ಗಾಯಗೊಂಡಿದ್ದಾರೆ.

ಈ ಭೀಕರ ದುರಂತದ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

​ಅಧಿಕೃತ ವರದಿ ಬಂದ ಬಳಿಕ ಕ್ರಮ: ಸಿಎಂ ಡಿ.ಕೆ. ಶಿವಕುಮಾರ್:

ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು, ಕ್ವಾರಿ ದುರಂತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. “ಮಾಗಡಿ ರಸ್ತೆ ಬಳಿಯ ಎರಡು ಕ್ವಾರಿಯಲ್ಲಿ ಕುಸಿತವಾಗಿ 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಮೊದಲು ಅಧಿಕೃತ ಮಾಹಿತಿ ಪಡೆಯಲಾಗುವುದು. ವರದಿ ಬಂದ ನಂತರ ಅಗತ್ಯ ಹಾಗೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಯೋಗಕ್ಷೇಮ ವಿಚಾರಿಸುತ್ತಿರುವ ಸಚಿವ ಕೃಷ್ಣಭೈರೇಗೌಡ.

​“ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಈಗಾಗಲೇ ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೇಲ್ನೋಟಕ್ಕೆ ಇದು ಸ್ಫೋಟದಿಂದ ಸಂಭವಿಸಿಲ್ಲ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಕ್ವಾರಿಯನ್ನು ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಅಥವಾ ಇಲ್ಲವೇ ಎಂಬ ವರದಿಯನ್ನು ತರಿಸಿಕೊಳ್ಳಲಾಗುವುದು. ಕ್ವಾರಿ ನಡೆಸುವಾಗ ಅದರದೇ ಆದ ನಿಯಮಗಳಿದ್ದು, ಅವುಗಳ ಪಾಲನೆಯಾಗುತ್ತಿವೆಯೇ ಇಲ್ಲವೇ ಎಂಬುದನ್ನು ಗಂಭೀರವಾಗಿ ಪರಿಶೀಲಿಸಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

​ಚಿರತೆ ಸಾವಿನ ಪ್ರಕರಣ ಮತ್ತು ಶಾಸಕರ ಆರೋಪ:

ಕಳೆದ ಬಾರಿ ಇದೇ ಕ್ವಾರಿ ಪ್ರದೇಶದಲ್ಲಿ ಸ್ಫೋಟದ ವೇಳೆ ಚಿರತೆಯೊಂದು ಸತ್ತಿತ್ತು. ಆದರೆ, ಈ ಹಿಂದೆ ಯಾವುದೇ ಸೂಕ್ತ ತನಿಖೆ ಮಾಡದೇ ಪ್ರಕರಣವನ್ನು ಮುಚ್ಚಿಹಾಕಲಾಗಿತ್ತು ಎಂಬ ಸ್ಥಳೀಯ ಶಾಸಕರ ಆರೋಪದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಈ ಬಗ್ಗೆ ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧಿಕೃತ ವರದಿ ತರಿಸಿಕೊಂಡು ನಂತರ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

​ಪರಿಹಾರ ಘೋಷಣೆ ಬಗ್ಗೆ ಸಿಎಂ ಪ್ರತಿಕ್ರಿಯೆ:

ಮೃತರ ಕುಟುಂಬಗಳಿಗೆ ಪರಿಹಾರದ ವಿಚಾರವಾಗಿ ಮಾತನಾಡಿದ ಸಿಎಂ, “ಮೊದಲು ಎಷ್ಟು ಜನ ಸತ್ತಿದ್ದಾರೆ ಎಂಬ ನಿಖರ ಮಾಹಿತಿ ಬರಲಿ, ಆನಂತರ ಪರಿಹಾರದ ಬಗ್ಗೆ ತೀರ್ಮಾನ ಮಾಡೋಣ. ತರಾತುರಿಯಲ್ಲಿ ಪರಿಹಾರ ಘೋಷಿಸಿದ ಮಾತ್ರಕ್ಕೆ ಸತ್ತವರು ಮರಳಿ ಬರುವುದಿಲ್ಲ. ಇದಕ್ಕೆಲ್ಲಾ ಅದರದೇ ಆದ ಸರ್ಕಾರಿ ಪ್ರಕ್ರಿಯೆಗಳಿವೆ. ಖಂಡಿತವಾಗಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು. ಜೊತೆಗೆ ಇಂತಹ ದುರ್ಘಟನೆಗಳು ಭವಿಷ್ಯದಲ್ಲಿ ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಸರ್ಕಾರದ ಮೊದಲ ಆದ್ಯತೆ” ಎಂದು ತಿಳಿಸಿದರು.

​ಸಚಿವ ಕೃಷ್ಣಭೈರೇಗೌಡ ಅವರಿಂದ ಸ್ಥಳ ಹಾಗೂ ಆಸ್ಪತ್ರೆ ಭೇಟಿ:

ದುರಂತ ಸಂಭವಿಸಿದ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಗುರುವಾರ ಸಂಜೆ ಮಾದಾಪಟ್ಟಣದ ಕಲ್ಲು ಕ್ವಾರಿ ಸ್ಥಳಕ್ಕೆ ಭೇಟಿ ನೀಡಿದರು. ಅಲ್ಲಿನ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಅವಘಡದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ತರುವಾಯ, ಮೈಸೂರು ರಸ್ತೆ ಬಳಿಯ ರಾಜರಾಜೇಶ್ವರಿ ಆಸ್ಪತ್ರೆಗೆ ತೆರಳಿದ ಅವರು, ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

Next Post

​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

Next Post
CM DK Shivakumar

​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

Please login to join discussion

Like Us on Facebook

Follow Us on Twitter

Recent News

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d