Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

ಎಇ, ಎಇಇ ಅಧಿಕಾರಿಗಳ ಮುಖಕ್ಕೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಹಲ್ಲೆ ನಡೆಸಿ ಗೂಂಡಾಗಿರಿ | ಸದ್ಯ 7 ಕಿಡಿಗೇಡಿಗಳು ಅಂದರ್ | ಹಲ್ಲೆಕೋರರ ವಿರುದ್ಧ ಸೆಕ್ಷನ್ 307 ಅಡಿ ಕೇಸ್ ದಾಖಲಿಸಲು ಸಚಿವ ಕೃಷ್ಣಭೈರೇಗೌಡ ಖಡಕ್ ಸೂಚನೆ

by Bengaluru Wire Desk
July 21, 2026
in Bengaluru Focus, BW Special, Public interest
Reading Time: 2 mins read
0

​ಬೆಂಗಳೂರು, ಜು.21 www.bengaluruwire.com: ರಾಜಧಾನಿಯ ಜನದಟ್ಟಣೆಯ ಪ್ರದೇಶವಾದ ಶಿವಾಜಿನಗರ ಬಸ್ ನಿಲ್ದಾಣದ ಸಮೀಪ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಗೆ ಇಳಿದಿದ್ದ ಕೇಂದ್ರ ನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಏಕಾಏಕಿ ಭೀಕರ ಹಲ್ಲೆ ನಡೆಸಿದ್ದಾರೆ. 

ಕನ್ನಡಿಗರ ಹೆಸರಿನಲ್ಲಿ ಬಂದ ಪುಂಡರು ಪಾಲಿಕೆಯ ಅಧಿಕಾರಿ ಹಾಗೂ ಜೆಸಿಬಿ ಚಾಲಕರಿಬ್ಬರ ಮುಖಕ್ಕೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ ರಂಪಾಟ ನಡೆಸಿದ್ದಾರೆ. ಇದಲ್ಲದೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಹಾಗೂ ಸಹಾಯಕ ಎಂಜಿನಿಯರ್ (ಎಇ), ಗಾಯವಾಗಿದೆ.

ಬೆಂಗಳೂರು ​ವೈರ್ ವರದಿಯಿಂದ ಎಚ್ಚೆತ್ತುಕೊಂಡು ಕಾರ್ಯಾಚರಣೆ:

ಶಿವಾಜಿನಗರ ಬಸ್ ಸ್ಟಾಪ್ ಬಳಿಯ ಅಮಾತನ್ ಕೋ-ಆಪರೇಟಿವ್ ಬ್ಯಾಂಕ್ ಮುಂಭಾಗದಲ್ಲಿ ಹಲವು ವರ್ಷಗಳಿಂದ ಫುಟ್‌ಪಾತ್ ನುಂಗಿ ನೀರು ಕುಡಿದಿದ್ದ 17ಕ್ಕೂ ಹೆಚ್ಚು ಕಬ್ಬಿಣದ ಶೀಟ್‌ಗಳ ಅಂಗಡಿಗಳಿಂದಾಗಿ ಪಾದಚಾರಿಗಳು ಪರದಾಡುತ್ತಿದ್ದರು. ಈ ಬಗ್ಗೆ ಸೋಮವಾರ (ಜು.20) ‘ಬೆಂಗಳೂರು ವೈರ್’ ಜಿಪಿಎಸ್ ಆಧಾರಿತ ವಿಡಿಯೋ ಸಾಕ್ಷ್ಯದೊಂದಿಗೆ ರಿಯಾಲಿಟಿ ಚೆಕ್ ನಡೆಸಿ, ವಾಸ್ತವ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆ 10.30ರ ಸುಮಾರಿಗೆ 25 ಪಾಲಿಕೆ ಸಿಬ್ಬಂದಿ ಜೆಸಿಬಿ ಯಂತ್ರಗಳೊಂದಿಗೆ ತೆರವು ಕಾರ್ಯಾಚರಣೆಗೆ ಇಳಿದಿದ್ದರು. ಈ ಕುರಿತು ಬೆಂಗಳೂರು ವೈರ್ Instagram ಖಾತೆಯಲ್ಲಿ ಸುದ್ದಿ ಪ್ರಸಾರ ಮಾಡಿತ್ತು ಅದರ ಲಿಂಕ್ ಇಲ್ಲಿದೆ: https://www.instagram.com/reel/DbAjmJws8oj/?igsh=ZXNweHB5ZHN5cDhy

​ಪೆಪ್ಪರ್ ಸ್ಪ್ರೇ, ಗೂಂಡಾಗಿರಿ: ತಲೆಮರೆಸಿಕೊಂಡ ಮುಖ್ಯ ಆರೋಪಿ:

ತೆರವು ಕಾರ್ಯ ನಡೆಯುತ್ತಿದ್ದಾಗ ಕನ್ನಡ ಹೋರಾಟಗಾರರೆಂದು ಹೇಳಿಕೊಂಡು ನುಗ್ಗಿದ ಬಸವರಾಜ್ ನೇತೃತ್ವದ ಗೂಂಡಾಗಳ ಪಡೆ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದೆ. ಕಾರ್ಯಾಚರಣೆ ತಡೆಯುವ ಉದ್ದೇಶದಿಂದ ಜೆಸಿಬಿ ಚಾಲಕ ಹಾಗೂ ಮಹಿಳಾ ಸಹಾಯಕ ಇಂಜಿನಿಯರ್ ಸಾವಿತ್ರಿ (AE) ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದು ವಿಕೃತಿ ಮೆರೆದಿದ್ದಾರೆ. ದಾಳಿಯಲ್ಲಿ ಎಇಇ ಮಾಧವ್ ರಾವ್ ಜಾಧವ್, ಎಇಗಳಾದ ಗೌತಮ್ ಎಂಬುವರ ಮೇಲೆ ದಾಳಿ ನಡೆಸಿದ್ದಾರೆ. ಜೆಸಿಬಿ ಚಾಲಕರ ಮೇಲೆಯೂ ಹಲ್ಲೆಯಾಗಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಳಿಕ ಪ್ರಮುಖ ಆರೋಪಿ ಬಸವರಾಜ್ ಪರಾರಿಯಾಗಿದ್ದಾನೆ.

ಪಾಲಿಕೆ ಎಇ ಗೌತಮ್ ಹಾಗೂ ಎಇಇ ಮಾಧವ್ ರಾವ್ ಜಾಧವ್ ಮೇಲೆ ಹಲ್ಲೆ ನಡೆಸುತ್ತಿರುವ ದುಷ್ಕರ್ಮಿಗಳು.

​”ಹಿರಿಯ ಅಧಿಕಾರಿಗಳ ಆದೇಶದಂತೆ ನಾವು ತೆರವು ಮಾಡುತ್ತಿದ್ದಾಗ ಏಕಾಏಕಿ ದಾಳಿ ನಡೆಸಿದರು. ಈ ಬಗ್ಗೆ ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಯಾವುದೇ ಕಾರಣಕ್ಕೂ ಕಾನೂನುಬದ್ಧ ತೆರವು ಕಾರ್ಯ ನಿಲ್ಲುವುದಿಲ್ಲ” ಎಂದು ಹಲ್ಲೆಗೊಳಗಾದ ಎಇಇ ಜಾಧವ್ ‘ಬೆಂಗಳೂರು ವೈರ್’ಗೆ ಸ್ಪಷ್ಟಪಡಿಸಿದ್ದಾರೆ.

ಗೂಂಡಾಗಳಿಂದ ಪೆಪ್ಪರ್ ಸ್ಪ್ರೇ ದಾಳಿಗೊಳಗಾದ ನಂತರ ಕರವಸ್ತ್ರದಿಂದ ಕಣ್ಣೊರೆಸಿಕೊಳ್ಳುತ್ತಿರುವ ಎಇ ಸಾವಿತ್ರಿ.

​10 ಆರೋಪಿಗಳ ಅರೆಸ್ಟ್; ಸಚಿವರ ಖಡಕ್ ವಾರ್ನಿಂಗ್!

ಘಟನೆ ಕುರಿತು ಮಾಹಿತಿ ನೀಡಿದ ಡಿಸಿಪಿ ವಿಕ್ರಮ್ ಆಮ್ಟೆ, “ಒಟ್ಟು 10 ಜನರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳ ಶೋಧಕ್ಕೆ ವಿಶೇಷ ತಂಡ ರಚಿಸಲಾಗಿದೆ” ಎಂದು ತಿಳಿಸಿದ್ದಾರೆ.

​ಕಳೆದ 21 ದಿನಗಳಿಂದ ನಗರದೆಲ್ಲೆಡೆ ಒತ್ತುವರಿ ತೆರವು ನಡೆಯುತ್ತಿದ್ದರೂ ಎಲ್ಲಿಯೂ ಇಂತಹ ಅಹಿತಕರ ಘಟನೆ ನಡೆದಿರಲಿಲ್ಲ. ಈ ದುರ್ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ, “ಅಧಿಕಾರಿಗಳ ಮೇಲಿನ ಹಲ್ಲೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಆರೋಪಿಗಳ ವಿರುದ್ಧ ಕೊಲೆ ಯತ್ನ (ಸೆಕ್ಷನ್ 307) ಪ್ರಕರಣ ದಾಖಲಿಸಿ” ಎಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶಿವಾಜಿನಗರ ಫುಟ್ ಪಾತ್ ಒತ್ತುವರಿ ಕಾರ್ಯಾಚರಣೆ ನಿಲ್ಲಲ್ಲ:

ಫುಟ್ ಪಾತ್ ಒತ್ತುವರಿ ಕಾರ್ಯಾಚರಣೆ ಮುಂದುವರೆದಿರುವುದು.

ಸಚಿವರಾದ ಕೃಷ್ಣ ಬೈರೇಗೌಡ ಅವರ ಕಟ್ಚುನಿಟ್ಚಿನ ಸೂಚನೆಯ ಮೇರೆಗೆ ಬೆಂಗಳೂರು ಕೇಂದ್ರ ಪಾಲಿಕೆಯ ಆಯುಕ್ತರಾದ ಜಗದೀಶ್ ಹಾಗೂ ಹೆಚ್ಚುವರಿ ಆಯುಕ್ತರಾದ ವೆಂಕಟಾಚಲಪತಿ ಅವರು ಶಿವಾಜಿನಗರದಲ್ಲಿ ಖುದ್ದಾಗಿ ಮುಂದೆ ನಿಂತು ಅಲ್ಲಿನ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದಾರೆ.

“ಪಾದಾಚಾರಿ ಮಾರ್ಗ ಒತ್ತುವರಿ ತೆರವು ಮಾಡಲೇಬೇಕು ಎಂಬುದು ಸುಪ್ರೀಂಕೋರ್ಟ್ ಸೂಚನೆಯಾಗಿದ್ದು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಹಿಂದಡಿ ಇಡುವ ಮಾತೇ ಇಲ್ಲ. ಅಲ್ಲದೆ, ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ಮಾಡುವಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಹೀಗಾಗಿ ದಾಳಿಕೋರರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಸಚಿವ ಕೃಷ್ಣಭೈರೇಗೌಡ ಪುನರುಚ್ಚರಿಸಿದ್ದಾರೆ.

ಜಿಬಿಎ ಅಧಿಕಾರಿ ಮತ್ತು ನೌಕರರ ಸಂಘ ಹೋರಾಟಕ್ಕೆ ಸಜ್ಜು:

“ಇಂದು ಶಿವಾಜಿನಗರದಲ್ಲಿ ಪುಟ್ ಪಾತ್ ತೆರವು ಕಾರ್ಯದಲ್ಲಿ ಇಂಜನಿಯರ್ ಗಳ ಮೇಲೆ ಹಲ್ಲೆ ಮಾಡಿದ ಕೀಡಿಗೇಡಿಗಳನ್ನು ಸಂಜೆಯೊಳಗೆ ಪೋಲಿಸ್ ಇಲಾಖೆಯವರು ಬಂಧಿಸಿದಿದ್ದಲ್ಲಿ ನಾಳೆ ಜಿ.ಬಿ.ಎ.ಯ ಎಲ್ಲಾ ಅಧಿಕಾರಿ/ನೌಕರರು ಕೆಲಸ ಕಾರ್ಯಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ” ಎಂದು ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಎಚ್ಚರಿಸಿದ್ದಾರೆ.

​ಸಚಿವರ ಸೂಚನೆ ಮೇರೆಗೆ ಪಾಲಿಕೆ ಅಧಿಕಾರಿಗಳು ನಗರದಾದ್ಯಂತ ಮುಲಾಜಿಲ್ಲದೆ ಒತ್ತುವರಿ ತೆರವು ಮಾಡುತ್ತಿದ್ದು, ಈವರೆಗೆ ಬರೋಬ್ಬರಿ 600 ಕಿ.ಮೀ ಫುಟ್‌ಪಾತ್ ಮುಕ್ತಗೊಳಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ‘ಬೆಂಗಳೂರು ವೈರ್’ ಪ್ರಸಾರ ಮಾಡಿದ ವರದಿಗೆ ಪಾಲಿಕೆಯು ತಕ್ಷಣವೇ ಸ್ಪಂದಿಸಿ ಕಾನೂನಾತ್ಮಕವಾಗಿ ಫುಟ್ ಪಾತ್ ಒತ್ತುವರಿ ತೆರುವು ಕಾರ್ಯಾಚರಣೆ ಕೈಗೊಂಡಿದ್ದರೂ, ಕನ್ನಡ ಹೋರಾಟಗಾರರ ಹೆಸರಿನಲ್ಲಿ ಕರ್ತವ್ಯನಿರತ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು ಅಕ್ಷಮ್ಯವಾಗಿದೆ. ಇದನ್ನು “ಬೆಂಗಳೂರು ವೈರ್” ಕೂಡ ಖಂಡಿಸುತ್ತದೆ. ಪಾಲಿಕೆ ಅಧಿಕಾರಿ ಹಾಗೂ ಸಿಬ್ಭಂದಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

Next Post

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

Next Post

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d