Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

ನಕಲಿ ದಾಖಲೆ ಸೃಷ್ಟಿಸಿ ಕಂಪ್ಯೂಟರ್, ಪ್ರಿಂಟರ್ ಪೂರೈಕೆ ಹೆಸರಿನಲ್ಲಿ ಪಾಲಿಕೆಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿರುವ ಆರೋಪ.

by Bengaluru Wire Desk
August 4, 2026
in Bengaluru Focus
Reading Time: 1 min read
0

ಬೆಂಗಳೂರು, ಆ.04 www.bengaluruwire.com: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಹಿಂದಿನ ಬಿಬಿಎಂಪಿ, ಈಗಿನ ಜಿಬಿಎ) ವ್ಯಾಪ್ತಿಯ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲಿ ಕಂಪ್ಯೂಟರ್ ಹಾಗೂ ಸ್ಟೇಷನರಿ ಪೂರೈಕೆ ಹೆಸರಿನಲ್ಲಿ ಸುಮಾರು 8.91 ಕೋಟಿ ರೂ.ಗಳ ಬೃಹತ್ ಹಗರಣ ನಡೆದಿರುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

​ಕಳೆದ ಐದು ವರ್ಷಗಳ ಅವಧಿಯಲ್ಲಿ ಕೇವಲ ಒಂದು ಕಛೇರಿಗೆ ಲೆಕ್ಕಕ್ಕೆ ಸಿಗದಷ್ಟು ಕಂಪ್ಯೂಟರ್, ಪ್ರಿಂಟರ್ ಹಾಗೂ ಕಾಪಿಯರ್ ಗಳನ್ನು ಪೂರೈಸಿರುವುದಾಗಿ ನಕಲಿ ಬಿಲ್ ಸೃಷ್ಟಿಸಲಾಗಿದೆ ಎಂದು ಮಾಜಿ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಹಾಗೂ ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರಾದ ಎನ್.ಆರ್. ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

​ಹಗರಣದ ಸ್ವರೂಪ ಹಾಗೂ ಆರೋಪಗಳು:

ದೂರಿನಲ್ಲಿರುವ ಮಾಹಿತಿಯ ಪ್ರಕಾರ, ಎಂ/ಎಸ್ ಎನ್.ಎಸ್. ಎಂಟರ್‌ಪ್ರೈಸಸ್ (M/s N.S. Enterprises) ಎಂಬ ಸಂಸ್ಥೆಯ ಮೂಲಕ 2021-22ನೇ ಸಾಲಿನಿಂದ ಜೂನ್ 2026ರವರೆಗೆ ಒಟ್ಟು ₹8,91,46,526 ಮೊತ್ತದ ವಸ್ತುಗಳನ್ನು ಪೂರೈಸಲಾಗಿದೆ ಎಂದು ಬಿಲ್ ಪಡೆಯಲಾಗಿದೆ. ಆದರೆ ವಾಸ್ತವದಲ್ಲಿ ಇಷ್ಟೊಂದು ಪ್ರಮಾಣದ ಸಾಮಗ್ರಿಗಳು ಕಚೇರಿಗೆ ಪೂರೈಕೆಯಾಗಿಲ್ಲ ಎಂಬುದು ದೂರುದಾರರ ಆರೋಪವಾಗಿದೆ.

​ಪಾಲಿಕೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿರುವ (FDA) ಓರ್ವ ನೌಕರರು ತಮ್ಮ ಕುಟುಂಬದವರ ಹೆಸರಿನಲ್ಲಿರುವ ಸಂಸ್ಥೆಯ ಮೂಲಕ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಈ ಹಿಂದೆ ಗೋವಿಂದರಾಜನಗರ ವಿಭಾಗದಲ್ಲಿ ನಡೆದಿದೆ ಎನ್ನಲಾದ ಹಗರಣ ಬೆಳಕಿಗೆ ಬರುತ್ತಿದ್ದಂತೆ, ಸದರಿ ಸಂಸ್ಥೆಯ ಹೆಸರನ್ನು ಬದಲಾಯಿಸಿ ಕೇಂದ್ರ ವಲಯದಲ್ಲಿಯೂ ಬಿಲ್ ಪಾವತಿಗೆ ಯತ್ನಿಸಲಾಗಿತ್ತು. ಆದರೆ, ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಉಪ ಹಣಕಾಸು ನಿಯಂತ್ರಕರು (DCF) ಕಡತವನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ ಎಂದು ರಮೇಶ್ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.

​ಎನ್.ಆರ್. ರಮೇಶ್ ಅವರ ಹೇಳಿಕೆ:

“ಶಾಂತಿನಗರ ಇಇ ಕಛೇರಿಗೆ ಕಳೆದ ಐದು ವರ್ಷಗಳಿಂದ ಪದೇ ಪದೇ ಕಂಪ್ಯೂಟರ್, ಪ್ರಿಂಟರ್ ಪೂರೈಸಿರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾರ್ವಜನಿಕರ ತೆರಿಗೆ ಹಣವಾದ ಬರೋಬ್ಬರಿ 9 ಕೋಟಿ ರೂ.ಗಳನ್ನು ವಂಚಿಸಲಾಗಿದೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಪಾಲಿಕೆ ನೌಕರ ಹಾಗೂ ಶಾಂತಿನಗರ ವಿಭಾಗದಲ್ಲಿ ಕಾರ್ಯನಿರ್ವಹಿಸಿರುವ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ನಡೆಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

​ಮುಂದಿನ ಕ್ರಮಕ್ಕೆ ಆಗ್ರಹ:

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ನಿಯಮ 17 ‘A’ ಅಡಿಯಲ್ಲಿ ಈ ಪ್ರಕರಣದ ಸಮಗ್ರ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುವಂತೆ ಜಿಬಿಎ ಮುಖ್ಯ ಆಯುಕ್ತರನ್ನು ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರನ್ನು ದೂರುದಾರರು ಒತ್ತಾಯಿಸಿದ್ದಾರೆ. ಸಾರ್ವಜನಿಕರ ತೆರಿಗೆ ಹಣದ ಈ ಬೃಹತ್ ದುರ್ಬಳಕೆಯ ಆರೋಪದ ಸತ್ಯಾಸತ್ಯತೆ ನಿಷ್ಪಕ್ಷಪಾತ ತನಿಖೆಯಿಂದಷ್ಟೇ ಹೊರಬರಬೇಕಿದೆ.

WhatsApp Join our WhatsApp Channel
Previous Post

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

Please login to join discussion

Like Us on Facebook

Follow Us on Twitter

Recent News

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group