Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

ಜಿಐ ಟ್ಯಾಗ್ (ಭೌಗೋಳಿಕ ಸೂಚಕ) ಮಾನ್ಯತೆಯು ಗ್ರಾಮೀಣ ಕರಕುಶಲಕರ್ಮಿಗಳ ಆದಾಯವನ್ನು ಶೇ. 20-30 ರಷ್ಟು ಹೆಚ್ಚಿಸಿದ್ದು, ಭಾರತದಲ್ಲಿ ಜಿಐ ಉತ್ಪನ್ನಗಳ ಸಂಖ್ಯೆ 800ರ ಗಡಿ ದಾಟಿದೆ.

by Bengaluru Wire Desk
August 6, 2026
in Life Style, Public interest
Reading Time: 1 min read
0

ನವದೆಹಲಿ, ಆ.06 www.bengaluruwire.com: ಜವಳಿ ಸಚಿವಾಲಯದ ಇತ್ತೀಚಿನ ಮಾಹಿತಿಯ ಪ್ರಕಾರ, ಭೌಗೋಳಿಕ ಸೂಚಕ (GI) ಮಾನ್ಯತೆಯು ಗ್ರಾಮೀಣ ಕರಕುಶಲಕರ್ಮಿಗಳ ಆದಾಯವನ್ನು ಶೇಕಡಾ 20 ರಿಂದ 30 ರಷ್ಟು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ. 

2014 ರಿಂದೀಚೆಗೆ ಬರೋಬ್ಬರಿ 607 ಜಿಐಗಳನ್ನು ನೀಡಲಾಗಿದ್ದು, ಭಾರತವು ಈಗ ಒಟ್ಟು 800 ಕ್ಕೂ ಹೆಚ್ಚು ನೋಂದಾಯಿತ ಜಿಐ ಉತ್ಪನ್ನಗಳಿಗೆ ನೆಲೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ಉತ್ಪನ್ನಗಳ ಬೇಡಿಕೆ ಹೆಚ್ಚಾಗುತ್ತಿದ್ದು, 2025ರ ಜನವರಿ ವೇಳೆಗೆ ಅಧಿಕೃತ ಜಿಐ ಬಳಕೆದಾರರ ಸಂಖ್ಯೆ 365 ರಿಂದ 29,000 ಕ್ಕೆ ತೀವ್ರವಾಗಿ ಏರಿಕೆಯಾಗಿದೆ. 2030ರ ವೇಳೆಗೆ 10,000 ಜಿಐ ನೋಂದಣಿಗಳ ಮಹತ್ವಾಕಾಂಕ್ಷೆಯ ಗುರಿಯತ್ತ ಭಾರತ ಹೆಜ್ಜೆ ಹಾಕುತ್ತಿದೆ.

​ಕರ್ನಾಟಕದ ಹೆಮ್ಮೆ: 49 ಉತ್ಪನ್ನಗಳಿಗೆ ಜಿಐ ಗರಿ:

ದೇಶಾದ್ಯಂತ ಜಿಐ ಮಾನ್ಯತೆ ಪಡೆದ ರಾಜ್ಯಗಳ ಪೈಕಿ ಕರ್ನಾಟಕವು ಮುಂಚೂಣಿಯಲ್ಲಿದ್ದು, 4ನೇ ಅತಿ ದೊಡ್ಡ ರಾಜ್ಯವಾಗಿ ಹೊರಹೊಮ್ಮಿದೆ. ಕರ್ನಾಟಕವು ಒಟ್ಟು 49 ಉತ್ಪನ್ನಗಳಿಗೆ ಜಿಐ ಮಾನ್ಯತೆಯನ್ನು ಪಡೆದುಕೊಂಡಿದೆ. ನಾಡಿನ ಹೆಮ್ಮೆಯಾದ ಚನ್ನಪಟ್ಟಣದ ಸುಂದರವಾದ ಮರದ ಬೊಂಬೆಗಳು, ಮೈಸೂರು ರೇಷ್ಮೆ ಸೇರಿದಂತೆ ಹಲವು ವಿಶಿಷ್ಟ ಉತ್ಪನ್ನಗಳು ಈ ಪಟ್ಟಿಯಲ್ಲಿವೆ. ಇದು ಕೇವಲ ಉತ್ಪನ್ನಗಳ ರಕ್ಷಣೆಯಲ್ಲ, ಬದಲಿಗೆ ಶತಮಾನಗಳಷ್ಟು ಹಳೆಯದಾದ ನಮ್ಮ ಕರಕುಶಲ ಪರಂಪರೆಗೆ ಆರ್ಥಿಕ ಶಕ್ತಿ ತುಂಬುವ ಪ್ರಯತ್ನವಾಗಿದೆ.

​ಜಿಐ ನೋಂದಣಿಯಲ್ಲಿ ಟಾಪ್ 10 ರಾಜ್ಯಗಳು:

ಭಾರತದಲ್ಲಿ ಅತಿ ಹೆಚ್ಚು ಜಿಐ ಟ್ಯಾಗ್ ಹೊಂದಿರುವ ಅಗ್ರ 10 ರಾಜ್ಯಗಳ ಪಟ್ಟಿ ಇಲ್ಲಿದೆ:

​ನಕಲಿ ಉತ್ಪನ್ನಗಳಿಗೆ ಕಡಿವಾಣ, ಪರಂಪರೆಯ ರಕ್ಷಣೆ:

ವರ್ಷಗಳ ಕಾಲ, ಗ್ರಾಮೀಣ ಕುಶಲಕರ್ಮಿಗಳು ಗಂಭೀರ ಸವಾಲನ್ನು ಎದುರಿಸುತ್ತಿದ್ದರು. ಉದಾಹರಣೆಗೆ, ಬನಾರಸ್‌ನ ನೇಕಾರರು ವಾರಗಟ್ಟಲೆ ಶ್ರಮಿಸಿ ಕೈಯಿಂದಲೇ ನೆಯ್ಯುವ ಅಪ್ಪಟ ಬನಾರಸಿ ಸೀರೆಗಳಿಗೆ, ಮಾರುಕಟ್ಟೆಯಲ್ಲಿ ಬರುವ ಯಂತ್ರ-ನಿರ್ಮಿತ ನಕಲಿ ಸೀರೆಗಳಿಂದ ಬಾರಿ ಪೈಪೋಟಿ ಇತ್ತು. ಇದರಿಂದಾಗಿ ಅಸಲಿ ಉತ್ಪನ್ನಗಳಿಗೆ ಬೆಲೆ ಸಿಗುತ್ತಿರಲಿಲ್ಲ. ಈ ಸಮಸ್ಯೆಯನ್ನು ನಿವಾರಿಸುವಲ್ಲಿ ಜಿಐ ಟ್ಯಾಗ್‌ಗಳು ನಿರ್ಣಾಯಕ ಪಾತ್ರ ವಹಿಸಿವೆ.

​ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಟೀ, ತೆಲಂಗಾಣದ ಪೋಚಂಪಲ್ಲಿ ಇಕ್ಕತ್, ಕಾಶ್ಮೀರದ ಪಶ್ಮಿನಾ, ಬಾಲೂಚರಿ ಸೀರೆಗಳು, ಕನ್ನೌಜ್‌ನ ಸುಗಂಧ ದ್ರವ್ಯ ಅಥವಾ ನಾಸಿಕ್ ವ್ಯಾಲಿ ವೈನ್ – ಹೀಗೆ ಎಲ್ಲವೂ ಜಿಐ ಮಾನ್ಯತೆಯಿಂದಾಗಿ ತಮ್ಮ ಮೂಲ ಮತ್ತು ಗುಣಮಟ್ಟವನ್ನು ಉಳಿಸಿಕೊಂಡಿವೆ. 2003 ರಲ್ಲಿ ಕಾರ್ಯರೂಪಕ್ಕೆ ಬಂದ ಈ ವ್ಯವಸ್ಥೆಯು ಇಂದು ಗ್ರಾಮೀಣ ಕುಶಲಕರ್ಮಿಗಳಿಗೆ ಜಾಗತಿಕ ಮಾರುಕಟ್ಟೆಯ ಬಾಗಿಲು ತೆರೆದಿದ್ದು, ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ಆರ್ಥಿಕ ಅವಕಾಶವನ್ನಾಗಿ ಪರಿವರ್ತಿಸುತ್ತಿದೆ.

ಜಿಐ ಟ್ಯಾಗ್ ನೋಂದಣಿ ಮಾಡಿಸಲು ಇರುವ ಕಾರ್ಯ ವಿಧಾನಗಳೇನು?:

ಭಾರತದಲ್ಲಿ ಜಿಐ (GI – Geographical Indication) ಅಂದರೆ ಭೌಗೋಳಿಕ ಸೂಚಕ ಟ್ಯಾಗ್ ಪಡೆಯಲು ನಿಗದಿತವಾದ ಅರ್ಜಿ ನಮೂನೆ (ಫಾರ್ಮ್ GI-1), ವಿವರವಾದ ವಿವರಣೆ ಅಥವಾ ಸ್ಟೇಟ್‌ಮೆಂಟ್ ಆಫ್ ಕೇಸ್, ಮತ್ತು ಶುಲ್ಕದೊಂದಿಗೆ ಚೆನ್ನೈನಲ್ಲಿರುವ ಭೌಗೋಳಿಕ ಸೂಚಕಗಳ ರಿಜಿಸ್ಟ್ರಾರ್ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆಯು ಪರಿಶೀಲನೆ, ಪ್ರಕಟಣೆ ಮತ್ತು ಆಕ್ಷೇಪಣೆಗಳ ವಿಲೇವಾರಿಯನ್ನು ಒಳಗೊಂಡಿರುತ್ತದೆ.

ಜಿಐ ಟ್ಯಾಗ್ ನೋಂದಣಿ ಹಂತಗಳು:

ಅರ್ಜಿ ಸಲ್ಲಿಕೆ (Filing Application): ನಿರ್ದಿಷ್ಟ ಉತ್ಪನ್ನವನ್ನು ಪ್ರತಿನಿಧಿಸುವ ಸಂಘಟನೆ ಅಥವಾ ಪ್ರಾಧಿಕಾರವು ನಿಗದಿತ ನಮೂನೆಯಲ್ಲಿ (Form GI-1) ಮೂರು ಪ್ರತಿಗಳಲ್ಲಿ, ಉತ್ಪನ್ನದ ವಿಶೇಷತೆ ಮತ್ತು ಭೌಗೋಳಿಕ ಹಿನ್ನೆಲೆಯ ವಿವರಣೆಯೊಂದಿಗೆ ಅರ್ಜಿ ಸಲ್ಲಿಸಬೇಕು.

ಪರಿಶೀಲನೆ (Scrutiny): ರಿಜಿಸ್ಟ್ರಾರ್ ಕಚೇರಿಯ ತಜ್ಞರ ಸಮಿತಿಯು ಅರ್ಜಿಯನ್ನು ಪರಿಶೀಲಿಸುತ್ತದೆ. ಯಾವುದಾದರೂ ಲೋಪವಿದ್ದರೆ ಅದನ್ನು ಸರಿಪಡಿಸಲು ಕಾಲಾವಕಾಶ ನೀಡಲಾಗುತ್ತದೆ. 

ಜರ್ನಲ್‌ನಲ್ಲಿ ಪ್ರಕಟಣೆ (Advertisement): ಸ್ವೀಕೃತಗೊಂಡ ಅರ್ತಿಯನ್ನು ‘ಜಿಐ ಜರ್ನಲ್’ (Geographical Indications Journal) ನಲ್ಲಿ ಪ್ರಕಟಿಸಲಾಗುತ್ತದೆ. 

ಆಕ್ಷೇಪಣೆ ಆಹ್ವಾನ (Opposition): ಪ್ರಕಟಣೆಗೊಂಡ 3 ರಿಂದ 4 ತಿಂಗಳ ಒಳಗೆ ಯಾರಾದರೂ ಆ ಉತ್ಪನ್ನದ ಕುರಿತು ಆಕ್ಷೇಪಣೆ ಅಥವಾ ವಿರೋಧವಿದ್ದರೆ ಸಲ್ಲಿಸಬಹುದು. 

ನೋಂದಣಿ ಪ್ರಮಾಣಪತ್ರ (Registration): ಯಾವುದೇ ಗಂಭೀರ ಆಕ್ಷೇಪಣೆಗಳು ಬಾರದಿದ್ದರೆ ಅಥವಾ ವಿವಾದಗಳು ಬಗೆಹರಿದರೆ, ಜಿಐ ರಿಜಿಸ್ಟ್ರಾರ್ ಅಧಿಕೃತವಾಗಿ ಟ್ಯಾಗ್ ಅನ್ನು ನೋಂದಾಯಿಸಿ ಪ್ರಮಾಣಪತ್ರ ನೀಡುತ್ತಾರೆ. ಇದು ಆರಂಭದಲ್ಲಿ 10 ವರ್ಷಗಳವರೆಗೆ ಮಾನ್ಯವಾಗಿರುತ್ತದೆ. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

Next Post

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

Next Post

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d